ಅತ್ತೆಯನ್ನು ಮದ್ವೆಯಾಗಲು ಹೆಂಡ್ತಿಗೇ ಡಿವೋರ್ಸ್ ನೀಡಿದ ಭೂಪ, ಸೋಷಿಯಲ್ ಮೀಡಿಯಾದಲ್ಲಿ ಹಲ್‌ಚಲ್

ಪ್ರೀತಿಗೆ ಕಣ್ಣಿಲ್ಲ ಅಂತಾರೆ ನಿಜ. ಆದರೆ, ಇತ್ತೀಚೆಗೆ ಆರಂಭವಾಗುವ ಹಾಗೂ ಕ್ಷಣ ಮಾತ್ರದಲ್ಲಿಯೇ ಮುಗಿದು ಹೋಗುವ ಪ್ರೀತಿಗೆ ಮನಸ್ಸೇ ಇಲ್ಲವೆನಿಸುತ್ತದೆ. ಉತ್ತರದ ಪ್ರದೇಶದ ಕಾನ್ಪುರದಲ್ಲಿ ಹೆಂಡತಿಯ ಅಮ್ಮನನ್ನೇ ಮದ್ವೆಯಾಗಲು, ಪತ್ನಿಗೆ ಡಿವೋರ್ಸ್ ಕೊಟ್ಟಿದ್ದಾನೆ. ಇತ್ತೀಚೆಗೆ ಇಂಥದ್ದೊಂದು ಘಟನೆ ವರದಿಯಾಗಿತ್ತಾದರೂ, ಈಗ ವರದಿಯಾದ ಹೊಸ ಘಟನೆ ಮತ್ತೊಂದಿಷ್ಟು ಚರ್ಚೆಗಳನ್ನು ಹುಟ್ಟು ಹಾಕಿದೆ. ಪತ್ನಿಗೆ ವಿಚ್ಛೇದನ ನೀಡಿ, ವ್ಯಕ್ತಿಯೊಬ್ಬ ಆಕೆಯ ಅಮ್ಮನನ್ನೇ ಮದ್ವೆಯಾಗಿರುವ ಘಟನೆ ಉತ್ತರಪ್ರದೇಶದ ಕಾನ್ಪುರದಿಂದ ವರದಿಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಬದಲಾಗುತ್ತಿರುವ ಸಂಬಂಧ, ಮೌಲ್ಯಗಳ ಬಗ್ಗೆ ಬಿಸಿ ಬಿಸಿ … Read more

ಗುರುವಿನ ಋಣ ಸ್ಮರಿಸಿದ ವಿದ್ಯಾರ್ಥಿ- ಕಷ್ಟಕಾಲದಲ್ಲಿ ನೆರವಾದ ನಿವೃತ್ತ ಶಿಕ್ಷಕನಿಗೆ ಹೊಸ ಕಾರು ಗಿಫ್ಟ್!

ಹಾವೇರಿ (Haveri) ಜಿಲ್ಲೆಯ ಹಾನಗಲ್‌ನ (Hangal) ಕುಮರೇಶ್ವರ ಪ್ರೌಢಶಾಲೆಯ ನಿವೃತ್ತ ಶಿಕ್ಷಕರಾದ (Teacher) ಸಿ.ಎಸ್. ವಸ್ತ್ರದ ಅವರಿಗೆ ಅವರ ಹಳೆಯ ವಿದ್ಯಾರ್ಥಿಗಳು (Alumni) ಅಭೂತಪೂರ್ವ ವಿದಾಯ ಸಮಾರಂಭವನ್ನು ಏರ್ಪಡಿಸುವ ಮೂಲಕ ಗುರುವಂದನೆ ಸಲ್ಲಿಸಿದ್ದಾರೆ. ಈ ಸಮಾರಂಭದಲ್ಲಿ ಶಿಕ್ಷಕರ ಮೇಲಿನ ಗೌರವದ ಸಂಕೇತವಾಗಿ ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಕಾರನ್ನು ಉಡುಗೊರೆಯಾಗಿ ನೀಡಲಾಗಿದ್ದು, ಇದು ಇಡೀ ಜಿಲ್ಲೆಯಲ್ಲೇ ಈಗ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ. ಹಾವೇರಿ ಜಿಲ್ಲೆಯ ಹಾನಗಲ್‌ನ ಕುಮರೇಶ್ವರ ಮಠದ ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿಯವರ ದಿವ್ಯ ಸನ್ನಿಧಿಯಲ್ಲಿ … Read more

