‘BJP- RSS ಭಿನ್ನಾಭಿಪ್ರಾಯದಿಂದ ಪಿತೂರಿ: ವೀರೇಂದ್ರ ಹೆಗ್ಗಡೆ ಅವರ ಮೇಲೆ ಷಡ್ಯಂತ್ರ ; ನನ್ನ ನಿರ್ಧಾರಕ್ಕೆ ಜೈನ ಸಮುದಾಯದಿಂದ ಮೆಚ್ಚುಗೆ’

ವೀರೇಂದ್ರ ಹೆಗ್ಗಡೆ ಅವರ ಕಷ್ಟಕಾಲದಲ್ಲಿ ನಾನು ತೆಗೆದುಕೊಂಡ ಒಂದು ನಿರ್ಧಾರದಿಂದ ಇಡೀ ದೇಶದ ಜೈನ ಸಮುದಾಯದವರು ನೀವು ಒಳ್ಳೆ ಕೆಲಸ ಮಾಡಿದ್ದೀರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಹೇಳಿದರು. ಆಚಾರ್ಯರತ್ನ ಶ್ರೀ 108 ಬಾಹುಬಲಿ ಮುನಿಮಹಾರಾಜರ 94 ನೇ ಜನ್ಮಜಯಂತಿ ಮಹೋತ್ಸವದಲ್ಲಿ ಬುಧವಾರ ಭಾಗವಹಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಾತನಾಡಿದರು. ವೀರೇಂದ್ರ ಹೆಗಡೆ ಅವರ ಮೇಲೆ ಯಾವ ರೀತಿ ಷಡ್ಯಂತ್ರ ಆಯಿತು. ಆಗ ಅವರ ಕಷ್ಟಕಾಲದಲ್ಲಿ ನಾವು ತೆಗೆದುಕೊಂಡ ನಿರ್ಧಾರವನ್ನು ರಾಷ್ಟ್ರೀಯ, ರಾಜ್ಯ … Read more

ಮಂಡ್ಯದಲ್ಲಿ 9 ನೇ ತರಗತಿ ವಿದ್ಯಾರ್ಥಿನಿಗೆ ‘ಲೈನ್’ : ಶಾಲಾ ಬಸ್ ಅಡ್ಡಗಟ್ಟಿದ ಪುಂಡರು ಅರೆಸ್ಟ್

ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ವಡ್ಡರಹಳ್ಳಿಯಲ್ಲಿ ಪುಂಡರು ಶಾಲಾ ಬಸ್ ತಡೆದ ಘಟನೆ ನಡೆದಿದೆ. ಬಸ್ ತಡೆದ ಪುಂಡರು ಚಾಲಕನಿಗೆ ಆವಾಜ್ ಹಾಕಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ವಡ್ಡರಹಳ್ಳಿ ಗ್ರಾಮದ ಕಿರಣ್ ಮತ್ತು ಗಿರೀಶ್ ಎಂಬ ಯುವಕರು 9 ನೇ ತರಗತಿ ವಿದ್ಯಾರ್ಥಿನಿಗೆ ಲೈನ್ ಹೊಡೆಯುತ್ತಿರುತ್ತಾರೆ. ಬಾಲಕಿಯನ್ನ ಬಸ್ ನಿಂದ ಕೆಳಗೆ ಇಳಿಸುವಂತೆ ಆಗ್ರಹಿಸಿ ಚಾಲಕನಿಗೆ ಆವಾಜ್ ಹಾಕಿದ್ದಾರೆ ಎನ್ನಲಾಗಿದೆ. ಪುಂಡರ ಕೃತ್ಯವನ್ನ ಚಾಲಕ ತನ್ನ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, … Read more

ಪ್ರಧಾನಿ ಮೋದಿ ಕೂಡ ವಿದೇಶ ಪ್ರವಾಸದಲ್ಲೇ ಇರುತ್ತಾರಲ್ಲ; ರಾಹುಲ್ ಕುರಿತ ಬಿಜೆಪಿ ಟೀಕೆಗೆ ಪ್ರಿಯಾಂಕಾ ಗಾಂಧಿ ತಿರುಗೇಟು

