RCB ಗೆದ್ದ ನಂತ್ರ ಮೆರವಣಿಗೆಗೆ ಅವಕಾಶ ನೀಡುವಂತೆ ಬಿಜೆಪಿ, ಜೆಡಿಎಸ್ ಕೇಳಿತ್ತು, ಈಗ ಯೂಟರ್ನ್ : ಡಿಕೆಶಿ ಕಿಡಿ

ಆರ್ಸಿಬಿ ಗೆದ್ದ ನಂತರ ಬಿಜೆಪಿ ಹಾಗೂ ದಳದ ನಾಯಕರು ತಂಡದ ಮೆರವಣಿಗೆಗೆ ಅವಕಾಶ ನೀಡಬೇಕು ಎಂದು ಎಕ್ಸ್ (ಟ್ವಿಟ್) ಮಾಡಿದ್ದರು. ಆದರೆ ಇಂದು ವರಸೆ ಬದಲಾಯಿಸಿದ್ದಾರೆ. ಬಿಜೆಪಿ ಯೂ ಟರ್ನ್ ಮಾಡುವುದು ಹೊಸದೇನಲ್ಲ” ಎಂದು ನಿಕಟಪೂರ್ವ ಸಂಸದ ಡಿ.ಕೆ.ಸುರೇಶ್ ಅವರು ಹೇಳಿದರು. ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಸೋಮವಾರ ಉತ್ತರಿಸಿದರು. ಬಿಜೆಪಿಯವರು ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯಮಂತ್ರಿಗಳ ರಾಜಿನಾಮೆಗೆ ಒತ್ತಾಯ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಎರಡೂ ಪಕ್ಷಗಳು ಮೆರವಣಿಗೆಗೆ ಒತ್ತಾಯ ಮಾಡಿದ್ದರು. ಕ್ರೀಡಾ ಅಭಿಮಾನಿಗಳಿಗೆ ಅವಮಾನ … Read more

ಕಾಲ್ತುಳಿತ ಪ್ರಕರಣದಲ್ಲಿ ನಮ್ಮ ಸರಕಾರದ್ದೇನೂ ತಪ್ಪಿಲ್ಲ, ಮುಜುಗರ ಯಾಕೆ.? ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಧಾನಸೌಧದ ಬಳಿ ಆರ್‌ಸಿಬಿ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಆಯೋಜಿಸಿದ್ದು ಕೆಎಸ್‌ಸಿಎ (ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಶನ್)ಯವರು. ಕೆಎಸ್‌ಸಿಎ ಕಾರ್ಯದರ್ಶಿ ಮತ್ತು ಖಜಾಂಚಿ ಅವರು ವಿಧಾನಸೌಧದ ಬಳಿ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಿದರು. ನಾನು ಕಾರ್ಯಕ್ರಮಕ್ಕೆ ಹೋದೆ ಅಷ್ಟೇ. ಇಷ್ಟು ಬಿಟ್ಟರೆ ಬೇರೇನೂ ನನಗೆ ಗೊತ್ತಿಲ್ಲ. ಇದರಲ್ಲಿ ಸರಕಾರದ ತಪ್ಪಿಲ್ಲ. ಸ್ಟೇಡಿಯಂ ಕಾರ್ಯಕ್ರಮಕ್ಕೆ ನನ್ನನ್ನು ಯಾರೂ ಕರೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ , ಕಾಲ್ತುಳಿತ ಪ್ರಕರಣದಲ್ಲಿ ಸರಕಾರ ತಪ್ಪೇ ಮಾಡದ ಮೇಲೆ ಮುಜುಗರ … Read more

Pan Card Rules : ಪ್ಯಾನ್ ಕಾರ್ಡ್’ ಹೊಂದಿರುವವರೇ ಗಮನಿಸಿ : ಈ ತಪ್ಪು ಮಾಡಿದ್ರೆ 10 ಸಾವಿರ ರೂ. ದಂಡ ಫಿಕ್ಸ್.!

