ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗಿರೋದಿಲ್ವಾ ಹಕ್ಕು.? ಉತ್ತರಾಧಿಕಾರ ಕಾಯ್ದೆಯ ಬಗ್ಗೆ ಹೈಕೋರ್ಟ್ ನಿಲುವೇನು?
ಹಿಂದೂ ಉತ್ತರಾಧಿಕಾರ ಕಾಯ್ದೆ ಕುರಿತು ಕರ್ನಾಟಕ ಹೈಕೋರ್ಟ್‌ನಲ್ಲಿ ನಡೆದ ವಿಚಾರಣೆ ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಕಾಯ್ದೆಯಲ್ಲಿರುವ ಕೆಲವು ಅಸ್ಪಷ್ಟತೆಗಳು ಮತ್ತು ಮಹಿಳೆಯರ ಹಕ್ಕುಗಳಿಗೆ ಸಂಬಂಧಿಸಿದ ಅಂತರಗಳನ್ನು ಸರಿಪಡಿಸಬೇಕೆಂದು ಹೈಕೋರ್ಟ್ ಕೇಂದ್ರ ಸರ್ಕಾರವನ್ನು ಕೇಳಿದೆ. ಈ ಸಂಬಂಧ ತೀರ್ಪಿನ ಪ್ರತಿಯನ್ನು ಕೇಂದ್ರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವಾಲಯಕ್ಕೂ ಕಳುಹಿಸಲಾಗಿದೆ. ವಿಧವೆಯರು ಮತ್ತು ತಾಯಂದಿರ ಆಸ್ತಿ ಹಕ್ಕುಗಳಿಗೆ ಸಂಬಂಧಿಸಿದ ನಿಬಂಧನೆಗಳಲ್ಲಿ ಸ್ಪಷ್ಟತೆ ಅಗತ್ಯವಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಹಿಂದೂ ಉತ್ತರಾಧಿಕಾರ ಕಾಯ್ದೆ, 1956, ಭಾರತದಲ್ಲಿ ಆಸ್ತಿ ವಿಭಜನೆ … Read more