ರಾತ್ರಿ ಪ್ರಿಯಕರನೊಂದಿಗೆ ಹೋಟೆಲ್‌ಗೆ ಬಂದಿದ್ದ ರೇಣುಕಾ, ಬೆಳಗ್ಗೆ ಹೆಣವಾದಳು.! ಆ ರಾತ್ರಿ ನಡೆದಿದ್ದೇನು.?

ತೆಲಂಗಾಣದ ಹೈದರಾಬಾದ್‌ನಲ್ಲಿ ನಡೆದ 26 ವರ್ಷದ ಯುವತಿಯ ಸಂಶಯಾಸ್ಪದ ಸಾವು ಇದೀಗ ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಪ್ರಿಯಕರನೊಂದಿಗೆ ಹೋಟೆಲ್‌ಗೆ ಬಂದಿದ್ದ ಯುವತಿ ಮರುದಿನ ಬೆಳಗ್ಗೆ ಶವವಾಗಿ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಘಟನೆಯ ಸಂಪೂರ್ಣ ವಿವರ: ಮೃತ ಯುವತಿಯನ್ನು ರೇಣುಕಾ ಎಂದು ಗುರುತಿಸಲಾಗಿದ್ದು, ಈಕೆ ಹೈದರಾಬಾದ್‌ನ ಪಬ್ ಒಂದರಲ್ಲಿ ಡ್ಯಾನ್ಸರ್ ಆಗಿ ಕೆಲಸ ಮಾಡುತ್ತಿದ್ದಳು. 8 ವರ್ಷಗಳ ಹಿಂದೆ ಮದುವೆಯಾಗಿದ್ದ ರೇಣುಕಾಗೆ 7 ವರ್ಷದ ಮಗನಿದ್ದಾನೆ. ಆದರೆ, ಪತಿಯೊಂದಿಗೆ ಭಿನ್ನಾಭಿಪ್ರಾಯ ಉಂಟಾಗಿ ಆತನಿಂದ ದೂರ ಸರಿದಿದ್ದ ರೇಣುಕಾ, … Read more

ಬೆಂಗಳೂರಿನ ‘ಡೇ ಕೇರ್’ ನಲ್ಲಿ ಮಕ್ಕಳ ಮೇಲೆ ದೌರ್ಜನ್ಯ ಕೇಸ್ : ಇಬ್ಬರು ಸಿಬ್ಬಂದಿಗಳು ಅರೆಸ್ಟ್

ಬೆಂಗಳೂರಿನ ಬ್ರೂಕ್ಫೀಲ್ಡ್ ನಲ್ಲಿರುವ ಕೇಪ್ಜೆಮಿನಿ ಹೆಚ್‌ಎಎಲ್ ಕ್ಯಾಂಪಸ್ ಆವರಣದ ಸೊಸೈಟಿ ಜನರಲ್ ಬೇಬಿ ಕೇರ್ (ಡೇ ಕೇರ್) ಕೇಂದ್ರದಲ್ಲಿ ಪುಟ್ಟ ಮಕ್ಕಳ ಮೇಲೆ ಸಿಬ್ಬಂದಿ ಅಮಾನವೀಯವಾಗಿ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಅಮಾನವೀಯ ದೃಶ್ಯಗಳ ವಿಡಿಯೋ ಆಧಾರದ ಮೇಲೆ ಮಕ್ಕಳ ಸಹಾಯವಾಣಿ ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಹೆಚ್‌ಎಎಲ್ (HAL) ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣದ ಗಾಂಭೀರ್ಯತೆಯನ್ನು ಅರಿತ ಪೊಲೀಸರು ತಕ್ಷಣವೇ ಡೇ ಕೇರ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ … Read more

