BPL Ration Card : ಪಾನ್ ಕಾರ್ಡ್ – ಆಧಾರ್ ಕಾರ್ಡ್ ಜೋಡಣೆ ಮಾಡಿದ ಬಡವರ ಬಿಪಿಎಲ್ ಕಾರ್ಡ್ ರದ್ದು.?ಗ್ಯಾರಂಟಿ ಸೌಲಭ್ಯವೂ ಕಡಿತ.!

BPL Ration Card : ನಮಸ್ಕಾರ ಸ್ನೇಹಿತರೇ, ಪಾನ್ ಕಾರ್ಡ್ ನೊಂದಿಗೆ ಆಧಾರ್ ಜೋಡಣೆಗೆ ನೀಡಿದ್ದ ಗಡುವು ಮೀರಿ ವಿಳಂಬದ ಕಾರಣಕ್ಕೆ ದಂಡದೊಂದಿಗೆ ಆಧಾರ್ ಕಾರ್ಡ್ -ಪಾನ್ ಕಾರ್ಡ್ ಲಿಂಕ್ ಮಾಡಿದ ಬಡವರಿಗೆ ಸಂಕಷ್ಟ ಎದುರಾಗಿದೆ. ನಿಗದಿತ ಅವಧಿ ಮೀರಿದ ನಂತರ ಒಂದು ಸಾವಿರ ರೂಪಾಯಿ ದಂಡದ ಮೊತ್ತ ಆದಾಯ ತೆರಿಗೆ ಇಲಾಖೆಗೆ ಪಾವತಿಸಿ ಪಾನ್ – ಆಧಾರ್ ಕಾರ್ಡ್ ಜೋಡಣೆ ಮಾಡಿದವರನ್ನು ಆದಾಯ ತೆರಿಗೆ ಪಾವತಿದಾರರು ಎನ್ನುವ ಪಟ್ಟಿಗೆ ಸೇರ್ಪಡೆ ಮಾಡಲಾಗಿದ್ದು, ಇದನ್ನೇ ಆಧಾರವಾಗಿಟ್ಟುಕೊಂಡ ಆಹಾರ ಇಲಾಖೆ ಬಿಪಿಎಲ್ ಕಾರ್ಡ್ (BPL Ration Card) ರದ್ದು ಮಾಡಲು ಮುಂದಾಗಿದೆ.

ಇದನ್ನೂ ಕೂಡ ಓದಿ : Atal Pension Yojana : ಈ ಯೋಜನೆಯಡಿ ಪ್ರತಿ ತಿಂಗಳಿಗೆ ₹5,000/- ಪಿಂಚಣಿ ಪಡೆಯಲು ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.?

WhatsApp Group Join Now

ಆಹಾರ ಇಲಾಖೆ ರಾಜ್ಯದಲ್ಲಿ 1,06,152 ಆದಾಯ ತೆರಿಗೆ ಪಾವತಿದಾರರು ಹೊಂದಿದ ಅನರ್ಹ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಗಳನ್ನು ರದ್ದು ಪಡಿಸಲು ಮುಂದಾಗಿದೆ. ಆದರೆ, ಇದರಲ್ಲಿ ಅರ್ಧಕ್ಕೂ ಅಧಿಕ ಮಂದಿ ಬಡವರು ಇದ್ದಾರೆ ಎನ್ನಲಾಗಿದೆ. ಬಿಪಿಎಲ್ ಕಾರ್ಡ್ ನಿಂದ ವಂಚಿತರಾದ ಬಡವರಿಗೆ ಆದಾಯ ತೆರಿಗೆ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ(NOC) ತರುವಂತೆ ಆಹಾರ ಇಲಾಖೆ ಅಧಿಕಾರಿಗಳು ಸೂಚಿಸುತ್ತಿದ್ದು, ಹೀಗಾಗಿ ಬಡವರು ಐಟಿ ಕಚೇರಿಗೆ ಅರ್ಜಿ ಸಲ್ಲಿಸಿ ಎನ್‌ಒಸಿ ಕೊಡುವಂತೆ ಮನವಿ ಮಾಡುತ್ತಿದ್ದಾರೆ.

ಇದನ್ನೂ ಕೂಡ ಓದಿ : Gruhalakshmi Scheme Updates : ‘ಕೈ’ ಕೊಟ್ಟ ಗೃಹಲಕ್ಷ್ಮಿ ಯೋಜನೆ ಹಣ.! ಕಾದು ಕುಳಿತ ಫಲಾನುಭವಿಗಳು ಕಂಗಾಲು – ಮುಂದೇನು.?

WhatsApp Group Join Now

ಬಿಪಿಎಲ್ ಕಾರ್ಡ್ (BPL Ration Card) ಗಳು ರದ್ದಾಗಿರುವುದರಿಂದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಸಾಧ್ಯವಾಗುತ್ತಿಲ್ಲ. ಪಡಿತರ ಕೂಡ ಸಿಗುತ್ತಿಲ್ಲ. ಗೃಹಲಕ್ಷ್ಮಿ ಹಣ ನಿಂತುಹೋಗಿದೆ. ಅನ್ನಭಾಗ್ಯದ ಅಕ್ಕಿ, ಹೆಚ್ಚುವರಿ ಅಕ್ಕಿ ಹಣ ಕೂಡ ಸಿಗುತ್ತಿಲ್ಲ. ಮನೆ ನಿರ್ಮಾಣಕ್ಕೆ ಸಾಲ ಪಡೆಯಲು ಸಾಧ್ಯವಾಗುತ್ತಿಲ್ಲ. ಹೀಗೆ 1 ಸಾವಿರ ರೂ. ದಂಡ ಪಾವತಿಸಿ ಆಧಾರ್ -ಪಾನ್ ಕಾರ್ಡ್ ಜೋಡಣೆ ಮಾಡಿದ ಬಡವರು ಗ್ಯಾರಂಟಿ ಸೇರಿ ಹಲವು ಸೌಲಭ್ಯಗಳನ್ನು ಕಳೆದುಕೊಳ್ಳುವಂತಾಗಿದೆ ಎಂದು ಹೇಳಲಾಗಿದೆ.

Leave a Reply