40 ವರ್ಷದ ಬಳಿಕ ಮೊತ್ತೊಬ್ಬ ವೈಭವ್ ಸೂರ್ಯವಂಶಿ ಬರ್ತಾನೆ: ರಾಹುಲ್ ದ್ರಾವಿಡ್ ಹಿಂಗ್ ಹೇಳಿದ್ಯಾಕೆ.?

ಐಪಿಎಲ್‌ 2026ರಲ್ಲಿ ಆಕ್ರಮಣಕಾರಿ ಬ್ಯಾಟಿಂಗ್ ಮೂಲಕ ದಿಗ್ಗಜರ ಗಮನ ಸೆಳೆದ ವೈಭವ್ ಸೂರ್ಯವಂಶಿ ಅವರು ಇತ್ತೀಚೆಗಷ್ಟೇ ರಾಷ್ಟ್ರೀಯ ತಂಡಕ್ಕೆ ಆಯ್ಕೆ ಆಗಿದ್ದರು. ಇದರ ಬೆನ್ನಲ್ಲೇ ಈ ಬಾಲಕನನ್ನ ಕ್ರಿಕೆಟ್‌ ದೇವರು ಅಂತಲೇ ಹೆಸರಾಗಿರುವ ಸಚಿನ್ ತೆಂಡೂಲ್ಕರ್ ಅವರಿಗೆ ಹೋಲಿಕೆ ಮಾಡಲಾಗಿತ್ತು. ಇದೀಗ ಈ ಕುರಿತು ಪ್ರತಿಕ್ರಿಯಿಸಿದ ಟೀಂ ಇಂಡಿಯಾ ಮಾಜಿ ಕೋಚ್ ರಾಹುಲ್ ದ್ರಾವಿಡ್ ಅವರು ಅಚ್ಚರಿ ಹೇಳಿಕೆ ನಿಡಿ ಗಮನ ಸೆಳೆದಿದ್ದಾರೆ. ಟೀಮ್ ಇಂಡಿಯಾದ ಮಾಜಿ ಕೋಚ್ ಕನ್ನಡಿಗ ರಾಹುಲ್ ದ್ರಾವಿಡ್ ಅವರು 15 ವರ್ಷದ … Read more

RSS ಮುಖ್ಯಸ್ಥ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ರೈಲಿಗೆ ಕಲ್ಲು ತೂರಾಟ: ಇಬ್ಬರು ಆರೋಪಿಗಳು ಅರೆಸ್ಟ್

ಉತ್ತರ ಪ್ರದೇಶದ ಫಿರೋಜಾಬಾದ್ ಸಮೀಪ ಶತಾಬ್ದಿ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣದಲ್ಲಿ, ಪೊಲೀಸರು ಮೂವರು ಆರೋಪಿಗಳ ಪೈಕಿ ಇಬ್ಬರನ್ನು ಬಂಧಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಸಹಾಯದಿಂದ ಆರೋಪಿಗಳನ್ನು ಪತ್ತೆಹಚ್ಚಲಾಗಿದ್ದು, ಪರಾರಿಯಾಗಿರುವ ಮೂರನೇ ಆರೋಪಿಯನ್ನು ಬಂಧಿಸಲು ಶೋಧ ಕಾರ್ಯ ಮುಂದುವರಿದಿದೆ. ಗುರುವಾರ ಸಂಜೆ ಕಾನ್ಪುರದಿಂದ ನವದೆಹಲಿಗೆ ತೆರಳುತ್ತಿದ್ದ ಸ್ವರ್ಣ ಶತಾಬ್ದಿ ಎಕ್ಸ್‌ಪ್ರೆಸ್ ರೈಲಿನ ಎಸಿ ಫಸ್ಟ್ ಕ್ಲಾಸ್ ಬೋಗಿಯ ಕಿಟಕಿಯ ಗಾಜು ಕಲ್ಲು ತೂರಾಟದಿಂದ ಪುಡಿಯಾಯಿತು. ಆ ವೇಳೆ ರೈಲಿನಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ … Read more

ಬಿಡದಿ ರೈತರು ಅಸಲಿ ರೈತರೋ ಅಲ್ಲವೋ? ನೊಂದ ಹಳ್ಳಿಗಳಿಗೆ ಬನ್ನಿ, ನಾನು ಬರುತ್ತೇನೆ : ಸಿಎಂ ಡಿ.ಕೆ.ಶಿವಕುಮಾರ್ ಗೆ ಕುಮಾರಸ್ವಾಮಿ ಸವಾಲು

