Bele Parihara Payment : ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ.! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ಬರಪರಿಹಾರ ಹಣ ನಿಮಗೆ ಬರಲ್ಲ.! 

Bele Parihara Payment : ನಮಸ್ಕಾರ ಸ್ನೇಹಿತರೇ, ರಾಜ್ಯದ ರೈತರಿಗೆ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕೇಂದ್ರ ಸರ್ಕಾರವು ರಾಜ್ಯಕ್ಕೆ ನೀಡಿರುವಂತಹ ಬೆಳೆ ಪರಿಹಾರದ ಹಣವನ್ನು ರಾಜ್ಯ ಸರ್ಕಾರವು ಅರ್ಹ ಫಲಾನುಭವಿ ರೈತರಿಗೆ ನೇರವಾಗಿ ಹಣವನ್ನ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಿದ್ದು, ಕೆಲವು ರೈತರಿಗೆ ಇನ್ನೂ ಸಹ ಬೆಳೆ ಪರಿಹಾರದ ಹಣ ಕೆಲವು ತಾಂತ್ರಿಕ ಕಾರಣಗಳಿಂದಾಗಿ ಬ್ಯಾಂಕ್ ಖಾತೆಗೆ ಜಮೆಯಾಗದೆ ಉಳಿದಿದೆ.

ಇದಕ್ಕೆಲ್ಲಾ ಪ್ರಮುಖ ಕಾರಣವಾಗಿದೆ ಆಧಾರ್ ಕಾರ್ಡ್ ಬ್ಯಾಂಕ್ ಖಾತೆಯೊಂದಿಗೆ ಲಿಂಕ್ ಆಗದಿರುವುದು. ಸರ್ಕಾರವು ಆಧಾರ್ ಕಾರ್ಡ್ ಗೆ ಲಿಂಕ್ ಆಗದೇ ಇರುವ ಫಲಾನುಭವಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ತಿಳಿದುಕೊಳ್ಳುವುದು ಹೇಗೆ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಹಾಗು ವೆಬ್ ಸೈಟ್ ಲಿಂಕ್ ಇಲ್ಲಿ ನೀಡಲಾಗಿದೆ.

ಇದನ್ನೂ ಕೂಡ ಓದಿ : FID Number : ನೀವು ಫ್ರೂಟ್ಸ್ ಐಡಿ ಹೊಂದಿದ್ದೀರಾ.?ನಿಮ್ಮ ಹೆಸರಿಗೆ FID ಇದ್ದರೆ ಬರ ಪರಿಹಾರ ಹಣ.! ನಿಮ್ಮ FID ಮೊಬೈಲ್‌ನಲ್ಲೇ ಚೆಕ್ ಮಾಡಿಕೊಳ್ಳಿ

ರಾಜ್ಯ ಸರ್ಕಾರವು ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಲಿಂಕ್ ಆಗದಿರುವ ರೈತರ ಪಟ್ಟಿ ಪ್ರಕಟಿಸಿದ್ದು, ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿಲ್ಲ ಎಂದು ಅರ್ಥ. ನೀವು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸದಿದ್ದರೆ ಸರಕಾರದಿಂದ ನೀಡುವಂತಹ ಬರ ಪರಿಹಾರದ ಹಣ ನಿಮ್ಮ ಖಾತೆಗೆ ಜಮೆ ಆಗುವುದಿಲ್ಲ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಕೂಡ ಇದೆಯಾ ಎಂದು ಚೆಕ್ ಮಾಡುವ ವಿಧಾನವನ್ನ ಕೆಳಗೆ ವಿವರಿಸಲಾಗಿದೆ.

ಆಧಾರ್ ಲಿಂಕ್ ಆಗದಿರುವ ರೈತರ ಹೆಸರು ತಿಳಿಯುವ ವಿಧಾನ ತಿಳಿಯಲು ಈ ಅಧೀಕೃತ ವೆಬ್ಸೈಟ್ ಗೆ ಭೇಟಿ ನೀಡಿ :- ಬರ ಪರಿಹಾರ ಲಿಸ್ಟ್ – Bele Parihara List Karnataka 2024 

ನಿಮ್ಮ ಮೊಬೈಲ್ ನಲ್ಲಿ ಮೇಲೆ ನೀಡಿರುವ ಅಧೀಕೃತ ವೆಬ್ ಸೈಟ್ ಗೆ ಭೇಟಿ ನೀಡಿ. ಮುಖಪುಟದಲ್ಲಿ ನಿಮ್ಮ ಜಿಲ್ಲೆಯ ಹೆಸರನ್ನು ಆಯ್ಕೆ ಮಾಡಿಕೊಳ್ಳಿ. ನಂತರ ನಿಮಗೆ ಕೆಳಗೆ ಕಾಣಿಸುವ ನಿಮ್ಮ ತಾಲೂಕನ್ನು ಆಯ್ಕೆ ಮಾಡಿಕೊಳ್ಳಿ. ನಂತರ ನಿಮ್ಮ ಹೋಬಳಿಯನ್ನು ಆಯ್ಕೆ ಮಾಡಿಕೊಳ್ಳಿ. ಹೋಬಳಿಯ ನಿಮ್ಮ ಜಮೀನು ಇರುವ ಗ್ರಾಮದ ಹೆಸರು ಆಯ್ಕೆ ಮಾಡಿಕೊಳ್ಳಿ. ಅದರಲ್ಲಿ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಕಾರ್ಡ್ ಲಿಂಕ್ ಆಗದಿರುವ ರೈತರ ಪಟ್ಟಿ ಕಾಣಿಸುತ್ತದೆ. ಆ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿಕೊಳ್ಳಿ. ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ ಬ್ಯಾಂಕ್ ಗೆ ಭೇಟಿ ನೀಡಿ ನಿಮ್ಮ ಬ್ಯಾಂಕ್ ಖಾತೆಗೆ ನಿಮ್ಮ ಆಧಾರ್ ಕಾರ್ಡನ್ನು ಲಿಂಕ್ ಮಾಡಿಸಿಕೊಳ್ಳಿ.

ಆಧಾರ್ ಲಿಂಕ್ ಆಗದಿರುವ ರೈತರ ಹೆಸರು ತಿಳಿಯುವ ವಿಧಾನ ತಿಳಿಯಲು ಈ ಅಧೀಕೃತ ವೆಬ್ಸೈಟ್ ಗೆ ಭೇಟಿ ನೀಡಿ :- ಬರ ಪರಿಹಾರ ಲಿಸ್ಟ್ – Bele Parihara List Karnataka 2024 

ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ.

ಇದನ್ನೂ ಕೂಡ ಓದಿ : Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

Leave a Reply