ರಾತ್ರಿ ಪಾಳಿಯ ಕರ್ತವ್ಯವ ಮುಗಿಸಿ ಬೆಳಗಿನ ಜಾವ ಮನೆಗೆ ಮರಳಿದ್ದ ಪೊಲೀಸ್ ಅಧಿಕಾರಿಯೊಬ್ಬರು ಹಠಾತ್ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿರುವ ದುರ್ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಸಂತೇಮರಹಳ್ಳಿ ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಆಗಿ ಸೇವೆ ಸಲ್ಲಿಸುತ್ತಿದ್ದ ನಾಗನಾಯಕ ಮೃತ ದುರ್ದೈವಿ.
ಮಾಹಿತಿ ಪ್ರಕಾರ, ನಾಗನಾಯಕ ಅವರು ರಾತ್ರಿ ಡ್ಯೂಟಿ ಮುಗಿಸಿಕೊಂಡು ಬೆಳಗ್ಗೆ ತಮ್ಮ ನಿವಾಸಕ್ಕೆ ಆಗಮಿಸಿದ್ದರು. ಮನೆಯೊಳಗೆ ಪ್ರವೇಶಿಸಿದ ಕೆಲವೇ ಕ್ಷಣಗಳಲ್ಲಿ ಅಸಹಜವಾಗಿ ಕುಸಿದು ಬಿದ್ದಿದ್ದಾರೆ. ತಕ್ಷಣ ಕುಟುಂಬಸ್ಥರು ಹಾಗೂ ಸಹೋದ್ಯೋಗಿಗಳು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದರೂ, ಮಾರ್ಗ ಮಧ್ಯದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ನಗರದ ಪೊಲೀಸ್ ವಸತಿ ಗೃಹದಲ್ಲೇ ನಾಗನಾಯಕ ಅವರು ಕುಟುಂಬದೊಂದಿಗೆ ವಾಸವಾಗಿದ್ದರು. ಕರ್ತವ್ಯನಿಷ್ಠ ಹಾಗೂ ಶಿಸ್ತಿನ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದ ನಾಗನಾಯಕ ಅವರ ಅಗಲಿಕೆಗೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಹೋದ್ಯೋಗಿಗಳು ಸಂತಾಪ ಸೂಚಿಸಿದ್ದಾರೆ.
WhatsApp Group
Join Now