ಬ್ಯಾಂಕ್ ಅಕೌಂಟ್ ನಲ್ಲಿ ಇಷ್ಟು ಹಣವಿಟ್ಟವರ BPL ಕಾರ್ಡ್ ರದ್ದು | BPL Card Rules

Spread the love

BPL Card Rules : ರಾಜ್ಯ ಸರ್ಕಾರ ಈಗ ಬಿಪಿಎಲ್ ರೇಷನ್ ಕಾರ್ಡ್ಗಳಿಗೆ ಸಂಬಂಧಪಟ್ಟಂತೆ ರಾಜ್ಯಾದ್ಯಂತ ಹೊಸ ನಿಯಮವನ್ನ ಜಾರಿಗೆ ತಂದಿದೆ. ಇನ್ನು ಮುಂದೆ ಬ್ಯಾಂಕ್ ಖಾತೆಯಲ್ಲಿ ಹೆಚ್ಚಿನ ಹಣವಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗುತ್ತದೆ. ಕುಟುಂಬದ ಆದಾಯವನ್ನು ಪರಿಗಣಿಸಿ ಬಿಪಿಎಲ್ ರೇಷನ್ ಕಾರ್ಡುಗಳನ್ನ ರದ್ದು ಮಾಡಲು ಈಗ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ.

ರಾಜ್ಯ ಸರ್ಕಾರದ ಹೊಸ ನಿಯಮದ ಪ್ರಕಾರ ಒಂದು ಕುಟುಂಬದ ವಾರ್ಷಿಕ ಆದಾಯ ಒಂದು ಲಕ್ಷದ ಇಪ್ಪತ್ತು ಸಾವಿರಕ್ಕಿಂತ ಅಧಿಕವಾಗಿದ್ದರೆ ಅವರ ಬಿಪಿಎಲ್ ರೇಷನ್ ಕಾರ್ಡ್ಗಳು ರದ್ದಾಗುತ್ತದೆ. ಒಂದು ಲಕ್ಷದ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಿನ ಆದಾಯವನ್ನು ಹೊಂದಿರುವ ಎಲ್ಲಾ ಕುಟುಂಬದವರ ಬಿಪಿಎಲ್ ರೇಷನ್ ಕಾರ್ಡುಗಳನ್ನ ರದ್ದು ಮಾಡಲು ಈಗ ರಾಜ್ಯ ಸರ್ಕಾರ ಮುಂದಾಗಿದೆ.

ಅದೇ ರೀತಿಯಲ್ಲಿ ಜಿಎಸ್ಟಿ ಪಾವತಿ ಮಾಡುತ್ತಿರುವವರು ತೆರಿಗೆ ಪಾವತಿ ಮಾಡುತ್ತಿರುವವರು ಮತ್ತು ಹೊರರಾಜ್ಯದಲ್ಲಿ ಪಡಿತರ ಚೀಟಿಯನ್ನ ಹೊಂದಿರುವವರು ಮತ್ತು ಕರ್ನಾಟಕದಲ್ಲಿ ಎರಡೆರಡು ಪಡಿತರ ಚೀಟಿಯನ್ನ ಹೊಂದಿರುವವರ ಬಿಪಿಎಲ್ ರೇಷನ್ ಕಾರ್ಡುಗಳನ್ನ ರದ್ದು ಮಾಡಲು ಈಗ ಆದೇಶವನ್ನು ಹೊರಡಿಸಲಾಗಿದೆ.

ಇನ್ನು ಯಾವ ಕುಟುಂಬದವರು ಬಿಪಿಎಲ್ ರೇಷನ್ ಕಾರ್ಡುಗಳನ್ನ ಹೊಂದಿದ್ದು ಕಳೆದ ಆರು ತಿಂಗಳಿಂದ ಒಮ್ಮೆಯೂ ಕೂಡ ಪಡಿತರ ಧಾನ್ಯವನ್ನ ಪಡೆಯde ಇದ್ದರೆ ಅಂತಹವರ ಬಿಪಿಎಲ್ ರೇಷನ್ ಕಾರ್ಡುಗಳನ್ನ ರದ್ದು ಮಾಡಲಾಗುತ್ತದೆ. ಅಷ್ಟೇ ಮಾತ್ರವಲ್ಲದೆ ಎಳೂವರೆ ಎಕರೆಗಿಂತ ಹೆಚ್ಚಿನ ಕೃಷಿ ಭೂಮಿಯನ್ನ ಹೊಂದಿರುವವರ ಬಿಪಿಎಲ್ ರೇಷನ್ ಕಾರ್ಡುಗಳನ್ನು ಕೂಡ ರದ್ದು ಮಾಡಲಾಗುತ್ತದೆ.

ಮುಖ್ಯವಾಗಿ ವಾರ್ಷಿಕವಾಗಿ ಒಂದು ಲಕ್ಷದ ಇಪ್ಪತ್ತು ಸಾವಿರಕ್ಕಿಂತ ಅಧಿಕ ಆದಾಯವನ್ನು ಹೊಂದಿರುವ ಕುಟುಂಬದವರ ಬಿಪಿಎಲ್ ರೇಷನ್ ಕಾರ್ಡುಗಳನ್ನ ರದ್ದು ಮಾಡಲು ಈಗ ಆದೇಶವನ್ನು ಹೊರಡಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಈಗಾಗಲೇ ಸುಮಾರು 13 ಲಕ್ಷ ಬಿಪಿಎಲ್ ರೇಷನ್ ಕಾರ್ಡುಗಳನ್ನ ರದ್ದು ಮಾಡಿದೆ.

WhatsApp Group Join Now

Spread the love

Leave a Reply