Pan Card Rules : ಭಾರತದಲ್ಲಿ ಹಲವು ನಿಯಮಗಳು ಕಾಲಕಾಲಕ್ಕೆ ಬದಲಾಗುತ್ತವೆ. ಈ ಕ್ರಮದಲ್ಲಿ, ಪ್ಯಾನ್ (ಶಾಶ್ವತ ಖಾತೆ ಸಂಖ್ಯೆ) ಕಾರ್ಡ್ ಬಗ್ಗೆ ಒಂದು ಪ್ರಮುಖ ನವೀಕರಣವಿದೆ. ಪ್ಯಾನ್‌ ಆಧಾ‌ರ್ ಅನ್ನು ಲಿಂಕ್ ಮಾಡಲು ಪ್ರಸ್ತುತ ಡಿಸೆಂಬ‌ರ್ 31, 2025 ರವರೆಗೆ ಗಡುವು ಇದೆ. ಈ ಸಮಯದೊಳಗೆ ನೀವು ಪ್ಯಾನ್ ಮತ್ತು ಆಧಾ‌ರ್ ಅನ್ನು ಲಿಂಕ್ ಮಾಡದಿದ್ದರೆ, ನಿಮ್ಮ ಪ್ಯಾನ್ ಕಾರ್ಡ್ ಅನ್ನು ನಿಷ್ಕ್ರಿಯಗೊಳಿಸಲಾಗುತ್ತದೆ. ಆದಾಗ್ಯೂ, ನಿಮ್ಮ ಪ್ಯಾನ್ ಕಾರ್ಡ್ ನಿಷ್ಕ್ರಿಯವಾಗಿದ್ದರೂ ಸಹ ನೀವು ಅದನ್ನು ಬಳಸುವುದನ್ನು … Read more

ಭಾನುವಾರವೇ ಅತೀ ಕಡಿಮೆ ಗಳಿಕೆ ಮಾಡಿದ ‘ಥಗ್ ಲೈಫ್’ ; ಕನ್ನಡಿಗರ ತಂಟೆಗೆ ಬಂದವರಿಗೆ ತಕ್ಕ ಪಾಠ

ಹಿರಿಯ ತಮಿಳು ನಟ ಕಮಲ್ ಹಾಸನ್ ಅವರು ಸುಖಾಸುಮ್ಮನೆ ಕನ್ನಡಿಗರ ಕೆಣಕಿದ್ದರು. ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ಹೇಳಿದ್ದು ಮಾತ್ರವಲ್ಲದೆ, ಅದಕ್ಕೆ ಕ್ಷಮೆ ಕೇಳಲು ನಿರಾಕರಿಸಿದ್ದರು. ಇದರ ಪರಿಣಾಮ ಅವರ ನಟನೆಯ ‘ಥಗ್ ಲೈಫ್’ ಸಿನಿಮಾ ಮೇಲೆ ಉಂಟಾಯಿತು. ಕರ್ನಾಟಕದಲ್ಲಿ ಸಿನಿಮಾ ರಿಲೀಸ್ಗೆ ಅವಕಾಶ ನೀಡಿಲ್ಲ. ಈ ಕಾರಣದಿಂದಲೇ ಕಲೆಕ್ಷನ್ ವಿಚಾರದಲ್ಲಿ ಸಿನಿಮಾ ದೊಡ್ಡ ಮಟ್ಟದಲ್ಲಿ ಮುಗ್ಗರಿಸಿದೆ. ಸಿನಿಮಾ ರಿಲೀಸ್ ಆಗಿ ನಾಲ್ಕು ದಿನ ಕಳೆದಿದ್ದು, ಇನ್ನೂ 40 ಕೋಟಿ ರೂಪಾಯಿ ಕ್ಲಬ್ ಸೇರಲು ಒದ್ದಾಡುತ್ತಿದೆ. ಈ … Read more

ನಮಗೆ ಪರಿಹಾರ ಬೇಡ, ಮಗಳನ್ನು ತಂದುಕೊಡಿ : ಚೆಕ್ ಕೊಡಲು ಬಂದ ಡಿಸಿ ಮುಂದೆ ಸಹನಾ ಪೋಷಕರ ಕಣ್ಣೀರು

ನಮಗೆ ಚೆಕ್ ಬೇಡ, ಪರಿಹಾರವೂ ಬೇಡ ನಮಗೆ ನಮ್ಮ ಮಗಳು ಬೇಕು ಅವಳನ್ನು ತಂದು ಕೊಡಿ. ನಾವೇ ನಿಮಗೆ ಬೇಕಾದರೆ ಮನೆ, ಜಮೀನು, ಆಸ್ತಿ ಪಾಸ್ತಿ ಎಲ್ಲವನ್ನೂ ಮಾರಿ ನಿಮಗೆ ಹತ್ತರಷ್ಟು ಹಣ ಕೊಡ್ತೀವಿ ಎಂದು ಜಿಲ್ಲಾಡಳಿತದ ಎದುರು ಕಾಲ್ತುಳಿತ ದುರಂತದಲ್ಲಿ ಮೃತಪಟ್ಟ ಸಹನಾ ತಂದೆ ಸುರೇಶ್ ಕಣ್ಣೀರಿಟ್ಟರು. ನಮಗೆ ಪರಿಹಾರ ಬೇಡ, ನಮಗೆ ನನ್ನ ಮಗಳು ಬೇಕು ಎಂದು ಸಹನಾ ತಂದೆ ಗೋಳಾಡಿದರು. ಆಗ ನೆರೆಹೊರೆಯವರು ಸಮಾಧಾನಪಡಿಸಿದರು. ನಂತರ ಕೋಲಾರ ಜಿಲ್ಲಾಧಿಕಾರಿ, ಮೃತರ ಕುಟುಂಬಸ್ಥರಿಗೆ ಪರಿಹಾರದ … Read more

