ಅಮ್ಮ ಸತ್ತ ಮಗುವಿಗೆ ಆಸರೆಯಾಗದೇ, 3ನೇ ಮಹಡಿಯಿಂದ ತಳ್ಳಿದ ಮಲತಾಯಿ.! ಸಿಸಿಟಿವಿಯಿಂದ ಸಾವಿನ ರಹಸ್ಯ ಬಯಲು.!

ತಾಯಿಯ ಪ್ರೀತಿಯಿಂದ ವಂಚಿತಳಾದ ಪುಟ್ಟ ಬಾಲಕಿ, ತನ್ನ ಮಲತಾಯಿಯ ಕ್ರೂರ ಕೃತ್ಯಕ್ಕೆ ಬಲಿಯಾದ ದುರಂತ ಘಟನೆಯೊಂದು ಬೆಳಕಿಗೆ ಬಂದಿದೆ. ಕೇವಲ ಒಂದು ವಾರದಲ್ಲಿ ಸಿಸಿಟಿವಿ ದೃಶ್ಯಾವಳಿಯಿಂದ ಈ ಘೋರ ಅಪರಾಧದ ಸತ್ಯ ಬಯಲಾಗಿದೆ. ಪ್ರಕರಣದಲ್ಲಿ ಮಲತಾಯಿಯೇ ತನ್ನ 5 ವರ್ಷದ ಮಲಗಳನ್ನು ಮನೆಯ ಮೂರನೇ ಮಹಡಿಯಿಂದ ತಳ್ಳಿ ಕೊಲೆ ಮಾಡಿರುವುದು ದೃಢಪಟ್ಟಿದೆ. ಮೃತ ಬಾಲಕಿ ಶಾನವಿ, ಕೇವಲ ಒಂದು ವರ್ಷದವಳಿದ್ದಾಗ ತನ್ನ ತಾಯಿಯನ್ನು ಕಳೆದುಕೊಂಡಿದ್ದಳು. ಆಕೆಯ ತಂದೆ, ಅಜ್ಜ ಮತ್ತು ಅಜ್ಜಿಯ ಪೋಷಣೆಯಲ್ಲಿ ಬೆಳೆಯುತ್ತಿದ್ದಳು. ಎರಡು ವರ್ಷಗಳ … Read more

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಮತ್ತೆರಡು ಜಾಗದಲ್ಲಿ SIT ಗೆ ಮೂಳೆಗಳು ಪತ್ತೆ.!

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸೌಜನ್ಯಾ ಮಾವ ವಿಠಲಗೌಡ ಹೇಳಿದ್ದ ಬಂಗ್ಲಗುಡ್ಡ ಪ್ರದೇಶದಲ್ಲಿ ಎಸ್‌ಐಟಿ(SIT) ನಡೆಸಿದ ಶೋಧ ಕಾರ್ಯಾಚರಣೆ ವೇಳೆ ರಾಶಿ ರಾಶಿ ಮಾನವನ ಮೂಳೆಗಳು ಪತ್ತೆಯಾಗಿದ್ದು, ಇದೀಗ ಮತ್ತಷ್ಟು ಮೂಳೆಗಳು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ನೇತ್ರಾವತಿ ನದಿ ತೀರದ ಬಂಗ್ಲಗುಡ್ಡದ ದಟ್ಟ ಅರಣ್ಯದೊಳಗೆ ಎಸ್ಐಟಿ(SIT) ಅಧಿಕಾರಿಗಳು ಮಹಜರು ನಡೆಸಿದ್ದು, ಬೆಳಿಗ್ಗೆ ನಡೆಸಿದ ಶೋಧದ ವೇಳೆ ಒಂದು ಸ್ಥಳದಲ್ಲಿ ಮಾನವನ ಹಲವು ಮೂಳೆಗಳು ಪತ್ತೆಯಾಗಿತ್ತು. ಇದರ ಬೆನ್ನಲ್ಲೇ ಎಸ್ ಐಟಿ ಅಧಿಕಾರಿಗಳು ಭೋಜನ ವಿರಾಮವನ್ನೂ ಪಡೆಯದೇ … Read more

