ಜವರಾಯನ ಅಟ್ಟಹಾಸಕ್ಕೆ ನಡುರಸ್ತೆಯಲ್ಲೇ ಪ್ರಾಣಬಿಟ್ಟ ಬಾವ-ಬಾಮೈದ : ಸಿಮೆಂಟ್ ಬಲ್ಕರ್ ಲಾರಿಗೆ ಬೈಕ್ ಡಿಕ್ಕಿ

ಸಿಮೆಂಟ್ ಬಲ್ಕರ್ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ನಾಯಕರಂಡನಹಳ್ಳಿ ಬಳಿ ನಡೆದಿದೆ. ಲಾರಿ ಚಾಲಕ ಏಕಾಏಕಿ ಬ್ರೇಕ್ ಹಾಕಿದ ಕಾರಣ ಹಿಂಬದಿ ಇದ್ದ ಬೈಕ್ ನಿಯಂತ್ರಣ ತಪ್ಪಿ ಡಿಕ್ಕಿಯಾಗಿದೆ. ಅಶೋಕ್ ಮತ್ತು ಪವನ್ ಕುಮಾರ್ ಘಟನೆಯಲ್ಲಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಮೂಲತಃ ಹಿಂದೂಪುರದವರಾದ ಅಶೋಕ್ ಮತ್ತು ಪವನ್ ಕುಮಾರ್ ವೀಕೆಂಡ್ ಅಂತ ಊರಿಗೆ ಬಂದಿದ್ದು ಗ್ರಾಮದಲ್ಲಿ ಕಾಲ ಕಳೆದಿದ್ದರು. ಪವನ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ … Read more

ಹುಬ್ಬಳ್ಳಿ ಮರ್ಯಾದಾ ಹತ್ಯೆ ಬೆನ್ನಲ್ಲೇ ಹೊಸ ಕಾನೂನು ತರಲು ಮುಂದಾದ ಸರ್ಕಾರ : ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲಿ ಮರ್ಯಾದಾ ಹತ್ಯೆ ತಡೆ ಸಂಬಂಧ ಕಾನೂನು ಜಾರಿಗೊಳಿಸುವ ವಿಚಾರವನ್ನು ಗಂಭೀರವಾಗಿ ಪರಿಗಣಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕನ್ನಡ ಹೋರಾಟಗಾರರ ಸಮಿತಿಯಿಂದ ಭಾನುವಾರ ಅರಮನೆ ಮೈದಾನದಲ್ಲಿ ನಡೆದ ‘ಜನರಾಜ್ಯೋತ್ಸವ’ ಕಾರ್ಯಕ್ರಮದಲ್ಲಿ ಅವರು ಈ ವಿಚಾರ ಪ್ರಸ್ತಾಪಿಸಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಾಮಾಜಿಕ ಹೋರಾಟಗಾರ್ತಿ ಕೆ.ನೀಲಾ ಅವರು, ಅನ್ಯಜಾತಿಯ ಯುವಕನನ್ನು ವಿವಾಹ ಆಗಿದ್ದ ಕಾರಣಕ್ಕೆ ತಂದೆಯೊಬ್ಬರು ಗರ್ಭಿಣಿ ಮಗಳನ್ನೇ ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ ಎಂದು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಕಾನೂನು ಜಾರಿಗೊಳಿಸುವಂತೆ ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ … Read more

ಶೇ.80 ರಷ್ಟು ದಂಪತಿ ಪರಿಸ್ಥಿತಿ ಇದೇ.. ಮದುವೆಯಾದ ನಂತ್ರ ಆಕರ್ಷಣೆ ಕಡಿಮೆ ಆಗುವುದ್ಯಾಕೆ.?

