ಕನ್ನಡವನ್ನ ಅವಮಾನಿಸಿ ರಾಜ್ಯದಲ್ಲಿ ‘ಥಗ್ ಲೈಫ್’ ಸಿನಿಮಾ ತಡೆಯದಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ಕಮಲ್ ಹಾಸನ್!

Spread the love

ಕನ್ನಡ ತಮಿಳಿನಿಂದ ಹುಟ್ಟಿದ್ದು ಎಂದು ನಟ ಕಮಲ್ ಹಾಸನವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಆದರೂ ಕೂಡ ಅವರು ನಾನು ತಪ್ಪು ಮಾಡಿಲ್ಲ ಎಂದರೆ ಕ್ಷಮೆ ಯಾಕೆ ಕೇಳಬೇಕು ಎಂದು ಉದ್ಧಟತನ ತೋರಿದ್ದಾರೆ. ಇವರ ಈ ಒಂದು ದುರ್ನಡತೆಗೆ ಕರ್ನಾಟಕದಲ್ಲಿ ಈಗಾಗಲೇ ಕನ್ನಡಪರ ಸಂಘಟನೆಗಳು ಪ್ರತಿಭಟನೆ ಮೂಲಕ ಅಕ್ರೋಶ ಹೊರಹಾಕುತ್ತಿವೆ. ಇದರ ಮಧ್ಯೆ ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನಿಮಾ ತಡೆಯದಂತೆ ಕಮಲ್ ಹಾಸನ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಹೌದು ಇತ್ತೀಚೆಗೆ ಥಗ್ ಲೈಫ್ ಸಿನಿಮಾ ಈವೆಂಟ್‌ನಲ್ಲಿ ಭಾಗವಹಿಸಿದ್ದ ನಟ ಕಮಲ್ ಹಾಸನ್ ಕನ್ನಡ ಭಾಷೆ ತಮಿಳು ಭಾಷೆಯಿಂದ ಹುಟ್ಟಿಗೆ ಎಂದು ಹೇಳಿದ್ದರು. ಈ ಹೇಳಿಕೆಯಿಂದ ಭಾರೀ ವಿವಾದ ಸೃಷ್ಟಿಯಾಗಿದೆ. ತಮಿಳು ಕನ್ನಡ ಭಾಷೆಗಳು ದ್ರಾವಿಡಿಯನ್ ಭಾಷೆಗಳಾಗಿದ್ದರೂ ಎರಡೂ ವಿಭಿನ್ನ ಶೈಲಿಗಳನ್ನು ಹೊಂದಿದ್ದು, ಸಂಪೂರ್ಣ ಬೇರೆ ಬೇರೆಯಾಗಿವೆ. ಆದರೆ, ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ನೀಡಿದಾಗ್ಯೂ ಕ್ಷಮೆ ಕೇಳದೇ ಮೊಂಡು ವಾದವನ್ನು ನಿಜವೆಂದು ಹೇಳುವ ಪ್ರಯತ್ನ ಮಾಡಿದ್ದಾರೆ.

ಈ ಹಿನ್ನೆಲೆಯಲಲ್ಲಿ ರಾಜ್ಯದಾದ್ಯಂತ ಕಮಲ್ ಹಾಸನ್ ವಿರುದ್ಧ ಪ್ರತಿಭಟನೆಗಳು ನಡೆದಿವೆ. ಇದೀಗ ಈ ನಟನ ಹೊಸ ಸಿನಿಮಾ ಥಗ್ ಲೈಫ್ ಅನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡದಂತೆ ನಿಷೇಧ ಹೇರಿ ಕನ್ನಡ ಚಿತ್ರರಂಗ ಮತ್ತು ಕನ್ನಡಪರ ಸಂಘಟನೆಗಳು ನಿರ್ಣಯ ಕೈಗೊಂಡಿವೆ. ಈ ಹಿನ್ನೆಲೆಯಲ್ಲಿ, ತಮಿಳು ನಟ ಕಮಲ್ ಹಾಸನ್ ಅವರು ತಮ್ಮ ಸಂಸ್ಥೆ ರಾಜ್ ಕಮಲ್ ಫಿಲ್ಮ್ ಇಂಟರ್‌ನ್ಯಾಷನಲ್‌ನ ಸಿಇಒ ಮೂಲಕ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ಸಿನಿಮಾ 2025ರ ಜೂನ್ 5ರಂದು ರಾಜ್ಯಾದ್ಯಾಂತ ಬಿಡುಗಡೆಯಾಗಬೇಕಿದ್ದು, ಈಗಾಗಲೇ ಕರ್ನಾಟಕದಲ್ಲಿ ಹಲವಾರು ಕನ್ನಡ ಪರ ಸಂಘಟನೆಗಳು ಚಿತ್ರ ಪ್ರದರ್ಶನಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿವೆ. ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಚಿತ್ರಮಂದಿರದ ಎದುರು ಪ್ರತಿಭಟನೆಗಳು ನಡೆಯುತ್ತಿದ್ದು, ಚಿತ್ರ ಪ್ರದರ್ಶನ ತಡೆಗೆ ಆಗ್ರಹ ಜೋರಾಗಿದೆ.ಕಲಮ್ ಹಾಸನ್ ತಮ್ಮ ಸಿನಿಮಾಗೆ ಕನ್ನಡಿಗರಿಂದ ತೀವ್ರ ವಿರೋಧ ಉಂಟಾಗಿರುವ ಹಿನ್ನೆಲೆಯಲ್ಲಿ, ತಮ್ಮ ಹೊಸ ಸಿನಿಮಾ ‘ಥಗ್ ಲೈಫ್’ ಬಿಡುಗಡೆಗೆ ಕಾನೂನು ಆಶ್ರಯವನ್ನು ಕೋರಿ ನಟ ಕಮಲ್ ಹಾಸನ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

WhatsApp Group Join Now

Spread the love

Leave a Reply