ಗ್ಯಾರಂಟಿಗಳಿಂದ ಸರ್ಕಾರಕ್ಕೆ ಹೊರೆ | ಡಿಕೆಶಿಗೆ ಜ್ಞಾನೋದಯವಾಗಿದೆ: ಕೇಂದ್ರ ಸಚಿವ ಎಚ್. ಡಿ ಕುಮಾರಸ್ವಾಮಿ
‘ಗ್ಯಾರಂಟಿಗಳಿಗೆ ಖರ್ಚು ಮಾಡಿದ ಹಣವನ್ನು ರಾಜ್ಯ ಸರ್ಕಾರವು ಶಾಲೆ-ಆಸ್ಪತ್ರೆಗಳಿಗೆ ವಿನಿಯೋಗಿಸಿದ್ದರೆ ಸಮಸ್ಯೆ ಪರಿಹಾರವಾಗುತ್ತಿತ್ತು. ಈಗ ಆಸ್ಪತ್ರೆಗಳಲ್ಲಿ ಔಷಧಿಗಳಿಲ್ಲ. ಅವಧಿ ಮುಗಿದ ಔಷಧಿ ವಿತರಿಸಲಾಗುತ್ತಿದೆ’ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು. ‘ಗ್ಯಾರಂಟಿಗಳಿಂದ ಸರ್ಕಾರಕ್ಕೆ ಹೊರೆಯಾಗುತ್ತಿದೆ’ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ತಾಲ್ಲೂಕಿನ ಕೊಡಕಹಳ್ಳಿಯಲ್ಲಿ ಗುರುವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, ‘ಅವರಿಗೆ ತಡವಾಗಿ ಜ್ಞಾನೋದಯವಾಗಿದೆ. ಇದೇ ಮಾತನ್ನು ಆರ್.ವಿ. ದೇಶಪಾಂಡೆ ಹಾಗೂ ಬಸವರಾಜ ರಾಯರೆಡ್ಡಿ ಮೊದಲೇ ಹೇಳಿದ್ದರು’ ಎಂದರು. ‘ರಾಜ್ಯದ ಜನರ ಬಗ್ಗೆ ಭಯಭಕ್ತಿ ಇದ್ದರೆ, ದೇವರಾಜ ಅರಸು … Read more