ಅಪ್ಪ ಮಗನ ಗಲಾಟೆ ದುರಂತ ಅಂತ್ಯ – ಕೋವಿಯಿಂದ ಗುಂಡು ಹಾರಿಸಿಕೊಂಡು ಮೃತಪಟ್ಟ ಸ್ಥಿತಿಯಲ್ಲಿ ಮಗನ ಶವ ಪತ್ತೆ
ಕೋವಿಯಿಂದ ಗುಂಡು ಹಾರಿಸಿಕೊಂಡು ಮೃತಪಟ್ಟ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆಯಾದ ಘಟನೆ ಕಡಬ ತಾಲೂಕಿನ ರಾಮಕುಂಜ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ರಾಮಕುಂಜದ ವಸಂತ್ ಅಮೀನ್ ಪುತ್ರ ಮೋಕ್ಷ (17) ಗುರುತಿಸಲಾಗಿದೆ. ಬಾಲಕನ ತಂದೆಯೂ ಚೂರಿಯಿಂದ ಇರಿದ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಘಟನೆಯ ಬಗ್ಗೆ ಹಲವು ಅನುಮಾನಗಳು ಮೂಡಿದೆ. ಕೌಟುಂಬಿಕ ಕಲಹದಲ್ಲಿ ಮನೆಯಲ್ಲಿ ಸಂಘರ್ಷ ನಡೆದ ಬಗ್ಗೆ ಅನುಮಾನ ಇದ್ದು, ತಂದೆ ಮತ್ತು ಮಗನ ಮಧ್ಯೆ ಮನೆಯಲ್ಲಿ ಪರಸ್ಪರ ಜಗಳ ನಡೆದಿರುವ ಸಾಧ್ಯತೆ ಇದೆ. ಈ … Read more