ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಗೆ ಹಿಗ್ಗಾಮುಗ್ಗಾ ಥಳಿಸಿದ ವಾರ್ಡನ್ : ಆಘಾತಕಾರಿ ವಿಡಿಯೋ ವೈರಲ್

ಹಾಸ್ಟೆಲ್ ವಾರ್ಡನ್ ವಿದ್ಯಾರ್ಥಿನಿಯೊಬ್ಬಳೊಂದಿಗೆ ಕಠೋರವಾಗಿ ವರ್ತಿಸಿದ್ದಾರೆ. ಎಸ್ಸಿ ಬಾಲಕಿಯರ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ವಾರ್ಡನ್ ಭವಾನಿ ಥಳಿಸಿದ ಘಟನೆ ಜಯಶಂಕರ್ ಭೂಪಾಲಪಲ್ಲಿ ಜಿಲ್ಲಾ ಕೇಂದ್ರದಲ್ಲಿ ಬೆಳಕಿಗೆ ಬಂದಿದೆ. ಹಾಸ್ಟೆಲ್ ವಾರ್ಡನ್ ಭವಾನಿ ಮೂರನೇ ವರ್ಷದ ಪದವಿ ವಿದ್ಯಾರ್ಥಿನಿಯೊಬ್ಬಳನ್ನು ಕೋಲು ಮತ್ತು ಕೈಗಳಿಂದ ಮನಬಂದಂತೆ ಥಳಿಸಿದ್ದಾರೆ. ಈ ಘಟನೆಯನ್ನು ಅಲ್ಲಿದ್ದ ಸಹ ವಿದ್ಯಾರ್ಥಿಗಳು ವಿಡಿಯೋದಲ್ಲಿ ಸೆರೆಹಿಡಿದಿದ್ದಾರೆ. ಕಳೆದ ತಿಂಗಳು 24 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿದ್ಯಾರ್ಥಿಯನ್ನು ಒಂದು ಕಡೆ ನಿಲ್ಲಿಸಿ ಕೋಲುಗಳಿಂದ ಮತ್ತು ಇನ್ನೊಂದು ಕಡೆ … Read more

ರೈಲ್ವೆಯ ನಿವೃತ್ತ ಉದ್ಯೋಗಿ ಸಾವು, ಮಗಳ ದೇಹದಲ್ಲಿ ಮಾಂಸವೇ ಇಲ್ಲ, ಕೇರ್ ಟೇಕರ್ ಆಗಿ ನೇಮಕಗೊಂಡಿದ್ದವರು ಮಾಡಿದ್ದೇನು?

ಕೆಲವು ವರ್ಷಗಳ ಹಿಂದೆ ಪತ್ನಿ ತೀರಿಕೊಂಡಿದ್ದರು. ಮಗಳು ಮಾನಸಿಕ ಅಸ್ವಸ್ಥೆ, ಏನು ಮಾಡಬೇಕೆಂದು ತೋಚದೆ ರೈಲ್ವೆಯ ನಿವೃತ್ತ ಉದ್ಯೋಗಿ ಕೇರ್ ಟೇಕರ್ ನೇಮಿಸಿಕೊಂಡಿದ್ದರು. ಅವರು ಆರೈಕೆದಾರರಾಗಿರಲಿಲ್ಲ, ಬದಲಾಗಿ ಪ್ರಾಣವನ್ನೇ ತೆಗೆಯುವ ಹಂತಕರಾಗಿದ್ದರು. ಸುಮಾರು ಐದು ವರ್ಷಗಳ ಕಾಲ ಕೇರ್ ಟೇಕರ್ ಅವರನ್ನು ಬಂಧಿಸಿ ಚಿತ್ರಹಿಂಸೆ ನೀಡಿದ್ದರು. ಹೀಗಾಗಿ ಆ ವ್ಯಕ್ತಿ ಸಾವನ್ನಪ್ಪಿದ್ದಾರೆ. ಅವರ ಮಗಳ ಸ್ಥಿತಿ ಚಿಂತಾಜನಕವಾಗಿದೆ. ಮಗಳ ದೇಹದಲ್ಲಿ ಒಂದಿಷ್ಟು ಮಾಂಸವೂ ಇಲ್ಲದೆ ನಿತ್ರಾಣಳಾಗಿದ್ದಾಳೆ. ಓಂಪ್ರಕಾಶ್ ಸಿಂಗ್ ರಾಥೋಡ್ (70), ಭಾರತೀಯ ರೈಲ್ವೆಯಲ್ಲಿ ಮಾಜಿ ಹಿರಿಯ … Read more