ಭೀಕರ ಬರಗಾಲದ ಮುನ್ಸೂಚನೆ: ನೀರಿಲ್ಲ, ಬೆಳೆ ಬೆಳೆಯಬೇಡಿ ಎಂದ ಸಿ.ಎಂ ಡಿ.ಕೆ ಶಿವಕುಮಾರ್

ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗುವ ಮುನ್ಸೂಚನೆ ಇದೆ. ಬಹುತೇಕ ಜಲಾಶಯಗಳಲ್ಲಿ ಒಳಹರಿವು ಶೂನ್ಯಕ್ಕೆ ತಲುಪಿದೆ. ಆದ್ದರಿಂದ, ರೈತರು ಅಣೆಕಟ್ಟು ನೀರು ನಂಬಿಕೊಂಡು ಯಾವುದೇ ಕಾರಣಕ್ಕೂ ಬೆಳೆಗಳನ್ನು ಬೆಳೆಯಬಾರದು. ನೀರು ಹರಿಸುವಂತೆ ಒತ್ತಡ ಹೇರಬಾರದು ಎಂದು ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ವಿಸ್ತೃತ ಚರ್ಚೆ ನಡೆದಿದ್ದು, ಎಲ್ಲಾ ಸಚಿವರು ತಮಗೆ ವಹಿಸಿರುವ ಜಿಲ್ಲೆಗಳಿಗೆ ತೆರಳಿ ಮಳೆ ಕೊರತೆಯಿಂದ ಉಂಟಾಗಿರುವ ಪರಿಸ್ಥಿತಿಯನ್ನು ಪರಿಶೀಲನೆ ನಡೆಸುವಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೂಚಿಸಿದ್ದಾರೆ. … Read more

ಶಾಲಾ ಬಸ್ನಲ್ಲಿ ಮಕ್ಕಳು ಮನೆ ತಲುಪುವವರೆಗೂ ಶಾಲೆಯದ್ದೇ ಜವಾಬ್ದಾರಿ : ಹೈಕೋರ್ಟ್ ಮಹತ್ವದ ಆದೇಶ!

ಶಾಲಾ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಅತ್ಯಂತ ಮಹತ್ವದ ತೀರ್ಪೊಂದನ್ನು ನೀಡಿದೆ. ಶಾಲಾ ಬಸ್ ಕೇವಲ ಶಾಲಾ ಆವರಣದಲ್ಲಿದ್ದಾಗ ಮಾತ್ರವಲ್ಲ, ಮಗು ಬಸ್ ಹತ್ತಿದಾಗಿನಿಂದ ಹಿಡಿದು ಸಂಜೆ ಸುರಕ್ಷಿತವಾಗಿ ಪೋಷಕರ ಕೈ ಸೇರುವವರೆಗೂ ಮಗುವಿನ ಸಂಪೂರ್ಣ ರಕ್ಷಣೆಯ ಜವಾಬ್ದಾರಿ ಶಾಲಾ ಆಡಳಿತ ಮಂಡಳಿಯದ್ದೇ ಆಗಿರುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಶಾಲಾ ಬಸ್‌ನಲ್ಲಿ ನಡೆದ ಅಪಘಾತವೊಂದರಲ್ಲಿ ನಾಲ್ಕನೇ ತರಗತಿಯ ವಿದ್ಯಾರ್ಥಿ ಕಣ್ಣು ಕಳೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಖಾಸಗಿ ಶಾಲೆಯೊಂದರ ಆಡಳಿತ ಮಂಡಳಿ ತನ್ನ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು … Read more

ಚಿಕ್ಕಬಳ್ಳಾಪುರದಲ್ಲಿ ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಕತ್ತು ಕೊಯ್ಯಲು ಯತ್ನ.!

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ನಗರದಲ್ಲಿ ವಿದ್ಯಾರ್ಥಿನಿಯನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಆಕ್ರೋಶಗೊಂಡ ಪುಂಡರ ಗುಂಪೊಂದು ವಿದ್ಯಾರ್ಥಿನಿಯ ಮನೆಗೆ ನುಗ್ಗಿ ದಾಂಧಲೆ ನಡೆಸಿ, ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ವಿದ್ಯಾರ್ಥಿನಿಯನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಆಕ್ರೋಶಗೊಂಡ ಪುಂಡರ ಗುಂಪು ಮನೆಗೆ ನುಗ್ಗಿ ದಾಂಧಲೆ ನಡೆಸಿ, ಕಲ್ಲು ತೂರಾಟ ಮಾಡಿ, ವಿದ್ಯಾರ್ಥಿನಿ ಮೇಘನಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ಆತಂಕ ಸೃಷ್ಟಿಸಿದೆ. ಗಾಯಗೊಂಡ ವಿದ್ಯಾರ್ಥಿನಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಪ್ರಕರಣ ಸಂಬಂಧ ಪೊಲೀಸರು ತನಿಖೆ … Read more

ಗೃಹಜ್ಯೋತಿ ಯೋಜನೆ ಪರಿಷ್ಕರಣೆ ಬಗ್ಗೆ ಜೆಡಿಎಸ್ ಕಿಡಿ: ವಿಪಕ್ಷಗಳ ಆರೋಪಕ್ಕೆ ಇಂಧನ ಸಚಿವರಿಂದಲೇ ಸ್ಪಷ್ಟನೆ