ಸೂಟ್‌ಕೇಸ್‌ನಲ್ಲಿ ಬಾಲಕಿ ಶವ ಕೇಸ್ : ಲೈಂಗಿಕ ಕ್ರಿಯೆಗೆ ಸಹಕರಿಸಿಲ್ಲವೆಂದು ಹತ್ಯೆ, ಆರೋಪಿಗಳ ಬಂಧನ

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹಳೇ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿದ್ದ ಅಪರಿಚಿತ ಬಾಲಕಿಯ ಶವ ಪ್ರಕರಣವನ್ನು ಸೂರ್ಯನಗರ ಠಾಣಾ ಪೊಲೀಸರು ಭೇದಿಸಿದ್ದಾರೆ. ಆರೋಪಿಗಳು ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಬಳಿಕ ಕೊಲೆ ಮಾಡಿ ಶವವನ್ನು ಸೂಟಕೇಸ್‌ನಲ್ಲಿ ಹಾಕಿ ರೈಲ್ವೆ ಹಳಿ ಪಕ್ಕದಲ್ಲಿ ಎಸದು ಹೋಗಿದ್ದಾರೆ ಎಂಬುವುದನ್ನು ಪೊಲೀಸ್‌ ತನಿಖೆಯಲ್ಲಿ ಬಹಿರಂಗವಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಬಿಹಾರ ಮೂಲದ ಅಶಿಕ್ ಕುಮಾರ್ (22) ಮುಖೇಶ್ ರಾಜಬನ್ಶಿ (35), ಇಂದುದೇವಿ (32) ರಾಜರಾಮ್ ಕುಮಾರ್ (18) … Read more

ಸುಹಾಸ್ ಶೆಟ್ಟಿ ಬರ್ಬರ ಹತ್ಯೆ ಕೇಸ್, NIA ತನಿಖೆಗೆ ಕೇಂದ್ರ ಸರ್ಕಾರ ಆದೇಶ

ಹಿಂದೂ ಕಾರ್ಯಕರ್ತ ಹಾಗೂ ರೌಡಿ ಶೀಟರ್‌ ಸುಹಾಸ್‌ ಶೆಟ್ಟಿ (32) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಬೆಳವಣಿಗೆ ನಡೆದಿದೆ. ಮಂಗಳೂರಿನಲ್ಲಿ ನಡೆದಿದ್ದ ಸುಹಾಸ್ ಶೆಟ್ಟಿ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದು ಮಾತ್ರವಲ್ಲ ರಾಜಕೀಯ ಸಂಘರ್ಷಕ್ಕೂ ಕಾರಣವಾಗಿತ್ತು. ಮೇ.11ರಂದು ಬಜ್ಪೆಯಲ್ಲಿ ಈ ಕೊಲೆ ನಡೆದಿತ್ತು. ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದಂತೆ ಎನ್ಐಎ ತನಿಖೆಗೆ ವಹಿಸಿ ಆದೇಶ ಹೊರಡಿಸಲಾಗಿದೆ. ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು ಎಂದು ಬಿಜೆಪಿ ಕಾರ್ಯಕರ್ತರು, ನಾಯಕರು ರಾಜ್ಯಾದ್ಯಂತ ಪಟ್ಟು ಹಿಡಿದು ಪ್ರತಿಭಟನೆ ಮಾಡಿದ್ದರು. ಪ್ರಕರಣದ … Read more

ಪ್ರಿಯಕರನ ಜೊತೆ ಏಕಾಂತದಲ್ಲಿದ್ದಾಗ ಸಿಕ್ಕಿಬಿದ್ದ ಪತ್ನಿಯ ತಲೆಕಡಿದು ರುಂಡ ಸಮೇತ ಠಾಣೆಗೆ ಬಂದ ಪತಿ

ಪತ್ನಿಯ ತಲೆ ಕತ್ತರಿಸಿ ರುಂಡ ಸಮೇತ ಪತಿ ಸೂರ್ಯನಗರ ಪೊಲೀಸ್‌ ಠಾಣೆಗೆ ಬಂದಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹೀಲಲಿಗೆ ಗ್ರಾಮದಲ್ಲಿ ನಡೆದಿದೆ. ಹೆನ್ನಾಗರ ನಿವಾಸಿಯಾಗಿರುವ ಶಂಕರ್ (28) ಕೊಲೆ ಮಾಡಿರುವ ಆರೋಪಿ. ಹೆಬ್ಬಗೋಡಿ ನಿವಾಸಿ ಮಾನಸ (26) ಮೃತ ದುರ್ದೈವಿ. ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಮಾನಸ ಮತ್ತು ಆರೋಪಿ ಶಂಕರ್ ಪ್ರೀತಿಸಿ ಮದುವೆ ಆಗಿದ್ದರು. ದಂಪತಿ ಒಂದು ತಿಂಗಳ ಹಿಂದೆ ಹೀಲಲಿಗೆ ಗ್ರಾಮದ ಬಾಡಿಗೆ ಮನೆಗೆ ಶಿಫ್ಟ್ ಆಗಿದ್ದರು. … Read more

