ರೈತರು ಎರಡೇಟು ಹೊಡೆದರೂ, ನನ್ನ ಬಟ್ಟೆ ಹರಿದರೂ ಬಿಡದಿ ಟೌನ್‌ಶಿಪ್‌ ಮಾಡಿಯೇ ಸಿದ್ದ : ಡಿ ಕೆ ಶಿವಕುಮಾರ್

ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಮಾಡಿದ್ದ ಯೋಜನೆಯನ್ನೇ ನಾವು ಮುಂದುವರಿಸುತ್ತಿದ್ದೇವೆ. ಅಗತ್ಯವಿಲ್ಲ ಎಂದಾಗಿದ್ದರೆ ಕುಮಾರಸ್ವಾಮಿ ಏಕೆ ಭೂಮಿಯನ್ನು ಡಿನೋಟಿಫೈ ಮಾಡಲಿಲ್ಲ ಎಂದು ಪ್ರಶ್ನಿಸಿದರು. ರೈತರು ಎರಡೇಟು ಹೊಡೆದರೂ, ನನ್ನ ಬಟ್ಟೆ ಹರಿದರೂ ಬಿಡದಿ ಟೌನ್‌ಶಿಪ್‌ ಮಾಡಿಯೇ ಸಿದ್ದ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬಿಡದಿ ಟೌನ್‌ಶಿಪ್‌ಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ವಿರೋಧಕ್ಕೆ ಸಂಬಂಧಪಟ್ಟಂತೆ ನಿನ್ನೆ ಮಾಧ್ಯಮ ಪ್ರತಿನಿಧಿಗಳು ಪ್ರಶ್ನೆ ಕೇಳದಾಗ ಪ್ರತಿಕ್ರಿಯೆ ನೀಡಿದ ಅವರು, ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಮಾಡಿದ್ದ ಯೋಜನೆಯನ್ನೇ ನಾವು ಮುಂದುವರಿಸುತ್ತಿದ್ದೇವೆ. ಅಗತ್ಯವಿಲ್ಲ … Read more

ಸೇತುವೆಯಿಂದ ಟ್ರ್ಯಾಕ್ಟರ್ ಬಿದ್ದು 6 ಮಂದಿ ಸಾವು, ದೇವರ ದರ್ಶನಕ್ಕೆ ಹೊರಟವರು ಮಸಣಕ್ಕೆ, 5ಲಕ್ಷ ರೂ ಪರಿಹಾರ

ವಿಜಯನಗರ: ಹೊಸಪೇಟೆ ಸಮೀಪದ ಟಿಬಿ ಡ್ಯಾಂ ಬಳಿಯ ಮುನಿರಾಬಾದ್‌ ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಕನಿಷ್ಠ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹತ್ತಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಮನಕಲಕುವಂತಿದೆ. ಟ್ರ್ಯಾಕ್ಟರ್‌ನಲ್ಲಿ ಒಟ್ಟು 19 ಮಂದಿ ಪ್ರಯಾಣಿಸುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬಂದ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿಯಾಗಿ ಸೇತುವೆಯಿಂದ ಕೆಳಗೆ ಬಿದ್ದಿದೆ. ಸರ್ಕಾರದಿಂದ ಇದೀಗ ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಮೃತರಲ್ಲಿ … Read more

ಶತಕ ದಾಟಿದ ಪೆಟ್ರೋಲ್ ದರ : ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

ಪಶ್ಚಿಮ ಏಷ್ಯಾ ಸಂಘರ್ಷದಿಂದ ಜಾಗತಿಕವಾಗಿ ಇಂಧನ ಬೆಲೆಗಳು ತೀವ್ರ ಏರುತ್ತಿರುವಂತೆಯೇ, ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ₹3 ಹೆಚ್ಚಿಸಲಾಗಿದೆ. ಪರಿಷ್ಕೃತ ದರಗಳು ಇಂದಿನಿಂದಲೇ ಜಾರಿಯಾಗಿವೆ. ಇಂಧನ ಬೆಲೆ ಏರಿಕೆಯನ್ನು ಖಂಡಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಮೋದಿ ಸರ್ಕಾರ ತನ್ನ ವೈಫಲ್ಯದ ಶಿಕ್ಷೆಯನ್ನು ಸಾಮಾನ್ಯ ಜನರಿಗೆ ನೀಡುತ್ತಿದೆ ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಕಿಡಿ ಕಾರಿದ್ದಾರೆ. ‘ಮೋದಿ ಸರ್ಕಾರ ತನ್ನ ವೈಫಲ್ಯದ ಶಿಕ್ಷೆಯನ್ನು ಸಾಮಾನ್ಯ ಜನರಿಗೆ ನೀಡುತ್ತಿದೆ. ಪೆಟ್ರೋಲ್‌ ಮತ್ತು ಡೀಸೆಲ್‌ ದರದಲ್ಲಿ ಲೀಟರ್‌ಗೆ … Read more

