ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತ ದಿಂದ ಸಾವು.!
ಕಳೆದ ಒಂದು ತಿಂಗಳಲ್ಲಿ ಹಾಸನದಲ್ಲಿ ಹೃದಯಾಘಾತಕ್ಕೆ ಒಟ್ಟು 13 ಜನರು ಬಲಿಯಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಬೆಳಗಾವಿಯಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಶಾಲೆಯಲ್ಲಿ ಆಟವಾಡುವ ವೇಳೆಯೆ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಮಕೇರಿ ಎಂಬ ಗ್ರಾಮದಲ್ಲಿ ನಡೆದಿದೆ. ರೇಣುಕಾ ಸಂಜಯ ಬಂಡಗಾರ (15) ಮೃತ ಬಾಲಕಿ ಹೆಸರು. ಚಮಕೇರಿ ಗ್ರಾಮದ ಖಾಸಗಿ ಶಾಲೆಯ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಬೆಳಗಿನ ಜಾವ ಶಾಲಾ ಆವರಣದಲ್ಲಿ ಸಹಪಾಠಿಗಳೊಂದಿಗೆ ಆಟವಾಡುತ್ತಿದ್ದ ವೇಳೆ, ಅಸ್ವಸ್ಥಳಾಗಿ ಕುಸಿದುಬಿದ್ದಳು. … Read more