ರಾಜ್ಯ ಸರ್ಕಾರದಿಂದ ‘ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ’ ಯೋಜನೆಯಡಿ ಅರ್ಜಿ ಆಹ್ವಾನ – Ambedkar Karmika Sahaya Hastha Scheme

Ambedkar Karmika Sahaya Hastha Scheme : ನಮಸ್ಕಾರ ಸ್ನೇಹಿತರೇ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ನೊಂದಾಯಿಸಿಕೊಳ್ಳಲು 20 ವರ್ಗಗಳ ಕಾರ್ಮಿಕರಿಗೆ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.

ಇದನ್ನೂ ಕೂಡ ಓದಿ : Dr. Reddy’s Scholarship : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ₹50,000/- ವಿದ್ಯಾರ್ಥಿವೇತನ – ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ ಯಾವುದು.?

WhatsApp Group Join Now

ಹಮಾಲರು, ಮನೆಗೆಲಸದವರು, ಚಿಂದಿ ಆಯುವವರು, ಟೈಲರ್ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಭಟ್ಟಿಕಾರ್ಮಿಕರು, ಗಿಗ್ ಕಾರ್ಮಿಕರು, ಸಿನಿ ಕಾರ್ಮಿಕರು, ನೇಕಾರರು, ಬೀದಿ ಬದಿ ವ್ಯಾಪಾರಿಗಳು, ಹೋಟೆಲ್ ಕಾರ್ಮಿಕರು, ಫೋಟೋಗ್ರಾಫರ್ಗಳು, ಸ್ವತಂತ್ರ ಲೇಖನ ಬರಹಗಾರರು, ಕಲ್ಯಾಣ ಮಂಟಪ/ಸಭಾ ಭವನ/ಟೆಂಟ್/ಪೆAಡಾಲ್ ಕೆಲಸ ನಿರ್ವಹಿಸುವ ಎಲ್ಲಾ ಕಾರ್ಮಿಕರು, ಬೀಡಿ ಕಾರ್ಮಿಕರು ಮತ್ತು ಅಸಂಘಟಿತ ವಿಕಲಚೇತನ ಕಾರ್ಮಿಕರು, ಅಲೆಮಾರಿ ಪಂಗಡದ ಅಸಂಘಟಿತ ಕಾರ್ಮಿಕರು Ambedkar Karmika Sahaya Hastha Scheme ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ ವೆಬ್ ಸೈಟ್ ನಲ್ಲಿ ನೋಂದಾಯಿಸಿಕೊಳ್ಳುವ ಮೂಲಕ ಯೋಜನೆಯ ಪ್ರಯೋಜನ ಪಡೆದುಕೊಳ್ಳುವಂತೆ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಇದನ್ನೂ ಕೂಡ ಓದಿ : Scholarship : 6 ರಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ ₹15,000/- ಸ್ಕಾಲರ್ಶಿಪ್.! ಹೇಗೆ ಅರ್ಜಿ ಸಲ್ಲಿಸುವುದು.?

WhatsApp Group Join Now

ಯೋಜನೆಯ ಸೌಲಭ್ಯ ಪಡೆಯಲು ಏನೆಲ್ಲಾ ಅರ್ಹತೆಗಳಿರಬೇಕು.?

  • ರಾಜ್ಯದ ನಿವಾಸಿಯಾಗಿದ್ದು, 18 ರಿಂದ 60 ವಯೋಮಾನದವರಾಗಿರಬೇಕು.
  • ಆದಾಯ ತೆರಿಗೆ ಪಾವತಿದಾರರು ಹಾಗೂ ಇಎಸ್‌ಐ/ಪಿಎಫ್ ಸೌಲಭ್ಯ ಹೊಂದಿರಬಾರದು.

ಅಪಘಾತದಿಂದ ಮರಣ ಹೊಂದಿದ್ದಲ್ಲಿ ರೂ. 1.00 ಲಕ್ಷ, ಅಪಘಾತದಲ್ಲಿ ಸಂಪೂರ್ಣ/ಶಾಶ್ವತ/ಬಾಗಶಃ ದುರ್ಬಲತೆ ಹೊಂದಿದ್ದಲ್ಲಿ ರೂ. 1.00 ಲಕ್ಷಗಳವರೆಗೆ , ಆಸ್ಪತ್ರೆ ವೆಚ್ಚ ಮರುಪಾವತಿ ಐವತ್ತು ಸಾವಿರ ರೂ.ಗಳವರೆಗೆ ಹಾಗೂ ಸಹಜ ಮರಣ ಮತ್ತು ಅಂತ್ಯಕ್ರಿಯೆ ವೆಚ್ಚಕ್ಕೆ ಹತ್ತು ಸಾವಿರ ರೂ.ಗಳ ಸೌಲಭ್ಯವನ್ನು ಈ ಯೋಜನೆಯಲ್ಲಿ ಪಡೆಯಬಹುದಾಗಿದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

Leave a Reply