ಪತಿಯ ಬಂಧನ ಭೀತಿ : ಮಗುವಿಗೆ ನೇಣು ಬಿಗಿದು ತಾಯಿಯೂ ಆತ್ಮಹತ್ಯೆ – ಪೊಲೀಸರ ನೋಟಿಸ್, ಬೆದರಿಕೆಯಿಂದ ನೊಂದ ಮಹಿಳೆ

ಬ್ರಹ್ಮಾವರ: ಪತಿಯ ಬಂಧನ ಭೀತಿಯಿಂದ ಪತ್ನಿಯು ಒಂದೂವರೆ ವರ್ಷದ ಮಗುವನ್ನು ಹತ್ಯೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಮಧ್ಯಾಹ್ನ ಹೆರಂಜೆ ಆರೂರಿನಲ್ಲಿ ಸಂಭವಿಸಿದೆ. ಸುಶ್ಮಿತಾ (23) ಮತ್ತು ಮಗು ಶ್ರೇಷ್ಠಾ(1.6) ಮೃತಪಟ್ಟವರು. ಮನೆಯ ಚಾವಡಿಯಲ್ಲಿ ಮೊದಲು ಮಗುವಿಗೆ ನೇಣು ಬಿಗಿದು ಅನಂತರ ಸಮೀಪದಲ್ಲೇ ತಾನೂ ನೇಣು ಬಿಗಿದುಕೊಂಡಿದ್ದಾರೆ. 16 ವರ್ಷಗಳ ಹಿಂದಿನ ಪ್ರಕರಣ: 16 ವರ್ಷಗಳ ಹಿಂದೆ ಪಕ್ಕದ ಮನೆಯವರೊಂದಿಗೆ ಗಲಾಟೆ ನಡೆದಿದ್ದು, ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ದಿನಗಳ … Read more

ಚಾಮುಂಡಿ ಬೆಟ್ಟ ಹಿಂದೂಗಳದ್ದು, ರಾಜಕೀಯಕ್ಕೆ ಚಾಮುಂಡಿ ತಾಯಿ ಹೆಸರು ಎಳೆದು ತಂದಿದ್ದು ಬೇಸರ ತರಿಸಿದೆ ಎಂದ ರಾಜಮಾತೆ ಪ್ರಮೋದಾದೇವಿ ಒಡೆಯರ್

ಮೈಸೂರು : ಚಾಮುಂಡಿ ಬೆಟ್ಟ ಹಿಂದೂಗಳ ಸ್ವತ್ತಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ಬಗ್ಗೆ ಮೈಸೂರಿನಲ್ಲಿ ರಾಜಮಾತೆ ಪ್ರಮೋದಾದೇವಿ ಒಡೆಯರ್ (Pramoda Devi Wadiyar) ಪ್ರತಿಕ್ರಿಯಿಸಿದ್ದಾರೆ. ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದು. ಚಾಮುಂಡಿ ಹಿಂದು ದೇವರು. ಯದುವಂಶಕ್ಕೆ ಮನೆ ದೇವರು. ಚಾಮುಂಡಿ ದೇವಿ ಯದುವಂಶಕ್ಕೆ ಧಾರ್ಮಿಕ ತಾಯಿ ಇದ್ದಂತೆ ಎಂದು ಸ್ಪಷ್ಟಪಡಿಸಿದ್ದಾರೆ. Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ! ದೇವಸ್ಥಾನದಲ್ಲಿ ಹಿಂದೂ ಧಾರ್ಮಿಕ ವಿಧಿವಿಧಾನದಿಂದ … Read more

ಹಣೆಗೆ ಅರಿಶಿಣ, ಕುಂಕುಮವಿಟ್ಟು, ಹೂ ಮುಡಿದು ದಸರಾ ಉದ್ಘಾಟನೆ ಮಾಡೋದಾದ್ರೆ ಬನ್ನಿ ಎಂದ ಪ್ರತಾಪ್ ಸಿಂಹ

