ಬಸ್ ಗೆ ಬೆಂಕಿ ತಗುಲಿ 17 ಜನ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ 30 ಕಿ.ಮೀ. ಸಂಪೂರ್ಣ ಟ್ರಾಫಿಕ್ ಜಾಮ್

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 17ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ. ಲಾರಿ ಡಿಕ್ಕಿಯಾಗಿ ಡೀಸೆಲ್ ಟ್ಯಾಂಕ್ ಸಿಡಿದು ಬಸ್ ಗೆ ಬೆಂಕಿ ತಗುಲಿ 17 ಪ್ರಯಾಣಿಕರು ಮೃತಪಟ್ಟಿದ್ದಾರೆ. ಲಾರಿ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. 32 ಆಸನಗಳ ಬಸ್ ನಲ್ಲಿ 29 ಪ್ರಯಾಣಿಕರು ಇದ್ದರು. ಗೋಕರ್ಣದ 25 ಜನ, ಕುಮಟಾದ ಇಬ್ಬರು ಹಾಗೂ ಶಿವಮೊಗ್ಗದ ಇಬ್ಬರು ಪ್ರಯಾಣಿಸುತ್ತಿದ್ದರು. ಸ್ಥಳಕ್ಕೆ ಎಸ್ಪಿ ರಂಜಿತ್ ಕುಮಾರ್ ಭೇಟಿ ನೀಡಿ … Read more

ಡಿಕೆಶಿ ಮಾಡಿದ ಸಹಾಯ ಮರೆಯೋಕೆ ಹೋಗಲ್ಲ – ಡಿಸಿಎಂ ಮೇಲೆ ರಾಜಣ್ಣ ಸಾಫ್ಟ್‌ ಕಾರ್ನರ್‌!

ರಾಜಣ್ಣ ಮತ್ತು ನಾನು ಹಳೆಯ ಸ್ನೇಹಿತರು. ಅವರನ್ನು ನಾನೇ ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷರನ್ನಾಗಿ ಮಾಡಿದ್ದೆ ಎಂದು ಡಿ.ಕೆ. ಶಿವಕುಮಾರ್‌ ನೀಡಿದ್ದ ಹೇಳಿಕೆಗೆ ಕೆ.ಎನ್‌ . ರಾಜಣ್ಣ (KN Rajanna )ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಳಿಕ ಅವರು ಮಂಗಳವಾರ ರಾತ್ರಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ನಾನು ಅಪೆಕ್ಸ್ ಅಧ್ಯಕ್ಷ ಆಗಿದ್ದು ಗೊತ್ತಿರುವ ವಿಚಾರ. ಡಿಸಿಎಂ ಡಿಕೆಶಿ ಆವತ್ತು ಸಹಕಾರ ಸಚಿವರಾಗಿದ್ದರು . ಸಹಾಯ ಮಾಡಿದ್ದಾರೆ, ಮರೆಯೋಕೆ ಹೋಗಲ್ಲ. ಯಾರದ್ದೇ ಸಹಾಯವಾಗಲಿ ನೆನೆಯುವ ಗುಣ … Read more

ರಾಯಚೂರು ಲೋಕಾ ದಾಳಿ, ಎಇಇ ವಿಜಯಲಕ್ಷ್ಮಿ ಮನೆಯಲ್ಲಿ ಸಿಕ್ತು ಲೆಕ್ಕವಿಲ್ಲದಷ್ಟು ಆಸ್ತಿ, ಚಿನ್ನ! ಬೆಳಗ್ಗಿನಿಂದ ಇನ್ನೂ ಮುಗಿಯದ ಶೋಧ!

