ಬೆಂಗಳೂರಲ್ಲಿ ಘೋರ ದುರಂತ : ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ಬಿದ್ದು ‘ಮಹಿಳಾ ಟೆಕ್ಕಿ’ ದಾರುಣ ಸಾವು.!

ಬೆಂಗಳೂರಿನಲ್ಲಿ ಘೋರವಾದ ಘಟನೆ ಒಂದು ನಡೆದಿದ್ದು, ಉಸಿರುಗಟ್ಟಿ ಸಾಫ್ಟ್ವೇರ್ ಇಂಜಿನಿಯರ್ ಒಬ್ಬರು ಸಾವನಪ್ಪಿದ್ದಾರೆ. ಮಂಗಳೂರು ಮೂಲದ ಟೆಕ್ಕಿ ಶರ್ಮಿಳ (34) ಮೃತ ದುರ್ದೈವಿ ಎಂದು ತಿಳಿದುಬಂದಿದೆ ಜನವರಿ 3 ರಂದು ಶನಿವಾರ ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸುಬ್ರಮಣ್ಯ ಈ ಒಂದು ಘಟನೆ ಸಂಭವಿಸಿದೆ. ಮನೆಯಲ್ಲಿ ಏಕಾಏಕಿ ಬೆಂಕಿ ಹಾಗೂ ದಟ್ಟವಾದ ಹೊಗೆ ತುಂಬಿಕೊಂಡು ಮಹಿಳೆ ಉಸಿರು ಗಟ್ಟಿ ಮೃತಪಟ್ಟಿರುವ ಘಟನೆ ರಾಮ ಮೂರ್ತಿನಗರ ಪೊಲೀಸ್ ಠಾಣೆ … Read more

ತಮಿಳುನಾಡಿನಲ್ಲಿ ದಳಪತಿ ವಿಜಯ್ ಅವರ ಟಿವಿಕೆ ಜೊತೆಗೆ ಮೈತ್ರಿಗೆ ಬಿಜೆಪಿ ಪರಿಶೀಲನೆ : ಅಮಿತ್ ಶಾ ಹೇಳಿದ್ದೇನು?

ಕೆಲವೇ ತಿಂಗಳಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಗೂ ಮುನ್ನ ವಿರೋಧ ಪಕ್ಷಗಳನ್ನು ಬಲಪಡಿಸುವ ಗುರಿ ಹೊಂದಿರುವ ಬಿಜೆಪಿ, ಹೊಸದಾಗಿ ರಾಜಕಾರಣಕ್ಕೆ ಧುಮಕಿ ರಾಜ್ಯದಲ್ಲಿ ಹವಾ ಸೃಷ್ಟಿಸಿರುವ ದಳಪತಿ ವಿಜಯ್ ಅವರ ನೇತೃತ್ವದ ಟಿವಿಕೆ ಜೊತೆ ಮೈತ್ರಿ ಮಾಡಿಕೊಳ್ಳಲು ಗಂಭೀರವಾಗಿ ಪರಿಶೀಲನೆ ನಡೆಸಿದೆ ಎಂದು ಸೋಮವಾರ ವರದಿಯಾಗಿದೆ. ಕಳೆದ ಎರಡು ದಿನಗಳಿಂದ ತಮಿಳುನಾಡು ರಾಜ್ಯದ ಪ್ರವಾಸದಲ್ಲಿರುವ ಕೇಂದ್ರ ಗೃಹಸಚಿವ ಅಮಿತ್ ಶಾ, ಆಡಳಿತರೂಢ ಡಿಎಂಕೆಯ ಎಲ್ಲಾ ವಿರೋಧಿ ಶಕ್ತಿಗಳನ್ನು ಒಗ್ಗೂಡಿಸಲು ಮುಂದಾಗಿದ್ದಾರೆ ಎನ್ನಲಾಗಿದ್ದು, ಅದಕ್ಕಾಗಿ ಉದ್ದೇಶಪೂರ್ವಕವಾಗಿ ಎಐಎಡಿಎಂಕೆ ನಾಯಕ … Read more

ಇರಾನ್, ಅಮೆರಿಕಾದಿಂದ ಭದ್ರತೆ ಕರೆಸಿಕೊಳ್ಳುವುದಾದರೆ, ನೀವೇನು ದನ ಕಾಯೋದಿಕ್ಕೆ ಇದ್ದೀರಾ : ಎಚ್.ಡಿ ಕುಮಾರಸ್ವಾಮಿ ವಾಗ್ದಾಳಿ