ಮೋದಿಗೆ ಧೈರ್ಯವಿದ್ದರೆ 12 ವರ್ಷ ಸಾಧನೆ ಹೇಳಿಕೊಳ್ಳಲಿ: RSS ನವ್ರು ದೇಶದ್ರೋಹಿಗಳು ಎಂದ ಪ್ರಿಯಾಂಕ್‌ ಖರ್ಗೆ

‘ಪ್ರಧಾನಮಂತ್ರಿ ಮೋದಿ ಅವರು ಒಬ್ಬ ಹೇಡಿ, ಜವಾಬ್ದಾರಿಯಿಂದ ಓಡಿ ಹೋಗುವವರು. ಅವರಿಗೆ ಧೈರ್ಯವಿದ್ದರೆ ಅಚ್ಛೇದಿನ್‌ ಬಗ್ಗೆ ಹಾಗೂ 12 ವರ್ಷದಲ್ಲಿ ಮೋದಿ ಅವರು ನೀಡಿರುವ ಮಾಸ್ಟರ್‌ ಸ್ಟ್ರೋಕ್‌ಗಳು ಹಾಗೂ ಅದರಿಂದ ದೇಶಕ್ಕೆ ಆಗಿರುವ ಲಾಭದ ಬಗ್ಗೆ ಶ್ವೇತಪತ್ರ ಹೊರಡಿಸಲಿ’ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸವಾಲು ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ದೇಶದ ಆರ್ಥಿಕತೆ ದಿವಾಳಿ ಆಗಿದೆ ಎಂದು ನಾವು ಹಲವು ಬಾರಿ ಹೇಳಿದ್ದೇವೆ. ಇದರ ಬಗ್ಗೆ ಸಂಸತ್‌ನಲ್ಲಿ ಚರ್ಚೆ ಮಾಡಬೇಕು ಅಂದಾಗಲೆಲ್ಲಾ ಪ್ರಧಾನಿ ‌ಮೋದಿ ಓಡಿ‌ ಹೋಗಿದ್ದಾರೆ. … Read more

ಮುಂದಿನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಎಂದು ಬ್ಯಾನರ್‌… ಹೊಸ ಎಡವಟ್ಟು ಮಾಡಿಕೊಂಡ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ

ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಇಂದು ತಮ್ಮ ಹುಟ್ಟು ಹಬ್ಬದ ಸಂಭ್ರದಲ್ಲಿದ್ದಾರೆ. ಕೋಟ್ಯಾಂತರ ಅಭಿಮಾನಿಗಳು, ಕಾರ್ಯಕರ್ತರು, ರಾಜಕೀಯ ಗಣ್ಯರು ಡಿ.ಕೆ ಶಿವಕುಮಾರ್‌ ಹುಟ್ಟು ಹಬ್ಬಕ್ಕೆ ಶುಭ ಹಾರೈಸುತ್ತಿದ್ದಾರೆ. ಈ ನಡುವೆ ಬೆಳಗಾವಿಯಲ್ಲಿನ ಬ್ಯಾನರ್‌ ಗಳು ಮತ್ತೆ ಹೊಸ ಚರ್ಚೆಯನ್ನೇ ಹುಟ್ಟು ಹಾಕಿವೆ. ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರ ಹುಟ್ಟುಹಬ್ಬದ ಪ್ರಯುಕ್ತ ಎಲ್ಲಡೆ ಲಕ್ಷಾಂತರ ಜನರು ಬ್ಯಾನರ್‌ ಹಾಕಿ ತಮ್ಮ ನೆಚ್ಚಿನ ನಾಯಕನ ಜನ್ಮದಿನವನ್ನು ಸಂಭ್ರಮಿಸುತ್ತಿದ್ದಾರೆ. ಅಂತೆಯೇ ಬೆಳಗಾವಿಯಲ್ಲಿಯೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪುತ್ರ … Read more

ಬಾಲಕಿಯರ ವಿಡಿಯೋ ಚಿತ್ರೀಕರಿಸಿ ಆನ್‌ಲೈನ್‌ಗೆ ಅಪ್ಲೋಡ್‌: ಹುಡುಕಿ ಇಬ್ಬರನ್ನ ಬಂಧಿಸಿದ ರಾಮನಗರ ಪೊಲೀಸರು

