ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸಚಿವ ಡಿ. ಸುಧಾಕರ್ ಇನ್ನಿಲ್ಲ

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ ಸುಧಾಕರ್ (65) ಇದೀಗ ನಿಧನರಾಗಿದ್ದಾರೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಸಚಿವ ಡಿ ಸುಧಾಕರ್ ನಿಧನ ರಾಗಿದ್ದಾರೆ ಚಿತ್ರದುರ್ಗದ ಉಸ್ತುವಾರಿ ಸಚಿವರಾಗಿರುವ ಡಿಸುಧಾಕರ್ ಇನ್ನಿಲ್ಲ ಇಂದು ಬೆಳಿಗ್ಗೆ 3. 15 ಕ್ಕೆ ಸಚಿವ ಡಿ ಸುಧಾಕರ್ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ಡಿ ಸುಧಾಕರ್ ಚಿಕಿತ್ಸೆ ಪಡೆಯುತ್ತಿದ್ದರು ಆರೋಗ್ಯದಲ್ಲಿ ಚೇತರಿಕೆ ಕೂಡ ಕಾಣದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 3. 15 ರ ಸುಮಾರಿಗೆ … Read more

ಮಕ್ಕಳ ಮೇಲೆ ಮನೆಯ ಗೇಟ್ ಬಿದ್ದು ಐದು ವರ್ಷದ ಮಗು ಸಾವು, ಮತ್ತೊಂದು ಮಗು ಗಂಭೀರ ಗಾಯ

ಬೆಂಗಳೂರು ಉತ್ತರ ತಾಲೂಕಿನ ದ್ವಾರಕಾ ನಗರದಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಮನೆಯ ಗೇಟ್ ಬಿದ್ದು ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಐದು ವರ್ಷದ ಗೌಸಿಯಾ ಸ್ಥಳದಲ್ಲೇ ಮೃತಪಟ್ಟಿದ್ದು, ಮೂರು ವರ್ಷದ ಸುಮಯ್ಯಾ ಗಂಭೀರವಾಗಿ ಗಾಯಗೊಂಡಿದ್ದಾಳೆ. ಮೃತ ಗೌಸಿಯಾ ಇಮಾಮ್ ಮತ್ತು ರಮೀಜಾ ದಂಪತಿಗಳ ಮಗಳು ಎಂದು ತಿಳಿದುಬಂದಿದೆ. ಗಾಯಗೊಂಡ ಸುಮಯ್ಯಾ ಇಮಾಮ್ ಅವರ ತಂಗಿ ಶಕೀಲಾ ಅವರ ಮಗಳು ಆಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಅವಘಡ ಮನೆ ಮಾಲೀಕ ರವಿಶಂಕರ್ ಅವರಿಗೆ ಸೇರಿದ ಮನೆಯಲ್ಲಿ ನಡೆದಿದೆ. … Read more

ರಾಜ್ಯದಲ್ಲಿ ಎಸ್‌ಐಆರ್‌ ತಕ್ಷಣ ಸ್ಥಗಿತಕ್ಕೆ ಸಿಎಂ ಸಿದ್ದರಾಮಯ್ಯ, ಡಿಕೆಶಿ ಸಭೆಯಲ್ಲಿ ಮುಖಂಡರ ಪಟ್ಟು

ಪಶ್ಚಿಮ ಬಂಗಾಳದ ಚುನಾವಣಾ ಫಲಿತಾಂಶದ ಬೆನ್ನಲ್ಲೇ ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ ಮತದಾರರ ಪಟ್ಟಿಯ ಎಸ್‌ಐಆರ್‌ (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆ ಸ್ಥಗಿತಗೊಳಿಸುವ ಸಂಬಂಧ ವಿವಿಧ ಸಂಘಟನೆಗಳ ಮುಖಂಡರಿಂದ ಒಕ್ಕೊರಲ ಒತ್ತಾಯ ಕೇಳಿಬಂತು. ಜಿಬಿಎ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಹೊಸ್ತಿಲಲ್ಲೇ ಎಸ್‌ಐಆರ್‌ ಬಗ್ಗೆ ಕೇಳಿಬರುತ್ತಿರುವ ಅಪಸ್ವರಗಳ ಕುರಿತು ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಅದರಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ಪ್ರಿಯಾಂಕ್‌ ಖರ್ಗೆ, ಕೆ.ಜೆ.ಜಾರ್ಜ್‌, ರಾಮಲಿಂಗಾರೆಡ್ಡಿ, ಡಾ. ಶರಣ್‌ ಪ್ರಕಾಶ್‌ ಪಾಟೀಲ್‌, … Read more

