ಸರ್ಕಾರಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಕೆ: ರೂಪೇಶ್ ರಾಜಣ್ಣ ಕೆಂಡಾಮಂಡಲ, ಉಗ್ರ ಹೋರಾಟದ ಎಚ್ಚರಿಕೆ!
ಆರೋಗ್ಯ ಇಲಾಖೆಯ ಅಧಿಕೃತ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಕನ್ನಡದ ಜೊತೆಗೆ ಉರ್ದು ಭಾಷೆಯನ್ನು ಬಳಸಿರುವುದು ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಸರ್ಕಾರದ ಈ ನಡೆಗೆ ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಹಾಗೂ ವಿವಿಧ ಕನ್ನಡ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಇತ್ತೀಚೆಗೆ ಆಯೋಜಿಸಿದ್ದ ಅಧಿಕೃತ ಕಾರ್ಯಕ್ರಮವೊಂದರ ಆಹ್ವಾನ ಪತ್ರಿಕೆಯಲ್ಲಿ ಕನ್ನಡ, ಇಂಗ್ಲಿಷ್ ಹಾಗೂ ಹಿಂದಿಯೊಂದಿಗೆ ಉರ್ದು ಭಾಷೆಯನ್ನೂ ಬಳಸಿರುವುದು ಈಗ ರಾಜ್ಯಾದ್ಯಂತ ಭಾರಿ ಚರ್ಚೆ ಮತ್ತು ವಿವಾದಕ್ಕೆ ಈಡುಮಾಡಿದೆ. … Read more