ಪರಿಚಿತರ ಅಪ್ರಾಪ್ತ ಮಕ್ಕಳನ್ನು ಲೈಂಗಿಕವಾಗಿ ಶೋಷಿಸಿ ಬಳಿಕ ಆ ಕೃತ್ಯದ ವಿಡಿಯೋವನ್ನು ಚಿತ್ರೀಕರಿಸಿ ಆನ್‌ಲೈನ್ ಗೆ ಅಪ್‌ಲೋಡ್ ಮಾಡಿದ್ದ ಇಬ್ಬರು ಕಿಡಿಗೇಡಿಗಳನ್ನು ಬೆಂಗಳೂರು ದಕ್ಷಿಣ (Bengaluru South) ಜಿಲ್ಲೆಯ ರಾಮನಗರ (Ramanagara) ಸೆನ್ ಪೊಲೀಸರು ಬಂಧಿಸಿದ್ದಾರೆ. ಕಗ್ಗಲಿಪುರದ ಕಿರಣ್ ಕುಮಾರ್ ಹಾಗೂ ಆದಿತ್ಯ ಬಂಧಿತರಾಗಿದ್ದು, ಆರೋಪಿಗಳಿಂದ ಮೊಬೈಲ್ ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ಎನ್‌ಸಿಆರ್‌ಪಿ ಪೋರ್ಟಲ್‌ನ ಟಿಫ್‌ಲೈನ್ ಮೂಲಕ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ದೃಶ್ಯಾವಳಿ (ಸಿಎಸ್‌ಎಎಂ) ಕುರಿತು ಸಿಐಡಿಗೆ ಮಾಹಿತಿ ಬಂದಿತ್ತು. ಈ ಸುಳಿವು ಆಧರಿಸಿ ತನಿಖೆ … Read more

ಮೂರುಕಾಸಿನ ಕೆಲಸ ಮಾಡದ ಸಿದ್ದರಾಮಯ್ಯ, ಡಿಕೆಶಿಗೆ ಮುಖ ಮುಚ್ಚಲು ಬುರ್ಖಾ ಬೇಕು, ಪ್ರತಾಪ್ ಸಿಂಹ ಕಿಡಿ

ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರ ಹೊರಡಿಸಿದ ಹೊಸ ಆದೇಶವೊಂದು ಭಾರಿ ರಾಜಕೀಯ ಕಿತ್ತಾಟಕ್ಕೆ ಕಾರಣವಾಗಿದೆ. ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಶಾಲೆಗಳಲ್ಲಿ ಹಿಜಾಬ್ ನಿಷೇಧ ಆದೇಶ ರದ್ದು ಮಾಡಿ ಇದೀಗ ಸಿದ್ದರಾಮಯ್ಯ ಸರ್ಕಾರ ಹಿಬಾಜ್‌ಗೆ ಅವಕಾಶ ಮಾಡಿದೆ. ಈ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಂಸದ ಪ್ರತಾಪ್ ಸಿಂಹ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಮುಸ್ಲಿಮರು ಯಾರು ಹಿಬಾಜ್‌ಗ ಅವಕಾಶ ಕೇಳಿಲ್ಲ. ಆದರೆ ಹಿಂದೂಗಳ ಉರಿಸಲು ಕಾಂಗ್ರೆಸ್ ಈ ರೀತಿ ಮಾಡಿದೆ ಎಂದಿದ್ದಾರೆ. ಕಳೆದ ಮೂರು ವರ್ಷದಲ್ಲಿ ಕರ್ನಾಟಕದಲ್ಲಿ ಮೂರುಕಾಸಿನ ಕೆಲಸ … Read more

ಪತ್ನಿಯ ಮುಂದೆ ಅವಮಾನ ಮಾಡಿದ ತಂದೆ-ತಾಯಿಯನ್ನೇ ಕುಟ್ಟಾಣಿಯಿಂದ ಹೊಡೆದು ಕೊಂದ ಮಗ!

ಪತ್ನಿಯ ಮುಂದೆ ಪೋಷಕರು ಅವಮಾನ ಮಾಡಿದ್ದಾರೆ ಎಂಬ ಕ್ಷುಲ್ಲಕ ಕಾರಣಕ್ಕೆ ರೊಚ್ಚಿಗೆದ್ದ ಮಗನೊಬ್ಬ ತನ್ನ ಹೆತ್ತ ತಂದೆ-ತಾಯಿಯನ್ನೇ ಕುಟ್ಟಾಣಿಯಿಂದ (Pestle) ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಧುಲೆ ಜಿಲ್ಲೆಯಲ್ಲಿ ನಡೆದಿದೆ. ರಂಜುದೇವಿ ಮಹತೋ (52) ಮತ್ತು ಇಂದಾರಾಮ್ ಮಹತೋ (58) ಮೃತ ದುರ್ದೈವಿಗಲಾಗಿದ್ದು, ಚಂದನ್ ಇಂದಾರಾಮ್ ಮಹತೋ (28) ಆರೋಪಿಯಾಗಿದ್ದು ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ರಂಜುದೇವಿ ಮತ್ತು ಇಂದಾರಾಮ್ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ಮರಳಿದ್ದರು. ಈ ವೇಳೆ … Read more

