ಹಾಲಾಯ್ತು ಹಾಲಾಹಾಲ – ರಾಸಾಯನಿಕ ಬಳಸಿ ನಕಲಿ ಹಾಲು ತಯಾರಿಕೆ ಮಾಡ್ತಿದ್ದ ಖದೀಮರು ಅರೆಸ್ಟ್!
ರಾಸಾಯನಿಕ ವಸ್ತುಗಳನ್ನು ಬಳಸಿ ನಕಲಿ ಹಾಲು (Milk) ತಯಾರು ಮಾಡುತ್ತಿದ್ದ ಅಡ್ಡೆಯ ಮೇಲೆ ಪೊಲೀಸರು (KGF Police) ದಾಳಿ ನಡೆಸಿ, ಐವರನ್ನು ಬಂಧಿಸಿರುವ ಘಟನೆ ಕೋಲಾರ (Kolara) ಜಿಲ್ಲೆಯಲ್ಲಿ ನಡೆದಿದೆ. ಕೆಜಿಎಫ್ ತಾಲೂಕಿನ ಬಳ್ಳಗೆರೆ ಗ್ರಾಮದ ಬಳಿ ಶೆಡ್ ಒಂದರಲ್ಲಿ ಅಕ್ರಮವಾಗಿ ಕಲಬೆರಕೆ ಹಾಲು ತಯಾರಿಸಲಾಗುತ್ತಿತ್ತು. ಕೆಜಿಎಫ್ ಪೊಲೀಸರು ನಕಲಿ ಹಾಲನ್ನು ತಯಾರಿಸುತ್ತಿದ್ದ ಅಡ್ಡೆಯ ಮೇಲೆ ದಾಳಿ ಮಾಡಿ ಐವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಆಂಧ್ರಪ್ರದೇಶ ಮೂಲದ ದಿಲೀಪ್, ಬಾಲರಾಜ್, ವೆಂಕಟೇಶಪ್ಪ, ಬಾಲಾಜಿ ಮತ್ತು ಮನೋಹರ್ ಎಂದು ಗುರುತಿಸಲಾಗಿದೆ. … Read more