ಕೋಗಿಲು ಲೇಔಟ್ ನಲ್ಲಿ ಮನೆ ಕಳೆದುಕೊಂಡ ಅರ್ಹರಿಗಷ್ಟೇ ‘ಸರ್ಕಾರಿ’ ಮನೆ, ಎಲ್ಲರಿಗೂ ಇಲ್ಲ ; ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಕೋಗಿಲು ಬಡಾವಣೆಯಲ್ಲಿ ಮನೆ ಕಳೆದುಕೊಂಡಿರುವ ಅರ್ಹರಿಗೆ ಬೈಯ್ಯಪ್ಪನಹಳ್ಳಿಯ ವಸತಿ ಸಮುಚ್ಚಯದಲ್ಲಿ ತಲಾ ₹11.20 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಮನೆಗಳನ್ನು ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ವಸತಿ ಸಚಿವ ಜಮೀರ್ ಅಹಮದ್‌ ಖಾನ್ ಹಾಗೂ ಅಧಿಕಾರಿಗಳ ಜತೆ ಸೋಮವಾರ ಸಭೆ ನಡೆಸಿದ ಬಳಿಕ ಅವರು, ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ‘ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಹಾಯಧನ ಲಭ್ಯವಿದೆ. ಗ್ರೇಟರ್ ಬೆಂಗಳೂರು … Read more

ಬೆಂಗಳೂರಿನ ಪಿಜಿ ಕಟ್ಟಡದಲ್ಲಿ ಸಿಲಿಂಡರ್ ಸ್ಫೋಟ, ಎಂಜಿನೀಯರ್ ಸಾವು, ಮೂವರಿಗೆ ಗಾಯ

ಬೆಂಗಳೂರಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಪಿಜಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಸಾಫ್ಟ್‌ವೇರ್ ಎಂಜಿನೀಯರ್ ಮೃತಪಟ್ಟಿದ್ದರೆ, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. 7 ಹಿಲ್ಸ್ ಸಾಯಿ ಕೊಲಿವಿಂಗ್ ಪಿಜಿಯಲ್ಲಿ ಈ ಅವಘಡ ಸಂಭವಿಸಿದೆ. ಡೈನಿಂಗ್ ಹಾಲ್ ಹಾಗೂ ಅಡುಗೆಕೋಣೆ ಬಳಿ ಸಿಲಿಂಡರ್ ಸ್ಫೋಟಗೊಂಡಿದೆ. 50ಕ್ಕೂ ಹೆಚ್ಚು ಮಂದಿ ಈ ಪಿಜಿಯಲ್ಲಿ ತಂಗಿದ್ದಾರೆ. ಗ್ಯಾಸ್ ಲೀಕ್ ಆಗಿ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗಿದೆ. ಬಳ್ಳಾರಿ ಮೂಲದ ಅರವಿಂದ್ ಸಾಫ್ಟ್ ವೇರ್ ಇಂಜಿನಿಯರ್ ಮೃತ ಅರವಿಂದ್ ಇತ್ತೀಚೆಗಷ್ಟೇ ಈ ಪಿಜಿಗೆ ಸೇರಿಕೊಂಡಿದ್ದರು. ಸಾಫ್ಟ್‌ವೇರ್ … Read more

ಮಗಳಿಗೆ ಗಾಳ, ತಾಯಿಗೆ ಬೆಂಕಿ ಹಚ್ಚಿದ್ದ ಕಿರಾತಕ ಕೊನೆಗೂ ಅಂದರ್!

ಪುತ್ರಿಯನ್ನು ಮದುವೆ ಮಾಡಿಕೊಡಲಿಲ್ಲವೆಂಬ ಕಾರಣಕ್ಕೆ ಆಕೆಯ ತಾಯಿಗೆ ವ್ಯಕ್ತಿಯೋರ್ವ ಬೆಂಕಿ (fire)ಹಚ್ಚಿರುವಂತಹ ಘಟನೆ ಬೆಂಗಳೂರಿನ ಬಸವೇಶ್ವರ ನಗರದ ಭೋವಿ ಕಾಲೋನಿಯಲ್ಲಿ ನಡೆದಿದೆ. ಗೀತಾ ಮೃತ ಮಹಿಳೆ. ಮುತ್ತು ಅಭಿಮನ್ಯು ಬೆಂಕಿ ಹಚ್ಚಿದ ವ್ಯಕ್ತಿ. ಸದ್ಯ ಆರೋಪಿ ಮುತ್ತು ಅಭಿಮನ್ಯುವನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ (Arrested). ಇನ್ನು ಗೀತಾ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಮಗಳನ್ನ ಮದುವೆ ಮಾಡಿಕೊಡು ಅಂತ ತಾಯಿಗೆ ಬೆಂಕಿ ಹಾಕಿದ್ದ ಕಿರಾತಕ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ಕಳೆದ ಮಂಗಳವಾರ ಬಸವೇಶ್ವರ ನಗರದ ಭೋವಿ ಕಾಲೋನಿಯ … Read more