ಬಳ್ಳಾರಿಯಲ್ಲಿ ಶಾಸಕ ಜನಾರ್ಧನ ರೆಡ್ಡಿ ಅವರ ಮನೆಯ ಮುಂದೆ ಬ್ಯಾನರ್ ವಿಚಾರಕ್ಕೆ ಗಲಾಟೆ ಆಗಿ ಫೈರಿಂಗ್ ನಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವನಪ್ಪಿದ್ದ ಈ ಒಂದು ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಕಿಡಿ ಕಾರಿದ್ದು ಇರಾನ್ ಅಮೆರಿಕಾದಿಂದ ಭದ್ರತೆ ಕರೆಸಿಕೊಳ್ಳುವ ಹಾಗಿದ್ದರೆ ನೀವೇನು ದನ ಕಾಯೋಕೆ ಇದ್ದೀರಾ ಎಂದು ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಬಳ್ಳಾರಿ ಘರ್ಷಣೆಗೆ ಕ್ಷುಲ್ಲಕ ಕಾರಣ ಅಂತಾರೆ. ಇದು … Read more

ತಾಸುಗಟ್ಟಲೆ ಮೊಬೈಲ್ ನಲ್ಲಿ ವೈದ್ಯನ ಲಲ್ಲೆ – ನರಳಿ ನರಳಿ ಪ್ರಾಣಬಿಟ್ಟ ರೋಗಿ.!

ಚಿಕ್ಕಮಗಳೂರಲ್ಲಿ (Chikkamagalur ) ವೈದ್ಯರ (Doctor) ಯಡವಟ್ಟಿಗೆ ಅಮಾಯಕ ಜೀವವೊಂದು ಬಲಿಯಾಗಿದೆ. ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ರೋಗಿಯೊಬ್ಬರು ಮೃತಪಟ್ಟಿದ್ದಾರೆ. ಸೋಮವಾರ ಬೆಳಗಿನ ಜಾವ ಘಟನೆ ನಡೆದಿದೆ.ಲಕ್ಷ್ಮಿಪುರ ಗ್ರಾಮದ ಮಂಜುನಾಥ್ (60) ಉಸಿರಾಟದ ಸಮಸ್ಯೆಯಿಂದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಆದರೆ, ತುರ್ತು ಚಿಕಿತ್ಸಾ ಘಟಕದಲ್ಲಿ ಸ್ಟೆಚ್ಚರ್ ಮೇಲೆ ತೀವ್ರ ಉಸಿರಾಟದ ತೊಂದರೆಯಿಂದ ನರಳುತ್ತಿದ್ದರೂ ಚಿಕಿತ್ಸೆ ನೀಡಲಾಗಿಲ್ಲ ಎನ್ನಲಾಗಿದೆ. ಈ ವೇಳೆ ಕರ್ತವ್ಯದಲ್ಲಿದ್ದ ವೈದ್ಯರು ಮೊಬೈಲ್‌ನಲ್ಲಿ ಮಾತನಾಡುತ್ತಾ ಕುಳಿತಿದ್ದರು ಎಂದು ಕುಟುಂಬದವರು … Read more

ಜನಾರ್ಧನ್ ರೆಡ್ಡಿ Z+ ಆದ್ರೂ ಕೇಳಲಿ, ಇರಾನ್ ನಿಂದ ಭದ್ರತೆನಾದ್ರೂ ಕರೆಸಿಕೊಳ್ಳಲಿ : ಡಿಸಿಎಂ ಡಿಕೆ ಶಿವಕುಮಾರ್ ಲೇವಡಿ

ಬಳ್ಳಾರಿಯಲಿ ಬ್ಯಾನರ್ ವಿಚಾರವಾಗಿ ಗಲಾಟೆ ನಡೆದು, ಖಾಸಗಿ ಗನ್ ಮ್ಯಾನ್ ಗಳು ನಡೆಸಿದ ಫೈರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವನಪ್ಪಿದ್ದಾನೆ. ಇದೀಗ ಈ ಒಂದು ಘಟನೆ ನಡೆದ ಬಳಿಕ, ಶಾಸಕ ಜನಾರ್ಧನ ರೆಡ್ಡಿ ಸಿಎಂ ಸಿದ್ದರಾಮಯ್ಯ ಅಮಿತ್ ಶಾ ಅವರಿಗೆ ನನಗೆ Z+ ಭದ್ರತೆ ಬೇಕು ಎಂದು ಪತ್ರ ಬರೆದು ಮನವಿ ಮಾಡಿದ್ದಾರೆ. ಶಾಸಕ ಜನಾರ್ಧನ ರೆಡ್ಡಿ ಅವರು ಭದ್ರತೆಗೆ ಮನವಿ ಮಾಡಿಕೊಂಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಡಿಸಿಎಂ ಡಿಕೆ ಶಿವಕುಮಾರ್ ಇದ್ದಾರೆ. ಗಂಗಾವತಿ ಶಾಸಕ ಜನಾರ್ದನ ರೆಡ್ಡಿ … Read more

