ಬೆಂಗಳೂರು ಮಕ್ಕಳ ಪಾಲಿನ ರಾಕ್ಷಸ ರಂಜನ್ ಲಾಕ್; ಗುದ್ದೋದು, ಒದೆಯೋದರ ಹಿಂದಿನ ಸತ್ಯ ಕಕ್ಕಿದ ಜಿಮ್ ಟ್ರೇನರ್!
ರಾಜ್ಯ ರಾಜಧಾನಿ ಬೆಂಗಳೂರು ನಗರದ ಪ್ರತಿಷ್ಠಿತ ಬಡಾವಣೆ ಬನಶಂಕರಿಯ ಪಕ್ಕದಲ್ಲಿರುವ ತ್ಯಾಗರಾಜನಗರದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಈ ಬಡಾವಣೆಯ ರಸ್ತೆಯಲ್ಲಿ ಆಟವಾಡುತ್ತಿದ್ದ ಪುಟ್ಟ ಮಕ್ಕಳನ್ನು ಕಂಡರೆ ಫುಟ್‌ಬಾಲ್‌ನಂತೆ ಸಾಯುವಂತೆ ಒದೆಯೋದು, ಗುದ್ದೋದು, ಬೈಕ್ ಹತ್ತಿಸೋದು, ತಲೆ ಚಚ್ಚುವುದನ್ನು ಮಾಡುತ್ತಿದ್ದ ರಾಕ್ಷಸ ಪ್ರವೃತ್ತಿಯ ಜಿಮ್ ಟ್ರೈನರ್ ರಂಜನ್ ಆಟ ಇದೀಗ ಪೊಲೀಸರ ಮುಂದೆ ಬಟಾಬಯಲಾಗಿದೆ. ಘಟನೆಯ ವಿವರ ಆರೋಪಿ ರಂಜನ್ (35) ವೃತ್ತಿಯಲ್ಲಿ ಜಿಮ್ ಟ್ರೈನರ್ ಆಗಿದ್ದು, ಕಳೆದ ಕೆಲವು ದಿನಗಳಿಂದ ಜಿಮ್‌ಗೆ ಹೋಗುವುದನ್ನು ಬಿಟ್ಟು ಮನೆಯಲ್ಲೇ ಉಳಿದಿದ್ದನು. … Read more