ನಾನೇನು ಹರಿದಿಲ್ಲ ಎಂದ ಮೇಲೆ, ನನ್ನ ಬಳಿ ಏನು ಸಲಹೆ ಕೇಳುತ್ತಾರೆ? : ಸಿಎಂ ಡಿಕೆಶಿ ಭೇಟಿಗೆ ಎಚ್.ಡಿ ಕುಮಾರಸ್ವಾಮಿ ವ್ಯಂಗ್ಯ

ರಾಜ್ಯ ರಾಜಕಾರಣದಲ್ಲಿ ಸದಾ ಮುನ್ನೆಲೆಯಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ನಡುವಿನ ರಾಜಕೀಯ ವಾಕ್ಸಮರ ಈಗ ಮತ್ತೊಂದು ರೋಚಕ ಹಂತಕ್ಕೆ ತಲುಪಿದೆ. ಮುಖ್ಯಮಂತ್ರಿಯಾದ ಬಳಿಕ ಡಿ.ಕೆ. ಶಿವಕುಮಾರ್ ಅವರು ಹಿರಿಯ ನಾಯಕರನ್ನು ಭೇಟಿಯಾಗಿ ಸಲಹೆ ಪಡೆಯುತ್ತಿರುವ ನಡೆಗೆ ಹೆಚ್.ಡಿ ಕುಮಾರಸ್ವಾಮಿ ಅವರು ತೀಕ್ಷ್ಣ ಹಾಗೂ ವ್ಯಂಗ್ಯಭರಿತ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಡಿ.ಕೆ. ಶಿವಕುಮಾರ್ ಅವರು ಪಕ್ಷಾತೀತವಾಗಿ ಎಲ್ಲ ಪ್ರಮುಖ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ. ವಿರೋಧ ಪಕ್ಷಗಳ … Read more

ಟಿಶ್ಯೂ ಪೇಪರ್ ರಾಜಕಾರಣಕ್ಕೆ ಅಂಬಿ ಪತ್ನಿ ಬಲಿ: ಜೆಡಿಎಸ್ ಸರ್ವನಾಶಕ್ಕೆ ಬಿಜೆಪಿ ಸ್ಕೆಚ್ ಎಂದ ಗಣಿಗ ರವಿಕುಮಾರ್

ರಾಜ್ಯಸಭಾ ಚುನಾವಣೆಯ ಟಿಕೆಟ್ ಹಂಚಿಕೆ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ. ಮಂಡ್ಯದ ರಾಜಕೀಯ ಅಖಾಡದಲ್ಲಿ ಈಗ ಹೊಸ ಕಿಚ್ಚು ಹೊತ್ತಿಕೊಂಡಿದ್ದು, ಸಂಸದೆ ಸುಮಲತಾ ಅಂಬರೀಷ್ ಮತ್ತು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ಬಿಜೆಪಿ ಅನ್ಯಾಯ ಮಾಡಿದೆ ಎಂದು ಮಂಡ್ಯದ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಗುಡುಗಿದ್ದಾರೆ. ಟಿಕೆಟ್ ಹಂಚಿಕೆಯಲ್ಲಿ ಒಕ್ಕಲಿಗ ಸಮುದಾಯವನ್ನು ಕಡೆಗಣಿಸಲಾಗಿದೆ ಎಂಬ ಆರೋಪ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಟಿಶ್ಯೂ ಪೇಪರ್ ರಾಜಕಾರಣ ಮಾಡುತ್ತಿದೆ ಬಿಜೆಪಿ ಬಿಜೆಪಿ ವಿರುದ್ಧ ವಾಗ್ದಾಳಿ … Read more