ಮದುವೆ ಒಂದು ಸುಂದರವಾದ ಪ್ರಯಾಣ. ಮದುವೆಯ ಮೊದಲ ಎರಡು ಮೂರು ವರ್ಷಗಳನ್ನು ಹೆಚ್ಚಾಗಿ ಹನಿಮೂನ್ ಹಂತ ಎಂದು ಕರೆಯಲಾಗುತ್ತದೆ. ಈ ಸಮಯದಲ್ಲಿ ದಂಪತಿಗಳ ನಡುವಿನ ಪ್ರೀತಿ ಮತ್ತು ಅನ್ಯೋನ್ಯತೆ ಉತ್ತುಂಗದಲ್ಲಿರುತ್ತದೆ. ಆದರೆ ಕಾಲ ಕಳೆದಂತೆ ಆ ಮ್ಯಾಜಿಕ್ ಮಾಯವಾಗುತ್ತದೆ. ಒಮ್ಮೆ ಇದ್ದ ಆಕರ್ಷಣೆ ಕಡಿಮೆಯಾಗುತ್ತಾ ಹೋಗುತ್ತದೆ. ದೈನಂದಿನ ಜವಾಬ್ದಾರಿಗಳ ನೆರಳಿನಲ್ಲಿ ಪ್ರೀತಿ ಮಾಯವಾಗುತ್ತದೆ. ಈ ಕುರಿತು ಲೈಫ್ ಕೋಚ್ ನಿಹಾರಿಕಾ ಸೂರಿ ತಮ್ಮ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದು, ವಿಡಿಯೋದ ಪ್ರಕಾರ ಸುಮಾರು 80 ಪ್ರತಿಶತ … Read more

ಕೆನರಾ ಬ್ಯಾಂಕ್ ಗ್ರಾಹಕರಿಗೆ ₹3 ಕೋಟಿ ಪಂಗನಾಮ ; ಗ್ರಾಹಕರ ಹೆಸರಲ್ಲಿ ಸಾಲ ಪಡೆದು ಮ್ಯಾನೇಜರ್ ಎಸ್ಕೇಪ್!

ರಾಷ್ಟ್ರೀಕೃತ ಬ್ಯಾಂಕ್ ಅಂದಮೇಲೆ ಅಲ್ಲಿ ನಮ್ಮ ಹಣ ಸುರಕ್ಷಿತವಾಗಿರುತ್ತದೆ ಎಂಬ ನಂಬಿಕೆ ಎಲ್ಲರಲ್ಲೂ ಇರುತ್ತದೆ. ಆದರೆ, ಅದೇ ಬ್ಯಾಂಕಿನ ಹಿರಿಯ ಅಧಿಕಾರಿಯೊಬ್ಬರು ಗ್ರಾಹಕರ ನಂಬಿಕೆಯನ್ನೇ ಬಂಡವಾಳವಾಗಿಸಿಕೊಂಡು ಬರೋಬ್ಬರಿ 3 ಕೋಟಿ ರೂ. ವಂಚಿಸಿರುವ ಆಘಾತಕಾರಿ ಘಟನೆ ಬೆಂಗಳೂರಿನ ಮಲ್ಲೇಶ್ವರದಲ್ಲಿ ಬೆಳಕಿಗೆ ಬಂದಿದೆ. ನಂಬಿಸಿ ಕುತ್ತಿಗೆ ಕುಯ್ದ ಮ್ಯಾನೇಜರ್: ಮಲ್ಲೇಶ್ವರದ ಕೆನರಾ ಬ್ಯಾಂಕ್ ಶಾಖೆಯಲ್ಲಿ ಸೀನಿಯರ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ರಘು ಎಂಬಾತನೇ ಈ ಬೃಹತ್ ವಂಚನೆಯ ಕಿಂಗ್‌ಪಿನ್. ಈತ ಸುಮಾರು 21 ಮಂದಿ ಗ್ರಾಹಕರ ಹೆಸರಿನಲ್ಲಿ … Read more

ಕುಡಿದು ಟೈಟಾದ್ರೆ ನಾವೇ ಮನೆಗೆ ಬಿಡ್ತೇವೆ ಎಂದ ಗೃಹಸಚಿವ ಪರಮೇಶ್ವರ್ : ಖರ್ಚು ಉಳೀತು ಎಂದು ಕಾಲೆಳೆದ ನೆಟ್ಟಿಗರು

ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಕುಡಿದು ಟೈಟಾದ್ರೆ ಅವರನ್ನು ಮನೆಗೂ ಬಿಡ್ತೀವಿ ಎಂದು ಗೃಹಸಚಿವ ಡಾ ಜಿ ಪರಮೇಶ್ವರ್ ನೀಡಿರುವ ಹೇಳಿಕೆ ಈಗ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಆಗುತ್ತಿದೆ. ಹೊಸ ವರ್ಷ ಸಂಭ್ರಮಾಚರಣೆಗೆ ಕೇವಲ ಮೂರು ದಿನ ಬಾಕಿಯಿರುವಾಗ ಗೃಹಸಚಿವ ಡಾ ಜಿ ಪರಮೇಶ್ವರ್ ಕಮಿಷನರ್ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಭದ್ರತಾ ವ್ಯವಸ್ಥೆ ಬಗ್ಗೆ ಸುದೀರ್ಘ ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲು … Read more

ರಾತ್ರಿ ಡ್ಯೂಟಿ ಮುಗಿಸಿ ಮನೆಗೆ ಮರಳಿದ್ದ ‘ASI’ ಹೃದಯಾಘಾತದಿಂದ ಸಾವು.!

ರಾತ್ರಿ ಪಾಳಿಯ ಕರ್ತವ್ಯವ ಮುಗಿಸಿ ಬೆಳಗಿನ ಜಾವ ಮನೆಗೆ ಮರಳಿದ್ದ ಪೊಲೀಸ್ ಅಧಿಕಾರಿಯೊಬ್ಬರು ಹಠಾತ್ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿರುವ ದುರ್ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಸಂತೇಮರಹಳ್ಳಿ ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಆಗಿ ಸೇವೆ ಸಲ್ಲಿಸುತ್ತಿದ್ದ ನಾಗನಾಯಕ ಮೃತ ದುರ್ದೈವಿ. ಮಾಹಿತಿ ಪ್ರಕಾರ, ನಾಗನಾಯಕ ಅವರು ರಾತ್ರಿ ಡ್ಯೂಟಿ ಮುಗಿಸಿಕೊಂಡು ಬೆಳಗ್ಗೆ ತಮ್ಮ ನಿವಾಸಕ್ಕೆ ಆಗಮಿಸಿದ್ದರು. ಮನೆಯೊಳಗೆ ಪ್ರವೇಶಿಸಿದ ಕೆಲವೇ ಕ್ಷಣಗಳಲ್ಲಿ ಅಸಹಜವಾಗಿ ಕುಸಿದು ಬಿದ್ದಿದ್ದಾರೆ. ತಕ್ಷಣ ಕುಟುಂಬಸ್ಥರು ಹಾಗೂ ಸಹೋದ್ಯೋಗಿಗಳು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದರೂ, ಮಾರ್ಗ ಮಧ್ಯದಲ್ಲೇ … Read more

ಹಾಲು ತರಲು ಹೋದ ಮಹಿಳೆಯ ಕಿವಿಯೋಲೆ ಎಳೆದ ರಭಸಕ್ಕೆ ಮಹಿಳೆಯ ಕಿವಿ ಕಟ್ ಕೇಸ್, ಸರಗಳ್ಳರು ಅರೆಸ್ಟ್!

