ಕೊಲ್ಲೂರು ಮೂಕಾಂಬಿಕೆಗೆ 1 ಕೆಜಿ 600 ಗ್ರಾಂ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ಸಿಎಂ ವಿಜಯ್; ಸಂಖ್ಯಾ ಶಾಸ್ತ್ರದ ಹಿಂದಿರುವ ರಹಸ್ಯವೇನು.?

ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ, ದೇವಿಯ ದರ್ಶನ ಪಡೆದ ನಂತರ, ತಮಿಳುನಾಡಿನ ಸಿಎಂ ಜೋಸೆಫ್ ವಿಜಯ್ ಅವರು ಮೂಕಾಂಬಿಕೆಗೆ 1 ಕೆಜಿ 600 ಗ್ರಾಂ ತೂಕದ ಬೆಳ್ಳಿಯ ಖಡ್ಗ ಅರ್ಪಿಸಿದ್ದಾರೆ. ಈ ಹಿಂದೆ ಮಾಜಿ ಸಿಎಂ ಎಂಜಿಆರ್ ಚಿನ್ನದ ಖಡ್ಗ ನೀಡಿದ್ದರು. ಸರಿ ಸುಮಾರು ಮಧ್ಯಾಹ್ನ 3ಕ್ಕೆ ಬೈಂದೂರಿನಲ್ಲಿನ ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ( Kollur Mookambika) ಭೇಟಿ ಕೊಟ್ಟ ತಮಿಳುನಾಡು ಸಿಎಂ ವಿಜಯ್ ಅವರು, ದೇವಿಗೆ ವಿಶೇಷ ಪೂಜೆ ಸಲ್ಲಿಸಿ, 30 … Read more

ಪ್ರಧಾನಿ ಮೋದಿ ಇಲ್ಲದೆ ಇದು ಆಗುತ್ತಿರಲಿಲ್ಲ!…ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ; ಬಿಜೆಪಿ ವಿರುದ್ಧ ಖರ್ಗೆ ಆಕ್ರೋಶ

ಮಧ್ಯಪ್ರದೇಶದ ಕಾಂಗ್ರೆಸ್‌ನ ರಾಜ್ಯಸಭಾ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕೃತಗೊಂಡಿರುವ ಕ್ರಮ ಅತ್ಯಂತ ಕಾನೂನುಬಾಹಿರ ಹಾಗೂ ಪ್ರಜಾಪ್ರಭುತ್ವ ವಿರೋಧಿಯಾಗಿದೆ ಎಂದು ನೂತನ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಇದು ಒಂದು ವಿಶೇಷ ಪ್ರಕರಣವಾಗಿದ್ದು, ಕೇವಲ ಪ್ರಕ್ರಿಯೆಯನ್ನು ವಿಳಂಬಗೊಳಿಸುವ ಉದ್ದೇಶದಿಂದಲೇ ಅವರು ಹೆಚ್ಚಿನ ಸಮಯ ತೆಗೆದುಕೊಂಡಿದ್ದಾರೆ. ಈ ವಿಚಾರದಲ್ಲಿ ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನದಂತೆ ನಾವು ಶೀಘ್ರದಲ್ಲೇ ಹೈಕೋರ್ಟ್ ಮೆಟ್ಟಿಲೇರಲಿದ್ದೇವೆ ಎಂದು ಸ್ಪಷ್ಟಪಡಿಸಿದರು. ಬಿಜೆಪಿ ವಿರುದ್ಧ ಖರ್ಗೆ ಗಂಭೀರ ಆರೋಪ … Read more

ರಾತ್ರಿಯ ಊಟದ ಬಳಿಕ ಮಾವಿನ ಹಣ್ಣು ಸೇವಿಸಿ ಒಂದೇ ಕುಟುಂಬದ ಇಬ್ಬರು ಹೆಣ್ಣು ಮಕ್ಕಳು ಸಾವು!

ಹೈದರಾಬಾದ್‌ನಲ್ಲಿ ನಡೆದ ಅತ್ಯಂತ ದುರದೃಷ್ಟಕರ ಘಟನೆಯೊಂದರಲ್ಲಿ, ರಾತ್ರಿಯ ಊಟದ ಬಳಿಕ ಮಾವಿನ ಹಣ್ಣು ಸೇವಿಸಿ ಒಂದೇ ಕುಟುಂಬದ ಇಬ್ಬರು ಹೆಣ್ಣು ಮಕ್ಕಳು ಸಾವನ್ನಪ್ಪಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಬಾಲಕಿಯರು ಕೊನೆಯುಸಿರೆಳೆದಿದ್ದಾರೆ. ಮೂಲಗಳ ಪ್ರಕಾರ, ಮೃತಪಟ್ಟ ಬಾಲಕಿಯರ ಕುಟುಂಬವು ಮೂಲತಃ ಕರ್ನಾಟಕದ ಬೀದರ್ ಜಿಲ್ಲೆಯ ನಿವಾಸಿಗಳಾಗಿದ್ದು, ಪ್ರಸ್ತುತ ಹೈದರಾಬಾದ್‌ನ ನಾರಾಯಣಗುಡ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಮೂರು ದಿನಗಳ ಹಿಂದೆ ನಡೆದ ಈ ಆಘಾತಕಾರಿ ಘಟನೆಯು ಸದ್ಯ ಇಡೀ ಕುಟುಂಬವನ್ನು ಕಣ್ಣೀರಿನಲ್ಲಿ … Read more

