ಯುವತಿಯ ಅಶ್ಲೀಲ ಎಐ ವಿಡಿಯೋ ಮಾಡಿ ಹಣಕ್ಕೆ ಡಿಮ್ಯಾಂಡ್, ಇಬ್ಬರು ಕಿಡಿಗೇಡಿಗಳು ಅರೆಸ್ಟ್

Spread the love

ಚಿಕ್ಕಮಗಳೂರು : ಜಿಲ್ಲೆಯ (Chikkamaglore) ಲಕ್ಕವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾವಿಕೆರೆ ಗ್ರಾಮದ ಯುವತಿಯೊಬ್ಬಳ ಫೇಸ್‌ಬುಕ್ ಫೋಟೋವನ್ನು (Photo) ಕದ್ದು, ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೂಲಕ ಅಶ್ಲೀಲ ವಿಡಿಯೋ ಆಗಿ ಮಾರ್ಪಡಿಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಅಕ್ಷಯ್ ಮತ್ತು ಸಾಹುಲ್ ಎಂಬ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು ಯುವತಿಯ ಪೋಷಕರಿಗೆ ಕರೆ ಮಾಡಿ ಹಣ ನೀಡದಿದ್ದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡುವುದಾಗಿ ಬೆದರಿಕೆ ಹಾಕಿದ್ದರು. ತೀವ್ರ ಹೆದರಿಕೆಗೆ ಒಳಗಾಗಿದ್ದ ಕುಟುಂಬಸ್ಥರು ತಕ್ಷಣವೇ ಪೊಲೀಸರಿಗೆ ದೂರು ನೀಡಿದ್ದರು.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತಾಂತ್ರಿಕ ಸಾಕ್ಷ್ಯಗಳು ಮತ್ತು ಮೊಬೈಲ್ ಕರೆಗಳ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿ, ಬೆಂಗಳೂರಿನಲ್ಲಿದ್ದ ಇಬ್ಬರು ಆರೋಪಿಗಳನ್ನು ಪತ್ತೆಹಚ್ಚಿ ಜೈಲಿಗಟ್ಟಿದ್ದಾರೆ. ಪೊಲೀಸರ ತನಿಖೆಯ ವೇಳೆ ಆರೋಪಿಗಳು ತೀವ್ರ ಸಾಲದ ಬಾಧೆಯಲ್ಲಿದ್ದು, ಅದರಿಂದ ಬೇಗನೆ ಮುಕ್ತಿ ಪಡೆಯಲು ಮತ್ತು ಸುಲಭವಾಗಿ ಹಣ ಗಳಿಸುವ ದುರುದ್ದೇಶದಿಂದ ಈ ಅಪರಾಧ ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡಿದ್ದಾರೆ. ಸದ್ಯಕ್ಕೆ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ತಂತ್ರಜ್ಞಾನ ದುರ್ಬಳಕೆ ಮಾಡಿಕೊಳ್ಳುವ ಕ್ರಿಮಿನಲ್‌ಗಳಿಗೆ ಪೊಲೀಸರು ಕಠಿಣ ಎಚ್ಚರಿಕೆ ನೀಡಿದ್ದಾರೆ.

WhatsApp Group Join Now

Spread the love

Leave a Reply