ಮಗನ ಜೊತೆಗೆ ಜಗಳವಾಡ್ತಿದ್ದ ಯುವಕರ ಗುಂಪು, ಬಿಡಿಸಲು ಹೋದ ತಂದೆಯನ್ನೇ ಕೊಲೆಗೈದ ಗ್ಯಾಂಗ್!

ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಕಾರಿಗನೂರು ಪ್ರದೇಶದಲ್ಲಿ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಯುವಕರ ಜಗಳವು ಹೃದಯವಿದ್ರಾವಕ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ. ಮಗನೊಂದಿಗೆ ಜಗಳವಾಡುತ್ತಿದ್ದ ಯುವಕರ ಗುಂಪನ್ನು ಬಿಡಿಸಲು ಹೋಗಿದ್ದ ತಂದೆಯೇ ಯುವಕರ ಹಲ್ಲೆಗೆ ಬಲಿಯಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಗ್ರಾಮೀಣ ಠಾಣೆ ಪೊಲೀಸರು ಆರೋಪಿಗಳಾದ ಭಂಗಿ ಹನುಮಂತ, ಚರಣ, ಹುಲಿಗೆಮ್ಮ ಎಂಬ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ರಾಘವೇಂದ್ರ, ದರ್ಶನ, ಚಂದ್ರ, ಗುರಯ್ಯ ಎಂಬ ಆರೋಪಿಗಳಿಗಾಗಿ ಶೋಧ ನಡೆಸಿದ್ದಾರೆ. ಕಾರಿಗನೂರು ಪ್ರದೇಶದಲ್ಲಿ ಪೊಲೀಸರು ಮೊಕ್ಕಾಂ ಹೂಡಿದ್ದಾರೆ. … Read more

ಒತ್ತುವರಿ ಸಾಬೀತುಪಡಿಸಿದರೆ ವಾಪಸ್‌ : ಕಂದಾಯ ಸಚಿವ ಕೃಷ್ಣಬೈರೇಗೌಡ ಸವಾಲು

ನನ್ನ ವಿರುದ್ದದ ಭೂ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ತನಿಖೆಗೂ ಸಿದ್ಧ. ಯಾವ ರೀತಿಯ ತನಿಖೆ ಆಗಬೇಕು ಎಂಬುದನ್ನು ವಿರೋಧ ಪಕ್ಷದ ನಾಯಕರು ಮತ್ತು ಸಭಾನಾಯಕರು ಸೇರಿ ತೀರ್ಮಾನಿಸಲಿ. ನಾನು ತಯಾರಿದ್ದೇನೆ’ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಹೇಳಿದರು. ಕೋಲಾರ ತಾಲ್ಲೂಕು ಗರುಡುಪಾಳ್ಯ ಗ್ರಾಮದಲ್ಲಿ ಸರ್ಕಾರಿ ಭೂಮಿ ಒತ್ತುವರಿ ಆಗಿದೆ ಎಂಬ ವಿರೋಧ ಪಕ್ಷಗಳ ಆರೋಪಕ್ಕೆ ವಿಧಾನಸಭೆಯಲ್ಲಿ ಶುಕ್ರವಾರ ಅವರು ಸ್ವಯಂಪ್ರೇರಿತ ಹೇಳಿಕೆ ನೀಡಿದರು. ‘ಒಂದು ವೇಳೆ ಒತ್ತುವರಿ ಆಗಿದೆ ಎಂಬುದು ಸಾಬೀತಾದರೆ ಆ ಭೂಮಿ … Read more

ಅಮಿತ್ ಶಾ ವಿರುದ್ಧ ನಾಲಿಗೆ ಹರಿಬಿಟ್ಟ ಪ್ರಿಯಾಂಕ್ ಖರ್ಗೆ, ಮೇಲ್ಮನೆಯಲ್ಲಿ ಕೋಲಾಹಲ! ಅಷ್ಟಕ್ಕೂ ಖರ್ಗೆ ಪುತ್ರ ಹೇಳಿದ್ದೇನು?

ಚಳಿಗಾಲದ ಅಧಿವೇಶನದಲ್ಲಿ ‘ದ್ವೇಷ ಭಾಷಣ ತಡೆ ವಿಧೇಯಕ’ ಗದ್ದಲ ಕೋಲಾಹಲಕ್ಕೆ ಕಾರಣವಾಗಿದೆ. ಪರಿಷತ್ನಲ್ಲಿ ಇಂದು ವಿಪಕ್ಷಗಳ ವಿರೋಧದ ನಡುವೆಯೂ ರಾಜ್ಯ ಸರ್ಕಾರ ದ್ವೇಷ ಭಾಷಣ ತಡೆ ವಿಧೇಯಕ ಮಂಡಿಸಿದೆ. ಈ ವೇಳೆ ಕಾಂಗ್ರೆಸ್ ನಾಯಕರು ಕೇಂದ್ರ ಸಚಿವ ಗೃಹ ಸಚಿವ ಅಮಿತ್ ಶಾ ಹೆಸರು ಪ್ರಸ್ತಾಪಿಸಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಕೇಂದ್ರ ಗೃಹ ಸಚಿವ ಅಮಿತ್ ಶಾ ಬಗ್ಗೆ ನಾಲಿಗೆ ಹರಿಬಿಟ್ಟಿದ್ದು, ಅಮಿತಾ ಶಾರನ್ನ ನಾಲಾಯಕ್ ಎಂದು ಕರೆದಿದ್ದಾರೆ. ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಯಿಂದ … Read more