ಗೆದ್ದ ಶಾಸಕಿಯನ್ನು ಬೇಡ ಬೇಡ ಎಂದರೂ ಬಿಡದೆ ತಬ್ಬಿ ಮುದ್ದಾಡಲು ಯತ್ನಿಸಿದ ಕಾಂಗ್ರೆಸ್ ನಾಯಕ

ಕೇರಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಭರ್ಜರಿ ಗೆಲುವಿನೊಂದಿಗೆ ಅಧಿಕಾರಕ್ಕೆ ಮರಳಿದೆ. ಸರ್ಕಾರ ರಚನೆ, ಮುಖ್ಯಮಂತ್ರಿ ಯಾರಾಗಬೇಕು ಅನ್ನೋ ಚರ್ಚೆಗಳು, ಸ್ಪರ್ಧಗಳು ತೀವ್ರಗೊಳ್ಳುತ್ತಿದೆ. ಇದರ ನಡುವೆ ಕೇರಳ ಕಾಂಗ್ರೆಸ್ ಮುಖಂಡನ ನಡೆಗೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಮುಖ್ಯ ಕಚೇರಿಗೆ ಆಗಮಿಸಿದ ಮಹಿಳಾ ಶಾಸಕಿಯನ್ನು ತಬ್ಬಿಕೊಳ್ಳಲು ಯತ್ನಿಸಿದ ಕಾಂಗ್ರೆಸ್ ಮುಖಂಡನ ವಿಡಿಯೋ ಭಾರಿ ವೈರಲ್ ಆಗಿದೆ. ಬೇಡ ಬೇಡ ಎಂದು ಕೈಯಿಂದ ಕಾಂಗ್ರೆಸ್ ಮುಖಂಡನ ದೂರ ತಳ್ಳಿದರೂ ಸಿನಿಮಾ ಶೈಲಿಯಲ್ಲಿ ರೊಮ್ಯಾಂಟಿಕ್ ಆಗಿ … Read more

ಚಿನ್ನ ಅಡವಿಟ್ಟ ಗ್ರಾಹಕರಿಗೆ ‘ಮಕ್ಮಲ್ ಟೋಪಿ’! ಕೋಟ್ಯಾಂತರ ರೂ. ವಂಚಿಸಿ ಜ್ಯುವೆಲರಿ ಶಾಪ್ ಮಾಲೀಕ ಪರಾರಿ

ಜನರು ಕಷ್ಟ ಅಂತ ತಮ್ಮ ಬೆಲೆಬಾಳುವ ಚಿನ್ನಾಭರಣವನ್ನು (Gold Jewellery)ಅಡವಿಟ್ಟರೆ, ಇಲ್ಲೊಬ್ಬ ಜ್ಯುವೆಲರಿ ಶಾಪ್ ಮಾಲೀಕ ಜನರಿಗೇ ಪಂಗನಾಮ ಹಾಕಿದ್ದಾನೆ. ಬೆಂಗಳೂರಿನಲ್ಲಿ ಕಡಿಮೆ ಬಡ್ಡಿಯ ಆಸೆ ತೋರಿಸಿ ಗ್ರಾಹಕರಿಂದ ಚಿನ್ನ ಪಡೆದ ಆಸಾಮಿ ಈಗ ಅಂಗಡಿ ಬಾಗಿಲು ಮುಚ್ಚಿಕೊಂಡು ಪರಾರಿಯಾಗಿದ್ದಾನೆ. ಮುಖ್ಯಾಂಶಗಳು • ಕಡಿಮೆ ಬಡ್ಡಿ ಆಸೆ ತೋರಿಸಿ ಗ್ರಾಹಕರಿಗೆ ಮೋಸ• ತನ್ನ ಶಾಪ್ನಲ್ಲೇ ಚಿನ್ನ ಅಡವಿರಿಸಿ ಮೋಸ• ಶಾಪ್ ಬಂದ್ ಮಾಡಿ ವ್ಯಕ್ತಿ ಪರಾರಿ ವಂಚನೆಯ ಜಾಲ ಹೇಗಿತ್ತು ಗೊತ್ತಾ? ರಾಘವೇಂದ್ರ ಜ್ಯುವಲರಿ ಶಾಪ್ ಮಾಲೀಕ … Read more

ಹೆಂಡತಿಯನ್ನು ಮನೆಗೆ ಕಳಿಸಿ ಅಂದಿದ್ದಕ್ಕೆ ಪೆಟ್ರೋಲ್‌ ಸುರಿದು ಬೆಂಕಿ – ಚಿಕಿತ್ಸೆ ಫಲಿಸದೆ ಸಾವು!