ಕನ್ನಡದ ಖ್ಯಾತ ಸೀರಿಯಲ್ ನಟಿ ನಂದಿನಿ ಆತ್ಮಹತ್ಯೆಗೆ ಶರಣು : ಆರ್ ಆರ್ ನಗರದಲ್ಲಿ ದುರಂತ ಅಂತ್ಯ

ಕಿರುತೆರೆ ಸೀರಿಯಲ್ಗಳ ಮೂಲಕ ಜನಪ್ರಿಯತೆ ಪಡೆದಿದ್ದ ನಟಿ ನಂದಿನಿ ಸಿಎಂ ಅವರು ಮೃತರಾಗಿದ್ದಾರೆ. ಕನ್ನಡದ ಧಾರಾವಾಹಿಗಳು ಮಾತ್ರವಲ್ಲದೇ ತಮಿಳಿನ ಸೀರಿಯಲ್ನಲ್ಲೂ ನಂದಿನಿ ಅವರು ಅವಕಾಶ ಪಡೆದಿದ್ದರು. ಆದರೆ ಈಗ ಅವರು ಬೆಂಗಳೂರಿನ ಆರ್ಆರ್ ನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. ಕನ್ನಡ ಮತ್ತು ತಮಿಳು ಧಾರಾವಾಹಿಗಳಲ್ಲಿ (Serial) ನಟಿಸಿ ಖ್ಯಾತಿ ಪಡೆದಿದ್ದ ನಂದಿನಿ ಸಿಎಂ (Nandini CM) ಅವರು ನಿಧನರಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡು ಅವರು ಕೊನೆಯುಸಿರು ಎಳೆದಿದ್ದಾರೆ ಎನ್ನಲಾಗುತ್ತಿದೆ. ಬೆಂಗಳೂರಿನ ಆರ್ಆರ್ ನಗರದಲ್ಲಿ ನಂದಿನಿ ಅವರು … Read more

Fatty Liver : ಮದ್ಯಪಾನ ಮಾಡದಿದ್ದರೂ ಲಿವರ್ ಹಾಳಾಗಬಹುದು! ಫ್ಯಾಟಿ ಲಿವರ್ ಇರುವವರು ಈ ಪಾನೀಯಗಳಿಂದ ದೂರವಿರಿ

Fatty Liver : ಇಂದಿನ ಬದಲಾದ ಜೀವನಶೈಲಿ ಮತ್ತು ಅನಾರೋಗ್ಯಕರ ಆಹಾರ ಪದ್ಧತಿಯಿಂದಾಗಿ ‘ಫ್ಯಾಟಿ ಲಿವರ್’ (Fatty Liver) ಸಮಸ್ಯೆ ಸಾಮಾನ್ಯವಾಗುತ್ತಿದೆ. ಕೇವಲ ಮದ್ಯಪಾನ ಮಾಡುವುದರಿಂದ ಮಾತ್ರ ಲಿವರ್ ಹಾಳಾಗುತ್ತದೆ ಎಂದು ನೀವು ಭಾವಿಸಿದ್ದರೆ ಅದು ತಪ್ಪು. ಹಾರ್ವರ್ಡ್ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಸೌರಭ್ ಸೇಥಿ ಅವರ ಪ್ರಕಾರ, ನಾವು ದಿನನಿತ್ಯ ಸೇವಿಸುವ ಕೆಲವು ಪಾನೀಯಗಳು ಲಿವರ್ ಪಾಲಿಗೆ ವಿಷವಾಗಿ ಪರಿಣಮಿಸಬಹುದು. ಇವುಗಳನ್ನು ತಕ್ಷಣವೇ ನಿಲ್ಲಿಸದಿದ್ದರೆ ಲಿವರ್ ಸಿರೋಸಿಸ್‌ನಂತಹ ಪ್ರಾಣಾಪಾಯದ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚಿದೆ. ಲಿವರ್‌ಗೆ ಮಾರಕವಾಗಿರುವ … Read more

ಜವರಾಯನ ಅಟ್ಟಹಾಸಕ್ಕೆ ನಡುರಸ್ತೆಯಲ್ಲೇ ಪ್ರಾಣಬಿಟ್ಟ ಬಾವ-ಬಾಮೈದ : ಸಿಮೆಂಟ್ ಬಲ್ಕರ್ ಲಾರಿಗೆ ಬೈಕ್ ಡಿಕ್ಕಿ