ದೈವ ನುಡಿದಂತೆ 3 ದಿನದಲ್ಲಿ ಸಿಕ್ಕಿಬಿದ್ದ ಕಳ್ಳ – ಕರಾವಳಿಯಲ್ಲಿ ಮತ್ತೊಮ್ಮೆ ಕೊರಗಜ್ಜನ ಪವಾಡ..

ಕೊರಗಜ್ಜನ ಪವಾಡ ಮತ್ತೊಮ್ಮೆ ಕರಾವಳಿಯಲ್ಲಿ ನಡೆದಿದೆ. ಎರಡನೇ ಬಾರಿ ಹುಂಡಿ ಕದಿಯುವಾಗ ಕಳ್ಳ ಸಿಕ್ಕಿಬಿದ್ದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಹೆಬ್ರಿ ತಾಲೂಕು ಮುದ್ರಾಡಿಯ ಆದಿಶಕ್ತಿ ದೇಗುಲದ ಕಲ್ಲುರ್ಟಿ, ಕೊರಗಜ್ಜ ಸನ್ನಿದಾನದಲ್ಲಿ ಮೇ 25 ರಂದು ಕಳ್ಳತನ ನಡೆದಿತ್ತು. ಬೇಸರದಿಂದ ಧರ್ಮದರ್ಶಿ ಸುಕುಮಾರ್ ಮೋಹನ್ ದೈವದ ಮೊರೆ ಹೋಗಿದ್ದರು. ಹುಂಡಿ ಕಳ್ಳತನ ಮಾಡುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವೇಳೆ ಕಳ್ಳ ಮತ್ತೆ ಬಂದು ಸಿಕ್ಕಿ ಬೀಳುತ್ತಾನೆ. ಹತ್ತು ದಿನಗಳಲ್ಲಿ ಕಳ್ಳನನನ್ನು ಪತ್ತೆ ಮಾಡಿಕೊಡುವುದಾಗಿ ದೈವ ಅಭಯ … Read more

ಮಂಟಪದಲ್ಲೇ ಗಂಡನಿಗೆ ಚಪ್ಪಲಿ ಪೂಜೆ : ಸೈಲೆಂಟಾಗಿ 2ನೇ ಮದುವೆ ಆಗ್ತಿದ್ದವ ಹೆಂಡ್ತಿ ಕೈಗೆ ಸಿಕ್ಕಿಬಿದ್ದ!

ಚಿತ್ರದುರ್ಗದಲ್ಲಿ ವರದಕ್ಷಿಣೆಗಾಗಿ 2ನೇ ಮದುವೆಯಾಗಲು ಹೋದ ಗಂಡನಿಗೆ ಪತ್ನಿ ಚಪ್ಪಲಿ ಏಟು ಕೊಟ್ಟ ಘಟನೆ ನಡೆದಿದೆ. ತನುಜಾ ಎಂಬ ಮಹಿಳೆ ತನ್ನ ಗಂಡ ಕಾರ್ತಿಕ್ 2ನೇ ಮದುವೆಗೆ ಮುಂದಾಗುತ್ತಿರುವುದನ್ನು ತಿಳಿದು ಮಂಟಪಕ್ಕೆ ನುಗ್ಗಿ ಚಪ್ಪಲಿಯಿಂದ ಹೊಡೆದಿದ್ದಾರೆ. ಚಿತ್ರದುರ್ಗದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಒಂದು ವಿಚಿತ್ರ ಘಟನೆ ಶನಿವಾರ ನಡೆದಿದೆ. ತಮ್ಮ ಗಂಡ ಕಾರ್ತಿಕ್ ಅವರು ವರದಕ್ಷಿಣೆಯ ದುರಾಸೆಯಿಂದ ಬೇರೆ ಯುವತಿಯೊಂದಿಗೆ 2ನೇ ಮದುವೆಗೆ ಮುಂದಾಗುತ್ತಿರುವ ಮಾಹಿತಿ ತಿಳಿದ ತನುಜಾ ಎಂಬ ಮಹಿಳೆ ನೇರವಾಗಿ ಮಂಟಪಕ್ಕೆ ಬಂದು ಗಂಡನಿಗೆ … Read more