ಬಿಡದಿ ಭಾಗದಲ್ಲಿ ರಿಯಲ್ ಎಸ್ಟೇಟ್ ದಂಧೆ ನಡೆಸಲು ಟೌನ್ ಶಿಪ್ ನೆಪದಲ್ಲಿ ನೋಟಿಫೈ ಮಾಡಿರುವ ಭೂಮಿಯ ಮಾಲೀಕರು ಅಸಲಿ ರೈತರೋ ಅಲ್ಲವೋ ಎಂಬುದನ್ನು ತೀರ್ಮಾನಿಸಲು ಸ್ವತಃ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ನನ್ನೊಂದಿಗೆ ಆ ನೊಂದ ಹಳ್ಳಿಗಳಿಗೆ ಬರಲಿ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ. ರೈತರ ತೀವ್ರ ವಿರೋಧದ ನಡುವೆಯೂ ಬಿಡದಿ ಟೌನ್ ಶಿಪ್ ಯೋಜನೆ ಭೂ ಸ್ವಾಧೀನಕ್ಕೆ ರಾಜ್ಯ ಕಾಂಗ್ರೆಸ್ ಸರಕಾರವು ಅಂತಿಮ ಅಧಿಸೂಚನೆ ಹೊರಡಿಸಿರುವ ನಡೆಯನ್ನು … Read more

ಗಂಡನ ವಿರುದ್ಧ ಸುಳ್ಳು ವರದಕ್ಷಿಣೆ ಕೇಸ್, ದ್ವೇಷ ಮರೆತು ಮಾವನ ಪ್ರಾಣ ಉಳಿಸಿದ ಅಳಿಯ, ಕೋರ್ಟ್ ಅವರಣದಲ್ಲಿ ಒಂದಾದ ಗಂಡ-ಹೆಂಡತಿ

ನವದೆಹಲಿ: ಸಂಸಾರದ ಜಗಳ, ಕೋರ್ಟ್-ಕಚೇರಿ ಅಲೆದಾಟಗಳ ಮಧ್ಯೆ ಮಾನವೀಯತೆ ಇನ್ನು ಸತ್ತಿಲ್ಲ ಎಂಬುದನ್ನು ಸಾಬೀತುಪಡಿಸುವ ಹೃದಯಸ್ಪರ್ಶಿ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ತನ್ನ ಮತ್ತು ತನ್ನ ಕುಟುಂಬದ ವಿರುದ್ಧವೇ ಸುಳ್ಳು ವರದಕ್ಷಿಣೆ ಪ್ರಕರಣ ದಾಖಲಿಸಿದ್ದ ಪತ್ನಿಯ ಹಠಮಾರಿತನವನ್ನು ಮರೆತು, ಸಾವಿನ ದಡದಲ್ಲಿದ್ದ ಮಾವನ ಪ್ರಾಣ ಉಳಿಸುವ ಮೂಲಕ ಅಳಿಯನೊಬ್ಬ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ. ಶಿಖಾ ಸಿಂಗ್‌ ಮತ್ತು ಸೌರಭ್ ದಂಪತಿ ನಡುವೆ ಭಿನ್ನಾಭಿಪ್ರಾಯ ಮೂಡಿ ವಿವಾದ ಉಂಟಾಗಿತ್ತು. ಈ ವೇಳೆ ಪತ್ನಿ ಶಿಖಾ, ಪತಿ … Read more

ಇವೆಲ್ಲವೂ ಷಡ್ಯಂತ್ರ ನಂಬಬೇಡಿ; ಧರ್ಮಸ್ಥಳ ಪ್ರಕರಣದ ಆರೋಪಕ್ಕೆ ಪ್ರಕಾಶ್ ರಾಜ್ ರಿಯಾಕ್ಷನ್!

ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ತಿರುವು ಎದುರಾಗಿದೆ. ಪ್ರಕರಣದ ಪ್ರಮುಖ ಆರೋಪಿಯಾಗಿರುವ ಚಿನ್ನಯ್ಯ ತನ್ನ ಮೇಲೆ ಕೆಲವು ಮಂದಿ ಪ್ರಭಾವಿಗಳು ಒತ್ತಡ ಹೇರಿದ್ದು, ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ ಎಂದು ಆರೋಪಿಸಿದ್ದಾನೆ. ಅಲ್ಲದೆ, ಹೈಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ಚಿನ್ನಯ್ಯ, ನಟ ಪ್ರಕಾಶ್ ರಾಜ್ ಅವರ ಹೆಸರನ್ನೂ ಉಲ್ಲೇಖಿಸಿದ್ದಾನೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ತೀವ್ರಗೊಂಡಿದೆ. ಈ ಬೆಳವಣಿಗೆಗೆ ಪ್ರತಿಕ್ರಿಯಿಸಿರುವ ನಟ ಪ್ರಕಾಶ್ ರಾಜ್, ತಮ್ಮ ವಿರುದ್ಧ ಹರಡುತ್ತಿರುವ ಸುದ್ದಿಗಳನ್ನು ತಳ್ಳಿ ಹಾಕಿದ್ದಾರೆ. … Read more

