ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ತಿರುವು ಎದುರಾಗಿದೆ. ಪ್ರಕರಣದ ಪ್ರಮುಖ ಆರೋಪಿಯಾಗಿರುವ ಚಿನ್ನಯ್ಯ ತನ್ನ ಮೇಲೆ ಕೆಲವು ಮಂದಿ ಪ್ರಭಾವಿಗಳು ಒತ್ತಡ ಹೇರಿದ್ದು, ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ ಎಂದು ಆರೋಪಿಸಿದ್ದಾನೆ.
ಅಲ್ಲದೆ, ಹೈಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ಚಿನ್ನಯ್ಯ, ನಟ ಪ್ರಕಾಶ್ ರಾಜ್ ಅವರ ಹೆಸರನ್ನೂ ಉಲ್ಲೇಖಿಸಿದ್ದಾನೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ತೀವ್ರಗೊಂಡಿದೆ.
ಈ ಬೆಳವಣಿಗೆಗೆ ಪ್ರತಿಕ್ರಿಯಿಸಿರುವ ನಟ ಪ್ರಕಾಶ್ ರಾಜ್, ತಮ್ಮ ವಿರುದ್ಧ ಹರಡುತ್ತಿರುವ ಸುದ್ದಿಗಳನ್ನು ತಳ್ಳಿ ಹಾಕಿದ್ದಾರೆ. ತಮ್ಮ ಬಗ್ಗೆ ಹೇಳಲಾಗುತ್ತಿರುವುದು ಸುಳ್ಳು ಸುದ್ದಿ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
“ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಹೆಸರು ಚರ್ಚೆಯಾಗುತ್ತಿದೆ. ಇದು ಅತ್ಯಂತ ಸೂಕ್ಷ್ಮ ವಿಷಯ. ನಾನು ಸದ್ಯ ಊರಿನಲ್ಲಿ ಇಲ್ಲ. ಇನ್ನೆರಡು ದಿನಗಳಲ್ಲಿ ಖುದ್ದಾಗಿ ಸ್ಪಷ್ಟನೆ ನೀಡುತ್ತೇನೆ. ದಯವಿಟ್ಟು ಗಾಳಿ ಸುದ್ದಿಗಳನ್ನು ನಂಬಬೇಡಿ,” ಎಂದು ಅವರು ತಿಳಿಸಿದ್ದಾರೆ.
ಈ ನಡುವೆ ಪ್ರಕರಣದಲ್ಲಿ ಹಲವಾರು ಹೆಸರುಗಳು ಉಲ್ಲೇಖವಾಗುತ್ತಿರುವುದರಿಂದ ವಿಚಾರ ಮತ್ತಷ್ಟು ಸಂಕೀರ್ಣಗೊಂಡಿದ್ದು, ಮುಂದಿನ ಬೆಳವಣಿಗೆಗಳ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ.
ಇವೆಲ್ಲವೂ ಷಡ್ಯಂತ್ರ ನಂಬಬೇಡಿ; ಧರ್ಮಸ್ಥಳ ಪ್ರಕರಣದ ಆರೋಪಕ್ಕೆ ಪ್ರಕಾಶ್ ರಾಜ್ ರಿಯಾಕ್ಷನ್!
WhatsApp Group
Join Now