ಗಂಡನ ಮನೆಗೆ ಪತ್ನಿ- ಮಕ್ಕಳನ್ನ ಕಳುಹಿಸಿಕೊಡಿ ಎಂದ ಅಳಿಯನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ (Crime news) ತಡವಾಗಿ ಬೆಳಕಿಗೆ ಬಂದಿದೆ. ಇದರಿಂದ ತಮಿಳುನಾಡಿನ ಕೃಷ್ಣಗಿರಿ (Krishnagiri) ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನವೀನ್ ಕೊನೆಯುಸಿರೆಳೆದಿದ್ದಾನೆ. ಸಾಯುವ ಮುನ್ನ ಕೃಷ್ಣಗಿರಿಯ ಮಾಜಿಸ್ಟ್ರೇಟ್ ಮುಂದೆ ಡೆತ್ ಡಿಕ್ಲರೇಷನ್ (Death declaration) ಹೇಳಿಕೆ ನೀಡಿದ ನವೀನ್ ತನ್ನ ಮೇಲೆ ಪೆಟ್ರೋಲ್ ಸುರಿದು ಹಲ್ಲೆ ಮಾಡಿ ಬೆಂಕಿ ಹಚ್ಚಿದ ಮಾವ ಸಂಪಂಗಿ ಬಾಮೈದ ಮುನೇಶ್ ಅತ್ತೆ ಪಚ್ಚಮ್ಮ ಹಾಗು ಹೆಂಡತಿ … Read more

ವೈದ್ಯನ ಸಾವಿನ ಬೆನ್ನಲ್ಲೇ ನರ್ಸ್ ಕೂಡ ಆತ್ಮಹತ್ಯೆ – ಇಬ್ಬರ ಸಾವಿನ ಹಿಂದೆ ಅಕ್ರಮ ಸಂಬಂಧ ಶಂಕೆ!

ರಾಮನಗರ ಜಿಲ್ಲೆಯ ಕನಕಪುರ ನಗರದ ಮಹದೇಶ್ವರ ಬಡಾವಣೆಯಲ್ಲಿ ಸರಣಿ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿದ್ದು, ವೈದ್ಯಕೀಯ ವಲಯದಲ್ಲಿ ತಲ್ಲಣ ಸೃಷ್ಟಿಸಿದೆ. ನವೋದಯ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಸರಸ್ವತಿ (45) ಎಂಬುವವರು ಇಂದು ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಶೇಷವೆಂದರೆ, ಎರಡು ದಿನಗಳ ಹಿಂದೆಯಷ್ಟೇ ಇವರು ಕೆಲಸ ಮಾಡುತ್ತಿದ್ದ ಆಸ್ಪತ್ರೆಯ ವೈದ್ಯ ಡಾ. ಚೇತನ್ ಟೆಂಕರ್ ಅವರು ಕೂಡ ಆತ್ಮಹತ್ಯೆಗೆ ಶರಣಾಗಿದ್ದರು. ಒಂದೇ ಆಸ್ಪತ್ರೆಯ ಇಬ್ಬರು ಸಾವು ನವೋದಯ ಆಸ್ಪತ್ರೆಯ ವೈದ್ಯ ಡಾ. ಚೇತನ್ … Read more

ಮಹಿಂದ್ರಾ ಥಾರ್ ರಿವರ್ಸ್ ಮಾಡುವಾಗ 5 ವಿದ್ಯಾರ್ಥಿನಿಯರಿಗೆ ಡಿಕ್ಕಿ, ಓರ್ವಬಾಲಕಿ ಸಾವು.!

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ಇಂದು ಮಧ್ಯಾಹ್ನ ಹೃದಯವಿದ್ರಾವಕ ಘಟನೆಯೊಂದು ಸಂಭವಿಸಿದೆ. ಅತಿವೇಗ ಹಾಗೂ ಅಜಾಗರೂಕತೆಯಿಂದ ಕಾರನ್ನು ರಿವರ್ಸ್ ಮಾಡುವಾಗ ಕಾಲೇಜು ಮುಗಿಸಿ ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದ ಪರಿಣಾಮ, ಓರ್ವ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ವಿವರ: ಸಿಂಧನೂರು ಪಟ್ಟಣದ ಚೇತನ ಆಸ್ಪತ್ರೆಯ ಮುಂಭಾಗದಲ್ಲಿ ಈ ಅಪಘಾತ ಸಂಭವಿಸಿದೆ. ಎವಿಎಸ್ ಬ್ರಿಲಿಯಂಟ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಐವರು ವಿದ್ಯಾರ್ಥಿನಿಯರು ಕಾಲೇಜು ಮುಗಿಸಿಕೊಂಡು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. … Read more