ಲೋಕಸಭಾ ಅಧಿವೇಶನ ನಡೆಯುತ್ತಿರುವಾಗಲೇ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಜರ್ಮನಿ ಪ್ರವಾಸಕ್ಕೆ ತೆರಳುತ್ತಿದ್ದಾರೆ. ಈ ಬಗ್ಗೆ ಬಿಜೆಪಿ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದು, ರಾಹುಲ್ ಗಾಂಧಿಯನ್ನು ಪ್ರವಾಸದ ನಾಯಕ, ಅರೆಕಾಲಿಕ ನಾಯಕ ಎಂದೆಲ್ಲ ಲೇವಡಿ ಮಾಡಿದ್ದರು. ಬಿಜೆಪಿಯ ಟೀಕೆಗೆ ಕಾಂಗ್ರೆಸ್‌ನ ಹಿರಿಯ ನಾಯಕಿ ಮತ್ತು ರಾಹುಲ್ ಗಾಂಧಿಯವರ ಸಹೋದರಿ ಪ್ರಿಯಾಂಕಾ ಗಾಂಧಿ ತಿರುಗೇಟು ನೀಡಿದ್ದಾರೆ. ‘ಪ್ರಧಾನಿ ಮೋದಿ ತಮ್ಮ ಕೆಲಸದ ಸಮಯದ ಅರ್ಧದಷ್ಟು ಭಾಗವನ್ನು ದೇಶದ ಹೊರಗೆ ಕಳೆಯುತ್ತಾರೆ. ಹೀಗಿದ್ದಮೇಲೆ ವಿರೋಧ … Read more

ನೆಹರು, ಇಂದಿರಾ ಗಾಂಧಿ, ಸೋನಿಯಾ ಗಾಂಧಿಯಿಂದಲೂ ಮತಗಳ್ಳತನ : ಅಮಿತ್ ಶಾ ವಾಗ್ದಾಳಿ

ರಾಹುಲ್ ಗಾಂಧಿ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ವಿರುದ್ಧ ಮತ ಕಳ್ಳತನದ ಆರೋಪ ಮಾಡಿದ್ದರು. ಈ ಕುರಿತು ಚರ್ಚೆಗೆ ಅವಕಾಶ ಕೋರಿದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭಾಷಣಕ್ಕೆ ಅಡ್ಡಿಪಡಿಸಿದರು. ಇದಾದ ನಂತರ ಅಮಿತ್ ಶಾ (Amit Shah) ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡುವೆ ತೀವ್ರ ವಾಗ್ಸಮರ ಏರ್ಪಟ್ಟಿತು. ಲೋಕಸಭೆಯಲ್ಲಿ ಮಾತನಾಡಿದ ಅಮಿತ್ ಶಾ, ವಿಶೇಷ ತೀವ್ರ ಪರಿಷ್ಕರಣೆ (SIR) ಬಗ್ಗೆ … Read more

ನಕಲಿ ಕ್ಲಿನಿಕ್‌ ಅಟ್ಟಹಾಸಕ್ಕೆ ಮತ್ತೊಂದು ಬಲಿ : ಯೂಟ್ಯೂಬ್ ನೋಡಿ ಶಸ್ತ್ರಚಿಕಿತ್ಸೆ ಮಾಡುತ್ತಿದ್ದ ವೇಳೆ ಮಹಿಳೆ ಸಾವು

