Arecanut Rate : ಕ್ವಿಂಟಾಲ್ ಅಡಿಕೆ ಧಾರಣೆ ಎಷ್ಟಿದೆ ಗೊತ್ತಾ? : ಇಲ್ಲಿದೆ ಡಿಸೆಂಬರ್ 17ರ ದರಪಟ್ಟಿ

Spread the love

ಕಳೆದ ಕೆಲ ದಿನಗಳವರೆಗೂ ರಾಜ್ಯದಲ್ಲಿ ಇಳಿಕೆಯತ್ತ ಸಾಗಿದ್ದ ಅಡಿಕೆ ಧಾರಣೆ ಇದೀಗ ಭರ್ಜರಿ ಏರಿಕೆಯಾಗಿದೆ. ಇದರಿಂದ ಬೆಳೆಗಾರರ ಮುಖದಲ್ಲಿ ಮಾಯವಾಗಿದ್ದ ಮಂದಹಾಸ ಮತ್ತೆ ಬಂದಂತಾಗಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿ ಜಿಲ್ಲೆಯ ಹಲವೆಡೆ ಅಡಿಕೆಯನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ.

WhatsApp Group Join Now

ಹಾಗಾದ್ರೆ, ಇಂದು (ಡಿಸೆಂಬರ್ 17) ದರ ಎಷ್ಟಿದೆ ತಿಳಿಯಿರಿ.

ಅಡಿಕೆ ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಇಂದು (ಡಿಸೆಂಬರ್ 17) ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 58,289 ರೂಪಾಯಿ, ಕನಿಷ್ಠ ದರ 53,599 ರೂಪಾಯಿ ಇದ್ದು, ಸರಾಸರಿ ಬೆಲೆ 55,959 ರೂಪಾಯಿ ಇದೆ. ಕಳೆದ ಎರಡು ದಿನಗಳಿಂದಲೂ ಇದೇ ದರವನ್ನು ಕಾಯ್ದುಕೊಂಡು ಬಂದಿದೆ. ಮುಂದಿನ ದಿನಗಳಲ್ಲಾದರೂ ಏರಿಕೆಯಾಗುವ ಭರವಸೆಯಲ್ಲಿ ಬೆಳೆಗಾರರಿದ್ದಾರೆ.

WhatsApp Group Join Now

ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಇದೇ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಡೆ ಇದ್ದ ಕ್ವಿಂಟಾಲ್‌ ಅಡಿಕೆ ಧಾರಣೆ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು. ಆಗಿನಿಂದಲೂ ಸತತ ಏರಿಕೆ ಆಗುತ್ತಲೇ ಇತ್ತು. ಕೊನೆಗೂ ಏಪ್ರಿಲ್‌ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಟಿತ್ತು.

ಅಕ್ಟೋಬರ್ ನಾಲ್ಕನೇ ವಾರದ ಆರಂಭದಲ್ಲಿ 70,000 ರೂಪಾಯಿ ಸಮೀಪದತ್ತ ಬಂದಿತ್ತು. ಇನ್ನೇನು ಕೆಲವೇ ದಿನಗಳಲ್ಲಿ 70,000 ರೂಪಾಯಿ ಮುಟ್ಟುತ್ತದೆ ಅನ್ನುವಷ್ಟರಲ್ಲೇ ಧಾರಣೆ ಇಳಿಕೆ ಆಗಿತ್ತು. ಬಳಿಕ ತುಸು ಸುಧಾರಣೆ ಆಗಿ ಕೆಲವು ದಿನಗಳಿಂದ ಇಳಿಕೆಯತ್ತ ಹೊರಟಿತ್ತು. ಆದರೆ ಇದೀಗ ಸುಧಾರಣೆ ಆಗಿರುವುದು ಸಂತಸದ ವಿಚಾರ ಆಗಿದೆ.

WhatsApp Group Join Now

ಮೇ ತಿಂಗಳ ಆರಂಭದಿಂದಲೂ ಜೂನ್‌ ತಿಂಗಳ ಕೆಲವು ವಾರಗಳವರೆಗೆ ಇಳಿಕೆಯಾಗಿ ಮತ್ತೆ ಏರಿಕೆಯತ್ತ ಸಾಗಿತ್ತು. ಬಳಿಕ ಜೂನ್‌ ತಿಂಗಳ ಮಧ್ಯದಿಂದಲೂ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯಾಗುತ್ತಲೇ ಬಂದಿತ್ತು. ಇನ್ನು 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. ಕಳೆದ ವರ್ಷ 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ತಲುಪಿತ್ತು.

2025ರ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯತ್ತ ಸಾಗುತ್ತಾ ಬಂದಿತ್ತು. ಜುಲೈಗೆ ಹೋಲಿಕೆ ಮಾಡಿದರೆ, ಆಗಸ್ಟ್‌ನಲ್ಲಿ ಧಾರಣೆಯಲ್ಲಿ ತುಸು ಸುಧಾರಣೆ ಕಂಡಿತ್ತು. ಆದರೆ, ಕೊನೆಯಲ್ಲಿ ತುಸು ಇಳಿಕೆಯಾಗಿ ಮತ್ತೆ ಸೆಪ್ಟೆಂಬರ್ ಅಂತ್ಯದಲ್ಲಿ ತುಸು ಏರಿಕೆಯತ್ತ ಹೊರಟ್ಟಿತ್ತು. ಅಕ್ಟೋಬರ್ ಅಂತ್ಯದವರೆಗೂ ಸತತವಾಗಿ ಏರಿಕೆ ಹಾದಿ ಹಿಡಿದಿತ್ತು. ಬಳಿಕ ಸತತ ಇಳಿಕೆಯ ಹಾದಿ ಹಿಡಿದಿದ್ದು, ನವೆಂಬರ್ ಮಧ್ಯದಿಂದ ಸತತ ಭರ್ಜರಿ ಏರಿಕೆಯತ್ತ ಹೊರಟಿತ್ತು. ಆದರೆ, ಡಿಸೆಂಬರ್‌ 10ರ ವರೆಗೆ ಭಾರೀ ಇಳಿಕೆಯಾಗುತ್ತಲೇ ಬಂದಿತ್ತು. ಆದರೆ, ಇದೀಗ ಏರಿಕೆ ಕಂಡಿದ್ದು, ಬೆಳೆಗಾರರ ಮುಖದಲ್ಲಿ ಸಂತಸ ಮೂಡಿದಂತಾಗಿದೆ.

ಈ ಬಾರಿ ರಾಜ್ಯಕ್ಕೆ ಜೂನ್ ಆರಂಭದಲ್ಲೇ ಮುಂಗಾರು ಎಂಟ್ರಿ ಕೊಟ್ಟಿದ್ದು, ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಪರಿಣಾಮ ಅಡಿಕೆ ಫಸಲು ಕೂಡ ಅಷ್ಟೇ ಚೆನ್ನಾಗಿ ಬಂದಿದೆ. ಕಳೆದ ಕೆಲದ ದಿನಗಳಿಂದ ಅಡಿಕೆ ಧಾರಣೆ ಭಾರೀ ಕುಸಿತ ಕಂಡಿದ್ದು, ಬೆಳೆಗಾರರಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿತ್ತು. ಆದರೆ ಇದೀಗ ಸುಧಾರಣೆಯಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಳ ಆಗುವ ಭರವಸೆಯಲ್ಲಿ ಅಡಿಕೆ ಬೆಳೆಗಾರರಿದ್ದಾರೆ.


Spread the love

Leave a Reply