Annabhagya Scheme : ಇನ್ಮುಂದೆ ಅನ್ನಭಾಗ್ಯ ಯೋಜನೆಯಡಿ ಹಣದ ಬದಲು ಒಟ್ಟು 10 ಕೆಜಿ ಅಕ್ಕಿ ವಿತರಣೆ : ಆದೇಶ ಹೊರಡಿಸಿದ ರಾಜ್ಯ ಸರ್ಕಾರ

Spread the love

Annabhagya Scheme : ಅನ್ನಭಾಗ್ಯ ಯೋಜನೆಯಡಿ ಪಡಿತರ ಫಲಾನುಭವಿಗಳಿಗೆ ನೀಡುತ್ತಿರುವ ನೇರ ನಗದು ವರ್ಗಾವಣೆ ಯೋಜನೆಯಡಿ ನೀಡುತ್ತಿರುವ 5 ಕೆಜಿ ಅಕ್ಕಿಯ ಹಣದ ಬದಲಾಗಿ 5 ಕೆಜಿ ಅಕ್ಕಿಯನ್ನು ಇನ್ಮುಂದೆ ವಿತರಿಸುವುದಾಗಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಮಾಡಿದೆ. ಈ ಕುರಿತು ಆಹಾರ, ನಾಗರರಿಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ.

WhatsApp Group Join Now

ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana

ರಾಜ್ಯದಲ್ಲಿರುವ ಅಂತ್ಯೋದಯ ಅನ್ನಭಾಗ್ಯ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ವಿತರಿಸಲಾಗುವ 5 ಕೆ.ಜಿ ಆಹಾರ ಧಾನ್ಯದೊಂದಿಗೆ, ರಾಜ್ಯ ಸರ್ಕಾರದ ವತಿಯಿಂದ ಹೆಚ್ಚುವರಿಯಾಗಿ 5 ಕೆ.ಜಿ, ಆಹಾರ ಧಾನ್ಯವನ್ನು ಸೇರಿಸಿ, ಪ್ರತಿ ತಿಂಗಳು ಪ್ರತಿ ಫಲಾನುಭವಿಗೆ ತಲಾ 10 ಕೆ.ಜಿ, ಆಹಾರ ಧಾನ್ಯವನ್ನು ಉಚಿತವಾಗಿ ವಿತರಿಸಲು ನಿರ್ಧರಿಸಲಾಗಿರುತ್ತದೆ ಎಂದಿದ್ದಾರೆ.

ಅಕ್ಕಿಯ ಅಲಭ್ಯತೆಯಿಂದಾಗಿ ರಾಜ್ಯದಲ್ಲಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು 05 ಕೆ.ಜಿ, ಆಹಾರ ಧಾನ್ಯದ ಬದಲಾಗಿ ಪ್ರತಿ ಕೆ.ಜಿಗೆ ರೂ.34/-ರಂತೆ ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ DBT ಮೂಲಕ ರೂ.170/- ರಂತೆ ಹಣವನ್ನು ವರ್ಗಾಯಿಸಿರುತ್ತಾರೆ ಎಂದು ಹೇಳಿದ್ದಾರೆ.

WhatsApp Group Join Now

State Budget 2025 : ರಾಜ್ಯ ಬಜೆಟ್ 2025 ಸಿಎಂ ಸಿದ್ದರಾಮಯ್ಯ ಕಡೆಯಿಂದ ಎಲ್ಲಾ ಜನತೆಗೆ ಬಂಪರ್ ಕೊಡುಗೆ.!

ಮೇಲೆ ಓದಲಾದ (2)ರ ಆಯುಕ್ತರು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಇವರು ಪ್ರಸ್ತಾವನೆ ಸಲ್ಲಿಸಿ, ಕೇಂದ್ರ ಸರ್ಕಾರದ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ದಿನಾಂಕ:17.01.2025ರ ಪತ್ರದಲ್ಲಿ ಭಾರತ ಆಹಾರ ನಿಗಮದ OMSS(D) ಯೋಜನೆಯಡಿ ರಾಜ್ಯಗಳಿಗೆ ಮಾರಾಟ ಮಾಡಲಾಗುವ ಅಕ್ಕಿ ದರವನ್ನು ಪ್ರತಿ ಕ್ವಿಂಟಾಲ್‌ಗೆ ರೂ.2250/- ರಂತೆ (ಸಾಗಾಣಿಕೆ ದರ ಸೇರಿದಂತೆ) ಇ-ಹರಾಜು ಹೊರತುಪಡಿಸಿ ಖರೀದಿಸಲು ರಾಜ್ಯ ಸರ್ಕಾರಗಳಿಗೆ ಅವಕಾಶ ಕಲ್ಪಿಸಿ ಸದರಿ ದರ ದಿನಾಂಕ:30.06.2025ರ ವರೆಗೆ ಅನ್ವಯಿಸುವುದಾಗಿ ತಿಳಿಸಿ, ವಾರ್ಷಿಕ ಒಟ್ಟು 12 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ಖರೀದಿಸಲು ಮಿತಿಯನ್ನು ನಿಗದಿಪಡಿಸಿರುತ್ತಾರೆ ಎಂದಿದ್ದಾರೆ.