ಸಂಪ್‌ಗೆ ಬಿದ್ದು 18 ತಿಂಗಳ ಮಗು ಸಾವು: ಮೃತದೇಹ ಉಪ್ಪಿನಲ್ಲಿಟ್ಟು, ಕುರಾನ್‌ ಪಠಿಸಿ ಬದುಕಿಸಲು ಯತ್ನಿಸಿದ ಪೋಷಕರು!

ಎದುರಿನ ಮನೆಯ ನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗುವೊಂದು ಮೃತಪಟ್ಟಿರುವ ದಾರುಣ ಘಟನೆ ಬಾಗಲಕೋಟೆಯ ನವನಗರದ ಸೆಕ್ಟರ್ ನಂಬರ್ 38 ರಲ್ಲಿ ನಡೆದಿದೆ. ಮೃತ ಮಗುವನ್ನು ಅಮೀನಾ ಪಟಾಣ್ ಎಂದು ಗುರುತಿಸಲಾಗಿದೆ. ಆದರೆ, ಮಗುವಿನ ಸಾವಿನ ನಂತರ ಆಕೆಯನ್ನು ಬದುಕಿಸಲು ಪೋಷಕರು ನಡೆಸಿದ ವಿಲಕ್ಷಣ ಪ್ರಯತ್ನ ಮತ್ತು ಮೂಢನಂಬಿಕೆಯ ನಡೆ ಈಗ ಸಾರ್ವಜನಿಕರಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮಗು ಅಮೀನಾ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಎದುರಿನ ಮನೆಯವರ ಸಂಪ್‌ಗೆ ಬಿದ್ದಿದೆ. ಮಗು ನೀರಿನಲ್ಲಿ ಮುಳುಗಿದ್ದನ್ನು ತಡವಾಗಿ … Read more

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರೌಡಿಶೀಟರ್ ಎಣ್ಣೆ ಪಾರ್ಟಿ ಪ್ರಕರಣ : ಮದ್ದೂರು ವಲಯದ ಆರ್‌ಎಫ್‌ಒ ಪುನೀತ್ ಕುಮಾರ್ ಅಮಾನತು

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಪ್ರಮುಖ ಪ್ರದೇಶದಲ್ಲಿ ರೌಡಿಶೀಟರ್ ಮತ್ತು ಆತನ ಪಟಾಲಂ ನಡೆಸಿದ್ದ ಬಿಂದಾಸ್ ಎಣ್ಣೆ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಕ್ರಮ ಕೈಗೊಂಡಿದೆ. ಕರ್ತವ್ಯ ಲೋಪ ಹಾಗೂ ಬೇಜವಾಬ್ದಾರಿತನದ ಹಿನ್ನೆಲೆಯಲ್ಲಿ ಬಂಡೀಪುರದ ಮದ್ದೂರು ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ (RFO) ಡಿ. ಪುನೀತ್ ಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಸರ್ಕಾರದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (PCCF) ಆದೇಶ ಹೊರಡಿಸಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅರಣ್ಯದ ಮದ್ದೂರು ವಲಯದ ‘ಹುಲಿ … Read more

ಬಿಡಿಎ ಇಲ್ಲದ ಬೆಂಗಳೂರು ಅಭಿವೃದ್ಧಿ ಖಾತೆ ನನಗೇಕೆ? : ಬೆಂಗಳೂರು ನಗರಾಭಿವೃದ್ಧಿ ಖಾತೆ ವಹಿಸಿಕೊಳ್ಳಲು ಕೃಷ್ಣಭೈರೇಗೌಡ ಹಿಂದೇಟು

