Govt House Scheme : ಸರ್ವರಿಗೂ ಸೂರು ಯೋಜನೆ – 1.30 ಲಕ್ಷ ಮನೆಗೆ ರಾಜ್ಯದಿಂದ ತಲಾ 5 ಲಕ್ಷ ರೂ. ಭರಿಸಲು ತೀರ್ಮಾನ.!

Govt House Scheme : ನಮಸ್ಕಾರ ಸ್ನೇಹಿತರೇ, ರಾಜ್ಯ ಕಾಂಗ್ರೆಸ್ ಸರ್ಕಾರದ ಸರ್ವರಿಗೂ ಸೂರು ಯೋಜನೆ ಅಡಿ ಬಡವರಿಗೆ ಬಂಪರ್‌ ಗಿಫ್ಟ್ ನೀಡಿದೆ. ಸರಿಸುಮಾರು 1.30 ಲಕ್ಷ ಅರ್ಹ ಫ‌ಲಾನುಭವಿಗಳಿಗೆ ರಾಜ್ಯ ಸರ್ಕಾರವು ಒಟ್ಟು 5 ಲಕ್ಷ ರೂ. ಭರಿಸಲು ತೀರ್ಮಾನಿಸಿದೆ. ಅಂದರೆ 2 ಲಕ್ಷ ರೂಪಾಯಿ ಸಬ್ಸಿಡಿ ಜತೆಗೆ ಹೆಚ್ಚುವರಿ 3 ಲಕ್ಷ ರೂಪಾಯಿಯನ್ನು ಭರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯದಲ್ಲಿ ಸರ್ವರಿಗೂ ಸೂರು ಯೋಜನೆ ಅಡಿಯಲ್ಲಿ ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ಹಾಗೂ ರಾಜೀವ್‌ ಗಾಂಧಿ ವಸತಿ ನಿಗಮದಿಂದ ಬಡ ಕುಟುಂಬಗಳಿಗಾಗಿ ನೀಡಲಾಗುತ್ತಿರುವ ಒಟ್ಟಾರೆ 1,29,457 ಮನೆಗಳಿಗೆ ಫ‌ಲಾನುಭವಿಗಳ ವಂತಿಗೆಯನ್ನು ಸರ್ಕಾರ ಭರಿಸಲು ತೀರ್ಮಾನಿಸಿದೆ. ಈ ಮೂಲಕ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಮನೆಗಳ ನಿರ್ಮಾಣ ಕಾರ್ಯಕ್ಕೆ ಮುಕ್ತಿ ನೀಡಲು ರಾಜ್ಯ ಕಾಂಗ್ರೆಸ್ ಸರ್ಕಾರ ತೀರ್ಮಾನಿಸಿದೆ.

WhatsApp Group Join Now

ಇದನ್ನೂ ಕೂಡ ಓದಿ : Kisan Credit Card Scheme : ಇನ್ನು ಮುಂದೆ ಎಲ್ಲ ರೈತರಿಗೂ ಪಶು ಕಿಸಾನ್ ಕಾರ್ಡ್ ನಲ್ಲಿ 3 ಲಕ್ಷದವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸುವುದು ಹೇಗೆ.?

ಈ ಯೋಜನೆ ಅಡಿ ಪ್ರಸ್ತುತ ಪ್ರತಿ ಮನೆ ನಿರ್ಮಾಣಕ್ಕೆ ಒಟ್ಟು 7.5 ಲಕ್ಷ ರೂ. ಖರ್ಚಾಗುತ್ತದೆ. ಇದರಲ್ಲಿ ಕೇಂದ್ರದಿಂದ 1.5 ಲಕ್ಷ ಹಾಗೂ ರಾಜ್ಯ ಸರ್ಕಾರದಿಂದ 2 ಲಕ್ಷ ರೂ. ಸಬ್ಸಿಡಿ ಸಿಗುತ್ತದೆ. ಉಳಿದ ಹಣವನ್ನು ಫ‌ಲಾನುಭವಿಯೇ ಕಟ್ಟಬೇಕಿತ್ತು. ಆದರೆ ಈಗ ಅದರಲ್ಲಿ ಫಲಾನುಭವಿಗಳು 1 ಲಕ್ಷ ರೂ. ಪಾವತಿಸಿದರೆ ಸಾಕು, ಉಳಿದ ಹೆಚ್ಚುವರಿ 3 ಲಕ್ಷ ರೂಪಾಯಿಯನ್ನು ರಾಜ್ಯ ಸರ್ಕಾರವೇ ಭರಿಸಲಿದೆ. ಈ ಮೂಲಕ ಸರ್ಕಾರ ಒಟ್ಟು 5 ಲಕ್ಷ ರೂ. ಅರ್ಹ ಫಲಾನುಭವಿಗಳಿಗೆ ನೀಡಿದಂತಾಗುತ್ತದೆ.