ಓಂ ಶಕ್ತಿ ಮಾಲಾಧಾರಿಗಳ ಮೇಲೆ ಬಾಲಕರಿಂದ ಕಲ್ಲೆಸೆತ, ಮೂವರು ಅರೆಸ್ಟ್ : ಗೃಹ ಸಚಿವ ಜಿ. ಪರಮೇಶ್ವರ್‌

ಬೆಂಗಳೂರಿನಲ್ಲಿ ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಜೆಜೆ ನಗರದಲ್ಲಿ ಓಂ ಶಕ್ತಿ ಮೆರವಣಿಗೆ ಸಂದರ್ಭದಲ್ಲಿ ಮಾಲಾಧಾರಿಗಳ ಮೇಲೆ ಕಲ್ಲುತೂರಾಟ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಗೃಹ ಸಚಿವ ಜಿ ಪರಮೇಶ್ವರ್ ಅವರು ಇದೀಗ ಪ್ರತಿಕ್ರಿಯೆ ನೀಡಿದ್ದು, ಓಂ ಶಕ್ತಿ ಮಾಲಾಧಾರಿಗಳ ಮೇಲೆ ನಾಲ್ಕೈದು ಚಿಕ್ಕ ಹುಡುಗರು ಕಲ್ಲು ಎಸೆದಿದ್ದಾರೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಜೆಜೆಆರ್ ನಗರದ ವಿಎಸ್ ಗಾರ್ಡನ್‌ನ ಓಂ ಶಕ್ತಿ ದೇವಸ್ಥಾನದ ಬಳಿ ಮಾಲಾಧಾರಿಗಳ ಮೇಲೆ ನಡೆದ ಕಲ್ಲು … Read more

ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಕುಟುಂಬದ ರಂಪಾಟಕ್ಕೆ 29ರ ಯುವಕ ಬಲಿ

ಅಪ್ಪ ಮಗನಿಂದ ಪ್ರತಿ ದಿನ ಮನೆಯಲ್ಲಿ ಜಗಳ. ಕುಡಿದು ಬರುತ್ತಿದ್ದ ಅಪ್ಪನ ನಿಯಂತ್ರಿಸಲು ಮಗ ಹೊರಟಿದ್ದರೆ, ಮಗನ ಮೇಲೆ ಸವಾರಿ ಮಾಡುವುದು ಅಪ್ಪನ ಪ್ರತಿನಿತ್ಯದ ಕೆಲಸವಾಗಿತ್ತು. ಹೀಗೆ ಕುಡಿದ ಬಂದ ತಂದೆ ಕ್ಷುಲ್ಲಕ ಕಾರಣಕ್ಕೆ ಜಗಳವಾಡಿದ್ದಾನೆ. ಜಗಳ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯವಾಗಿದೆ. ಕುಡಿದ ಮತ್ತಿನಲ್ಲಿ ತಂದೆ ತನ್ನ ಮಗನನ್ನೇ ಹತ್ಯೆಗೈದ ಘಟನೆ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಆನೆಗುಂಡಿ ಗ್ರಾಮದಲ್ಲಿ ನಡೆದಿದೆ. ಜಗಳದಿಂದ ಛಿದ್ರವಾದ ಕುಟುಂಬ ರಮೇಶ್ ಅಚಾರ್ ಕುಟುಂಬ ಛಿದ್ರವಾಗಿದೆ. ಇದ್ದ ಒಬ್ಬ ಮಗ 29 ವರ್ಷದ … Read more

ನಮಗೆ ಪ್ರಾಣಭೀತಿ ಇದೆ ದಯವಿಟ್ಟು Z+ ಭದ್ರತೆ ಒದಗಿಸಿ : ಸಿಎಂ ಸಿದ್ದರಾಮಯ್ಯಗೆ ಶಾಸಕ ಜನಾರ್ದನ ರೆಡ್ಡಿ ಪತ್ರ.!

ಬಳ್ಳಾರಿ ಘರ್ಷಣೆಗೆ ಸಂಬಂಧಿಸಿದಂತೆ ಶಾಸಕ ಜನಾರ್ದನ ರೆಡ್ಡಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಿಎಂ ಸಿದ್ದರಾಮಯ್ಯ ಪತ್ರ ಬರೆದು, ತಮಗೆ Z + ಭದ್ರತೆ ಒದಗಿಸುವಂತೆ ಮನವಿ ಮಾಡಿದ್ದಾರೆ. ಜನಾರ್ದನ ರೆಡ್ಡಿ ಅವರು ಪತ್ರದಲ್ಲಿ, ನಮಗೆ ಪ್ರಾಣಭೀತಿ ಇದೆ ದಯವಿಟ್ಟು ನಮಗೆ ರಕ್ಷಣೆ ನೀಡಿ, Z ಶ್ರೇಣಿಯ ರಕ್ಷಣೆ ಕೊಡಿ ಹಾಗೂ ಶಾಸಕ ನಾರಾ ಭರತ್ ರೆಡ್ಡಿ, ಸತೀಶ್ ರೆಡ್ಡಿ ಬಂಧನಕ್ಕೂ ಮನವಿ ಮಾಡಿದ್ದಾರೆ. ಜೊತೆಗೆ ಪೊಲೀಸ್ ಅಧಿಕಾರಿಗಳ ವಿರುದ್ಧವೂ ಕ್ರಮಕ್ಕೆ ಜನಾರ್ದನ ರೆಡ್ಡಿ … Read more

