Bele Parihara Payment : ರಾಜ್ಯದ ರೈತರಿಗೆ ಸಿಹಿಸುದ್ಧಿ.! ರೈತರ ಬ್ಯಾಂಕ್ ಖಾತೆಗೆ ಬೆಳೆ ಹಾನಿ ಪರಿಹಾರ ಮೊದಲ ಕಂತು ಜಮಾ.!

Spread the love

Bele Parihara Payment : ನಮಸ್ಕಾರ ಸ್ನೇಹಿತರೇ, 2024- 25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರದ ಮೊತ್ತ ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?

ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ. ಇನ್ಪುಟ್ ಸಬ್ಸಿಡಿ ಮಂಜೂರಾಗಿದೆ.

ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆರ್.ಎಫ್., ಎಸ್.ಡಿ.ಆರ್.ಎಫ್. ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾರ್ ಸಂಖ್ಯೆ ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.

ಇದನ್ನೂ ಕೂಡ ಓದಿ : Gold Rate : ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.? ಎಷ್ಟಾಗಿದೆ ನೋಡಿ ಇವತ್ತಿನ ಚಿನ್ನದ ನಿಖರ ಬೆಲೆ.?

ಇನ್ನು ಮೂರ್ನಾಲ್ಕು ದಿನಗಳೊಳಗೆ ಇನ್ಪುಟ್ ಸಬ್ಸಿಡಿ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

WhatsApp Group Join Now

Spread the love

Leave a Reply