WhatsApp Group Join Now

ಸರ್ವರಿಗೂ ಸೂರು ಯೋಜನೆ ಅಡಿಯಲ್ಲಿ ನಿರ್ಮಿಸಲಾಗುವ ಮನೆಗಳ ನಿರ್ಮಾಣದ ಹಣವನ್ನು ಸರ್ಕಾರವೇ ಭರಿಸಲು ಒಪ್ಪಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ, ನಿರ್ಮಾಣದ ವಿವಿಧ ಹಂತದಲ್ಲಿರುವ 1.29 ಲಕ್ಷ ಮನೆಗಳಿಗೆ ಎಷ್ಟು ವೆಚ್ಚ ಆಗುತ್ತದೆ. ಈ ವರ್ಷ ಗರಿಷ್ಠ ಎಷ್ಟು ಹಣ ಕೊಡಬಹುದು? ಮುಂದಿನ ವರ್ಷ ಎಷ್ಟು ಹಣ ಕೊಡಬಹುದು? ಎಂಬುದರ ಬಗ್ಗೆ ಪರಿಶೀಲಿಸುವಂತೆ ಹಣಕಾಸು ಇಲಾಖೆ ಅಧಿಕಾರಿಗಳಿಗೆ ಸಿದ್ದರಾಮಯ್ಯ ಅವರು ನಿರ್ದೇಶನ ನೀಡಿದರು.

ಇದನ್ನೂ ಕೂಡ ಓದಿ : Sewing Machine Scheme : ಬಟ್ಟೆ ಹೊಲಿಗೆ ಯಂತ್ರ ವಿತರಣೆ – ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನ – ಇಲ್ಲಿದೆ ಡೈರೆಕ್ಟ್ ಲಿಂಕ್

ಕೊಳೆಗೇರಿಗಳ ಅಭಿವೃದ್ಧಿ ಮಂಡಳಿ ವತಿಯಿಂದ ಎರಡನೇ ಹಂತದಲ್ಲಿ 39,966 ಮನೆ ಹಂಚಿಕೆ ಮಾಡಲು ಸಿದ್ಧವಿದ್ದು, 862 ಕೋಟಿ ರೂ. ಹಣ ಅಗತ್ಯವಿದೆ. ಅದೇ ರೀತಿ, ರಾಜೀವ್‌ಗಾಂಧಿ ವಸತಿ ನಿಗಮ ವತಿಯಿಂದ ಮೊದಲ ಹಂತದಲ್ಲಿ ಹಂಚಿಕೆಗೆ 11,406 ಮನೆಗಳು ಸಿದ್ಧವಿದ್ದು, 529 ಕೋಟಿ ರೂ. ಅವಶ್ಯಕತೆ ಇದೆ ಎಂದು ವಸತಿ ಸಚಿವ ಜಮೀರ್‌ ಅಹ್ಮದ್‌ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ತಂದರು. ಈ ಮೊದಲು ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಯೋಜನೆಗೆ ಅನುಮತಿ ದೊರೆತಿತ್ತು. ಬುಧವಾರದ ಸಭೆಯಲ್ಲಿ ರಾಜೀವ್‌ ಗಾಂಧಿ ವಸತಿ ನಿಗಮದ ಯೋಜನೆಗೂ ಸಹ ಅನ್ವಯ ಮಾಡಲು ತಾತ್ವಿಕ ಒಪ್ಪಿಗೆ ದೊರೆಯಿತು.

WhatsApp Group Join Now

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

Leave a Reply