ತಂದೆಗೆ ದೈಹಿಕ, ಮಾನಸಿಕ ಹಿಂಸೆ ನೀಡುವಂತಿಲ್ಲ : ಚೈತ್ರಾ ಕುಂದಾಪುರಗೆ ಕೋರ್ಟ್‌ ನಿರ್ದೇಶನ

ಚೈತ್ರಾ ಕುಂದಾಪುರ ಅವರ ತಂದೆಗೆ ಯಾವುದೇ ರೀತಿ ದೈಹಿಕ, ಮಾನಸಿಕ ಹಿಂಸೆ ನೀಡುವಂತಿಲ್ಲ. ಅವರ ಮನೆಯಲ್ಲಿ ನಿರ್ಭೀತಿಯಿಂದ ಇರಲು ಅವಕಾಶ ಮಾಡಿಕೊಡಬೇಕೆಂದು ಉಪವಿಭಾಗಾಧಿಕಾರಿಗಳ ನ್ಯಾಯಾಲಯ ಆದೇಶ ಮಾಡಿದೆ. ಬಾಲಕೃಷ್ಣ ಅವರು ಪುತ್ರಿ ಚೈತ್ರಾ ಕುಂದಾಪುರ ಅವರಿಂದ ಅನ್ಯಾಯ ಆಗುತ್ತಿದೆ. ನನ್ನ ಮನೆಯಲ್ಲಿ ವಾಸಿಸಲು ಅವಕಾಶ ನೀಡಬೇಕೆಂದು ಕೋರಿ ಹಿರಿಯ ನಾಗರಿಕರ ಪಾಲನೆ ಹಾಗೂ ಕಲ್ಯಾಣ ಕಾಯ್ದೆ ಅನ್ವಯ ಪರಿಹಾರ ಕೋರಿ ನ್ಯಾಯಮಂಡಳಿಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಸಂಬಂಧದ ಕೋರ್ಟ್‌ ತೀರ್ಪು ನೀಡಿದೆ. ತಂದೆಗೆ ಮಗಳು ಯಾವುದೇ ರೀತಿ … Read more

ಬೆಂಗಳೂರಲ್ಲಿ ಪ್ರೀತ್ಸೆ ಅಂತ 19ರ ಹುಡ್ಗಿ ಹಿಂದೆ ಬಿದ್ದ 40ರ ಅಂಕಲ್‌ ನ ಭೀಕರ ಹತ್ಯೆ.!

ಲವ್ ಮಾಡು ಎಂದು ಯುವತಿಯ ಬೆನ್ನು ಹತ್ತಿದ್ದ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. 19 ವರ್ಷದ ಯುವತಿಯ ಹಿಂದೆ 40 ವರ್ಷದ ವ್ಯಕ್ತಿ ಲವ್ ಮಾಡು ಎಂದು ದುಂಬಾಲು ಬಿದಿದ್ದಾನೆ. ನನ್ನನ್ನು ಪ್ರೀತಿ ಮಾಡು ಎಂದು ಬೆನ್ನು ಬಿದ್ದಿದ್ದ. ಇದನ್ನ ಸಹಿಸದ ಯುವತಿಯ ತಂದೆ ಹಾಗೂ ಸೋದರ ಮಾವ 40 ವರ್ಷದ ಚೆಲುವ ಎನ್ನುವ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ. ಮಾಗಡಿ ತಾಲೂಕಿನ ಗಟ್ಟಿಪುರ ಗ್ರಾಮದ ಬಳಿ ವ್ಯಕ್ತಿಯ ಕೊಲೆ ಮಾಡಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ … Read more

‘ನಿಮ್ಮ ಮನದ ಇಷ್ಟ ಇನ್ನೊಂದು ತಿಂಗಳಲ್ಲಿ ಈಡೇರುತ್ತೆ’ – ಡಿಕೆಶಿಗೆ ಹೂವಿನ ವರ ಕೊಟ್ಟ ಅಂಕೋಲಾ ‘ಜಗದೀಶ್ವರಿ’!