ರಾಜ್ಯ ರಾಜಕಾರಣದಲ್ಲಿ ಖಾತೆ ಹಂಚಿಕೆಯ ಕಿಚ್ಚು ಮತ್ತೆ ಜೋರಾಗಿದೆ. ಸಿದ್ದರಾಮಯ್ಯ ಸಂಪುಟದ ಪ್ರಭಾವಿ ಸಚಿವ ಕೃಷ್ಣಭೈರೇಗೌಡ ಅವರು ತಮಗೆ ನೀಡಿರುವ ಬೆಂಗಳೂರು ನಗರಾಭಿವೃದ್ಧಿ ಖಾತೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಅಧಿಕಾರ ವಹಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಖಾತೆ ಹಂಚಿಕೆಯಾಗಿ ಐದು ದಿನಗಳಾದರೂ ಅವರು ಕಚೇರಿಗೆ ಕಾಲಿಡದಿರುವುದು ಈಗ ಕಾಂಗ್ರೆಸ್ ಪಾಳಯದಲ್ಲಿ ತಲ್ಲಣ ಸೃಷ್ಟಿಸಿದೆ. ಅಸಮಾಧಾನಕ್ಕೆ ಮುಖ್ಯ ಕಾರಣ ಬಿಡಿಎ ಮತ್ತು ಬಿಎಂಆರ್‌ಡಿಎ ಈ ಹಿಂದೆ ಕಂದಾಯ ಸಚಿವರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದ ಕೃಷ್ಣಭೈರೇಗೌಡರಿಗೆ ಈ ಬಾರಿ ಬೆಂಗಳೂರು ನಗರಾಭಿವೃದ್ಧಿ … Read more

ಉಜ್ವಲ ಯೋಜನೆ ಫಲಾನುಭವಿಗಳಿಗೆ ಶಾಕ್‌ – ಉಚಿತ ಸಿಲಿಂಡರ್‌ ಸಂಖ್ಯೆ 9 ರಿಂದ 4ಕ್ಕೆ ಇಳಿಕೆ.!

ಬಡ ಕುಟುಂಬಗಳ ಮಹಿಳೆಯರಿಗೆ ಉಚಿತ ಅಡುಗೆ ಅನಿಲ ಸಂಪರ್ಕ ಕಲ್ಪಿಸುವ ಕೇಂದ್ರ ಸರ್ಕಾರದ (Central Government) ಪ್ರಮುಖ ಯೋಜನೆಯಾದ ‘ಪ್ರಧಾನ ಮಂತ್ರಿ ಉಜ್ವಲ ಯೋಜನೆ’ಯ (Ujjwala scheme) ಫಲಾನುಭವಿಗಳಿಗೆ ಬಿಗ್ ಶಾಕ್ ಎದುರಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಮತ್ತು ಅನಿಲ ದರಗಳ ಏರಿಕೆ ಹಾಗೂ ತೈಲ ಕಂಪನಿಗಳ ನಷ್ಟದ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರವು ಉಜ್ವಲ ಯೋಜನೆಯಡಿ ((Ujjwala scheme) ನೀಡಲಾಗುತ್ತಿದ್ದ ಸಬ್ಸಿಡಿ ಸಿಲಿಂಡರ್‌ಗಳ (Subsidy on Cylinder) ವಾರ್ಷಿಕ ಕೋಟಾವನ್ನು 9 ರಿಂದ 4ಕ್ಕೆ ಕಡಿತಗೊಳಿಸಿದೆ. ಕಡಿತಕ್ಕೆ … Read more

ದರ್ಶನ್‌ ಬಿಡುಗಡೆ ಮಾಡಿಸಿ ಎಂದ ಫ್ಯಾನ್ಸ್‌ – ಪೊಲೀಸರ ಲಾಠಿಯೇಟು ಬೇಕಾ ಎಂದ ಸಿಎಂ ಡಿಕೆಶಿ.!

