ತನ್ನ ಎಲೆ ಮೇಲೆ ಆನೆ ಬಿದ್ದಿದ್ದರೂ ನೊಣ ಹುಡುಕುವ ಢೋಂಗಿ ಬುದ್ಧಿ : ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು
ಪ್ರಧಾನಿ ಮೋದಿ ಪ್ರಧಾನಿ ಅವರು ಭಾನುವಾರ ಬೆಂಗಳೂರಿನಲ್ಲಿ ಮಾತನಾಡಿದ್ದು ದೇಶದ ಪ್ರಧಾನಿಯಾಗಿಯೋ? ಇಲ್ಲವೇ ರಾಜ್ಯ ಬಿಜೆಪಿ ಅಧ್ಯಕ್ಷರೋ? ಇಲ್ಲವೇ ರಾಜ್ಯದ ವಿರೋಧ ಪಕ್ಷದ ನಾಯಕರಾಗಿಯೋ? ಎನ್ನುವುದನ್ನು ಅವರೇ ಸ್ಪಷ್ಟಪಡಿಸಿ ಸಾರ್ವಜನಿಕರಲ್ಲಿ ಮೂಡಿರುವ ಗೊಂದಲವನ್ನು ಬಗೆಹರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಬೆಂಗಳೂರಿನಲ್ಲಿ ಮಾಡಿರುವ ಭಾಷಣಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಪ್ರಧಾನಮಂತ್ರಿಯವರು ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಉದ್ದೇಶಿಸಿ ಮಾತನಾಡಿದ್ದರೂ ಅವರ ಮಾತಿನಲ್ಲಿ ಕೇಂದ್ರದಲ್ಲಿರುವ ಅವರದ್ದೇ ಸರ್ಕಾರದ ವೈಫಲ್ಯ ಮತ್ತು … Read more