ಶಿಕಾರಿಪುರದಲ್ಲಿ ಒಂದು ವರ್ಷದ ಹಿಂದೆ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಳು ಎಂಬ ಸತ್ಯ ತನಿಖೆಯಿಂದ ಬಯಲಾಗಿದೆ. ಪಿಜಿಗೆ ಕೆಟ್ಟ ಹೆಸರು ಬರುತ್ತದೆಂಬ ಭಯದಿಂದ, ಮಾಲೀಕರು ಆಕೆಯ ಶವವನ್ನು ಸೂಟ್‌ಕೇಸ್‌ನಲ್ಲಿ ತುಂಬಿ ಪ್ರಪಾತಕ್ಕೆ ಎಸೆದಿದ್ದರು.
ಒಂದು ವರ್ಷದ ಹಿಂದೆ ಶಿಕಾರಿಪುರದಲ್ಲಿ ನಡೆದಿದ್ದ ಅಪ್ರಾಪ್ತ ಬಾಲಕಿಯ ನಿಗೂಢ ನಾಪತ್ತೆ ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಬೆಚ್ಚಿಬೀಳಿಸುವ ಸತ್ಯಾಂಶ ಬೆಳಕಿಗೆ ಬಂದಿದೆ. ಪಿಜಿಯಲ್ಲಿ ಕೆಲಸಕ್ಕಿದ್ದ ಬಾಲಕಿ ಆತ್ಮHತ್ಯೆ ಮಾಡಿಕೊಂಡಾಗ, ಅದರಿಂದ ತಮಗೆ ಕೆಟ್ಟ ಹೆಸರು ಬರುತ್ತದೆ ಎಂಬ ಭಯದಿಂದ ಶವವನ್ನು ಸೂಟ್‌ಕೇಸ್‌ನಲ್ಲಿ ತುಂಬಿ ಪ್ರಪಾತಕ್ಕೆ ಎಸೆದು ಬಂದಿದ್ದ ಕರಾಳ ಕಥೆ ಈಗ ಬರೋಬ್ಬರಿ ಒಂದು ವರ್ಷದ ಬಳಿಕ ಬೆಳಕಿಗೆ ಬಂದಿದೆ. ಅಷ್ಟಕ್ಕೂ ಆ ನಿಗೂಢ ಪ್ರಕರಣ ಈಗ ತೆರೆದುಕೊಂಡಿದ್ದು ಹೇಗೆ ಎಂಬುದೇ ರೋಚಕವಾಗಿದೆ.
ಈ ಭೀಕರ ಸಾಕ್ಷಿ ನಾಶ ಮತ್ತು ಆತ್ಮHತ್ಯೆಗೆ ಪ್ರಚೋದನೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಶಿಕಾರಿಪುರ ತಾಲೂಕಿನ ಇಟ್ಟಿಗೆಹಳ್ಳಿಯ ಬಿಜೆಪಿ ಮುಖಂಡ ಹಾಗೂ ಬಂಜಾರ ಸಮಾಜದ ತಾಲೂಕು ಅಧ್ಯಕ್ಷ ಗಂಗಾನಾಯ್ಕ, ಆತನ ಎರಡನೇ ಪತ್ನಿ ಸೌಭಾಗ್ಯ ಅಲಿಯಾಸ್ ಭಾಗ್ಯಶ್ರೀ, ಸೋಗಿಲು ಗ್ರಾಮದ ರಂಜಿತಾ ಮತ್ತು ಪೀರ್ಯಾನಾಯ್ಕ ಎಂಬ ನಾಲ್ವರನ್ನು ಈಗ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬಂಧಿತ ಗಂಗಾನಾಯ್ಕ ಮುದ್ದನಹಳ್ಳಿ ಗ್ರಾಮ ಪಂಚಾಯ್ತಿಯ ಮಾಜಿ ಅಧ್ಯಕ್ಷನೂ ಆಗಿದ್ದಾನೆ.
ಮೃತಪಟ್ಟ ಅಪ್ರಾಪ್ತ ಬಾಲಕಿ ಸಂಗೀತಾಗೆ ತಾಯಿ ಇರಲಿಲ್ಲ. ತಂದೆಯ ಜೊತೆ ಇರಲಾರದೆ ಆಕೆ ಕೆಲಸ ಹುಡುಕಿಕೊಂಡು ಶಿಕಾರಿಪುರಕ್ಕೆ ಬಂದು ಸೇರಿದ್ದಳು. ಪಿಜಿ ಮಾಲೀಕತ್ವ ವಹಿಸಿಕೊಂಡಿದ್ದ ಸೌಭಾಗ್ಯ, ಈ ಬಾಲಕಿಯನ್ನು ತನ್ನ ಮಗಳಂತೆ ಸಾಕಿ ಸಲುಹುತ್ತಿದ್ದಳು. 8ನೇ ತರಗತಿಯ ನಂತರ ಓದು ನಿಲ್ಲಿಸಿದ್ದ ಸಂಗೀತಾ, ಅದೇ ಪಿಜಿಯಲ್ಲಿ ಕೆಲಸ ಮಾಡಿಕೊಂಡಿದ್ದಳು.
