ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧದ ಕೇಸ್ ರದ್ದು
ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧದ ಎರಡು ಪ್ರಕರಣಗಳನ್ನು ರದ್ದುಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠ ಶುಕ್ರವಾರ ಆದೇಶ ಹೊರಡಿಸಿದೆ. ಬಸವರಾಜ ಬೊಮ್ಮಾಯಿ ಹೇಳಿದ್ದ ಹೇಳಿಕೆಯಲ್ಲಿ ಪ್ರಚೋದನಕಾರಿ ಅಂಶಗಳಿಲ್ಲವೆಂದು ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದ ಮಂಡಿಸಿದ್ದರು. ಇದೀಗ ಪ್ರಕರಣ ರದ್ದುಪಡಿಸಿ ನ್ಯಾ.ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಪೀಠ ಆದೇಶಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿ ಜಿಲ್ಲೆಯ ಸವಣೂರು ಹಾಗೂ ಶಿಗ್ಗಾಂವಿ ಪೊಲೀಸ್ ಠಾಣೆಗಳಲ್ಲಿ 2024ರಲ್ಲಿ ಪ್ರಕರಣಗಳು ದಾಖಲಾಗಿದ್ದವು. ಬಳಿಕ ಕೇಸ್ ರದ್ದು … Read more