ಸಿಎಂ ಹುದ್ದೆಯ ನಿರೀಕ್ಷೆಯಲ್ಲಿರುವ ಕರ್ನಾಟಕದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉತ್ತರ ಕರ್ನಾಟಕದ ಅಂಕೋಲಾದ ಆಂದ್ಲೆ ಜಗದೀಶ್ವರಿ ದೇವಸ್ಥಾನಕ್ಕೆ ಡಿ. 19ರಂದು ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಅವರು, ಅಲ್ಲಿನ ದೇವರಿಗೆ ಪೂಜೆ ಸಲ್ಲಿಸಿ ಮನದ ಬೇಡಿಕೆಯನ್ನು ಈಡೇರಿಸುವಂತೆ ಪ್ರಾರ್ಥಿಸಿದಾಗ ದೇವಿಯು ಬಲಬದಿಯಿಂದ ಹೂವಿನ ಪ್ರಸಾದ ಕೊಟ್ಟಿದ್ದು ಇನ್ನೊಂದು ತಿಂಗಳಲ್ಲಿ ಆಸೆ ಈಡೇರುವುದಾಗಿ ಹೇಳಿದ್ದಾರೆ ಎಂದು ಹೇಳಲಾಗಿದೆ. ಇದು ಡಿಕೆಶಿ ಬಣದಲ್ಲಿ ಹೊಸ ಭರವಸೆಯನ್ನು ಮೂಡಿಸಿದೆ. ಅಂಕೋಲದ ಆಂದ್ಲೆ ಪರಮೇಶ್ವರಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಡಿಸಿಎಂ … Read more

ಡಿಕೆ ಶಿವಕುಮಾರ್ ಟೆಂಪಲ್ ರನ್ ನಲ್ಲಿರುವಾಗ ಸದನದಲ್ಲಿ ಸಿಎಂ ಹುದ್ದೆ ಬಗ್ಗೆ ಸಿದ್ದರಾಮಯ್ಯ ಶಾಕಿಂಗ್ ಘೋಷಣೆ

ಒಂದೆಡೆ ಡಿಕೆ ಶಿವಕುಮಾರ್ ಟೆಂಪಲ್ ರನ್ ನಡೆಸಿದ್ದರೆ ಇತ್ತ ಸದನದಲ್ಲಿ ಸಿಎಂ ಸಿದ್ದರಾಮಯ್ಯ ಸಿಎಂ ಬದಲಾವಣೆ ಬಗ್ಗೆ ಶಾಕಿಂಗ್ ಘೋಷಣೆಯೊಂದನ್ನು ಮಾಡಿದ್ದಾರೆ. ರಾಜ್ಯದಲ್ಲಿ ಸಿಎಂ ಕುರ್ಚಿ ಕಾಳಗ ತಾರಕಕ್ಕೇರಿರುವಾಗಲೇ ಇತ್ತ ಸಿದ್ದರಾಮಯ್ಯ ಇಂದು ಸದನದಲ್ಲೇ ಐದು ವರ್ಷವೂ ನಾನೇ ಸಿಎಂ ಎಂದು ಘೋಷಣೆ ಮಾಡಿದ್ದಾರೆ. ವಿಪಕ್ಷ ಶಾಸಕ ಸುನಿಲ್ ಕುಮಾರ್ ನೀವೇ ಇರುತ್ತೀರಾ ಇಲ್ವಾ ಎಂದು ಸ್ಪಷ್ಟನೆ ಕೇಳಿದಾಗ ಕೆರಳಿದ ಸಿದ್ದರಾಮಯ್ಯ ಐದೂ ವರ್ಷವೂ ನಾನೇ ಸಿಎಂ ಎಂದಿದ್ದಾರೆ. ಮೊನ್ನೆಯವರೆಗೂ ಹೈಕಮಾಂಡ್ ಹೇಳುವವರೆಗೂ ನಾನೇ ಸಿಎಂ ಎನ್ನುತ್ತಿದ್ದ … Read more