ಸಾರ್ವಜನಿಕರ ‘ವಾಹನ ತಪಾಸಣೆ’ ವೇಳೆ ಸೌಜನ್ಯದಿಂದ ವರ್ತಿಸಿ : ರಾಜ್ಯದ ಎಲ್ಲಾ ಪೊಲೀಸರಿಗೆ ಖಡಕ್ ಆದೇಶ.!

ವಾಹನ ತಪಾಸಣಾ/ಪರಿಶೀಲನೆ ಸಮಯದಲ್ಲಿ ಸಿಬ್ಬಂದಿಗಳು ವಾಹನ ಚಾಲಕರಿಗೆ ಕಿರುಕುಳ, ಹಲ್ಲೆ, ಮತ್ತು ದುರ್ನಡತೆ ತೋರುತ್ತಿರುವ ಬಗ್ಗೆ. ಪೊಲೀಸ್ ಅಧಿಕಾರಿ ಆವಾಚ್ಯ ಶಬ್ದಗಳ ಬಳಕೆ ಮಾಡುತ್ತಿರುವ ದೂರು ಕೇಳಿಬಂದಿದ್ದು, ಈ ಹಿನ್ನೆಲೆ ಆರ್. ಹಿತೇಂದ್ರ, ಐಪಿಎಸ್) ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು ಸಂಚಾರ ಮತ್ತು ರಸ್ತೆ ಸುರಕ್ಷತೆ, ಬೆಂಗಳೂರು ಇವರು ಮಹತ್ವದ ಆದೇಶ ಹೊರಡಿಸಿದ್ದಾರೆ. ಏನಿದೆ ಆದೇಶದಲ್ಲಿ..? ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ದೂರುದಾರರ ಅರ್ಜಿಯಲ್ಲಿ ರಾಜ್ಯ ಪೊಲೀಸ್ ಇಲಾಖೆಯು ಶಿಸ್ತಿನ ಇಲಾಖೆಯಾಗಿದ್ದು, ಕೆಲವು ಅಧಿಕಾರಿ ಸಿಬ್ಬಂದಿಗಳು ತೋರುತ್ತಿರುವ … Read more

ನಿಧಿ ಆಸೆಗೆ ಪೋಷಕರಿಂದಲೇ ಮಗು ಬಲಿಗೆ ಯತ್ನ.? 8 ತಿಂಗಳ ಕಂದಮ್ಮನ ರಕ್ಷಣೆ – ಜೀವ ಉಳಿಸಿದ ಚೈಲ್ಡ್‌ಲೈನ್ ಕರೆ!

ಬೆಂಗಳೂರು ಗ್ರಾಮಾಂತರ : ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಗ್ರಾಮದಲ್ಲಿ ಮಾನವೀಯತೆ ತಲೆತಗ್ಗಿಸುವ ಘಟನೆ ಬೆಳಕಿಗೆ ಬಂದಿದೆ. ನಿಧಿ ಸಿಗಲಿ ಎಂಬ ಅಂಧ ನಂಬಿಕೆಯ ಹಿನ್ನೆಲೆಯಲ್ಲಿ ದತ್ತು ಪಡೆದ 8 ತಿಂಗಳ ಗಂಡು ಮಗುವನ್ನು ಬಲಿ ಕೊಡುವ ತಯಾರಿ ನಡೆಸಲಾಗಿತ್ತು ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸಮಯಕ್ಕೆ ಸರಿಯಾಗಿ ಮಾಹಿತಿ ದೊರಕಿದ್ದರಿಂದ ಅಧಿಕಾರಿಗಳು ದಾಳಿ ನಡೆಸಿ ಮಗುವನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಲಿ ಪೂಜೆಗೆ ಸಿದ್ಧತೆ? ಸೂಲಿಬೆಲೆ ಗ್ರಾಮದ ಜನತಾ ಕಾಲೋನಿಯಲ್ಲಿರುವ ಸೈಯದ್ ಇಮ್ರಾನ್ ಎಂಬುವವರ ಮನೆಯಲ್ಲಿ ಈ … Read more