ಧರ್ಮಸ್ಥಳ ಕೇಸ್ : ನಟ ಪ್ರಕಾಶ್ ರಾಜ್ ಹೆಸರು ಉಲ್ಲೇಖವಾದ ತಕ್ಷಣ ಅವರು ಕ್ರಿಮಿನಲ್ ಆಗಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ

ರಾಜ್ಯಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಧರ್ಮಸ್ಥಳದ ‘ಬುರುಡೆ ಗ್ಯಾಂಗ್’ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಕರಣದ ಪ್ರಮುಖ ಅಂಶವಾಗಿರುವ ಚಿನ್ನಯ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿನ ಮಾಹಿತಿಯನ್ನು ಸರ್ಕಾರ ಹಾಗೂ ತನಿಖಾ ಸಂಸ್ಥೆಗಳು ಕೂಲಂಕಷವಾಗಿ ಪರಿಶೀಲಿಸಬೇಕಾದ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ. ಅರ್ಜಿಯ ಸತ್ಯಾಸತ್ಯತೆ ತಿಳಿಯಬೇಕಿದೆ: ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಗೃಹ ಸಚಿವರು, ಈ ಪ್ರಕರಣದಲ್ಲಿ ಕಾನೂನು ಪ್ರಕ್ರಿಯೆಗಳು ತನ್ನದೇ ಆದ ಹಾದಿಯಲ್ಲಿ ಸಾಗುತ್ತಿವೆ. ಆರೋಪಿ ಚಿನ್ನಯ ನ್ಯಾಯಾಲಯಕ್ಕೆ … Read more

ಆಸ್ಪತ್ರೆಯಲ್ಲಿ ಪುರುಷರ ಹೆಣದ ‘ಅದನ್ನ’ ನೋಡಿ ಎಂಜಾಯ್‌ ಮಾಡ್ತಿದ್ವಿ ಎಂದ ಲೇಡಿ ಡಾಕ್ಟರ್‌, ಆಮೇಲೇನಾಯ್ತು.?

ಪ್ರಸಿದ್ಧ ಸ್ಟ್ಯಾಂಡ್‌ಅಪ್ ಕಾಮಿಡಿಯನ್ ಪ್ರಣೀತ್ ಮೋರೆ (Pranit More) ಅವರ ಶೋಗೆ ಸಂಬಂಧಿಸಿದ ‘370 ರೂಪಾಯಿಯ ಬಿರಿಯಾನಿ’ ವಿವಾದ ದೇಶಾದ್ಯಂತ ಭಾರಿ ಸದ್ದು ಮಾಡುತ್ತಿರುವ ಬೆನ್ನಲ್ಲೇ, ಅವರದ್ದೇ ಮತ್ತೊಂದು ಹಳೆಯ ಶೋನಲ್ಲಿ ಮಹಿಳಾ ವೈದ್ಯೆಯೊಬ್ಬರು ನೀಡಿದ್ದ ಆಘಾತಕಾರಿ ಹೇಳಿಕೆಯ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಮತ್ತೆ ವೈರಲ್‌ ಆಗಿದ್ದು, ಭಾರಿ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ನೆಟ್ಟಿಗರಿಂದ ತೀವ್ರ ಟೀಕೆಗಳು ಮತ್ತು ಆಕ್ಷೇಪಗಳು ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಮಹಿಳಾ ವೈದ್ಯೆ, ಕೊನೆಗೂ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ‘ವಿಷಯ ತುಂಬಾ ಸೂಕ್ಷ್ಮವಾದುದು ಮತ್ತು ನನ್ನ … Read more