ರಾತ್ರಿಯ ಕಗ್ಗತ್ತಲು, ಸುರಿವ ಮಳೆಯಲ್ಲಿ ಹಳ್ಳದಲ್ಲಿ ಕಳೆದ ಹೋದ ಮಗು; 12 ಗಂಟೆ ಬಳಿಕ ಕಂದಮ್ಮ ಪತ್ತೆ!

ಮೂಡಿಗೆರೆ ತಾಲೂಕಿನ ಕೆಳಗೂರು ಕಾಫಿ ಎಸ್ಟೇಟ್‌ನಲ್ಲಿ ನಾಪತ್ತೆಯಾಗಿದ್ದ ಒಂದೂವರೆ ವರ್ಷದ ಪುಟ್ಟ ಕಂದಮ್ಮ ಕೊನೆಗೂ ಪತ್ತೆಯಾಗಿದೆ. ಇಡೀ ರಾತ್ರಿ ಸುರಿಯುವ ಮಳೆಯ ನಡುವೆ, ದಟ್ಟವಾದ ಕಾಫಿ ತೋಟದ ಹಳ್ಳವೊಂದರಲ್ಲಿ ಹಸಿವು ಮತ್ತು ಚಳಿಯಿಂದ ನಡುಗುತ್ತಿದ್ದ ಮಗುವನ್ನು ಪೊಲೀಸರು ಹಾಗೂ ಸ್ಥಳೀಯರು ಹರಸಾಹಸ ಪಟ್ಟು ರಕ್ಷಿಸಿದ್ದಾರೆ. ಘಟನೆಯ ಹಿನ್ನೆಲೆ : ಮಧ್ಯಪ್ರದೇಶ ಮೂಲದ ಗೋನು ಮತ್ತು ಸೋನು ದಂಪತಿ ಕಳೆದೊಂದು ವಾರದ ಹಿಂದಷ್ಟೇ ಕೆಲಸ ಅರಸಿ ಕೆಳಗೂರು ಎಸ್ಟೇಟ್‌ಗೆ ಬಂದಿದ್ದರು. ಕೂಲಿ ಕೆಲಸಕ್ಕೆ ಹೋಗುವಾಗ ತಮ್ಮ ಐವರು ಮಕ್ಕಳನ್ನು … Read more

ನಡುರಸ್ತೆಯಲ್ಲೇ ಪತ್ನಿಯ ಕತ್ತು ಕುಯ್ಯಲು ಹೋದ ಪತಿ; ಮರಕ್ಕೆ ಕಟ್ಟಿಹಾಕಿ ಧರ್ಮದೇಟು ಕೊಟ್ಟ ಬೆಂಗಳೂರಿನ ಜನ

ಪತ್ನಿಯ ನಡತೆಯ ಮೇಲೆ ಸಂಶಯಗೊಂಡು ಆಕೆಯ ಕೊಲೆಗೆ ಯತ್ನಿಸಿದ ಪತಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಬೆಂಗಳೂರಿನ ದಾಸನಪುರದಲ್ಲಿ ನಡೆದಿದೆ. ಸಾರ್ವಜನಿಕರ ಸಮಯಪ್ರಜ್ಞೆಯಿಂದಾಗಿ ಮಹಿಳೆಯೊಬ್ಬರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ನಂತರ ಸ್ಥಳಕ್ಕೆ ಬಂದ ಮಾದನಾಯಕನಹಳ್ಳಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಏನಿದು ಘಟನೆ? ಮೂಲತಃ ಬಿಹಾರದ ದಂಪತಿಗಳಾದ ಸೋನಾಲಿ ಮತ್ತು ಸಂಜಯ್ ಅವರು ಉದ್ಯೋಗಕ್ಕಾಗಿ ಬೆಂಗಳೂರಿಗೆ ಬಂದು ಇಲ್ಲಿನ ಗಾರ್ಮೆಂಟ್ಸ್ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇವರಿಬ್ಬರಿಗೂ ಇದು ಎರಡನೇ ವಿವಾಹವಾಗಿತ್ತು ಎನ್ನಲಾಗಿದೆ. ಸಂಜಯ್ ಸದಾ ಮದ್ಯಪಾನ … Read more