ಬಳ್ಳಾರಿ: ನಗರದ ಡೈರಿ ಕ್ರಾಸ್ ಬಳಿ ಇರುವ ಮನೆಯೊಂದರಲ್ಲಿ ಮಂಗಳಮುಖಿ ಹಾಗೂ ಆಟೋ ಚಾಲಕನ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸುಹಾಸಿನಿ (ಮಂಗಳಮುಖಿ) ಹಾಗೂ ಶೇಖರ್ ಅಲಿಯಾಸ್ ಮಣಿ (ಆಟೋ ಚಾಲಕ) ಮೃತ ದುರ್ದೈವಿಗಳಾಗಿದ್ದಾರೆ.
ಮೃತ ಶೇಖರ್ ಮತ್ತು ಸುಹಾಸಿನಿ ಕಳೆದ ಕೆಲವು ಸಮಯದಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಬಳ್ಳಾರಿಯ ಡೈರಿ ಕ್ರಾಸ್ನಲ್ಲಿರುವ ಸುಹಾಸಿನಿಯ ಮನೆಯಲ್ಲಿ ಇಬ್ಬರೂ ವಾಸವಿದ್ದರು. ಆದರೆ, ಇಂದು ಬೆಳಿಗ್ಗೆ ಇಬ್ಬರ ಶವಗಳು ಮನೆಯ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ.
ಕಿಟಕಿಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಪ್ರೇಮ ವೈಫಲ್ಯ ಅಥವಾ ಕುಟುಂಬದ ವಿರೋಧ ಈ ಘಟನೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.
ಪೊಲೀಸ್ ಭೇಟಿ: ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.
ಮಂಗಳಮುಖಿ ಜೊತೆ ಆಟೋ ಡ್ರೈವರ್ ಲವ್ : ಬಳ್ಳಾರಿಯಲ್ಲಿ ಪ್ರೇಮಿಗಳ ನಿಗೂಢ ಸಾವು.!
WhatsApp Group
Join Now