Anna Bhagya Amount : ಅನ್ನಭಾಗ್ಯ ಹಣ ನಿಮಗೆ ಇನ್ನೂ ಜಮಾ ಆಗಿಲ್ವಾ.? ಹೊಸ ಅಪ್ಡೇಟ್ ಏನು.?

Anna Bhagya Amount : ನಮಸ್ಕಾರ ಸ್ನೇಹಿತರೇ, ನೀವು ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಾ.? ಏಪ್ರಿಲ್ ಮತ್ತು ಮೇ ತಿಂಗಳಿನ ಅನ್ನಭಾಗ್ಯ ಯೋಜನೆಯ ಹಣ ನಿಮಗೆ ಇನ್ನೂ ಬಂದಿಲ್ಲವೇ..? ಅನ್ನಭಾಗ್ಯ ಯೋಜನೆಯ ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗಿಲ್ಲ ಎನ್ನುವ ಚಿಂತೆಯಲ್ಲಿದ್ದೀರಾ.? ಅದರ ಬಗ್ಗೆನೇ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.

ರಾಜ್ಯ ಕಾಂಗ್ರೆಸ್ ಸರ್ಕಾರವು ಜನತೆಗೆ ನೀಡಿದ್ದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿ ಹೊಂದಿರುವ ಬಡ ಕುಟುಂಬದ ಸದಸ್ಯರಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುವುದಾಗಿ ಘೋಷಿಸಿತ್ತು.

ಇದನ್ನೂ ಕೂಡ ಓದಿ : Aadhar Card Updates : ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್ಸ್ ಮಾಡಿಸಿದ್ದೀರಾ.? ಸರ್ಕಾರ ನೀಡಿದ ಎಚ್ಚರಿಕೆ ಏನು.?

ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಹೆಚ್ಚುವರಿ ಅಕ್ಕಿ ಲಭ್ಯವಾಗದ ಕಾರಣ 5 ಕೆಜಿ ಅಕ್ಕಿ ಕೊಟ್ಟು ಇನ್ನುಳಿದ ಐದು ಕೆ.ಜಿ ಅಕ್ಕಿಯ ಬದಲಾಗಿ ಪ್ರತಿ ಕೆಜಿಗೆ 34 ರೂ ಅಂತೆ ಪ್ರತಿ ಸದಸ್ಯರಿಗೆ 170 ರೂಪಾಯಿ ನೇರವಾಗಿ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿತ್ತು. ಆದರೆ ಮಾರ್ಚ್ ತಿಂಗಳವರೆಗೆ ಅನ್ನಭಾಗ್ಯ ಯೋಜನೆಯ ಹಣವನ್ನ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ.

ಏಪ್ರಿಲ್ ಮತ್ತು ಮೇ ತಿಂಗಳ ಅನ್ನಭಾಗ್ಯ ಯೋಜನೆಯ ಹಣ ಇನ್ನೂ ಕೂಡ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಆಗಿಲ್ಲ. ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆಯಲ್ಲಿ ಬದಲಾವಣೆ ಮಾಡುತ್ತಿದ್ದು, ಈಗಾಗಲೇ ಬೇರೆ ಬೇರೆ ರಾಜ್ಯಗಳಿಂದ ಅಕ್ಕಿ ಸಂಗ್ರಹಣೆ ಮಾಡುತ್ತಿದೆ ಎನ್ನುವ ಮಾಹಿತಿ ಬಂದಿದೆ. ಮುಂದಿನ ತಿಂಗಳಿಂದ ಹಣದ ಬದಲು ಹತ್ತು ಕೆಜಿ ಅಕ್ಕಿ ನೀಡಬೇಕೆಂದು ಸರ್ಕಾರ ತೀರ್ಮಾನಿಸಿದೆ ಎಂದು ತಿಳಿದು ಬಂದಿದೆ.

ಇದನ್ನೂ ಕೂಡ ಓದಿ : Bara Parihara Amount Failed : ನಿಮಗಿನ್ನೂ ಬರ ಪರಿಹಾರದ ಹಣ ಬ್ಯಾಂಕ್ ಖಾತೆಗೆ ಜಮಾ ಆಗದಿರಲು ಈ ತಪ್ಪುಗಳೇ ಕಾರಣ! ಸಂಪೂರ್ಣ ಮಾಹಿತಿ

ಕಳೆದ ಎರಡು ತಿಂಗಳಿನ ಜಮಾ ಆಗದಿರುವ ಹಣವನ್ನು ಸಧ್ಯದಲ್ಲಿಯೇ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಡಿಬಿಟಿ ಮೂಲಕ ವರ್ಗಾವಣೆ ಮಾಡಲಾಗುವುದು. ಏಪ್ರಿಲ್ ಮತ್ತು ಮೇ ತಿಂಗಳ ಅನ್ನಭಾಗ್ಯ ಯೋಜನೆಯ ಹಣ ನಿಮ್ಮ ಖಾತೆಗೆ ಜಮಾ ಮಾಡಲಾಗುತ್ತದೆ.

ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

Leave a Reply