ಸ್ಟಿಂಗ್ ಪೇಯ ಸೇವಿಸಿ ಯುವಕ ಮೃತ್ಯು ಆರೋಪ; ಬಾಟಲಿಗಳನ್ನು ಸುಟ್ಟು ಗ್ರಾಮಸ್ಥರಿಂದ ಆಕ್ರೋಶ

ಹುಣಸಗಿ: ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ಸ್ಟಿಂಗ್ ಪೇಯ ಸೇವಿಸಿದ ಬಳಿಕ ಯುವಕನೊಬ್ಬ ಮೃತಪಟ್ಟಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮದ ಬಾಲು ಹಣಮಂತ ದೇಸಾಯಿ (19) ಎಂಬ ಯುವಕ ಮೃತಪಟ್ಟಿದ್ದು, ಆತ ಸ್ಟಿಂಗ್ ಪೇಯ ಸೇವಿಸಿದ್ದರಿಂದಲೇ ಈ ದುರ್ಘಟನೆ ಸಂಭವಿಸಿದೆ ಎಂದು ಕೆಲ ಗ್ರಾಮಸ್ಥರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾಮದ ನಿವಾಸಿಗಳು ಸಭೆ ನಡೆಸಿ, ಇನ್ನು ಮುಂದೆ ಸ್ಟಿಂಗ್ ಸೇರಿದಂತೆ ಇತರೆ ಎನರ್ಜಿ ಪೇಯಗಳನ್ನು ಸೇವಿಸದಿರಲು ಹಾಗೂ ಗ್ರಾಮದಲ್ಲಿ ಮಾರಾಟ ಮಾಡದಿರಲು … Read more

ಮುಂದೆಯೂ ಡಿಕೆಶಿ ಸಿಎಂ ಆದರೆ ನನಗೆ ಗಾಬರಿ: ಲೇವಡಿ ಮಾಡಿದರಾ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ.!

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಅಧಿಕೃತ ಸರ್ಕಾರಿ ನಿವಾಸಕ್ಕಾಗಿ ಮೈಸೂರು ಮಹಾರಾಜರ ಕಾಲದ ಐತಿಹಾಸಿಕ ಕುಮಾರಕೃಪಾ ಅತಿಥಿ ಗೃಹದ ಪಾರಂಪರಿಕ ಕಟ್ಟಡವನ್ನು ಒಡೆಯುತ್ತಿರುವುದಕ್ಕೆ ಹಾಗೂ ರೈತರ ತೀವ್ರ ವಿರೋಧದ ನಡುವೆಯೂ ಬಿಡದಿ ಟೌನ್‌ಶಿಪ್ ಯೋಜನೆಗೆ ಅಂತಿಮ ಅಧಿಸೂಚನೆ ಹೊರಡಿಸಿರುವುದಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ(HD Kumaraswamy) ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ದಬ್ಬಾಳಿಕೆ ಮತ್ತು ರೈತ ವಿರೋಧಿ ಧೋರಣೆಯನ್ನು ಖಂಡಿಸಿದರು. ಪಾರಂಪರಿಕ ಕಟ್ಟಡ ಒಡೆಯಲು ಇವರೇನು ಮಹಾರಾಜರಾ? ಕುಮಾರಕೃಪಾ ಅತಿಥಿ ಗೃಹದ … Read more

ಕೊಲ್ಲೂರು ದೇಗುಲದಲ್ಲಿ ಆ ಸಂಕಲ್ಪ ಮಾಡಿ, ಅರ್ಚಕರ ಮುಂದೆ ಅದೊಂದು ಮನವಿ ಮಾಡಿಕೊಂಡ ಸಿಎಂ ವಿಜಯ್!