ಹುಬ್ಬಳ್ಳಿ : ಬಾನು ಮುಷ್ತಾಕ್ ಅವರೇ ನಿಮ್ಮನ್ನ ಅಲ್ಲಾನೇ ಮಸೀದಿ ಒಳಗೆ ಬಿಟ್ಟಿಲ್ಲ. ಇನ್ನು ಅರಿಶಿಣ ಕುಂಕುವಿಟ್ಟ ತಾಯಿ ಚಾಮುಂಡೇಶ್ವರಿ ನಿಮ್ಮನ್ನು ಕರೆಸಿಕೊಳ್ತಾಳಾ? ಎಂದು ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಟಾಂಗ್ ಕೊಟ್ಟಿದ್ದಾರೆ. ಹುಬ್ಬಳ್ಳಿಯ (Hubballi) ಈದ್ಗಾ ಮೈದಾನದಲ್ಲಿ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ರಿಗೆ (Banu Mushtaq) ಆಹ್ವಾನ ನೀಡಲಾಗಿದೆ. ಅವರ ಮೇಲೆ ನಮಗೆಲ್ಲ ಗೌರವ ಇದೆ. ಆದರೆ ಹಿಂದೂ ಧಾರ್ಮಿಕ ಶ್ರೇಷ್ಠ ಭಾವನೆಯ ಮುಕುಟವಾಗಿರುವ ದಸರಾ … Read more

ಇಂದೇ ಲೋಕಸಭೆ ಚುನಾವಣೆ ನಡೆದರೆ ಎನ್‌ಡಿಎ‌ 324 ಸ್ಥಾನ ಗೆಲ್ಲುವ ಸಾಧ್ಯತೆ – ಇಂಡಿಯಾ ಮೈತ್ರಿಕೂಟಕ್ಕೆ ಆಘಾತ!

ಮೂರು ಪ್ರಮುಖ ವಿಧಾನಸಭಾ ಚುನಾವಣೆಗಳಲ್ಲಿ ಸತತ ಜಯಗಳಿಸಿದ ನಂತರ ಬಿಜೆಪಿ ಚೇತರಿಸಿಕೊಂಡಿದೆ. ಇಂದು ಲೋಕಸಭಾ ಚುನಾವಣೆ ನಡೆದರೆ ಎನ್‌ಡಿಎ (NDA) ಪ್ರಬಲ ಪ್ರದರ್ಶನ ನೀಡುವ ಮೂಲಕ 324 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಇಂಡಿಯಾ ಟುಡೇ-ಸಿ ವೋಟರ್, ಮೂಡ್ ಆಫ್ ದಿ ನೇಷನ್ ಸಮೀಕ್ಷೆ ತಿಳಿಸಿದೆ. ಮತ್ತೊಂದೆಡೆ 2024 ರಲ್ಲಿ 234 ಸ್ಥಾನಗಳನ್ನು ಗೆದ್ದು ಎನ್‌ಡಿಎಗೆ ಆಘಾತ ನೀಡಿದ್ದ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಮೈತ್ರಿಕೂಟ ಇಂದು ಚುನಾವಣೆ ನಡೆದರೆ 208 ಸ್ಥಾನಗಳಿಗೆ ಇಳಿಯುವ ನಿರೀಕ್ಷೆಯಿದೆ ಎಂದು … Read more

ಯಾದಗಿರಿ ಹಾಸ್ಟೆಲ್‌ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಹೈಸ್ಕೂಲ್ ವಿದ್ಯಾರ್ಥಿನಿ : ಗರ್ಭಿಣಿಯಾಗಿದ್ದೇ ಗೊತ್ತಿಲ್ಲ ಎಂದ ವಾರ್ಡನ್