ಭಾನುವಾರ ಬೆಳಗ್ಗೆ ಆರಂಭವಾದ ಲೋಕಾಯುಕ್ತ ದಾಳಿ ಪ್ರಕರಣ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (ಆರ್‌ಡಿಪಿಆರ್)ಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ಎಇಇ) ಡಿ. ವಿಜಯಲಕ್ಷ್ಮಿ ಅವರ ಮನೆ, ಕಚೇರಿ ಹಾಗೂ ಸಂಬಂಧಿಕರ ನಿವಾಸಗಳ ಮೇಲೆ ವ್ಯಾಪಕ ಶೋಧ ಕಾರ್ಯ ನಡೆಯುತ್ತಿದೆ. ಹುಡುಕಿದಷ್ಟು ಒಂದೊಂದೇ ವಿಚಾರಗಳು ಬಯಲಾಗುತ್ತಿದೆ. ಗಂಟೆಗಳು ದಿನಗಳು ಉರುಳುತ್ತಿದ್ದರೂ ಶೋಧ ಕಾರ್ಯ ಮಾತ್ರ ಮುಕ್ತಾಯದ ಹಂತ ಕಾಣುತ್ತಿಲ್ಲ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಲೋಕಾಯುಕ್ತ ಎಸ್‌ಪಿ ಸತೀಶ್ ಚಿಟಗುಪ್ತಿ ಅವರ … Read more

‘ರಾಹುಲ್ ಗಾಂಧಿ ಪ್ರಧಾನಿ ಮಾಡೋದೇ ಪ್ರಿಯಾಂಕಾ ಆಸೆ’ : ‘ಅವ್ರ ಆಸೆಯೇ ನಮ್ ಆಸೆ’ ಎಂದ ಕನಕಪುರ ಬಂಡೆ

ರಾಜ್ಯ ಕಾಂಗ್ರೆಸ್ಸಿನ ಕುರ್ಚಿ ಕದನ ತಾರಕಕ್ಕೇರಿದೆ. ಸಿಎಂ ಪಟ್ಟ ಕೇಳಲು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಹೋಗಿದ್ದಾರೆ. ಇದ್ರ ಮಧ್ಯೆ ಹೈಕಮಾಂಡ್ ಬಗ್ಗೆ ಮನಬಿಚ್ಚಿ ಮಾತಾಡಿದ್ದಾರೆ. ‘ರಾಹುಲ್ ಗಾಂಧಿ ಪ್ರಧಾನಿ ಮಾಡೋದೇ ಪ್ರಿಯಾಂಕಾ ಗಾಂಧಿ ಆಸೆ.. ಅವ್ರ ಆಸೆಯೇ ನಮ್ ಆಸೆ. ಪ್ರಿಯಾಂಕಾ ಗಾಂಧಿಯವರ ಏಕೈಕ ಧ್ಯೇಯ ರಾಹುಲ್ ಗಾಂಧಿಯವರನ್ನು ದೇಶದ ಪ್ರಧಾನಿಯಾಗಿ ಮಾಡುವುದು’ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ‘ಪ್ರಿಯಾಂಕಾ ಗಾಂಧಿ ಪ್ರಧಾನಿ ಆದರೆ, ಬಾಂಗ್ಲಾದೇಶದ ವಿರುದ್ಧ ಸಮರ … Read more

ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಸಿಮೆಂಟ್ ಲಾರಿ.! ಡಿಕ್ಕಿಯ ರಭಸಕ್ಕೆ ಹಳ್ಳಕ್ಕೆ ಉರುಳಿ ಬಿದ್ದ ಲಾರಿ

ಮಂಡ್ಯ ಜಿಲ್ಲೆಯ ಕೆ.ಎಂ.ದೊಡ್ಡಿ ಬಳಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಸಿಮೆಂಟ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಲಾರಿ ಹಳ್ಳಕ್ಕೆ ಉರುಳಿದ್ದು, ಬಸ್‌ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ಚಾಲಕನ ಸಮಯಪ್ರಜ್ಞೆಯಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿ ಸಮೀಪದ ಹನುಮಂತನಗರದ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಸಿಮೆಂಟ್ ಲಾರಿ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಲ್ಲಿ ಪ್ರಯಾಣಿಕರು ಪ್ರಾಣಾಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ಸಿಮೆಂಟ್ ಹೊತ್ತೊಯ್ಯುತ್ತಿದ್ದ ಲಾರಿಯು ನಿಯಂತ್ರಣ ತಪ್ಪಿ ರಸ್ತೆ … Read more

ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾದ ಯುವಕನಿಂದ ಯುವತಿಯ ಮೇಲೆ ಹಲ್ಲೆ; ಆರೋಪಿ ಅರೆಸ್ಟ್

ಇನ್ಸ್ಟಾಗ್ರಾಮ್ ಸಿಕ್ಕ ಯುವಕನೊಬ್ಬ ಪ್ರೀತಿ ವಿಚಾರವಾಗಿ ನಡು ರಸ್ತೆಯಲ್ಲೇ ಯುವತಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ (Bengaluru)ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಿ.ಜಿ ಬಳಿ ಕಾರಿನಲ್ಲಿ ಬಂದ ಯುವಕ, ಯುವತಿಗೆ ಹಲವು ಬಾರಿ ಥಳಿಸಿದ್ದು, ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ. ಪ್ರೀತ್ಸೆ ಪ್ರೀತ್ಸೆ ಎಂದು ಹಿಂದೆ ಬಿದ್ದಿದ್ದ ಯುವಕ ಆರೋಪಿಯನ್ನು ನವೀನ್ ಕುಮಾರ್ ಎಂದು ಗುರುತಿಸಲಾಗಿದ್ದು, ಸಂತ್ರಸ್ತ ಯುವತಿಯೊಂದಿಗೆ 2024ರಲ್ಲಿ ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿತ್ತು ಎನ್ನಲಾಗಿದೆ. … Read more

ಸುಖಾಂತ್ಯವಾಗಬೇಕಿದ್ದ ಯಾತ್ರೆ ದುರಂತ ಅಂತ್ಯ : ರಸ್ತೆ ಅಪಘಾತಕ್ಕೆ ಒಂದೇ ಕುಟುಂಬದ ಮೂವರು ಬಲಿ!

ತಮಿಳುನಾಡಿನ ಪ್ರಸಿದ್ಧ ದೇವಸ್ಥಾನವೊಂದಕ್ಕೆ ತೆರಳಿ ಭಕ್ತಿಯಿಂದ ದರ್ಶನ ಪಡೆದು ಸಂಭ್ರಮದಿಂದ ಮನೆಗೆ ಮರಳುತ್ತಿದ್ದ ಕುಟುಂಬವೊಂದಕ್ಕೆ ವಿಧಿ ಕ್ರೂರವಾಗಿ ಎರಗಿದೆ. ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ದೇವಿನಗರ ಕ್ಯಾಂಪ್ ಬಳಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿಟ್ಟೂರು ಗ್ರಾಮದ ಪ್ರಸಾದ್ ರಾವ್ ಹಾಗೂ ಇಬ್ಬರು ಮಹಿಳೆಯರು ಅಪಘಾತದ ತೀವ್ರತೆಗೆ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಬಳ್ಳಾರಿ-ಸಿರುಗುಪ್ಪ ರಾಜ್ಯ ಹೆದ್ದಾರಿಯಲ್ಲಿ ಮುಂಜಾನೆ ಸುಮಾರು 5 ಗಂಟೆಯ ವೇಳೆಗೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ … Read more

ರೈತರಿಗೆ ಭರ್ಜರಿ ಗುಡ್‌ ನ್ಯೂಸ್ :‌ ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಸಲು 4 ಲಕ್ಷ ರೂ. ಸಬ್ಸಿಡಿ

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು 2025-26ನೇ ಸಾಲಿಗೆ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಡಿ. ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಾತಂತ್ರ್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆ … Read more

ಅನ್ನ ತಿಂದರೆ ತೂಕ ಹೆಚ್ಚುತ್ತಾ.? ಬಿಯರ್‌ನಿಂದ ಹೊಟ್ಟೆ ಉಬ್ಬುತ್ತಾ.? ಸತ್ಯವೇನು ಗೊತ್ತಾ.?