ಕೊಪ್ಪಳದಲ್ಲಿ ತಂದೆ, ಅಕ್ಕನ ಕೊಲೆಗೆ ಬಿಗ್ ಟ್ವಿಸ್ಟ್ : ಪೋಲೀಸರ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದ್ದ ತಂದೆ-ಅಕ್ಕನ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಫೋಟಕ ತಿರುವು ಸಿಕ್ಕಿದೆ. ಆರಂಭದಲ್ಲಿ ಆನ್‌ಲೈನ್ ಗೇಮ್ ವ್ಯಸನದಿಂದ ಈ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿತ್ತಾದರೂ, ಪೊಲೀಸ್ ತನಿಖೆಯಲ್ಲಿ ಅಸಲಿ ಕಾರಣವೇ ಬೇರೆ ಎನ್ನುವುದು ಬಯಲಾಗಿದೆ. ತನಗಿಷ್ಟವಿಲ್ಲದ ಕೋರ್ಸ್‌ಗೆ ಬಲವಂತವಾಗಿ ಸೇರಿಸಿದ್ದೇ ಈ ಇಡೀ ದುರಂತಕ್ಕೆ ಮುಖ್ಯ ಕಾರಣ ಎಂಬ ಆಘಾತಕಾರಿ ಸತ್ಯ ಬೆಳಕಿಗೆ ಬಂದಿದೆ. ಗಂಗಾವತಿ ತಾಲೂಕಿನ ಹೊಸ ಅಯೋಧ್ಯೆ ಗ್ರಾಮದಲ್ಲಿ ಜೂನ್ 6ರ ರಾತ್ರಿ ಈ ಘಟನೆ ನಡೆದಿತ್ತು. ಆರೋಪಿ … Read more

ಸಾಲದ ಹಣ ವಾಪಸ್ ಕೊಡುವುದಾಗಿ ನಂಬಿಸಿ ವೃದ್ಧೆಯ ಭೀಕರ ಕೊಲೆ.! ಮೇ 17 ರಿಂದಲೇ ನಾಪತ್ತೆಯಾಗಿದ್ದ ವೃದ್ಧೆ.!

ನೀಡಿದ್ದ ಸಾಲದ ಹಣವನ್ನು ಮರಳಿ ನೀಡುವುದಾಗಿ ನಂಬಿಸಿ ಕರೆಸಿಕೊಂಡು, ವೃದ್ಧೆಯೊಬ್ಬರನ್ನು ಭೀಕರವಾಗಿ ಕೊಲೆ (Crime) ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಸುಮಾರು 25 ದಿನಗಳ ಹಿಂದೆಯೇ ಈ ಹತ್ಯೆ ನಡೆದಿದ್ದು, ಇದೀಗ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಶ್ರೀನಿವಾಸಪುರ ತಾಲೂಕಿನ ಲಕ್ಷ್ಮೀಪುರ ಗ್ರಾಮದ ರೆಡ್ಡಮ್ಮ (70) ಕೊಲೆಯಾದ ದುರ್ದೈವಿ. ಹತ್ಯೆಗೈದ ಅದೇ ಗ್ರಾಮದ ತಿಮ್ಮರಾಜು ಮತ್ತು ಮುನಿರಾಜು ಸದ್ಯ ಪೊಲೀಸರ ಅತಿಥಿಯಾಗಿದ್ದಾರೆ. ಮೇ 17 ರಿಂದಲೇ ನಾಪತ್ತೆಯಾಗಿದ್ದ ವೃದ್ಧೆ ಮಾಹಿತಿಗಳ … Read more

ಗಡಿ ದಾಟಿದ ವಾತ್ಸಲ್ಯ: ದಾವಣಗೆರೆಯ ಅನಾಥ ಮಗುವನ್ನು ದತ್ತು ಪಡೆದ ಇಟಲಿ ದಂಪತಿ.!

ದಾವಣಗೆರೆ: “ಪ್ರೀತಿಗೆ ಯಾವುದೇ ಗಡಿಗಳಿಲ್ಲ, ಭಾಷೆಯ ಹಂಗಿಲ್ಲ” ಎಂಬುದನ್ನು ಸಾಬೀತುಪಡಿಸುವ ನೈಜ ಘಟನೆಯೊಂದು ಬೆಣ್ಣೆ ನಗರಿ ದಾವಣಗೆರೆಯಲ್ಲಿ ನಡೆದಿದೆ. ಹೌದು, ದಾವಣಗೆರೆಯ ಅನಾಥಾಶ್ರಮದಲ್ಲಿದ್ದ ಒಂದು ವರ್ಷದ ಗಂಡು ಮಗುವಿಗೆ ಈಗ ಇಟಲಿ ದೇಶದ ದಂಪತಿಗಳ ರೂಪದಲ್ಲಿ ಹೊಸ ಪೋಷಕರು, ಹೊಸ ಬದುಕು ಸಿಕ್ಕಿದೆ! ಕಳೆದ ಕೆಲವು ದಿನಗಳಿಂದ ದಾವಣಗೆರೆಯಲ್ಲಿ ಅನಾಥ ಮತ್ತು ಆಶ್ರಯರಹಿತ ಮಕ್ಕಳ ಪಾಲಿಗೆ ಹೊಸದೊಂದು ಆಶಾದಾಯಕ ಬೆಳವಣಿಗೆ ಆರಂಭವಾಗಿದೆ. ಕೇವಲ ಒಂದೇ ತಿಂಗಳಲ್ಲಿ ಜಿಲ್ಲೆಯ ನಾಲ್ವರು ಅನಾಥ ಮಕ್ಕಳು ಅಮೆರಿಕಾ, ಇಂಗ್ಲೆಂಡ್ ಹಾಗೂ ಇಟಲಿ … Read more