ಅಕ್ರಮ ಕ್ಲಿನಿಕ್ (Illegal clinic) ಹೊಂದಿದ್ದ ವ್ಯಕ್ತಿಯೊಬ್ಬ ತನ್ನ ಸೋದರಳಿಯನ ಜತೆ ಸೇರಿ ಮಹಿಳೆಯೊಬ್ಬಳಿಗೆ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಯೂಟ್ಯೂಬ್ ವಿಡಿಯೊ ಟ್ಯುಟೋರಿಯಲ್ ನೋಡಿ ಸರ್ಜರಿ ಮಾಡಿದ ಪರಿಣಾಮ ಮಹಿಳೆ ಮೃತಪಟ್ಟಿದ್ದಾಳೆ. ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಅಕ್ರಮವಾಗಿ ಕ್ಲಿನಿಕ್‌ ನಡೆಸುತ್ತಿದ್ದ ಆರೋಪಿಗಳು ಯಾವುದೇ ವೈದ್ಯಕೀಯ ಅರ್ಹತೆ ಇಲ್ಲದಿದ್ದರೂ ಶಸ್ತ್ರಚಿಕಿತ್ಸೆಗೆ ನಡೆಸಿದ್ದಾರೆ ಪೊಲೀಸರು ತಿಳಿಸಿದ್ದಾರೆ. ತೆಹಬಹಾದೂರ್ ರಾವತ್ ಎಂಬುವವರ ಪತ್ನಿ ಮುನಿಶ್ರಾ ರಾವತ್ ಕಿಡ್ನಿ ಸ್ಟೋನ್‍ಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಡಿಸೆಂಬರ್ 5ರಂದು ಅವರ … Read more

ಹಾಸನದಲ್ಲಿ ಮೆಕ್ಯಾನಿಕ್ ಹತ್ಯೆ : ಬಳಿಕ ಶವದೊಂದಿಗೆ ವಿಡಿಯೋ ಮಾಡಿ ವಿಕೃತಿ ಮೆರೆದ ಹಂತಕರು

ಹಾಸನ  ಹೊರವಲಯದ ಬಿಟ್ಟಗೌಡನಹಳ್ಳಿ ಬಳಿ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹಾಸನ ತಾಲೂಕಿನ ಹೂವಿನಹಳ್ಳಿ ಕಾವಲು ಗ್ರಾಮದ ನಿವಾಸಿ ಮೆಕ್ಯಾನಿಕ್  ಕೀರ್ತಿ(22) ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದ್ದು, ಬಳಿಕ ಹಂತಕರು ಶವ ಮುಂದೆ ಸೆಲ್ಫಿ ವಿಡಿಯೋ ಮಾಡಿ ವಿಕೃತಿ ಮೆರೆದಿದ್ದಾರೆ. ನಾವೇ ಇವನನ್ನು ಹೊಡೆದು ಕೊಂದಿದ್ದೇವೆಂದು ಶವದೊಂದಿಗೆ ಸೆಲ್ಫಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಸದ್ಯ ಇದೇ ವಿಡಿಯೋವನ್ನು ಆಧರಿಸಿ ಸ್ಥಳಕ್ಕೆ ಶ್ವಾನದಳ, ಎ‌ಎಸ್‌ಪಿ ಭೇಟಿ ಪರಿಶೀಲನೆ ನಡೆಸಿದ್ದು, ಹಂತಕರ ಬಂಧನಕ್ಕೆ ಬಲೆ … Read more

ಪ್ರಿವೆಡ್ಡಿಂಗ್ ಶೂಟ್ ಮುಗಿಸಿ ಬರುವಾಗ ಬೈಕ್ ಗೆ ಲಾರಿ ಡಿಕ್ಕಿ : ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಜೋಡಿ ಸಾವು!