ವಿಜಯಪುರ : ನಗರದಲ್ಲಿ ಮಾನವೀಯತೆಯನ್ನು ನಾಚಿಕೆಪಡಿಸುವಂತಹ ಭೀಕರ ಘಟನೆ ಬೆಳಕಿಗೆ ಬಂದಿದೆ. ನಗರದ ದಿವಟಗೇರಿ ಗಲ್ಲಿಯಲ್ಲಿ ಡಿಸೆಂಬರ್ 26ರಂದು ಸಂಜೆ, ಹಾಲು ತರಲೆಂದು ಅಂಗಡಿಗೆ ಹೊರಟಿದ್ದ ಮಹಿಳೆಯ ಮೇಲೆ ಇಬ್ಬರು ದುಷ್ಕರ್ಮಿಗಳು ದಾಳಿ ನಡೆಸಿ, ಕಿವಿಯನ್ನು ಕತ್ತರಿಸಿ ಕಿವಿಯೋಲೆ ಹಾಗೂ ಮಾಂಗಲ್ಯ ಸರವನ್ನು ಕಳ್ಳತನ ಮಾಡಿದ್ದಾರೆ. ಗಾಯಗೊಂಡ ಮಹಿಳೆಯನ್ನು ಕಲಾವತಿ ಗಾಯ್ಕವಾಡ್ (45) ಎಂದು ಗುರುತಿಸಲಾಗಿದ್ದು, ಮನೆ ಸಮೀಪದಲ್ಲೇ ಈ ದಾರುಣ ಘಟನೆ ನಡೆದಿದೆ. ಆರೋಪಿಗಳು ಮುಸುಕುಧಾರಿಗಳಾಗಿ ಬಂದಿದ್ದು, ಮೊದಲು ಮಹಿಳೆಗೆ ಪರಿಚಿತರಂತೆ ಮಾತನಾಡಿ, ನಂತರ ಏಕಾಏಕಿ … Read more

ಅಡಿಕೆ ಧಾರಣೆ ಭಾರೀ ಏರಿಕೆ.! ಇಲ್ಲಿದೆ ಎಲ್ಲಾ ಮಾರುಕಟ್ಟೆಗಳ ಬೆಲೆಗಳ ವಿವರ – ಕರ್ನಾಟಕದ ಅಡಿಕೆ ಮಾರುಕಟ್ಟೆಗಳಲ್ಲಿ ವರ್ಷಾಂತದ ಸ್ಥಿರ ಧಾರಣೆ

ಕರ್ನಾಟಕದ ಅಡಿಕೆ ಬೆಳೆಗಾರರು ವರ್ಷಾಂತದಲ್ಲಿ ಹೊಸ ವರ್ಷದ ನಿರೀಕ್ಷೆಯೊಂದಿಗೆ ಮಾರುಕಟ್ಟೆಯನ್ನು ಗಮನಿಸುತ್ತಿದ್ದಾರೆ, ಇದು ಅವರ ಆರ್ಥಿಕ ಭವಿಷ್ಯಕ್ಕೆ ನಿರ್ಣಾಯಕವಾಗಿದೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳಾದ ಶಿವಮೊಗ್ಗ, ದಾವಣಗೆರೆ, ಸಿರ್ಸಿ, ಸಾಗರ, ಚಿತ್ರದುರ್ಗ, ತುಮಕೂರು ಮತ್ತು ಇತರೆಡೆಗಳಲ್ಲಿ ಅಡಿಕೆ ಬೆಲೆಗಳು ಸಾಮಾನ್ಯವಾಗಿ ಸ್ಥಿರತೆಯನ್ನು ಕಾಯ್ದುಕೊಂಡಿವೆ. ಹಿಂದಿನ ದಿನಗಳ ಏರಿಕೆಯ ನಂತರ, ಇಂದು ಆಗಮನದ ಸಮತೋಲನ ಮತ್ತು ರಫ್ತು ಬೇಡಿಕೆಯಿಂದಾಗಿ ಬೆಲೆಗಳು ಸ್ವಲ್ಪ ಉನ್ನತರಾಗಿವೆ, ವಿಶೇಷವಾಗಿ ಉನ್ನತ ಗುಣದ ವಿಧಗಳಲ್ಲಿ. ವಿವಿಧ ವಿಧಗಳಾದ ರಶಿ, ಸರಕು, ಬೇಟ್ಟೆ, ಚಾಲಿ ಮತ್ತು ಸಿಪ್ಪೆಗೋಟುಗಳಲ್ಲಿ … Read more

ಸಾಲ ತೀರಿಸಲು ಕಿಡ್ನಿ ಮಾರಾಟ.! ತೆಗೆದುಕೊಂಡಿದ್ದ 1 ಲಕ್ಷ ಸಾಲ ನಾಲ್ಕು ವರ್ಷದಲ್ಲೇ 74 ಲಕ್ಷಕ್ಕೆ ಏರಿಕೆಯಾಗಿದ್ದು ಹೇಗೆ..?