ಸಿಮೆಂಟ್ ಬಲ್ಕರ್ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ನಾಯಕರಂಡನಹಳ್ಳಿ ಬಳಿ ನಡೆದಿದೆ. ಲಾರಿ ಚಾಲಕ ಏಕಾಏಕಿ ಬ್ರೇಕ್ ಹಾಕಿದ ಕಾರಣ ಹಿಂಬದಿ ಇದ್ದ ಬೈಕ್ ನಿಯಂತ್ರಣ ತಪ್ಪಿ ಡಿಕ್ಕಿಯಾಗಿದೆ. ಅಶೋಕ್ ಮತ್ತು ಪವನ್ ಕುಮಾರ್ ಘಟನೆಯಲ್ಲಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಮೂಲತಃ ಹಿಂದೂಪುರದವರಾದ ಅಶೋಕ್ ಮತ್ತು ಪವನ್ ಕುಮಾರ್ ವೀಕೆಂಡ್ ಅಂತ ಊರಿಗೆ ಬಂದಿದ್ದು ಗ್ರಾಮದಲ್ಲಿ ಕಾಲ ಕಳೆದಿದ್ದರು. ಪವನ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ … Read more

ಹುಬ್ಬಳ್ಳಿ ಮರ್ಯಾದಾ ಹತ್ಯೆ ಬೆನ್ನಲ್ಲೇ ಹೊಸ ಕಾನೂನು ತರಲು ಮುಂದಾದ ಸರ್ಕಾರ : ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲಿ ಮರ್ಯಾದಾ ಹತ್ಯೆ ತಡೆ ಸಂಬಂಧ ಕಾನೂನು ಜಾರಿಗೊಳಿಸುವ ವಿಚಾರವನ್ನು ಗಂಭೀರವಾಗಿ ಪರಿಗಣಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕನ್ನಡ ಹೋರಾಟಗಾರರ ಸಮಿತಿಯಿಂದ ಭಾನುವಾರ ಅರಮನೆ ಮೈದಾನದಲ್ಲಿ ನಡೆದ ‘ಜನರಾಜ್ಯೋತ್ಸವ’ ಕಾರ್ಯಕ್ರಮದಲ್ಲಿ ಅವರು ಈ ವಿಚಾರ ಪ್ರಸ್ತಾಪಿಸಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಾಮಾಜಿಕ ಹೋರಾಟಗಾರ್ತಿ ಕೆ.ನೀಲಾ ಅವರು, ಅನ್ಯಜಾತಿಯ ಯುವಕನನ್ನು ವಿವಾಹ ಆಗಿದ್ದ ಕಾರಣಕ್ಕೆ ತಂದೆಯೊಬ್ಬರು ಗರ್ಭಿಣಿ ಮಗಳನ್ನೇ ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ ಎಂದು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಕಾನೂನು ಜಾರಿಗೊಳಿಸುವಂತೆ ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ … Read more

ಕೆನರಾ ಬ್ಯಾಂಕ್ ಗ್ರಾಹಕರಿಗೆ ₹3 ಕೋಟಿ ಪಂಗನಾಮ ; ಗ್ರಾಹಕರ ಹೆಸರಲ್ಲಿ ಸಾಲ ಪಡೆದು ಮ್ಯಾನೇಜರ್ ಎಸ್ಕೇಪ್!

ರಾಷ್ಟ್ರೀಕೃತ ಬ್ಯಾಂಕ್ ಅಂದಮೇಲೆ ಅಲ್ಲಿ ನಮ್ಮ ಹಣ ಸುರಕ್ಷಿತವಾಗಿರುತ್ತದೆ ಎಂಬ ನಂಬಿಕೆ ಎಲ್ಲರಲ್ಲೂ ಇರುತ್ತದೆ. ಆದರೆ, ಅದೇ ಬ್ಯಾಂಕಿನ ಹಿರಿಯ ಅಧಿಕಾರಿಯೊಬ್ಬರು ಗ್ರಾಹಕರ ನಂಬಿಕೆಯನ್ನೇ ಬಂಡವಾಳವಾಗಿಸಿಕೊಂಡು ಬರೋಬ್ಬರಿ 3 ಕೋಟಿ ರೂ. ವಂಚಿಸಿರುವ ಆಘಾತಕಾರಿ ಘಟನೆ ಬೆಂಗಳೂರಿನ ಮಲ್ಲೇಶ್ವರದಲ್ಲಿ ಬೆಳಕಿಗೆ ಬಂದಿದೆ. ನಂಬಿಸಿ ಕುತ್ತಿಗೆ ಕುಯ್ದ ಮ್ಯಾನೇಜರ್: ಮಲ್ಲೇಶ್ವರದ ಕೆನರಾ ಬ್ಯಾಂಕ್ ಶಾಖೆಯಲ್ಲಿ ಸೀನಿಯರ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ರಘು ಎಂಬಾತನೇ ಈ ಬೃಹತ್ ವಂಚನೆಯ ಕಿಂಗ್‌ಪಿನ್. ಈತ ಸುಮಾರು 21 ಮಂದಿ ಗ್ರಾಹಕರ ಹೆಸರಿನಲ್ಲಿ … Read more