ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ಆರೋಪ: ನಂಬಿಕೆ ದುರುಪಯೋಗಪಡಿಸಿಕೊಂಡ ಅಂಚೆ ವಿತರಕ ಸುರೇಶ್ ಬಂಧನ,

Spread the love

ಬೆಳ್ತಂಗಡಿ: ವಿವಾಹಿತ ಮಹಿಳೆಯನ್ನು ಬಲವಂತವಾಗಿ ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕುತ್ತೋಡಿ ನಿವಾಸಿ ಪ್ರಸ್ತುತ ಅರಸಿಮಕ್ಕಿ ಗ್ರಾಮೀಣ ಅಂಚೆ ವಿತರಕ ಸುರೇಶ್ (35) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯ ವಿವಾಹಿತ ಮಹಿಳೆಯನ್ನು 2023ರ ಡಿಸೆಂಬರ್ ನಲ್ಲಿ ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಸಂತ್ರಸ್ತ ಮಹಿಳೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜೂ.7 ರಂದು ದೂರು ನೀಡಿದ್ದರು.

ಪ್ರಕರಣದ ಬಗ್ಗೆ ತನಿಖೆ ನಡೆಸಿದ ಧರ್ಮಸ್ಥಳ ಪೊಲೀಸರು ಆರೋಪಿ, ಅಂಚೆ ವಿತರಕ ಸುರೇಶ್ ನನ್ನು ಕಳೆಂಜದಲ್ಲಿ ಜೂ.8ರಂದು ರಾತ್ರಿ ಬಂಧಿಸಿ ವಿಚಾರಣೆ ನಡೆಸಿ ಜೂ.9 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

WhatsApp Group Join Now

Spread the love

Leave a Reply