ವಿಜಯ್ ಜೊತೆ ರಾಹುಲ್ ಪ್ರಚಾರ ಮಾಡಿದ್ದರೆ 180 ಸ್ಥಾನ ಗೆಲ್ಲುತ್ತಿದ್ದೆವು: ತಮಿಳುನಾಡು ಕೈ ನಾಯಕ

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರು ವಿಜಯ್ ಅವರ ಟಿವಿಕೆ ಪಕ್ಷದೊಂದಿಗೆ ಕೈಜೋಡಿಸಿ ಪ್ರಚಾರ ಮಾಡಿದ್ದಾರೆ ನಾವು 180 ರಿಂದ 190 ಸ್ಥಾನಗಳಲ್ಲಿ ಗೆಲುವು ಸಾಧಿಸುತ್ತಿದ್ದೆವು ಎಂದು ರಾಜ್ಯ ಎಐಸಿಸಿ ಉಸ್ತುವಾರಿ ಗಿರೀಶ್ ಚೋಡಂಕರ್ ಅವರು ಮಂಗಳವಾರ(ಮೇ 5) ಹೇಳಿದ್ದಾರೆ. ತಳಮಟ್ಟದಲ್ಲಿ ಟಿವಿಕೆಗೆ ಬಾರಿ ಬೆಂಬಲವಿದೆ ಎಂದು ಗೊತ್ತಿತ್ತು. ಹಾಗಾಗಿ, ಅವರೊಂದಿಗೆ ಮೈತ್ರಿ ಮಾಡಿಕೊಳ್ಳುವ ಕುರಿತು ಸ್ಥಳೀಯ ನಾಯಕರು ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿದ್ದರು.‌ ಹಾಗಾಗಿದ್ದರೆ, ಅದು ಈ ಚುನಾವಣೆಯಲ್ಲಿ ಪ್ರಭಾವ ಬೀರುತ್ತಿತ್ತು. ನಾವು … Read more

ಚುನಾವಣಾ ಆಯೋಗ ದುರುಪಯೋಗಪಡಿಸಿಕೊಂಡು ಕರ್ನಾಟಕದಲ್ಲೂ ಗೆಲ್ಲಲು ಬಿಜೆಪಿ ಹುನ್ನಾರ : ಪ್ರಿಯಾಂಕ ಖರ್ಗೆ

ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಆಯೋಗವನ್ನು ದುರುಪಯೋಗ ಪಡಿಸಿಕೊಂಡು ಗೆದ್ದಿರುವಂತೆ ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲೂ ಬಿಜೆಪಿ ಹುನ್ನಾರ ನಡೆಸಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ ಖರ್ಗೆ ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಚುನಾವಣಾ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ನಾಶ ಮಾಡಿದ್ದಾರೆ. ಆಯೋಗವನ್ನು ತನ್ನ ಜೇಬಿನಲ್ಲಿ ಇಟ್ಟುಕೊಂಡು ದುರುಪಯೋಗ ಪಡಿಸಿಕೊಂಡಿದ್ದಾರೆ. ಅಸ್ಸಾಂ ಮತ್ತು ಪಶ್ಚಿಮ ಬಂಗಾಲದಲ್ಲಿ ಬಿಜೆಪಿಯ ಗೆಲುವಲ್ಲ, ಚುನಾವಣಾ ಆಯೋಗದ ಗೆಲುವು ಎಂದು ಟೀಕಿಸಿದರು. ಮಹಾರಾಷ್ಟ್ರ, ಮಧ್ಯಪ್ರದೇಶ, ಹರ್ಯಾಣದಂತೆ ಪಶ್ಚಿಮ ಬಂಗಾಳ … Read more

‘ನನ್ನನ್ನು 3 ವರ್ಷ ವನವಾಸಕ್ಕೆ ಕಳಿಸಿದ್ರಿ, ಈಗೇನು ಮಾಡ್ತೀರಿ?’ – ಸಿಎಂ ಆರೋಪಕ್ಕೆ ಶಾಸಕ ಜೀವರಾಜ್ ತಿರುಗೇಟು!