ದಾನ ಪಡೆದ ರಕ್ತದಿಂದ 5 ಮಕ್ಕಳಿಗೆ ಹೆಚ್‌ಐವಿ ಸೋಂಕು – ಮೂವರು ಆರೋಗ್ಯ ಸಿಬ್ಬಂದಿ ಅಮಾನತು

ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ (Satna Hospital) ಚಿಕಿತ್ಸೆ ವೇಳೆ ರಕ್ತದಾನ ಪಡೆದ 6 ಮಕ್ಕಳಿಗೆ ಹೆಚ್‌ಐವಿ ಸೋಂಕು ತಗುಲಿದ ಗಂಭೀರ ಪ್ರಕರಣ ಬೆಳಕಿಗೆ ಬಂದಿದ್ದು, ವೈದ್ಯರ ನಿರ್ಲಕ್ಷ್ಯದ ಬಗ್ಗೆ ಭಾರೀ ಕಳವಳ ವ್ಯಕ್ತವಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ ಮೂವರು ಆರೋಗ್ಯ ಸಿಬ್ಬಂದಿಯನ್ನ ಅಮಾನತುಗೊಳಿದ್ದು, ತನಿಖೆಗೂ ಆದೇಶಿಸಿದೆ. ಥಲಸ್ಸೆಮಿಯಾದಿಂದ (Thalassemia) ಬಳಲುತ್ತಿದ್ದ 15 ವರ್ಷದೊಳಗಿನ 6 ಮಕ್ಕಳಿಗೆ ರಕ್ತ ಕೊಡುವಾಗ ವೈದ್ಯರು ಯಡವಟ್ಟು ಮಾಡಿದ್ದಾರೆ. ಬಾಧಿತ ಮಕ್ಕಳಿಗಾಗಿ 3 ಬ್ಯಾಂಕ್‌ಗಳಿಂದ (Blood Bank) 189 … Read more

ಚಪ್ಪಲಿ ಆಚೆ ಬಿಟ್ಟು ಬನ್ನಿ ಎಂದಿದ್ದಕ್ಕೆ ವೈದ್ಯನ ಮೇಲೆ ಹಲ್ಲೆ – ವಿಡಿಯೋ ವೈರಲ್‌

ಮೈಸೂರು : ಚಪ್ಪಲಿ ಹೊರಗೆ ಬಿಟ್ಟು ಬನ್ನಿ ಎಂದು ವೈದ್ಯ ಹೇಳಿದ್ದಕ್ಕೆ ಮಗುವನ್ನು ಕರೆದುಕೊಂಡು ಬಂದಿದ್ದ ಕುಟುಂಬವೊಂದು ಅಮಾನುಷವಾಗಿ ಹಲ್ಲೆ ನಡೆಸಿದ ಘಟನೆ (Crime) ಮೈಸೂರಿನ ಉದಯರಿಗಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಡಾ. ಅನೂಪ್‌ ಹಲ್ಲೆಗೊಳಗಾದ ವೈದ್ಯರಾಗಿದ್ದು, ರುಬಿಯಾಷ್‌ ಷರೀಫ್‌ ಎಂಬಾತ ಹಾಗೂ ಆತನ ತಂದೆ ವೈದ್ಯರ ಮೇಲೆ ಹಲ್ಲೆ ನಡೆಸಿದ ಆರೋಪಿಗಳಾಗಿದ್ದಾರೆ. ರುಬಿಯಾಜ್‌ ಷರೀಫ್‌ ನ ಮೂರು ವರ್ಷದ ಮಗು ಆಸ್ಪತ್ರೆಗೆ ದಾಖಲಾಗಿತ್ತು. ಈ ವೇಳೆ ಮಗುವನ್ನು ನೋಡಲು ರುಬಿಯಾಜ್‌ ಷರೀಫ್‌ ಚಪ್ಪಲಿ ಧರಿಸಿಯೇ … Read more

ಬಾಂಗ್ಲಾದೇಶದಲ್ಲಿ ಹಿಂದೂ ಯುವಕನನ್ನು ಥಳಿಸಿ ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಬಾಂಗ್ಲಾದೇಶದ ಮೈಮೆನ್ ಸಿಂಗ್ ನ ಭಲುಕಾದಲ್ಲಿ ಹಿಂದೂ ವ್ಯಕ್ತಿಯೊಬ್ಬನನ್ನು ಥಳಿಸಿ ಕೊಂದಿರುವ ಘಟನೆ ಬಾಂಗ್ಲಾದೇಶದ ಮೈಮೆನ್ ಸಿಂಗ್ ನ ಭಲುಕಾದಲ್ಲಿ ನಡೆದಿದೆ. ಭಾಲುಕಾ ಉಪಜಿಲ್ಲೆಯ ಸ್ಕ್ವೇರ್ ಮಾಸ್ಟರ್ ಬಾರಿ ದುಬಾಲಿಯಾ ಪಾರಾ ಪ್ರದೇಶದಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ ಆತನನ್ನು ಹೊಡೆದ ನಂತರ, ದಾಳಿಕೋರರು ಯುವಕನ ದೇಹವನ್ನು ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದರು ಎಂದು ಭಾಲುಕಾ ಪೊಲೀಸ್ ಠಾಣೆಯ ಕರ್ತವ್ಯ ಅಧಿಕಾರಿ ರಿಪ್ಪನ್ ಮಿಯಾ ಬಿಬಿಸಿ ಬಾಂಗ್ಲಾಗೆ ತಿಳಿಸಿದ್ದಾರೆ. ಮೃತರನ್ನು ದೀಪು … Read more