15 ದಿನಗಳಿಂದ ಏರಿಯಾದಲ್ಲಿ ದುರ್ವಾಸನೆ: ವಾಸನೆ ಜಾಡು ಹಿಡಿದ ಪೊಲೀಸರಿಗೆ ಸಿಕ್ಕಿದ್ದು ಟೆಕ್ಕಿ ಶವ.!

ಆ ಏರಿಯಾದ ಜನರು ಕಳೆದ ಎರಡು ವಾರಗಳಿಂದ ದುರ್ವಾಸನೆಗೆ ಬೇಸತ್ತಿದ್ದರು. ಹೆಗ್ಗಣ್ಣ ಸತ್ತಿರಬಹುದೆಂದು ಹಾದಿ ಬದಿಯ ಚರಂಡಿಗೆ ನೀರು ಸುರಿಯುತ್ತಿದ್ದರು. ಆದರೆ ಇಂದು ಪೊಲೀಸರು (police) ಎಂಟ್ರಿಕೊಟ್ಟಾಗ ಬೆಚ್ಚಿಬಿದ್ದಿದ್ದರು. ದುರ್ವಾಸನೆ ಜಾಡು ಹಿಡಿದ ಪೊಲೀಸರಿಗೆ ಕೊಳೆತ ಶವ (deadbody) ಸಿಕ್ಕಿತ್ತು. ಇಂದು ಬಸವೇಶ್ವರ ನಗರ ಪೊಲೀಸರು ಬಾಗಿಲು ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಮನೆಯೊಂದರಲ್ಲಿ ಕೊಳೆತು ನಾರುತ್ತಿತ್ತು ಶವ ಬೆಂಗಳೂರಿನ ಮಂಜುನಾಥ್ ನಗರದ 3ನೇ ರಸ್ತೆಯ ಬಾಡಿಗೆ ಮನೆಯೊಂದರಲ್ಲಿ ಕಳೆದ ಹದಿನೈದು ದಿನಗಳಿಂದ ಶವ ಕೊಳೆತು … Read more

ಎರಡನೇ ಬಾರಿಗೆ ಭೇಟಿ : ಸತೀಶ್ ಜಾರಕಿಹೊಳಿ ಬಳಿ ಬೆಂಬಲ ಕೇಳಿದ್ರಾ ಡಿಕೆ ಶಿವಕುಮಾರ್.!

• ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷೆಯಲ್ಲಿರುವ ಡಿಕೆ ಶಿವಕುಮಾರ್, ಜಾರಕಿಹೊಳಿ ಅವರ ಬೆಂಬಲ ಕೋರಿದ್ದಾರೆ ಎಂಬ ವರದಿಗಳು ಕೇಳಿಬಂದಿದ್ದವು. ಜಾರಕಿಹೊಳಿ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡುವ ಬಗ್ಗೆಯೂ ವರದಿಯಾಗಿತ್ತು. ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಪವರ್ ಶೇರಿಂಗ್ ಹಗ್ಗಜಗ್ಗಾಟದ ನಡುವೆಯೇ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಹಿರಿಯ ಸಚಿವ ಸತೀಶ್ ಜಾರಕಿಹೊಳಿ ಖಾಸಗಿ ಮದುವೆ ಕಾರ್ಯಕ್ರಮವೊಂದರಲ್ಲಿ ಮುಖಾಮುಖಿಯಾಗಿದ್ದು, ಮಾತುಕತೆ ನಡೆಸಿರುವುದು ಸಾಕಷ್ಟು ಊಹಾಪೋಹಗಳಿಗೆ ಕಾರಣವಾಗಿದೆ. ಸಿದ್ದರಾಮಯ್ಯನವರ ಆಪ್ತ ವಲಯದಲ್ಲಿ ಕಾಣಿಸಿಕೊಳ್ಳುವ ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ, … Read more

ಡಿವೈಡರ್‌ಗೆ ಕಾರ್‌ ಡಿಕ್ಕಿ, ಕುಟುಂಬವನ್ನು ಭೇಟಿ ಮಾಡಲು ಹೋಗುತ್ತಿದ್ದ ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಸಜೀವ ದಹನ

ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ರಸ್ತೆ ಅಪಘಾತದಲ್ಲಿ ಸಾವು ಕಂಡ ಸುದ್ದಿ ಮಾಸುವ ಮುನ್ನವೇ ಅದೇ ರೀತಿಯ ಇನ್ನೊಂದು ಘಟನೆ ಧಾರವಾಡದಲ್ಲಿ ವರದಿಯಾಗಿದೆ. ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಪಂಚಾಕ್ಷರಿ ಸಾಲಿಮಠ ಅವರು ಪ್ರಯಾಣ ಮಾಡುತ್ತಿದ್ದ ಐ20 ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಕಾರ್‌ ಡಿಕ್ಕಿ ಹೊಡೆದ ಪರಿಣಾಮವಾಗಿ ಇನ್ಸ್‌ಪೆಕ್ಟರ್ ಹೊರಬರಲು ಸಾಧ್ಯವಾಗದೇ ಇದ್ದಿದ್ದರಿಂದ ಅವರೂ ಕೂಡ ಕಾರ್‌ನಲ್ಲಿಯೇ ಸಜೀವವಾಗಿ ದಹನವಾಗಿದ್ದಾರೆ. ಕಾರ್‌ನಲ್ಲಿ ಇನ್ಸ್‌ಪೆಕ್ಟರ್‌ ಸಾಲಿಮಠ ಪ್ರಯಾಣ ಮಾಡುತ್ತಿದ್ದರು. ಕಾರಿನಲ್ಲಿಯೇ ಅವರ ದೇಹ ಸುಟ್ಟುಹೋಗಿದೆ. … Read more

ದೇವಾಲಯದ ಹಣ ದೇವರಿಗೆ ಮಾತ್ರ ಸೇರಿದ್ದು ; ಅನ್ಯ ಉದ್ದೇಶಗಳಿಗಾಗಿ ಬಳಕೆ ಮಾಡುವಂತಿಲ್ಲ : ಸುಪ್ರೀಂ ಕೋರ್ಟ್

ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳನ್ನು ಶ್ರೀಮಂತಗೊಳಿಸಲು ಬಳಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಡಿ.05 ರಂದು) ಅಭಿಪ್ರಾಯಪಟ್ಟಿದೆ. ತಿರುನೆಲ್ಲಿ ದೇವಾಲಯ ದೇವಸ್ವಂ ಠೇವಣಿಗಳನ್ನು ಹಿಂದಿರುಗಿಸುವಂತೆ ಕೇರಳ ಹೈಕೋರ್ಟ್ ನೀಡಿದ ನಿರ್ದೇಶನವನ್ನು ಪ್ರಶ್ನಿಸಿ ಕೇರಳದ ಕೆಲವು ಸಹಕಾರಿ ಬ್ಯಾಂಕುಗಳು ಸಲ್ಲಿಸಿದ್ದ ಅರ್ಜಿಗಳನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸಿತು. ವಿಚಾರಣೆಯ ಸಮಯದಲ್ಲಿ, ಹೈಕೋರ್ಟ್ ನಿರ್ದೇಶನದಲ್ಲಿ ತಪ್ಪೇನಿದೆ ಎಂದು ಪೀಠ ಪ್ರಶ್ನಿಸಿದೆ. “ನೀವು ಬ್ಯಾಂಕ್ ಅನ್ನು ಉಳಿಸಲು … Read more

ಇಸ್ಲಾಂ ಧರ್ಮಕ್ಕೆ ಮತಾಂತರವಾಗಲು ಮುಸ್ಲಿಂ ವ್ಯಕ್ತಿಯ ಕಿರುಕುಳ : ವಿವಾಹಿತ ಮಹಿಳೆ ಆತ್ಮಹತ್ಯೆ

ಬೆಳಗಾವಿ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ವರದಿಯಾಗಿದ್ದು, ಇಸ್ಲಾಂ ಧರ್ಮಕ್ಕೆ ಮತಾಂತರವಾಗುವಂತೆ ಮತ್ತು ಅನೈತಿಕ ಸಂಬಂಧವನ್ನು ಮುಂದುವರಿಸುವಂತೆ ಮುಸ್ಲಿಂ ವ್ಯಕ್ತಿಯೊಬ್ಬ ನೀಡುತ್ತಿದ್ದ ನಿರಂತರ ಕಿರುಕುಳ ಮತ್ತು ಕೊಲೆ ಬೆದರಿಕೆಯಿಂದ ಬೇಸತ್ತ ವಿವಾಹಿತೆಯೊಬ್ಬರು ಆತ್ಮ*ಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಗೋಣಗನೂರ ಗ್ರಾಮದಲ್ಲಿ ನಡೆದಿದೆ. ಮತಾಂತರ ಮತ್ತು ಕೊಲೆ ಬೆದರಿಕೆ ಮೃತ ಮಹಿಳೆಯನ್ನು ನಾಗವ್ವ ದೇಮಪ್ಪ ವಂಟಮೂರಿ (28) ಎಂದು ಗುರುತಿಸಲಾಗಿದೆ. ಆಕೆಯ ಕುಟುಂಬಸ್ಥರು ಗ್ರಾಮದ ಮಕ್ತುಮಸಾಬ್ ಪಾಟೀಲ್ ಎಂಬ ವ್ಯಕ್ತಿಯ ವಿರುದ್ಧ ಗಂಭೀರ ಆರೋಪ … Read more