ಯಾದಗಿರಿ: ಜಿಲ್ಲೆಯ ಶಹಪುರ ಪಟ್ಟಣದ ವಸತಿ ನಿಲಯವೊಂದರ ವಿದ್ಯಾರ್ಥಿನಿಗೆ ಶೌಚಾಲಯದಲ್ಲಿಯೇ ಹೆರಿಗೆಯಾದ ಘಟನೆ ನಡೆದಿದೆ.ಶಹಪುರದಲ್ಲಿರುವ ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಬುಧವಾರ ಶೌಚಕ್ಕೆ ಹೋದಾಗ 2:30ಕ್ಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಲ್ಲದೆ, ಇದು ಶಿಕ್ಷಣ ಇಲಾಖೆ ಸೇರಿದಂತೆ ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ. ಜೊತಗೆ ವಸತಿ ನಿಲಯದಲ್ಲಿರುವ ಇನ್ನಷ್ಟು ವಿದ್ಯಾರ್ಥಿನಿಯರ ಪಾಲಕರಲ್ಲಿ ಆತಂಕ ಹೆಚ್ಚಿಸಿದೆ. ತಾಯಿ-ಮಗು ಆರೋಗ್ಯವಾಗಿದೆ ವಿದ್ಯಾರ್ಥಿನಿಗೆ ಹೆರಿಗೆಯಾದ ಸುದ್ದಿ ತಿಳಿದು ತಕ್ಷಣವೇ ನಗರದ ಸರಕಾರಿ … Read more

ಬೆಳ್ಳಂಬೆಳಗ್ಗೆ 5 ಗಂಟೆಗೆ ಆಗಮಿಸಿ ಎಸ್‌ಐಟಿ ಅಧಿಕಾರಿಗಳಿಗೆ ಶಾಕ್‌ ಕೊಟ್ಟ ಸುಜಾತ ಭಟ್‌! ಅನನ್ಯಾ ಭಟ್‌ ನಾಪತ್ತೆ ಪ್ರಕರಣ!

ಮಂಗಳೂರು : ಅನನ್ಯಾ ಭಟ್‌ ನಾಪತ್ತೆ ಪ್ರಕರಣದ (Ananya Bhat Missing Case) ಸೃಷ್ಟಿಕರ್ತೆ ಸುಜಾತ ಭಟ್‌ (Sujatha Bhat) ಬೆಳ್ಳಂಬೆಳಗ್ಗೆ ವಿಶೇಷ ತನಿಖಾ ತಂಡದ (SIT) ಕಚೇರಿಗೆ ಆಗಮಿಸಿ ಅಧಿಕಾರಿಗಳಿಗೆ ಶಾಕ್‌ ನೀಡಿದ್ದಾರೆ. ಅನನ್ಯಾ ಭಟ್‌ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಪೊಲೀಸರು ಆ.29 ರಂದು ವಿಚಾರಣೆಗೆ ಹಾಜರಾಗುವಂತೆ ಸುಜಾತ ಭಟ್‌ಗೆ ನೋಟಿಸ್‌ ನೀಡಿದ್ದರು. ಶುಕ್ರವಾರ ವಿಚಾರಣೆ ನಿಗದಿಯಾಗಿದ್ದರೂ ಇಂದು ಬೆಳಗ್ಗೆ 5 ಗಂಟೆಗೆ ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಗೆ ಇಬ್ಬರು ವಕೀಲರ ಜೊತೆ ಆಗಮಿಸಿದ್ದಾರೆ. ಸುಜಾತ … Read more

ದಸರಾ ಉದ್ಘಾಟಿಸುವ ಮುನ್ನ ಭಾನು ಮುಷ್ತಾಕ್ ತಾಯಿ ಭುವನೇಶ್ವರಿ, ಚಾಮುಂಡೇಶ್ವರಿ ಬಗೆಗಿನ ಗೌರವ ಸ್ಪಷ್ಟಪಡಿಸಬೇಕು ಎಂದ ಬಿಜೆಪಿ ಸಂಸದ ಯದುವೀರ್‌