ಗೃಹ ಜ್ಯೋತಿ ಯೋಜನೆ ಗೆ ಹೊಸ ಷರತ್ತು ವಿಚಾರ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ಜಾತ್ಯಾತೀತ ಜನತಾದಳ (ಸೆಕ್ಯೂಲರ್) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಎಕ್ಸ್ ಪೋಸ್ಟ್ ಮಾಡಿರುವ ಜೆಡಿಎಸ್, ಎಲ್ಲರಿಗೂ ಫ್ರೀ, ಯಾವುದೇ ಷರತ್ತುಗಳಿಲ್ಲ ಎಂದು ಭಾಷಣ ಬಿಗಿದು ಜನರ ಕಿವಿಗೆ ಹೂವಿಟ್ಟು ಅಧಿಕಾರ ಹಿಡಿದ ಕಾಂಗ್ರೆಸ್, ಈಗ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿದೆ. ಆರ್ಥಿಕ ದಿವಾಳಿತನವನ್ನು ಮುಚ್ಚಿಕೊಳ್ಳಲು ಜನಸಾಮಾನ್ಯರನ್ನು ‘ಗೃಹಜ್ಯೋತಿ’ ಯೋಜನೆಯಿಂದ ಹೊರಹಾಕಲು ಕುತಂತ್ರ ಹೆಣೆದಿದೆ ಎಂದು ಗಂಭೀರ ಆರೋಪ ಮಾಡಿದೆ. ‘ಬಡ, … Read more

ಗುಟ್ಕಾ ಉಗಿಯಲು ಬಗ್ಗಿದ ಯುವಕನ ತಲೆಗೆ ಗುದ್ದಿದ ಟಿಪ್ಪರ್; ರಸ್ತೆಗೆ ಬಿದ್ದ ರುಂಡ, ಬಸ್ಸಿನಲ್ಲಿ ನೇತಾಡಿದ ಮುಂಡ!

ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣ ಮಾಡುವಾಗ ಕಿಟಕಿಯಿಂದ ದೇಹದ ಭಾಗಗಳನ್ನು ಹೊರಹಾಕುವುದು ಎಷ್ಟು ಅಪಾಯಕಾರಿ ಎಂಬುದಕ್ಕೆ ಹುಬ್ಬಳ್ಳಿಯಲ್ಲಿ ನಡೆದ ಒಂದು ಭೀಕರ ಅಪಘಾತವೇ ಸಾಕ್ಷಿಯಾಗಿದೆ. ಚಲಿಸುವ ಬಸ್‌ನ ಕಿಟಕಿಯಿಂದ ಹೊರಗೆ ತಲೆ ಹಾಕಿದ್ದ ವಿದ್ಯಾರ್ಥಿಯೊಬ್ಬ ಹಿಂಬದಿಯಿಂದ ಬಂದ ಟಿಪ್ಪರ್ ಡಿಕ್ಕಿಯಾಗಿ ತಲೆಯ ರುಂಡವೇ ಕಟ್ ಆಗಿ ಬಿದ್ದು, ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿರುವ ಘಟನೆ ಕುಂದಗೋಳ ಪಟ್ಟಣದ ಹೊರವಲಯದಲ್ಲಿ ಸಂಭವಿಸಿದೆ. ಘಟನೆಯ ವಿವರ: ಮೃತಪಟ್ಟ ವಿದ್ಯಾರ್ಥಿಯನ್ನು ಕುಂದಗೋಳ ತಾಲೂಕಿನ ಶಿರೂರು ಗ್ರಾಮದ ನಿವಾಸಿ ಪಕ್ಕಿರೇಶ್ (17) ಎಂದು ಗುರುತಿಸಲಾಗಿದೆ. ಈತ … Read more

ಘಜ್ನಿ ಬಿಟ್ಟರೆ ಗುಡಿಗಳ ಸಂಪತ್ತು ಕೊಳ್ಳೆ ಹೊಡೆದಿದ್ದು ಸಂಘ ಪರಿವಾರ ಹಾಗೂ ಬಿಜೆಪಿ : ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ (BK Hariprasad) ಅವರು ಅಯೋಧ್ಯೆಯ ಶ್ರೀರಾಮ ಮಂದಿರದ (Ram mandir) ಹೆಸರಿನಲ್ಲಿ ಸಂಗ್ರಹವಾದ ಭಾರಿ ಮೊತ್ತದ ದೇಣಿಗೆಯನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ದೇವಸ್ಥಾನದ ನಿಧಿಯಲ್ಲಿ ಸುಮಾರು 200 ಕೋಟಿ ರೂಪಾಯಿಗಳಷ್ಟು ಹಣ ಲೂಟಿಯಾಗಿದೆ ಎಂದು ದೂರಿದ ಅವರು, ದೇಶದ ಪ್ರಧಾನಿ ನರೇಂದ್ರ ಮೋದಿ (PM Modi) ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು ತೀವ್ರವಾಗಿ ಪ್ರಶ್ನಿಸಿದ್ದಾರೆ. ಈ ಸಂದರ್ಭದಲ್ಲಿ ಆಡಳಿತ ಪಕ್ಷದ ನಾಯಕರ ವಿರುದ್ಧ … Read more