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಫಲಿತಾಂಶ ಈಗ ರಾಜ್ಯ ರಾಜಕೀಯದಲ್ಲಿ ದೊಡ್ಡ ವಾಕ್ಸಮರಕ್ಕೆ ಕಾರಣವಾಗಿದೆ. ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅಕ್ರಮವೆಸಗಿ ಗೆದ್ದಿದ್ದಾರೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಂಭೀರ ಆರೋಪಕ್ಕೆ ಶಾಸಕ ಜೀವರಾಜ್ ಅವರು ಅತ್ಯಂತ ತೀಕ್ಷ್ಣವಾಗಿ ಮತ್ತು ಭಾವುಕರಾಗಿ ಪ್ರತಿಕ್ರಿಯಿಸಿದ್ದಾರೆ. ‘ಸಿಎಂ ಮತ್ತು ಡಿಸಿಎಂ ಅಂತಹ ದೊಡ್ಡವರು ನನ್ನಂತಹ ಸಣ್ಣವನ ಮೇಲೆ ಈ ರೀತಿ ಸವಾರಿ ಮಾಡುತ್ತಿರುವುದು ಸರಿಯಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಣ್ಣ ಕೆಲಸ ಮಾಡಿಸಿಕೊಳ್ಳಲೂ ಆಗಿಲ್ಲ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ … Read more

ನಾನು ರಾಜೀನಾಮೆ ನೀಡಲ್ಲ : ಮತದಾನದ ನಂತರವೂ ಇವಿಎಂ ಯಂತ್ರಗಳಲ್ಲಿ ಶೇ. 80-95ರಷ್ಟು ಚಾರ್ಜ್ : ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಹೀನಾಯ ಸೋಲನುಭವಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ, ನನ್ನನ್ನು ಯಾರೂ ಪದಚ್ಯುತಗೊಳಿಸಲು ಸಾಧ್ಯವಿಲ್ಲ ಎಂದು ಗುಡುಗಿದ್ದಾರೆ. ‘ವ್ಯವಸ್ಥಿತಿ ಸಂಚು’ ಚುನಾವಣಾ ಫಲಿತಾಂಶದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಭವನಕ್ಕೆ ಹೋಗಿ ರಾಜೀನಾಮೆ ಸಲ್ಲಿಸಲು ನಿರಾಕರಿಸಿದ್ದಾರೆ. ನಾವು ಜನರ ತೀರ್ಪಿನಿಂದ ಸೋತಿಲ್ಲ, ಬದಲಿಗೆ ವ್ಯವಸ್ಥಿತ ಸಂಚಿನಿಂದ ಸೋತಿದ್ದೇವೆ. ಈ ಚುನಾವಣೆಯ ಅತಿದೊಡ್ಡ ವಿಲನ್ … Read more

ನಾನು ಚುನಾವಣೆಯಲ್ಲಿ ಸೋತಿಲ್ಲ,ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ : ಮಮತಾ ಬ್ಯಾನರ್ಜಿ ಕಿಡಿ

ನಾನು ಚುನಾವಣೆಯಲ್ಲಿ ಸೋತಿಲ್ಲ. ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆಯ ಪ್ರಶ್ನೆಯೇ ಇಲ್ಲ” ಎಂದು ಮಂಗಳವಾರ(ಮೇ5) ಮಮತಾ ಬ್ಯಾನರ್ಜಿ ಕಿಡಿ ಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ”ದುಃಖಕರವೆಂದರೆ, ಜನರ ಪ್ರಜಾಪ್ರಭುತ್ವ ಹಕ್ಕುಗಳನ್ನು ಲೂಟಿ ಮಾಡಲು ಮತ್ತು ಇವಿಎಂ ಅನ್ನು ಲೂಟಿ ಮಾಡಲು ಮುಖ್ಯ ಚುನಾವಣಾಧಿಕಾರಿ ಈ ಚುನಾವಣೆಯಲ್ಲಿ ಖಳನಾಯಕರಾದರು” ಎಂದು ಕೆಂಡಾಮಂಡಲರಾಗಿದ್ದಾರೆ. ”ಮತದಾನದ ನಂತರ ಇವಿಎಂ 80-90% ಚಾರ್ಜ್ ಆಗಿದೆ ಎಂದು ನೀವು ನನಗೆ ಹೇಳಬಲ್ಲಿರಾ? ಅದು ಹೇಗೆ ಸಾಧ್ಯ? ಚುನಾವಣೆಗೆ ಎರಡು ದಿನಗಳ ಮೊದಲು, ಅವರು ನಮ್ಮವರನ್ನು ಬಂಧಿಸಲು … Read more