ಭಾನು ಮುಷ್ತಾಕ್ (Banu Mushtaq) ಅವರು ದಸರಾ ಉತ್ಸವ ಉದ್ಘಾಟಿಸುವ ಮುನ್ನ ತಾಯಿ ಭುವನೇಶ್ವರಿ ಹಾಗೂ ತಾಯಿ ಚಾಮುಂಡೇಶ್ವರಿ ಬಗೆಗಿನ ಗೌರವ ಸ್ಪಷ್ಟಪಡಿಸಬೇಕು ಎಂದು ಸಂಸದ ಹಾಗೂ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ (Yaduveer Wadiyar) ತಿಳಿಸಿದ್ದಾರೆ. ಇದಕ್ಕೂ ಮುನ್ನ ಕೊಡಗಿನಲ್ಲಿ ಸುದ್ಧಿಗಾರರ ಜೊತೆಗೆ ಮಾತನಾಡಿದ್ದ ಯದುವೀರ್‌, ಭಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಸ್ವಾಗತ ಮಾಡಿದ್ದರು. ಯದುವೀರ್‌ ಎಕ್ಸ್‌ ಪೋಸ್ಟ್‌ನಲ್ಲಿ ಏನಿದೆ?ಭಾನು ಮುಷ್ತಾಕ್ ಅವರು ಕನ್ನಡ ಸಾಹಿತ್ಯ ಲೋಕದ ವಿಶಿಷ್ಟ … Read more

ಪ್ರಿಯತಮೆಯ ಬಾಯಿಗೆ ಜಿಲೆಟಿನ್ ಕಡ್ಡಿ ಇಟ್ಟು ಸ್ಫೋಟಿಸಿ ಹತ್ಯೆ : ಮೊಬೈಲ್‌ ಸ್ಫೋಟಗೊಂಡು ಸತ್ತಿದ್ದಾಳೆ ಎಂದು ಕಥೆ ಕಟ್ಟಿದ್ದ ಪ್ರಿಯಕರ ಅರೆಸ್ಟ್‌

ಮೈಸೂರು: ವ್ಯಕ್ತಿಯೊಬ್ಬ ತನ್ನ ಪ್ರಿಯತಮೆಯ (Lover) ಬಾಯಿಗೆ ಜಿಲೆಟಿನ್ (Gelatin) ಕಡ್ಡಿ ಇಟ್ಟು ಸ್ಫೋಟಿಸಿ ಹತ್ಯೆಗೈದ ಘಟನೆ ಸಾಲಿಗ್ರಾಮ ತಾಲೂಕಿನ ಬೇರ್ಯ ಗ್ರಾಮದಲ್ಲಿ ನಡೆದಿದೆ. ಹುಣಸೂರು (Hunasuru) ತಾಲೂಕಿನ ಗೆರಸನಹಳ್ಳಿ ಗ್ರಾಮದ ರಕ್ಷಿತ (20) ಮೃತ ಮಹಿಳೆ. ಪಿರಿಯಾಪಟ್ಟಣದ ಬಿಳಿಕೆರೆ ಗ್ರಾಮದ ಸಿದ್ದರಾಜು ಕೊಲೆಗೈದ ಆರೋಪಿಯಾಗಿದ್ದಾನೆ. ರಕ್ಷಿತ ಕೇರಳದ ವ್ಯಕ್ತಿಯನ್ನು ಮದುವೆಯಾಗಿದ್ದಳು. ಅಲ್ಲದೇ ಸಿದ್ದರಾಜು ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು ಎಂದು ತಿಳಿದುಬಂದಿದೆ. ಮಹಿಳೆ ಕಪ್ಪಡಿ ಕ್ಷೇತ್ರಕ್ಕೆ ಹೋಗೋಣ ಎಂದು ಕರೆದಿದ್ದಳು. ಬಳಿಕ ಲಾಡ್ಜ್‍ನಲ್ಲಿ ಇಬ್ಬರು ತಂಗಿದ್ದರು. … Read more