ನಾಲ್ವರು ಸಾಲಗಾರರು ತಾವು ನೀಡಿರುವ ಸಾಲವನ್ನು ಮರುಪಾವತಿಸಲು ರೈತನೊಬ್ಬನ ಕಿಡ್ನಿ ಮಾರಾಟ ಮಾಡುವಂತೆ ಒತ್ತಾಯಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ನಾಗಭಿಡ್‌ನ ಮಿಂಥೂರ್ ಗ್ರಾಮದಲ್ಲಿ ನಡೆದಿದೆ. ಈ ವಿಷಯ ಬಹಿರಂಗವಾದ ಬಳಿಕ, ಪೊಲೀಸರು ತನಿಖೆ ಆರಂಭಿಸಿದ್ದು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬ್ರಹ್ಮಪುರಿ ಪೊಲೀಸ್ ಠಾಣೆಯಲ್ಲಿ ಸಾಲಗಾರರ ವಿರುದ್ಧ ಸುಲಿಗೆ ಆರೋಪ ಮತ್ತು ಮಹಾರಾಷ್ಟ್ರ ಹಣ ಸಾಲ (ನಿಯಂತ್ರಣ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಂತ್ರಸ್ತ ರೋಷನ್ ಸದಾಶಿವ್ ಕುಡೆ ನಾಲ್ಕು ಎಕರೆ ತೋಟವನ್ನು ಹೊಂದಿದ್ದರು. … Read more

ಗೃಹಲಕ್ಷ್ಮಿ ಯೋಜನೆ ಹಣ ಜಮೆಯಾಗಿಲ್ವಾ.? ಹಾಗಾದ್ರೆ ಈ ಸಹಾಯವಾಣಿಗೆ ಕರೆ ಮಾಡಿ ಸಾಕು

ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಪ್ರಮುಖವಾಗಿದ್ದು, ಬಿಪಿಎಲ್‌ ಕುಟುಂಬದ ಮಹಿಳೆಯರಿಗೆ ಸರಕಾರ ಮಾಸಿಕ 2 ಸಾವಿರ ರೂ.ಗಳನ್ನು ನೇರ ಅವರ ಖಾತೆಗೆ ವರ್ಗಾವಣೆ ಮಾಡುತ್ತದೆ. ಮಹಿಳೆಯರನ್ನು ಆರ್ಥಿಕವಾಗಿ ಸಬಲಗೊಳಿಸುವುದು ಇದರ ಉದ್ದೇಶ.ಆದರೆ ಇತ್ತೀಚಿಗೆ ಗೃಹಲಕ್ಷ್ಮಿ ಹಣ ಖಾತೆಗೆ ಬಂದಿಲ್ಲ ಎಂದು ಯಜಮಾನಿಯರು ದೂರಿದ್ದಾರೆ. ಇದೀಗ ಖಾತೆಗೆ 24ನೇ ಕಂತಿನ ಹಣ ಬಿಡುಗಡೆ ಮಾಡಲಾಗಿದೆ. ಹಾಗಾದ್ರೆ ಹಣ ಜಮೆ ಆಗಿದೆಯೋ ಇಲ್ವೋ ಅನ್ನೋದಕ್ಕೆ ಇಲ್ಲಿದೆ ಮಾಹಿತಿ. ಹೌದು ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲವೇ? ಯಾವಾಗ ಬರುವುದೋ … Read more