ಕೊಪ್ಪಳದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, ಇನ್ನೆರಡು ವಾರದಲ್ಲಿ ಹಸೆಮಣೆ ಏರಿ ಹೊಸ ಜೀವನಕ್ಕೆ ಕಾಲಿಡಬೇಕಿದ್ದ ಜೋಡಿಯೊಂದು ಪ್ರಿವೆಡ್ಡಿಂಗ್ ಶೂಟಿಂಗ್‌ಗೆ ಹೋಗಿ ಬರುವಾಗ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಆಘಾತಕಾರಿ ಘಟನೆಯೊಂದು ಭಾನುವಾರ ಕೊಪ್ಪಳ ಜಿಲ್ಲೆಯ ಗಂಗಾವತಿ ಸಮೀಪ ನಡೆದಿದೆ. ಕರಿಯಪ್ಪ ಮಡಿವಾಳ್‌ ಹನುಮನಹಟ್ಟಿ (26) ಹಾಗೂ ಕವಿತಾ ಪವಾಡೆಪ್ಪ ಮಡಿವಾಳ (19) ಮೃತ ಜೋಡಿ. 5 ತಿಂಗಳ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಡಿ.21ರಂದು ಮದುವೆ ನಿಶ್ಚಯವಾಗಿತ್ತು. ಅದರ ಪ್ರಯುಕ್ತ ಪ್ರೀವೆಡ್ಡಿಂಗ್ ಶೂಟಿಂಗ್‌ಗಾಗಿ ಹೊಸಪೇಟೆಯ ಪಂಪಾವನ, ಮುನಿರಾಬಾದಿನ ಜಲಾಶಯದ … Read more

ಗೋ ಮಾತೆಗೆ ಚಿಕನ್‌ ಮೋಮಸ್‌ ತಿನ್ನಿಸಿದ ಯುವಕ; ಹಲ್ಲೆ ಮಾಡಿ, ಮೆರವಣಿಗೆ ಮಾಡಿಸಿದ ಬಜರಂಗ ದಳ!

ಇಲ್ಲಿನ ಯುವಕನೊಬ್ಬ ಹಸುವೊಂದಕ್ಕೆ ಚಿಕ‌ನ್‌ ಮೊಮೊಸ್ ತಿನ್ನಿಸಿದ ಆರೋಪದ ಮೇಲೆ ಬಜರಂಗ ದಳ ಹೆಸರಿನ ಗುಂಪೊಂದು ಆತನನ್ನು ಥಳಿಸಿ, ಬೀದಿಯಲ್ಲಿ ಮೆರವಣಿಗೆ ನಡೆಸಿ, ಎಫ್‌ಐಆರ್‌ ದಾಖಲಾಗುವಂತೆ ಮಾಡಿದ ಘಟನೆ ನಡೆದಿದೆ. ನಿಕ್ಕು ಪಂಡಿತ್‌ ಎಂಬುವವರು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಿಂದ ಹಂಚಿಕೊಂಡಿರುವ ವಿಡಿಯೋದಲ್ಲಿ ʻ28 ವರ್ಷದ ಯುವಕನೊಬ್ಬನನ್ನು ಐದಕ್ಕೂ ಹೆಚ್ಚು ಮಂದಿ ರಸ್ತೆಯಲ್ಲಿ ಕರೆದುಕೊಂಡು ಮೆರವಣಿಗೆ ಮಾಡುತ್ತಿರುವುದು. ಜೊತಗೆ ಆತನ ಬಾಯಿಂದ ಜೈ ಶ್ರೀರಾಮ್‌, ಜೈ ಗೋ ಮಠ ಎಂದು ಹೇಳಿಸುತ್ತಿರುವುದು, ಹಿಗ್ಗಾಮುಗ್ಗ ಕುಕ್ಕಿ, ಎಳೆದಾಡಿ ಹೊಡೆದಿರುವುದು ವ್ಯಕ್ತಿಯೊಬ್ಬ … Read more

ವಾರದ ಹಿಂದಷ್ಟೇ ಮದ್ವೆಯಾಗಿದ್ದ ಜೋಡಿಯನ್ನು ಅಗಲಿಸಿದ ಜಾತಿ : ಹೆಂಡ್ತಿಬೇಕೆಂದು ಎಸ್ಪಿ ಮೊರೆ ಹೋದ ಯುವಕ