ಮಹಾರಾಷ್ಟ್ರದಲ್ಲಿ ಘೋರ ದುರಂತ: ಧಾರೆ ಎರೆದುಕೊಡುವ ಮುಹೂರ್ತದಲ್ಲೇ ಹೃದಯಾಘಾತದಿಂದ ವಧುವಿನ ತಂದೆ ಸಾವು!

ಮದುವೆ ಸಂಭ್ರಮದಲ್ಲಿದ್ದ ಮನೆಯೊಂದು ಕಣ್ಮುಚ್ಚಿ ಬಿಡುವಷ್ಟರಲ್ಲಿ ಸೂತಕದ ಮನೆಯಾಗಿ ಮಾರ್ಪಟ್ಟ ಅತ್ಯಂತ ಹೃದಯವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದಲ್ಲಿ ನಡೆದಿದೆ. ಮಗಳ ಮದುವೆಯನ್ನು ಅದ್ದೂರಿಯಾಗಿ ಮಾಡಬೇಕೆಂಬ ಕನಸು ಹೊತ್ತಿದ್ದ ತಂದೆಯೊಬ್ಬರು, ಮಗಳಿಗೆ ‘ಕನ್ಯಾದಾನ’ ಮಾಡುವ ಸಂದರ್ಭದಲ್ಲೇ ತೀವ್ರ ಹೃದಯಾಘಾತದಿಂದ ಮಂಟಪದಲ್ಲೇ ಪ್ರಾಣಬಿಟ್ಟಿದ್ದಾರೆ! ಘಟನೆಯ ವಿವರಗಳು: • ಘಟನೆ ನಡೆದ ಸ್ಥಳ: ಮಹಾರಾಷ್ಟ್ರದ ಸಿಂಧ್‌ಖೇಡ್ ರಾಜಾ ತಾಲ್ಲೂಕಿನ ವರ್ದಾದಿ ಗ್ರಾಮ.• ದುರ್ದೈವಿ ತಂದೆ: ಕುರುಮದಾಸ್ ಭೂತೇಕರ್.• ಶುಭ ಸಂದರ್ಭ: ಮಗಳು ನಂದಿನಿ ಹಾಗೂ ಪ್ರದೀಪ್ ನಾನೋಟೆ ಅವರ ವಿವಾಹ ಮಹೋತ್ಸವ. ಗುರುವಾರ … Read more

ತುಂಗಭದ್ರಾ ಸೇತುವೆ ಮೇಲಿಂದ ಕೆಳಗೆ ಬಿದ್ದ ಟ್ರ್ಯಾಕ್ಟರ್: 7 ಮಂದಿ ದಾರುಣ ಸಾವು, ಹಲವರ ಸ್ಥಿತಿ ಗಂಭೀರ

ಸೇತುವೆ ಮೇಲಿಂದ ಟ್ರ್ಯಾಕ್ಟರ್‌ ಕೆಳಗೆಬಿದ್ದ ಪರಿಣಾಮ 7 ಜನರು ದುರ್ಮಣ ಹೊಂದಿರುವ ಘಟನೆ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ನಡೆದಿದೆ. ತುಂಗಭದ್ರಾ ಸೇತುವೆ ಮೇಲಿಂದ ಟ್ರ್ಯಾಕ್ಟರ್ ಕೆಳಗೆಬಿದ್ದು ದುರಂತ ಸಂಭವಿಸಿದ್ದು, ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅಪಘಾತದಲ್ಲಿ ಮೃತರೆಲ್ಲರೂ ಒಂದೇ ಕುಟುಂಬದವರು ಎಂಬುದು ಗೊತ್ತಾಗಿದೆ. ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಮಾಹಿತಿ ಇದೆ. ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಟ್ಯಾಂಕರ್ ಗುದ್ದಿದೆ ಎನ್ನಲಾಗಿದ್ದು, ಮೃತರೆಲ್ಲರೂ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಗ್ರಾಮದವರು ಎಂಬುದು ತಿಳಿದುಬಂದಿದೆ. ಹುಲಿಗೆಮ್ಮ … Read more