“ದಳಪತಿ ವಿಜಯ್ ಕೊಲ್ಲೂರು ‘ಸಂಕಲ್ಪ’: ಮೂಕಾಂಬಿಕೆಗೆ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ! ಅರ್ಚಕರಲ್ಲಿ ವಿಜಯ್ ಮಾಡಿದ ಆ ಒಂದು ಸ್ಪೆಷಲ್ ರಿಕ್ವೆಸ್ಟ್ ಏನು?” ದಕ್ಷಿಣ ಭಾರತದ ಅಪ್ರತಿಮ ನಟ, ತಮಿಳುನಾಡಿನ ಮುಖ್ಯಮಂತ್ರಿ ‘ದಳಪತಿ’ ಜೋಸೆಫ್ ವಿಜಯ್ (Thalapathy Vijay) ಅವರು ಇಂದು ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಇಡೀ ದೇವಸ್ಥಾನದ ಆವರಣದಲ್ಲಿ ಭಕ್ತರ ಸಾಗರವೇ ಹರಿದುಬಂದಿತ್ತು. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಈ ಪುಣ್ಯಕ್ಷೇತ್ರಕ್ಕೆ ಬಂದಿಳಿದ ವಿಜಯ್, … Read more

ಕೊಲ್ಲೂರು ಮೂಕಾಂಬಿಕೆಗೆ 1 ಕೆಜಿ 600 ಗ್ರಾಂ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ಸಿಎಂ ವಿಜಯ್; ಸಂಖ್ಯಾ ಶಾಸ್ತ್ರದ ಹಿಂದಿರುವ ರಹಸ್ಯವೇನು.?

ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ, ದೇವಿಯ ದರ್ಶನ ಪಡೆದ ನಂತರ, ತಮಿಳುನಾಡಿನ ಸಿಎಂ ಜೋಸೆಫ್ ವಿಜಯ್ ಅವರು ಮೂಕಾಂಬಿಕೆಗೆ 1 ಕೆಜಿ 600 ಗ್ರಾಂ ತೂಕದ ಬೆಳ್ಳಿಯ ಖಡ್ಗ ಅರ್ಪಿಸಿದ್ದಾರೆ. ಈ ಹಿಂದೆ ಮಾಜಿ ಸಿಎಂ ಎಂಜಿಆರ್ ಚಿನ್ನದ ಖಡ್ಗ ನೀಡಿದ್ದರು. ಸರಿ ಸುಮಾರು ಮಧ್ಯಾಹ್ನ 3ಕ್ಕೆ ಬೈಂದೂರಿನಲ್ಲಿನ ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ( Kollur Mookambika) ಭೇಟಿ ಕೊಟ್ಟ ತಮಿಳುನಾಡು ಸಿಎಂ ವಿಜಯ್ ಅವರು, ದೇವಿಗೆ ವಿಶೇಷ ಪೂಜೆ ಸಲ್ಲಿಸಿ, 30 … Read more

ಪ್ರಧಾನಿ ಮೋದಿ ಇಲ್ಲದೆ ಇದು ಆಗುತ್ತಿರಲಿಲ್ಲ!…ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ; ಬಿಜೆಪಿ ವಿರುದ್ಧ ಖರ್ಗೆ ಆಕ್ರೋಶ

ಮಧ್ಯಪ್ರದೇಶದ ಕಾಂಗ್ರೆಸ್‌ನ ರಾಜ್ಯಸಭಾ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕೃತಗೊಂಡಿರುವ ಕ್ರಮ ಅತ್ಯಂತ ಕಾನೂನುಬಾಹಿರ ಹಾಗೂ ಪ್ರಜಾಪ್ರಭುತ್ವ ವಿರೋಧಿಯಾಗಿದೆ ಎಂದು ನೂತನ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಇದು ಒಂದು ವಿಶೇಷ ಪ್ರಕರಣವಾಗಿದ್ದು, ಕೇವಲ ಪ್ರಕ್ರಿಯೆಯನ್ನು ವಿಳಂಬಗೊಳಿಸುವ ಉದ್ದೇಶದಿಂದಲೇ ಅವರು ಹೆಚ್ಚಿನ ಸಮಯ ತೆಗೆದುಕೊಂಡಿದ್ದಾರೆ. ಈ ವಿಚಾರದಲ್ಲಿ ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನದಂತೆ ನಾವು ಶೀಘ್ರದಲ್ಲೇ ಹೈಕೋರ್ಟ್ ಮೆಟ್ಟಿಲೇರಲಿದ್ದೇವೆ ಎಂದು ಸ್ಪಷ್ಟಪಡಿಸಿದರು. ಬಿಜೆಪಿ ವಿರುದ್ಧ ಖರ್ಗೆ ಗಂಭೀರ ಆರೋಪ … Read more