ನವವಧು ಗಾನವಿ ಆತ್ಮಹತ್ಯೆ ಕೇಸ್: ಪತಿ ಸೂರಜ್ ನೇಣಿಗೆ ಶರಣು, ಅತ್ತೆ ಸ್ಥಿತಿ ಗಂಭೀರ; ನವಜೋಡಿಗೆ ಮುಳುವಾಯ್ತು ವಿವಾಹ ಪೂರ್ವ ಸಂಬಂಧ?
ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣ ಇದೀಗ ಅತಿ ದೊಡ್ಡ ತಿರುವು ಪಡೆದುಕೊಂಡಿದೆ. ಹೆಂಡತಿ ಮೃತಪಟ್ಟ ಬಳಿಕ ಪತಿ ಸೂರಜ್ ಕೂಡ ಮಹಾರಾಷ್ಟ್ರದ ನಾಗಪುರದಲ್ಲಿ ನೇಣಿಗೆ ಶರಣಾಗಿದ್ದಾರೆ. ಜೊತೆಗೆ ಸೂರಜ್ ತಾಯಿ ಕೂಡ ಆತ್ಮಹತ್ಯೆಗೆ ಯತ್ನ ಮಾಡಿದ್ದು, ಈಗ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಗಾನವಿ ಸಾವಿನ ನಂತರ ಕುಟುಂಬಸ್ಥರು ಸೂರಜ್ ಕುಟುಂಬದವರ ವಿರುದ್ಧ ಆರೋಪ ಮಾಡಿದ್ರು. ಇದರಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದ ಪತಿ ಸೂರಜ್, ತಮ್ಮ ತಾಯಿ ಜಯಂತಿ ಮತ್ತು ಸಹೋದರ ಸಂಜಯ್ ಜೊತೆ ಮಹಾರಾಷ್ಟ್ರದ ನಾಗಪುರಕ್ಕೆ ತೆರಳಿದ್ದರು. … Read more