Anganawadi Jobs : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?

Spread the love

Anganawadi Jobs : ನಮಸ್ಕಾರ ಸ್ನೇಹಿತರೇ, ಶಿವಮೊಗ್ಗದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿರುವ ಎಲ್ಲಾ ತಾಲೂಕುಗಳ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲಿದೆ. ಗೌರವಧನ ಆಧಾರದ ಮೇಲೆ ಈ ಹುದ್ದೆಗಳಿಗೆ ಭರ್ತಿ ಮಾಡಲಿದೆ. ಖಾಲಿಯಿರುವ ಹುದ್ದೆಗಳು ಹಾಗು ಸ್ಥಳಗಳು.? ಬೇಕಾಗುವ ದಾಖಲೆಗಳೇನು.? ಹಾಗು ಹೇಗೆ ಅರ್ಜಿ ಸಲ್ಲಿಸುವುದು.? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.

WhatsApp Group Join Now

ಇದನ್ನೂ ಕೂಡ ಓದಿ : SBI Bank Recruitment : ಎಸ್ ಬಿಐ ಬ್ಯಾಂಕಿನಲ್ಲಿ ಉದ್ಯೋಗವಕಾಶ.! ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಸ್ಥಳೀಯ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಅಂಗನವಾಡಿಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಈ ಸದುಪಯೋಗವನ್ನು ಪಡೆದುಕೊಳ್ಳಬೇಕು.

WhatsApp Group Join Now

ಖಾಲಿಯಿರುವ ಹುದ್ದೆಗಳು ಹಾಗು ಸ್ಥಳಗಳು.?

  • ಶಿವಮೊಗ್ಗ :- ಕಾರ್ಯಕರ್ತೆಯರು-34, ಸಹಾಯಕಿಯರು-118
  • ಭದ್ರಾವತಿ :- ಕಾರ್ಯಕರ್ತೆಯರು -10, ಸಹಾಯಕಿಯರು -72
  • ಹೊಸನಗರ :- ಕಾರ್ಯಕರ್ತೆಯರು-07, ಸಹಾಯಕಿಯರು -35
  • ಸಾಗರ :- ಕಾರ್ಯಕರ್ತೆಯರು-21, ಸಹಾಯಕಿಯರು- 62
  • ಶಿಕಾರಿಪುರ :- ಕಾರ್ಯಕರ್ತೆಯರು-08, ಸಹಾಯಕಿಯರು -55
  • ಸೊರಬ :- ಕಾರ್ಯಕರ್ತೆಯರು-38, ಸಹಾಯಕಿಯರು -65
  • ತೀರ್ಥಹಳ್ಳಿ :- ಕಾರ್ಯಕರ್ತೆಯರು 09, ಸಹಾಯಕಿಯರು- 41

ಇದನ್ನೂ ಕೂಡ ಓದಿ : Canara Bank Jobs : ಕೆನರಾ ಬ್ಯಾಂಕ್‌ನಲ್ಲಿ ಬಂಪರ್ ಉದ್ಯೋಗಾವಕಾಶ.! ಆಸಕ್ತರು ಇಂದೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.?

ಆನ್ ಲೈನ್ ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು :-

  • ಅರ್ಜಿ ನಿಗದಿತ ನಮೂನೆಯಲ್ಲಿ (ಆನ್ ಲೈನ್
  • ಜನನ ಪ್ರಮಾಣ ಪತ್ರ/ಜನ್ಮ ದಿನಾಂಕ ಇರುವ S.S.L.C.ಅಂಕಪಟ್ಟಿ
  • ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ
  • ತಹಶೀಲ್ದಾರರು/ಉಪ ತಹಶೀಲ್ದಾರರಿಂದ ಪಡೆದ ಮೂರು (3) ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ
  • ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ
  • ಪತಿಯ ಮರಣ ಪ್ರಮಾಣ ಪತ್ರ ಹಾಗೂ ವಿಧವಾ ಪ್ರಮಾಣ ಪತ್ರ (ವಿಧವಾ ವೇತನದ ದೃಢಿಕರಣವನ್ನು ಪರಿಗಣಿಸುವಂತಿಲ್ಲ)
  • ಅಂಗವಿಕಲತೆ ಪ್ರಮಾಣಪತ್ರ (ಅಂಗವಿಕಲ ವೇತನದ ದೃಢೀಕರಣವನ್ನು ಪರಿಗಣಿಸುವಂತಿಲ್ಲ)
  • ವಿಚ್ಛೇದನ ಪ್ರಮಾಣ ಪತ್ರ (ನ್ಯಾಯಾಲಯದಿಂದ ಪಡೆದಿರಬೇಕು)
  • ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ನಡೆಸಲ್ಪಟ್ಟ ಮಾಜಿ ದೇವದಾಸಿಯರ ಸಮೀಕ್ಷೆಯ ಪಟ್ಟಿಯಲ್ಲಿರುವ ಮಾಜಿ ದೇವದಾಸಿಯರ ಮಕ್ಕಳು ಎಂಬುದರ ಬಗ್ಗೆ ಮಹಿಳಾ ಅಭಿವೃದ್ಧಿ ನಿಗಮದ ಅಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ
  • ಇಲಾಖೆಯ ಸುಧಾರಣಾ ಸಂಸ್ಥೆ /ರಾಜ್ಯ ಮಹಿಳಾ ನಿಲಯಗಳ ನಿವಾಸಿಗಳು ಕನಿಷ್ಠ 3 ವರ್ಷ ಸಂಸ್ಥೆಯಲ್ಲಿರಬೇಕು. ಹಾಗೂ ಈ ಬಗ್ಗೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಂದ ಪಡೆದ ನಿವಾಸಿ ಪ್ರಮಾಣ ಪತ್ರ
  • ಯೋಜನಾ ನಿರಾಶ್ರಿತರ ಬಗ್ಗೆ, ತಹಶೀಲ್ದಾರರಿಂದ ಪಡೆದ ಪ್ರಮಾಣ ಪತ್ರ
  • ಆಧಾರ್ ಕಾರ್ಡ್/ಮತದಾರರ ಗುರುತಿನ ಚೀಟಿ/ರೇಷನ್ ಕಾರ್ಡ್/ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಪಡೆದ ದೃಢೀಕರಣ ಪತ್ರ
  • ಎಲ್ಲಾ ದಾಖಲಾತಿಗಳನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಣ ಮಾಡಿಸಿ ಸಲ್ಲಿಸುವುದು.

ಇದನ್ನೂ ಕೂಡ ಓದಿ : Free Laptop Scheme : ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ | ಯಾರಿಗೆಲ್ಲ ಉಚಿತ ಲ್ಯಾಪ್‌ಟಾಪ್ ಸಿಗಲಿದೆ.? ಯಾವಾಗ ಸಿಗಲಿದೆ.?

WhatsApp Group Join Now

ಆಸಕ್ತ ಅಭ್ಯರ್ಥಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧೀಕೃತ ವೆಬ್‌ಸೈಟ್ ಮೂಲಕ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಆಗಸ್ಟ್ 29 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವೆಬ್‌ಸೈಟ್ ಹಾಗೂ ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಪಡೆಯಬಹುದಾಗಿದೆ.

ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ :- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.


Spread the love

Leave a Reply