ಆಟೋ ಸ್ಟ್ಯಾಂಡ್ನಿಂದ ವಿಧಾನಸಭೆಗೆ; ಹಿರಿಯ ನಾಯಕರನ್ನೇ ಮಣಿಸಿ ರಾಯಪುರಂ ಕ್ಷೇತ್ರ ಗೆದ್ದುಕೊಂಡ ಚಾಲಕ

2026ರ ತಮಿಳು ನಾಡು ವಿಧಾನಸಭೆ ಚುನಾವಣೆಯನ್ನು (Tamilnadu Elections 2026 ) ಡೇವಿಡ್ vs ಗೋಲಿಯಾತ್ ಕತೆಗೆ ಹೋಲಿಕೆ ಮಾಡಿ ಕರೆಯಲಾಗುತ್ತಿದೆ. ಅಂದರೆ ದೈತ್ಯನಾಗಿ ಇರುವ ಅಣ್ಣನನ್ನು, ಸಣ್ಣ ತಮ್ಮ ಸೋಲಿಸಿದ ಎನ್ನುವುದು ಈ ಕತೆಯ ಸಾರಾಂಶ. ಮೊದಲ ಬಾರಿ ಚುನಾವಣೆಗೆ ನಿಂತ ಟಿವಿಕೆಯು, ಡಿಎಂಕೆ ಕೋಟೆಯನ್ನು ಹೊಡೆದುರುಳಿಸಿದೆ ಎಂದು ರೂಪಕವಾಗಿ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಈ ಬಾರಿ ವಿಜಯ್ ನೇತೃತ್ವದ ತಮಿಳಿಗ ವೆಟ್ರಿ ಕಳಗಂ ಸುದ್ದಿಯಾಗಿದ್ದು, ಇಬ್ಬರು ಸಾಮಾನ್ಯ ವ್ಯಕ್ತಿಗಳಿಗೆ ಟಿಕೆಟ್ ಕೊಟ್ಟಿದ್ದಕ್ಕೆ. ಹೌದು ಅವರೇ, ಒಬ್ಬರು … Read more

ಬಿಜೆಪಿಯಿಂದ 100 ಸ್ಥಾನ ಲೂಟಿ, ಇದು ಅಕ್ರಮ, ನಾವು ಮತ್ತೆ ಪುಟಿದೇಳುತ್ತೇವೆ: ಮಮತಾ ಬ್ಯಾನರ್ಜಿ

ಬಿಜೆಪಿಯಿಂದ ರಾಜ್ಯದಲ್ಲಿ 100 ಸ್ಥಾನ ಲೂಟಿ, ಇದು ಅಕ್ರಮ. ಇದರ ವಿರುದ್ಧ ನಾವು ಪುಟಿದೇಳುತ್ತೇವೆ ಎಂದು ಬಂಗಾಳ ಸಿಎಂ ಹಾಗೂ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಸೋಮವಾರ ರಾತ್ರಿ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಬಿಜೆಪಿ 100 ಕ್ಕೂ ಹೆಚ್ಚು ಸ್ಥಾನಗಳನ್ನು ಲೂಟಿ ಮಾಡಿದೆ. ಚುನಾವಣಾ ಆಯೋಗವು ಬಿಜೆಪಿಯ ಆಯೋಗ. ನಾನು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇನೆ, ಆದರೆ ಅವರು ಏನನ್ನೂ ಮಾಡುತ್ತಿಲ್ಲ. ಇದು ಗೆಲುವು ಎಂದು ನೀವು ಭಾವಿಸುತ್ತೀರಾ? ಇದು ಅನೈತಿಕ ಗೆಲುವು, ನೈತಿಕ … Read more

ನಮ್ಮದು ಜನಪರ ಸರಕಾರ ಎನ್ನುವುದಕ್ಕೆ ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ಫಲಿತಾಂಶ ಸಾಕ್ಷಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕರ್ನಾಟಕದಲ್ಲಿ ನಮ್ಮ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಕೇವಲ ಘೋಷಣೆಗಳಲ್ಲ, ಜನರ ದಿನನಿತ್ಯದ ಬದುಕಿಗೆ ನಿಜವಾದ ಬೆಂಬಲವಾಗಿ ಪರಿಣಮಿಸಿವೆ. ಜನರ ಕಷ್ಟ, ನೋವು, ಅಗತ್ಯಗಳಿಗೆ ಸ್ಪಂದಿಸಿದ ನಮ್ಮ ಸರ್ಕಾರಕ್ಕೆ ಜನರು ಇದೀಗ ಉಪಚುನಾವಣೆ ಫಲಿತಾಂಶಗಳ ಮೂಲಕ ಸ್ಪಷ್ಟವಾದ ಮನ್ನಣೆ ನೀಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಕರ್ನಾಟಕದ ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ … Read more

