ಮತ್ತೊಂದು ಭೀಕರ ರಸ್ತೆ ಅಪಘಾತಕ್ಕೆ ಪೊಲೀಸ್ ಅಧಿಕಾರಿ ಬಲಿ: ಮರಕ್ಕೆ ಡಿಕ್ಕಿ ಹೊಡೆದ ಕಾರು, ಸಿಪಿಐ ರಘುನಾಥ್ ಸಾವು!
ವಿಜಯನಗರ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ DCRE ಸಿಪಿಐ ರಘುನಾಥ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರು ಕೇಂದ್ರ ಕಚೇರಿಗೆ ವರ್ಗಾವಣೆಗೊಂಡ ಕೇವಲ ಎರಡು ದಿನಗಳಲ್ಲಿ, ಹೊಸ ಕರ್ತವ್ಯಕ್ಕೆ ಹಾಜರಾಗುವ ಮುನ್ನವೇ ಈ ದುರ್ಘಟನೆ ಸಂಭವಿಸಿದೆ. ವಿಜಯನಗರ ಜಿಲ್ಲೆಯಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದು ಪೊಲೀಸ್ ಇಲಾಖೆಯ ದಕ್ಷ ಅಧಿಕಾರಿಯೊಬ್ಬರನ್ನು ಬಲಿಪಡೆದಿದೆ. ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದ ಬೇವಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಕೊಪ್ಪಳ ಮತ್ತು … Read more