WhatsApp Group Join Now

RTC Transfer : ಜಮೀನಿನ ಪಹಣಿ ತಂದೆ, ತಾತ, ಮುತ್ತಾತ, ಪೂರ್ವಜರ ಹೆಸರಿನಲ್ಲಿ ಇದ್ದರೆ – ನಿಮ್ಮ ಹೆಸರಿಗೆ ವರ್ಗಾವಣೆ

ರಾಜ್ಯದಲ್ಲಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ಫಲಾನುಭವಿಗೆ 05 ಕೆ.ಜಿ ಭಾರತ ಆಹಾರ ನಿಗಮದ ಓಎಂಎಸ್‌ಎಸ್(ಡಿ) ಅಕ್ಕಿಯನ್ನು ಹಂಚಿಕೆಗೆ ಪರಿಗಣಿಸಿದಲ್ಲಿ ಮಾಸಿಕವಾಗಿ ಅಂದಾಜು 2.10 ಲಕ್ಷ ಮೆ.ಟನ್ ಅಕಿ ಅಗತ್ಯವಿದ್ದು, ಸದರಿ ಪ್ರಮಾಣಕ್ಕೆ ಖರೀದಿ ದರ, ಸಗಟು/ಚಿಲ್ಲರೆ ಸಾಗಾಣಿಕೆ ವೆಚ್ಚ ಹಾಗೂ ಸಗಟು ಚಿಲ್ಲರೆ ಸಗಟು ಲಾಭಾಂಶ ಸೇರಿದಂತೆ ಮಾಸಿಕ ಅಂದಾಜು ವೆಚ್ಚ ರೂ.536.71 ಕೋಟಿಗಳ ವೆಚ್ಚ ಆಗುವುದಾಗಿ ಪ್ರಸ್ತಾಪಿಸಿರುತ್ತಾರೆ ಎಂಬುದಾಗಿ ತಿಳಿಸಿದ್ದಾರೆ.

ಆಯುಕ್ತರು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಇವರ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ, ಭಾರತ ಆಹಾರ ನಿಗಮದ ಹೊಸ ಓಎಂಎಸ್‌ಎಸ್(ಡಿ) ಯೋಜನೆಯಡಿ ಜನವರಿ- 2025ರ ಮಾಹೆಯಿಂದ ಜಾರಿಗೆ ಬರುವಂತೆ ಅಕ್ಕಿಯ ಪರಿಷ್ಕೃತ ದರ ಪ್ರತಿ ಕೆ.ಜಿ ಅಕ್ಕಿಗೆ ರೂ.22.50 ರಂತ ನಿಗಧಿಪಡಿಸಿರುವ ಹಿನ್ನೆಲೆಯಲ್ಲಿ, ಪ್ರಸ್ತುತ ನೀಡಲಾಗುತ್ತಿರುವ ನೇರ ನಗದು ವರ್ಗಾವಣೆ (DBT) ಬದಲಾಗಿ ಪ್ರತಿ ಫಲಾನುಭವಿಗೆ 05 ಕೆ.ಜಿ ಅಕ್ಕಿಯನ್ನು ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲು ಸರ್ಕಾರವು ತೀರ್ಮಾನಿಸಿ, ಈ ಕೆಳಕಂಡಂತೆ ಆದೇಶಿಸಿದೆ.

ಲೇಬರ್ ಕಾರ್ಡ್ ಇದ್ದವರಿಗೆ ₹120000 ಹಣ ಉಚಿತ – ಕಾರ್ಮಿಕ ಕಾರ್ಡ್ ಇದ್ದರೆ ತಪ್ಪದೇ ನೋಡಿ – Labour Card Benefits

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ರಾಜ್ಯದಲ್ಲಿರುವ ಅಂತ್ಯೋದಯ ಅನ್ನ ಯೋಜನೆ (AAY) ಮತ್ತು ಆದ್ಯತಾ ಪಡಿತರ ಚೀಟಿಗಳ (PHH) ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ (DBT) ಮುಖಾಂತರ ಹಣವನ್ನು ವರ್ಗಾಯಿಸುವ ಪ್ರಕ್ರಿಯೆಯ ಬದಲಾಗಿ ಫೆಬ್ರುವರಿ-2025 ರ ಮಾಹೆಯಿಂದ ಜಾರಿಗೆ ಬರುವಂತೆ ಸರ್ಕಾರದ ಆದೇಶ ಸಂಖ್ಯೆ ಆನಾಸ 84 ಡಿಆರ್‌ಎ 2023, ದಿನಾಂಕ: 06.07.2023 ರ ಮಾರ್ಗಸೂಚಿಗಳನ್ವಯ ಅರ್ಹ ಫಲಾನುಭವಿಗಳಿಗೆ 05 ಕೆ.ಜಿ ಅಕ್ಕಿಯನ್ನು ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲು ಆದೇಶಿಸಿದೆ.

ಅನ್ನಭಾಗ್ಯ ಯೋಜನೆಯನ್ನು (ಗ್ರಾರಂಟಿ) ಅನುಷ್ಠಾನಗೊಳಿಸಲು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ಇವರನ್ನು ಖರೀದಿ ಏಜೆನ್ಸಿಯಾಗಿ ನೇಮಿಸಲಾಗಿದೆ. ಸದರಿ ಆದೇಶವನ್ನು ಆರ್ಥಿಕ ಇಲಾಖೆಯ ಟಿಪ್ಪಣಿ ಸಂಖ್ಯೆ FD 111 Exp-5/2025, ದಿನಾಂಕ:18.02.2025, ರಲ್ಲಿ ನೀಡಿರುವ ಸಹಮತಿಯನ್ವಯ ಹೊರಡಿಸಲಾಗಿದೆ ಎಂಬುದಾಗಿ ಹೇಳಿದ್ದಾರೆ.


Spread the love

Leave a Reply