ಎರಡೂ ಕಡೆ ‘ಕೈ’ ಹಿಡಿದ ಗ್ಯಾರಂಟಿ : ಪಂಚರಾಜ್ಯ ಚುನಾವಣೆ ಫಲಿತಾಂಶದಿಂದ ನಮ್ಮ ರಾಜ್ಯಕ್ಕೆ ಏನೂ ಆಗುವುದಿಲ್ಲ : ಡಿ.ಕೆ. ಶಿವಕುಮಾರ್

‘ಗ್ಯಾರಂಟಿ ಯೋಜನೆಗಳು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ನಮ್ಮ ಕೈ ಹಿಡಿದಿವೆ. ತಮಿಳುನಾಡಿನದ್ದು ಅಚ್ಚರಿಯ ಫಲಿತಾಂಶವಾಗಿದ್ದು, ಅಲ್ಲಿನ ಜನರ ನಾಡಿಮಿಡಿತ ಗ್ರಹಿಸಲು ಆಗಲಿಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಚುನಾವಣಾ ಫಲಿತಾಂಶದ ಕುರಿತು ವಿಶ್ಲೇಷಿಸಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಕೇರಳದ ಫಲಿತಾಂಶ ನಿರೀಕ್ಷಿತ. ಅಸ್ಸಾಂನಲ್ಲಿ ಕ್ಷೇತ್ರ ಮರುವಿಂಗಡಣೆ ವೇಳೆಯಲ್ಲಿ ಅಲ್ಪಸಂಖ್ಯಾತರು ಒಂದೇ ಕಡೆ ಬರುವಂತೆ ಉಪಾಯವಾಗಿ ಮಾಡಿದ್ದರಿಂದ ನಿರೀಕ್ಷೆಯ ಫಲಿತಾಂಶ ಬಂದಿಲ್ಲ’ ಎಂದು ದೂರಿದರು. ‌’ಚುನಾವಣೆ ಫಲಿತಾಂಶವು ರಾಜ್ಯದಲ್ಲಿ ಏನಾದರೂ ಬದಲಾವಣೆ … Read more

ಕೇರಳ, ತಮಿಳುನಾಡಿನಲ್ಲಿ ಬಿಜೆಪಿ ಕೋಮುವಾದಿ ರಾಜಕಾರಣಕ್ಕೆ ಪ್ರವೇಶ ನಿರಾಕರಣೆ : ಸಿಎಂ ಸಿದ್ಧರಾಮಯ್ಯ

ದಕ್ಷಿಣದ ರಾಜ್ಯಗಳಾದ ಕರ್ನಾಟಕ ಮತ್ತು ತೆಲಂಗಾಣ ರಾಜ್ಯಗಳಂತೆ ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿಯೂ ಬಿಜೆಪಿಯ ಕೋಮುವಾದಿ ರಾಜಕಾರಣಕ್ಕೆ ಪ್ರವೇಶ ಇಲ್ಲ ಎನ್ನುವ ಸ್ಪಷ್ಟ ಸಂದೇಶವನ್ನು ನೀಡಿರುವ ಎರಡು ರಾಜ್ಯಗಳ ಮತದಾರರನ್ನು ದೇಶದ ಎಲ್ಲ ಜಾತ್ಯತೀತ ಮತ್ತು ಪ್ರಜಾಪ್ರಭುತ್ವವಾದಿ ಜನರ ಪರವಾಗಿ ಅಭಿನಂದಿಸುತ್ತೇನೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಕೇರಳದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ನಿರೀಕ್ಷಿತವಾಗಿತ್ತು. ಅಭ್ಯರ್ಥಿಗಳ ಆಯ್ಕೆಯಿಂದ ಹಿಡಿದು ಪ್ರಚಾರದ ಕಾರ್ಯತಂತ್ರದ ವರೆಗೆ ಎಲ್ಲವನ್ನೂ ಆ ರಾಜ್ಯದ ಕಾಂಗ್ರೆಸ್ ನಾಯಕರು ಸಂಘಟಿತರಾಗಿ ನಡೆಸಿದ್ದಾರೆ. ಕೇರಳ … Read more