ಕಲ್ಯಾಣ ಕರ್ನಾಟಕ ಭಾಗದ ಅತ್ಯಂತ ಹಿಂದುಳಿದ ಜಿಲ್ಲೆ.ಕೊಪ್ಪಳ ಜಿಲ್ಲೆಯಲ್ಲಿ ಇನ್ನು ಜಾತಿ (caste )ವ್ಯವಸ್ಥೆ ಜೀವಂತವಾಗಿದೆ.ಜಿಲ್ಲೆಯ ಕೆಲ ಕಡೆ ಅಸ್ಪ್ರಶ್ಯತೆ ಅನ್ನೋ ಪೆಡಂಭೂತ ಜೀವಂತವಾಗಿದೆ. ಕಳೆದ ಕೆಲ ದಿನಗಳ ಹಿಂದೆ ದಲಿತರ ಮನೆಗೆ ಬೆಂಕಿ ಹಚ್ಚಿರೋ ಪ್ರಕರಣ ಇನ್ನು ಮಾಸಿಲ್ಲ.ಹೀಗೆ ಜಿಲ್ಲೆಯಲ್ಲಿ ಒಂದಲ್ಲ ಒಂದು ಕಡೆ ಜಾತಿ ಪದ್ದತಿ ಇನ್ನು ಜೀವಂತವಾಗಿದೆ. ಇದೀಗ ಇದೇ ಜಾತಿ ಪದ್ದತಿ ಪ್ರೀತಿಸಿ ಮದುವೆಯಾಗಿದ್ದ ನವ ಜೋಡಿಯನ್ನ ಬೇರ್ಪಡಿಸಿದೆ. ಹೌದು…ಕೊಪ್ಪಳ ತಾಲೂಕಿನ ಚುಕ್ಕನಕಲ್ ಗ್ರಾಮದ ನಿವಾಸಿ ಗಣೇಶ್ ಹಾಗೂ ಉಷಾರಾಣಿ ಪ್ರೀತಿಸಿದ್ದು, … Read more

ಇಡೀ ರಾಜ್ಯದಲ್ಲಿ ಹಬ್ಬಿದ್ದ ನಕಲಿ ಲೈಂಗಿಕ ಔಷಧಿ ಜಾಲ ; ಗುಜರಾತ್ ಮೂಲದ ಆರೋಪಿ ಮನೋಜ್ ಅಂದರ್

ಬೆಂಗಳೂರು ಟೆಕ್ಕಿ ತೇಜಸ್‌ ಎಂಬವರನ್ನು ಲೈಂಗಿಕ ಸಮಸ್ಯೆಗೆ ಪರಿಹಾರ ನೀಡುವ ನೆಪದಲ್ಲಿ ಮೋಸಮಾಡಿ 48 ಲಕ್ಷ ರೂ. ವಂಚಿಸಿದ ವಿಜಯ್ ಗುರೂಜಿಯನ್ನು ಕೆಲ ದಿನಗಳ ಹಿಂದೆಯಷ್ಟೆ ಪೊಲೀಸರು ಬಂಧಿಸಿದ್ದರು. ಇದೀಗ ಗುರೂಜಿಯ ಸಹಚರನನ್ನೂ ಸಹ ಜ್ಞಾನ ಭಾರತಿ ಪೊಲೀಸರು ಅರೆಸ್ಟ್ ಮಾಡಿದ್ದು, ಇಬ್ಬರನ್ನೂ ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಗಿದೆ. ತೆಲಂಗಾಣದಲ್ಲಿ ಸೆರೆಸಿಕ್ಕ ಆರೋಪಿ ವಿಜಯ್ ಗುರೂಜಿ ಮತ್ತು ಆತನ ಸಹಚರರಿಂದ ಮೋಸ ಹೋದ ಟೆಕ್ಕಿ ತೇಜಸ್, ತೀವ್ರ ಅನಾರೋಗ್ಯ ಸಮಸ್ಯೆ ಎದುರಾದಾಗ ಪೊಲೀಸರಲ್ಲಿ ದೂರು ನೀಡಿದ್ದರು. ಅವರ ದೂರಿನ … Read more