ಸರ್ಕಸ್ ಬೆನ್ನತ್ತಿ ಹೋದ ಹುಡುಗ 26 ವರ್ಷಗಳ ನಂತರ ಮರಳಿದಾಗ: ಸತೀಶ್ ಈಗ ‘ಸಲೀಂ ಅಬ್ದುಲ್ ಅನ್ಸಾರಿ’!

ಅದು 2000ನೇ ಇಸವಿ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧರ್ಮಸ್ಥಳದ ಅಶೋಕನಗರಕ್ಕೆ ಒಂದು ಸರ್ಕಸ್ ಕಂಪನಿ ಬಂದಿತ್ತು. ಬಣ್ಣ ಬಣ್ಣದ ದೀಪಗಳು, ಮೈನವಿರೇಳಿಸುವ ಸಾಹಸಗಳು ಅಲ್ಲಿನ 12 ವರ್ಷದ ಬಾಲಕ ಸತೀಶ್‌ನ ಮನಸ್ಸನ್ನು ಸಂಪೂರ್ಣವಾಗಿ ಆಕರ್ಷಿಸಿದವು. ಸರ್ಕಸ್ ಲೋಕದ ಮೋಹಕ್ಕೆ ಬಿದ್ದ ಆ ಬಾಲಕ, ಯಾರಿಗೂ ತಿಳಿಸದೆಯೇ ಆ ಸರ್ಕಸ್ ತಂಡದ ಜೊತೆ ಊರು ಬಿಟ್ಟು ಹೊರಟುಹೋದ. ಅಲ್ಲಿಂದ ಮುಂದಕ್ಕೆ ಆತನ ಬದುಕು ಸಂಪೂರ್ಣವಾಗಿ ಬದಲಾಯಿತು. ಇದೀಗ ಬರೋಬ್ಬರಿ 26 ವರ್ಷಗಳ ನಂತರ, ಅಂದರೆ ತನ್ನ 38ನೇ … Read more

ಖ್ಯಾತ ಗಾಯಕಿ ಶಿವಶ್ರೀ ತೇಜಸ್ವಿ ಸೂರ್ಯಗೆ ಪ್ರತಿಷ್ಠಿತ ‘ಉಸ್ತಾದ್ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರ’ ಗೌರವ!

ಖ್ಯಾತ ಗಾಯಕಿ ಶಿವಶ್ರೀ ತೇಜಸ್ವಿ ಸೂರ್ಯ ಅವರು ಭಾರತ ಸರ್ಕಾರದ ಸಾಂಸ್ಕೃತಿಕ ಸಚಿವಾಲಯದ ಅಡಿಯಲ್ಲಿ ಬರುವ ಸಂಗೀತ, ನೃತ್ಯ ಮತ್ತು ನಾಟಕದ ರಾಷ್ಟ್ರೀಯ ಅಕಾಡೆಮಿಯಾದ ‘ಸಂಗೀತ ನಾಟಕ ಅಕಾಡೆಮಿ’ ನೀಡುವ 2025ರ ಪ್ರತಿಷ್ಠಿತ ಉಸ್ತಾದ್ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಭಾರತ ರತ್ನ ಉಸ್ತಾದ್ ಬಿಸ್ಮಿಲ್ಲಾ ಖಾನ್ ಅವರ ಸ್ಮರಣಾರ್ಥ ಸ್ಥಾಪಿಸಲಾದ ಈ ಪ್ರಶಸ್ತಿಯು, ದೇಶದ ಶ್ರೀಮಂತ ಕಲಾತ್ಮಕ ಸಂಪ್ರದಾಯಗಳಿಗೆ ಸೇವೆ ಸಲ್ಲಿಸುವ ಯುವ ಕಲಾವಿದರಿಗೆ ನೀಡಲಾಗುತ್ತದೆ. ಶಿವಶ್ರೀ ತೇಜಸ್ವಿ ಸೂರ್ಯ ಅವರನ್ನು ಸಂಗೀತ ವಿಭಾಗದಲ್ಲಿ … Read more