Bele Parihara : ರೈತರ ಬ್ಯಾಂಕ್ ಖಾತೆಗೆ ಸಂಪೂರ್ಣ ಬೆಳೆಹಾನಿ ಪರಿಹಾರ ಹಣ ಜಮಾ : ಸಚಿವ ಕೃಷ್ಣಭೈರೇಗೌಡ

Spread the love

Bele Parihara : ಎನ್ ಡಿಆರ್ ಎಫ್(NDRF) ಹಣ ಬಿಡುಗಡೆ ಆದ ಕೂಡಲೇ ರೈತರಿಗೆ ಅರ್ಹತೆ ಆಧಾರದಲ್ಲಿ ಪರಿಹಾರ ಪಾವತಿಸಲಾಗಿದೆ. ಇಲ್ಲಿಯವರೆಗೆ ಮೊದಲ ಹಂತದಲ್ಲಿ ₹2,000 ರೂಪಾಯಿ ಹಾಗು ಬರ ಪರಿಹಾರದ ಎರಡನೇ ಕಂತಿನ ಹಣವೂ ಸೇರಿದಂತೆ ಒಟ್ಟು 32.12 ಲಕ್ಷ ರೈತರ ಬ್ಯಾಂಕ್ ಖಾತೆಗೆ ಈ ದಿನದವರೆಗೆ ಸಂಪೂರ್ಣ ಬೆಳೆ ಪರಿಹಾರ ಮೊತ್ತವನ್ನ ಜಮೆ ಮಾಡಲಾಗಿದೆ. ಇನ್ನೂ ಕೂಡ ಸುಮಾರು 2 ಲಕ್ಷ ರೈತರಿಗೆ ಪರಿಹಾರ ಮೊತ್ತ ಜಮೆ ಮಾಡುವ ಪ್ರಕ್ರಿಯೆ ದಾಖಲೆ ಪರಿಶೀಲನೆ ನಡೆಯುತ್ತಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಮಾಹಿತಿ ನೀಡಿದ್ದಾರೆ.

WhatsApp Group Join Now

ಸುಮಾರು ತಾಲೂಕುಗಳಲ್ಲಿ ಬರ ಪರಿಹಾರ ಪಟ್ಟಿಯಲ್ಲಿ ಸೇರದೇ ಇದ್ದ ಮಳೆ ಆಧಾರಿತ ಬೆಳೆಗಳಿಗೂ ಪರಿಹಾರ ಹಣ ವಿತರಿಸಲು ಮತ್ತು 2 ಲಕ್ಷ ಹೆಕ್ಟೇರ್‌ ನೀರಾವರಿ ಪ್ರದೇಶವನ್ನು ಒಳಗೊಳ್ಳುವ ಸುಮಾರು 1.63 ಲಕ್ಷ ಅರ್ಹ ರೈತರಿಗೂ ಪರಿಹಾರ ಮೊತ್ತವನ್ನ ವಿತರಿಸಲು ತೀರ್ಮಾನಿಸಲಾಗಿದೆ ಎಂದು ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಕೂಡ ಓದಿ : Crop Insurance : ನಿಮಗೆ ಬೆಳೆ ಪರಿಹಾರ ಸಿಕಿದ್ಯಾ.? ಆಧಾರ್ ಕಾರ್ಡ್, ಮೊಬೈಲ್ ನಂಬ‌ರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಿ

WhatsApp Group Join Now

ಇದಲ್ಲದೆ, ಸಣ್ಣ ಮತ್ತು ಅತಿಸಣ್ಣ ಒಣ ಬೇಸಾಯ ಮಾಡುವ ಸುಮಾರು 16 ಲಕ್ಷ ಕುಟುಂಬಗಳಿಗೆ ಬರಗಾಲದಿಂದ ಆಗಿರುವ ಜೀವನೋಪಾಯದ ಆರ್ಥಿಕ ನಷ್ಟಕ್ಕೆ ಪರಿಹಾರವಾಗಿ ತಲಾ ₹3,000 ಪರಿಹಾರ ನೀಡಲೂ ಸಹ ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ನೀರಿನ ಸಮಸ್ಯೆಯಿಂದ 270 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಹಾಗು 594 ಗ್ರಾಮಗಳಿಗೆ ಖಾಸಗಿ ಬೋರ್‌ವೆಲ್ ಬಾಡಿಗೆ ಪಡೆದು ನೀರು ಸರಬರಾಜು ಮಾಡಲಾಗುತ್ತಿದೆ. ಹಾಗು 153 ನಗರ ಪ್ರದೇಶದ ವಾರ್ಡ್‌ಗಳಿಗೆ ಟ್ಯಾಂಕರ್ ಮೂಲಕ ಮತ್ತು 35 ವಾರ್ಡ್‌ಗಳಿಗೆ ಖಾಸಗಿ ಬೋರ್‌ವೆಲ್‌ ಬಾಡಿಗೆ ಪಡೆದು ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

WhatsApp Group Join Now

ಇದನ್ನೂ ಕೂಡ ಓದಿ : Ration Card Update : ಹೊಸ ರೇಷನ್ ಕಾರ್ಡ್ ಗೆ ಕಾಯ್ತಿದ್ದೀರಾ.? ಯಾವಾಗ ಮತ್ತು ಹೇಗೆ ಅರ್ಜಿ ಸಲ್ಲಿಸುವುದು.?

ಬರಗಾಲದ ಪರಿಸ್ಥಿತಿಯಿಂದಾಗಿ ರಾಜ್ಯದ ಅವಶ್ಯಕತೆಯಿರುವ ವಿವಿಧ ಭಾಗಗಳಲ್ಲಿ 47 ಮೇವಿನ ಬ್ಯಾಂಕ್‌ಗಳನ್ನು ಮತ್ತು 28 ಕಡೆಗಳಲ್ಲಿ ಗೋಶಾಲೆಗಳನ್ನು ತೆರೆದು ಮೇವಿನ ಕೊರತೆ ನೀಗಿಸಲಾಗುತ್ತಿದೆ. ಈ ವೆಚ್ಚವನ್ನು ಬರಿಸಲು ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರರಗಳ ಖಾತೆಗಳಲ್ಲಿ ರೂ. 836 ಕೋಟಿ ಅನುದಾನ ಲಭ್ಯವಿದೆ ಎಂದು ತಿಳಿಸಿದ್ದಾರೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.


Spread the love

Leave a Reply