ಕನಕಪುರ : ನಟ ದರ್ಶನ್‌ (Actor Darshan) ರನ್ನು ಜೈಲಿನಿಂದ ಬಿಡುಗಡೆ ಮಾಡಿಸಿ ಎಂದು ದರ್ಶನ್‌ ಅಭಿಮಾನಿಗಳು ನೇರವಾಗಿ ಸಿಎಂ ಡಿ.ಕೆ. ಶಿವಕುಮಾರ್‌(CM DK Shivakumar) ಗೆ ಬೇಡಿಕೆಯಿಟ್ಟಿರುವ ಘಟನೆ ಭಾನುವಾರ ನಡೆದಿದೆ. ಕನಕಪುರದಲ್ಲಿ ಕೃತಜ್ಞತಾ ಸಮಾವೇಶದಲ್ಲಿ ಪಾಲ್ಗೊಂಡಿದ್ದ ವೇಳೆ ಸಿಎಂ ಡಿಕೆ ಶಿವಕುಮಾರ್‌ ಮಾತನಾಡುತ್ತಿದ್ದ ವೇಳೆ , ನಟ ದರ್ಶನ್‌ ಅಭಿಮಾನಿಗಳು ನೇರವಾಗಿ ಸಿಎಂ ಎದುರ ಡಿಬಾಸ್‌ ಬಿಡುಗಡೆಯಾಗಬೇಕು ಎಂದು ಘೋಷಣೆ ಕೂಗಿದ್ದಾರೆ. ಮೊದಲು ಅಭಿಮಾನಿಗಳ ಬೇಡಿಕೆಯನ್ನು ನಿರ್ಲಕ್ಷಿಸಿದ ಸಿಎಂ ಡಿಕೆಶಿ , ಬಳಿಕ ಅವರ … Read more

ನೀರಿನ ಸಂಪ್‌ಗೆ ಬಿದ್ದು 1.5 ವರ್ಷದ ಕಂದಮ್ಮ ಸಾವು! ಮರುಜೀವದ ಆಸೆಯಿಂದ ಮಗುವನ್ನು ಉಪ್ಪಿನಲ್ಲಿಟ್ಟ ಪೋಷಕರು

ಬಾಗಲಕೋಟೆಯ ನವನಗರದ (ಸೆಕ್ಟರ್ 38) ಬಳಿ ಎದೆಗುಂದುವ ಘಟನೆಯೊಂದು ನಡೆದಿದೆ. ಆಟವಾಡುತ್ತಿದ್ದ 18 ತಿಂಗಳ ಹಸುಗೂಸು ಅಮೀನಾ ಪಠಾಣ್, ಎದುರು ಮನೆಯ ನೀರಿನ ಸಂಪ್‌ಗೆ ಬಿದ್ದು ದಾರುಣವಾಗಿ ಪ್ರಾಣ ಕಳೆದುಕೊಂಡಿದ್ದಾಳೆ. ಕುರುಡು ನಂಬಿಕೆ ಮತ್ತು ಪೋಷಕರ ಕಣ್ಣೀರು: ಮಗು ಸಾವನ್ನಪ್ಪಿದ್ದರೂ ಆ ಕಟು ಸತ್ಯವನ್ನು ಅರಗಿಸಿಕೊಳ್ಳಲಾಗದ ಪೋಷಕರು, “ನೀರಿನಲ್ಲಿ ಮುಳುಗಿ ಮೃತಪಟ್ಟವರನ್ನು ಉಪ್ಪಿನಲ್ಲಿ ಮುಚ್ಚಿಟ್ಟರೆ ಮರಳಿ ಬದುಕುತ್ತಾರೆ” ಎಂಬ ನಂಬಿಕೆಯಿಂದ ವಿಶಿಷ್ಟ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಬಾಗಲಕೋಟೆ ಜಿಲ್ಲಾಸ್ಪತ್ರೆಯ ಶವಾಗಾರದ ಮುಂದೆಯೇ ಮಗುವಿನ ದೇಹವನ್ನು ಉಪ್ಪಿನಲ್ಲಿ ಮುಚ್ಚಿಡಲಾಗಿತ್ತು. ಕೇವಲ … Read more