ನೀವು ನಿತ್ಯ ಸವಿಯು ಆಹಾರಗಳು ಒಂದಲ್ಲಾ ಒಂದು ಸಮಸ್ಯೆಗಳಿಗೂ ಕಾರಣವಾಗುತ್ತೆ ಅನ್ನೋದು ಹಲವು ವರ್ಷದಿಂದ ನಾವು ಕೇಳುತ್ತಾ ಬಂದಿರುವ ವಿಚಾರಗಳು. ಆಹಾರ ಹೇಗೆ ನಮ್ಮ ದೇಹಕ್ಕೆ ಶಕ್ತಿ ನೀಡುವುದು ಹಾಗೆ ನಮಗೆ ಕೆಲಸ ಮಾಡಲು ಸಹಕಾರಿಯಾಗುವಂತಹ ಅಂಶಗಳನ್ನು ದೇಹಕ್ಕೆ ನೀಡುವುದು ನೋಡುತ್ತೇವೆ. ಅದರ ಜೊತೆಗೆ ಹಲವು ಆಹಾರಗಳ ಕುರಿತಾದ ಅಡ್ಡಪರಿಣಾಮಗಳು ಸಹ ನಮ್ಮನ್ನು ಆಲೋಚನೆಗೆ ತಳ್ಳುತ್ತವೆ. ಅದ್ರಲ್ಲೂ ಕೆಲವೊಂದು ಆಹಾರವನ್ನು ನಾವು ನಿತ್ಯವೂ ಸವಿಯುತ್ತೇವೆ. ಆದ್ರೆ ಅವು ನಮ್ಮ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮಕ್ಕೆ ಕಾರಣವಾಗುತ್ತದೆ ಎಂಬುದು … Read more

Dina Bhavishya : ಡಿಸೆಂಬರ್‌ 24 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ ರಾಶಿ :- ನೀವು ಅನಾರೋಗ್ಯದಿಂದ ಬಳಲುತ್ತಿದ್ದರೆ, ನಿಮ್ಮ ಚೇತರಿಕೆ ಶೀಘ್ರದಲ್ಲೇ ಆಗಬಹುದು. ಹೊಸ ಆರ್ಥಿಕ ಅವಕಾಶಗಳು ತೆರೆಯುವ ಸಾಧ್ಯತೆಗಳಿವೆ. ಮನೆಯಲ್ಲಿ ಶಾಂತಿ ಮತ್ತು ಸಂತೋಷವನ್ನು ಕಾಪಾಡಿಕೊಳ್ಳಲು ನೀವು ಶ್ರಮಿಸುವಿರಿ. ನಿಮ್ಮ ಪ್ರಯಾಣಗಳು ಸರಾಗವಾಗಿ ಸಾಗುವುದರಿಂದ ಪ್ರವಾಸವು ಆಹ್ಲಾದಕರವಾಗಿರುತ್ತದೆ. ಹೊರಾಂಗಣ ಕಾರ್ಯಕ್ರಮವು ವಿನೋದ ಮತ್ತು ನಗುವನ್ನು ತರಬಹುದು. ಪ್ರಭಾವಿ ವ್ಯಕ್ತಿಗಳೊಂದಿಗೆ ಬಲವಾದ ಸಂಪರ್ಕಗಳನ್ನು ಬೆಳೆಸಲು ನೀವು ಪ್ರಾರಂಭಿಸಬಹುದು. ವೃಷಭ ರಾಶಿ :- ನಿಮ್ಮ ಫಿಟ್‌ನೆಸ್ ಪ್ರಯತ್ನಗಳು ಅದ್ಭುತ ಫಲಿತಾಂಶಗಳನ್ನು ತೋರಿಸಲು ಪ್ರಾರಂಭಿಸುತ್ತವೆ. ಲಾಭದಾಯಕ ಒಪ್ಪಂದ ಅಥವಾ ಬೇರೆ … Read more