ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನಿಗೆ ಸಾರ್ವಜನಿಕರು ತಕ್ಕ ಶಾಸ್ತಿ ನೀಡಿದ್ದಾರೆ. ಹುಬ್ಬಳ್ಳಿಯ ಈಶ್ವರ ನಗರದಲ್ಲಿ ನಡೆದ ಈ ಘಟನೆಯಲ್ಲಿ, ನಿತ್ಯ ಒಂದಲ್ಲೊಂದು ರೀತಿಯಲ್ಲಿ ಮಹಿಳೆಯರಿಗೆ ತೊಂದರೆ ನೀಡುತ್ತಿದ್ದ ಆರೋಪಿಯನ್ನು ಹಿಡಿದು ಕಂಬಕ್ಕೆ ಕಟ್ಟಿಹಾಕಿ ಸಾರ್ವಜನಿಕರು ಥಳಿಸಿದ್ದಾರೆ.
ಈಶ್ವರ ನಗರ ಏರಿಯಾದ ಮಹಿಳೆಯರಿಗೆ ನಿರಂತರ ಕಿರುಕುಳ ನೀಡುತ್ತಿದ್ದುದರಿಂದ ಬೇಸತ್ತ ಸ್ಥಳೀಯರು ಕಾನೂನು ಕೈಗೆತ್ತಿಕೊಂಡಿದ್ದಾರೆ ಎನ್ನಲಾಗಿದೆ. ಆರೋಪಿಗೆ ಚಪ್ಪಲಿ ಸೇವೆ ಸೇರಿದಂತೆ ಧರ್ಮಧೇಟು ನೀಡಿರುವ ದೃಶ್ಯಗಳು ಸ್ಥಳದಲ್ಲಿ ಆತಂಕಕ್ಕೆ ಕಾರಣವಾಯಿತು.
ಈ ಘಟನೆ ಹುಬ್ಬಳ್ಳಿ ಕಸಬಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣದ ಕುರಿತು ಪೊಲೀಸರು ಮಾಹಿತಿ ಸಂಗ್ರಹಿಸಿ ಮುಂದಿನ ಕ್ರಮ ಕೈಗೊಳ್ಳುತ್ತಿದ್ದಾರೆ.
WhatsApp Group
Join Now