ಗ್ರಾಹಕರಿಗೆ ಗುಡ್ ನ್ಯೂಸ್: LPG ಸಿಲಿಂಡರ್ ದರ ಇಳಿಕೆ ಬೆನ್ನಲ್ಲೇ ಪೆಟ್ರೋಲ್ 5 ರೂ., ಡೀಸೆಲ್ ದರ 3 ರೂ. ಇಳಿಕೆ

ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ LPG ಸಿಲಿಂಡರ್‌ನ ಬೆಲೆಯಲ್ಲಿ 183.50 ರೂ. ಕಡಿತಗೊಳಿಸಿವೆ. ವಾಣಿಜ್ಯ LPG ಸಿಲಿಂಡರ್‌ v ಹೊಸ ಬೆಲೆಗಳು ಇಂದು, ಜುಲೈ 1, 2026 ರಿಂದ ಜಾರಿಗೆ ಬಂದಿವೆ. ಇದರ ಬೆನ್ನಲ್ಲೇ ಜಾಗತಿಕ ತೈಲ ದರ ಕುಸಿತದ ಹಿನ್ನೆಲೆಯಲ್ಲಿ ನಯಾರಾ ಎನರ್ಜಿ ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 5 ರೂ., ಡೀಸೆಲ್ ಬೆಲೆಯನ್ನು 3 ರೂ. ಇಳಿಸಿದೆ. ಅಂತರರಾಷ್ಟ್ರೀಯ ತೈಲ ಬೆಲೆಗಳು ಕಡಿಮೆಯಾಗುತ್ತಿರುವಂತೆ ಖಾಸಗಿ ಇಂಧನ ಚಿಲ್ಲರೆ ವ್ಯಾಪಾರಿ ನಯಾರಾ ಎನರ್ಜಿ ಬುಧವಾರ … Read more

ಫ್ಯಾಟಿ ಲಿವರ್ : ಮೂವರಲ್ಲಿ ಒಬ್ಬರಿಗಿದೆ ಈ ಅಪಾಯಕಾರಿ ಕಾಯಿಲೆ, ಇಂತಹ ಲಕ್ಷಣ ಕಾಣಿಸಿಕೊಂಡ್ರೆ ಜೀವಕ್ಕೇ ಆಪತ್ತು!

ಆಧುನಿಕ ಕಾಲದಲ್ಲಿ ನಾವು ಎದುರಿಸುತ್ತಿರುವ ಅತಿದೊಡ್ಡ ಆರೋಗ್ಯ ಸಮಸ್ಯೆ ಯಾವುದು ಎಂದು ನಿಮಗೆ ತಿಳಿದಿದೆಯೇ?. ಅದು ನಮ್ಮ ದೇಹವನ್ನು ಒಳಗಿನಿಂದಲನಾಶಪಡಿಸುತ್ತದೆ, ಗೋಚರಿಸುವುದಿಲ್ಲ. ಹಾಗಾದರೆ ಬನ್ನಿ ಆ ಅಪಾಯಕಾರಿ ಕಾಯಿಲೆ ಯಾವುದು ಎಂದು ನೋಡೋಣ.. ಈಗ ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರವರೆಗೆ ಮೂವರಲ್ಲಿ ಒಬ್ಬರು ಈ ಭಯಾನಕ ಸೈಲೆಂಟ್‌ ಕಿಲ್ಲರ್‌ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದು ಆರಂಭದಲ್ಲಿ ಯಾವುದೇ ನೋವು ಅಥವಾ ಲಕ್ಷಣಗಳಿಲ್ಲದೆ ಕಾಲಾನಂತರದಲ್ಲಿ ಮಾರಕ ಕ್ಯಾನ್ಸರ್ ಆಗಿ ಬದಲಾಗುವ ಸಾಮರ್ಥ್ಯವನ್ನು ಹೊಂದಿದೆ. ವೈದ್ಯಕೀಯ ಪರಿಭಾಷೆಯಲ್ಲಿ ಇದನ್ನು ಮೆಟಾಬಾಲಿಕ್ ಡಿಸ್ಫಂಕ್ಷನ್ … Read more