ಶರಣ್ ಪಂಪ್‌ವೆಲ್ ಬಂಧನಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ : ಕಾಂಗ್ರೆಸ್ ಸರ್ಕಾರ ಹಿಂದೂ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದೆ – ಬಿಜೆಪಿ
ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ನಾಯಕ ಶರಣ್ ಪಂಪ್‌ವೆಲ್ ಬಂಧನಕ್ಕೆ ಕರ್ನಾಟಕ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದ್ದು, ಹಿಂದೂ ಕಾರ್ಯಕರ್ತರನ್ನು ಬಂಧಿಸುವ ಪ್ರವೃತ್ತಿ ಮುಂದುವರಿದರೆ ಅದರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಬೆನ್ನಲ್ಲೇ ಮಂಗಳೂರಿನಲ್ಲಿ ಬಂದ್‌ಗೆ ಕರೆ ನೀಡಿದ್ದ ಆರೋಪದ ಮೇಲೆ ಶರಣ್ ಪಂಪ್‌ವೆಲ್ ಅವರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದರು. ಶರಣ್ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ವಿಚಾರಣೆ ನಡೆಸಿದ ನ್ಯಾಯಾಧೀಶರು ಶರಣ್ … Read more