2025 ರ ಮೇ 18 ರಂದು ಪಿಜಿಯಲ್ಲಿದ್ದ ರಂಜಿತಾ ಎಂಬಾಕೆಯೊಂದಿಗೆ ಬಾಲಕಿ ಸಂಗೀತಾಗೆ ಜಗಳವಾಗಿತ್ತು. ಬಾಲಕಿ ಸಂಗೀತಾ ಎಲ್ಲರ ಹತ್ತಿರ ಒಬ್ಬರ ಮೇಲೊಬ್ಬರು ಚಾಡಿ ಹೇಳುತ್ತಿದ್ದಾಳೆ ಎಂದು ಆರೋಪಿಗಳು ಆಕ್ಷೇಪಿಸಿದ್ದರು. ಪಿಜಿ ಕೆಳಗಿರುವ ಬ್ಯೂಟಿ ಪಾರ್ಲರ್‌ನಲ್ಲಿ ಬಾಲಕಿಯನ್ನು ಕರೆಸಿ, “ಚಾಡಿ ಹೇಳಿ ನಮ್ಮ ಮರ್ಯಾದೆ ತೆಗೆಯುತ್ತಿದ್ದೀಯಾ” ಎಂದು ತೀವ್ರವಾಗಿ ಹೆದರಿಸಿ, ನಿಂದಿಸಿ ಮಾನಸಿಕ ಮತ್ತು ದೈಹಿಕವಾಗಿ ಹಲ್ಲೆ ನಡೆಸಲಾಗಿತ್ತು. ಇದರಿಂದ ತೀವ್ರ ಮನನೊಂದ ಬಾಲಕಿ ಸಂಗೀತ, ಪಿಜಿಯ ಕೊಠಡಿಯೊಂದಕ್ಕೆ ತೆರಳಿ ನೇಣಿಗೆ ಶರಣಾಗಿದ್ದಳು.
ಬಾಲಕಿ ನೇಣು ಬಿಗಿದುಕೊಂಡು ಆತ್ಮHತ್ಯೆ ಮಾಡಿಕೊಂಡಿರುವುದನ್ನು ಕಂಡು ಪಿಜಿ ಮಾಲೀಕರು ಮತ್ತು ಅವರ ಸ್ನೇಹಿತರು ತಲ್ಲಣಗೊಂಡಿದ್ದರು. ಪೊಲೀಸರಿಗೆ ವಿಷಯ ತಿಳಿಸಿದರೆ ತಮ್ಮ ಪಿಜಿಗೆ ಕೆಟ್ಟ ಹೆಸರು ಬರುತ್ತದೆ ಹಾಗೂ ಕಾನೂನಿನ ಸಂಕಷ್ಟಕ್ಕೆ ಸಿಲುಕಬೇಕಾಗುತ್ತದೆ ಎಂದು ಹೆದರಿದ ನಾಲ್ವರು ಆರೋಪಿಗಳು ಭೀಕರ ಪ್ಲ್ಯಾನ್ ರೂಪಿಸಿದರು. ಇದಕ್ಕಾಗಿ ಬಾಲಕಿಯ ಶವವನ್ನು ಯಾರಿಗೂ ತಿಳಿಯದಂತೆ ಗೌಪ್ಯವಾಗಿ ವಿಲೇವಾರಿ ಮಾಡಲು ನಿರ್ಧರಿಸಿದರು, ಮೃತದೇಹವನ್ನು ತಂದು ಒಂದು ದೊಡ್ಡ ಸೂಟ್‌ಕೇಸ್ ಒಳಗೆ ಇಟ್ಟು ಬಂದ್ ಮಾಡಿದರು. ಬಳಿಕ ಆ ಸೂಟ್‌ಕೇಸ್ ಅನ್ನು ಕಾರಿನಲ್ಲಿ ಇಟ್ಟುಕೊಂಡು, ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಮಾವಿನಗುಂಡಿ (ಜೋಗ ಜಲಪಾತದ ಸಮೀಪ) ಪ್ರಪಾತದ ಅಜ್ಞಾತ ಸ್ಥಳದಲ್ಲಿ ಎಸೆದು ಯಾರಿಗೂ ತಿಳಿಯದಂತೆ ವಾಪಸ್ ಬಂದಿದ್ದರು. ಈ ಘಟನೆ ನಡೆದು ಒಂದು ವರ್ಷದವರೆಗೂ ಬಾಲಕಿ ಜೀವಂತವಾಗಿದ್ದಾಳೆ ಎಂದು ನಂಬಿಸಲು ಆಕೆಯ ಮೊಬೈಲ್ ಫೋನ್ ಅನ್ನು ಯಾರಿಗೂ ಸಿಗದಂತೆ ಬಚ್ಚಿಟ್ಟಿದ್ದರು.
1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್‌ಕೇಸ್‌ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
WhatsApp Group
Join Now