ತಂದೆ ಎಂಬ ಪದಕ್ಕೆ ಮಸಿ ಬಳಿದ ಪಾಪಿ : ಕುಡಿತದ ಅಮಲಿನಲ್ಲಿ ಪುತ್ರಿಯರ ಮೇಲೆ ಅತ್ಯಾಚಾರ.!

ತಂದೆ ಎಂದರೆ ಮಕ್ಕಳಿನ ಪಾಲಿನ ಮೊದಲ ಹೀರೋ. ಅದರಲ್ಲೂ ಬಹುತೇಕ ಹೆಣ್ಣು ಮಕ್ಕಳಿಗಂತೂ ತಾಯಿಗಿಂತ ಆತನೇ ಅಚ್ಚುಮೆಚ್ಚು. ಆದ್ರೆ ಚಿತ್ರದುರ್ಗದಲ್ಲೊಬ್ಬ ಕೀಚಕ ಈ ಅರ್ಥಕ್ಕೆ ಮಸಿ ಬಳಿದಿದ್ದಾನೆ. ಮದ್ಯದ ಅಮಲಿನಲ್ಲಿ ತನ್ನ ಹೆಣ್ಣುಮಕ್ಕಳ ಮೇಲೆಯೇ ಎರಗಿ ವಿಕೃತಿ ಮೆರೆದಿದ್ದಾನೆ. ಪುತ್ರಿಯರು ಮಾತ್ರವಲ್ಲದೆ ತನ್ನ ಹೆತ್ತ ತಾಯಿಯ ಮೇಲೂ ಈತ ಅಟ್ಟಹಾಸ ತೋರಲು ಮುಂದಾಗಿದ್ದ ಎನ್ನುವ ಆರೋಪವೂ ಕೇಳಿಬಂದಿದೆ. ಘಟನೆ ಏನು? ಗಣಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ಮಂಜುನಾಥ್ ತನ್ನ 13 ಮತ್ತು 10 ವರ್ಷದ ಅಪ್ರಾಪ್ತ ಪುತ್ರಿಯರ … Read more

ಶಿವಮೊಗ್ಗ : ಸ್ತ್ರೀರೋಗ ತಜ್ಞೆ ಡಾ.ಜಯಶ್ರೀ ಹೊಮ್ಮರಡಿ, ಪುತ್ರ ಆಕಾಶ್ ನೇಣಿಗೆ ಶರಣು

ಶಿವಮೊಗ್ಗ : ನಗರದ ಖ್ಯಾತ ಸ್ತ್ರೀರೋಗ ತಜ್ಞೆ ಡಾ.ಜಯಶ್ರೀ ಹೊಮ್ಮರಡಿ (55) ಹಾಗೂ ಅವರ ಪುತ್ರ ಆಕಾಶ್ ಹೊಮ್ಮರಡಿ (34) ಇಲ್ಲಿನ ಅಶ್ವತ್ಥ ನಗರದ ಅವರ ನಿವಾಸದಲ್ಲಿ ಶುಕ್ರವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲತಃ ದಾವಣಗೆರೆ ಜಿಲ್ಲೆ ನ್ಯಾಮತಿಯ ಡಾ.ನಾಗರಾಜ ಹೊಮ್ಮರಡಿ ಕುಟುಂಬ ನಗರದ ಗಾಂಧಿ‌ ನಗರದಲ್ಲಿ ಹೊಮ್ಮರಡಿ ಆಸ್ಪತ್ರೆಯ ಮೂಲಕ ಹಲವು ವರ್ಷಗಳಿಂದ ವೈದ್ಯಕೀಯ ಸೇವೆಯಲ್ಲಿ ತೊಡಗಿತ್ತು. ಮಕ್ಕಳ ತಜ್ಞರಾಗಿದ್ದ ಡಾ.ನಾಗರಾಜ ಹೊಮ್ಮರಡಿ ಕೂಡ 10 ವರ್ಷಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುತ್ರ ಆಕಾಶ್ … Read more

ಸಿಎಂ ಬದಲಾವಣೆ ಅಸಾಧ್ಯ : ಕಾಂಗ್ರೆಸ್ `ಹೈಕಮಾಂಡ್’ ಸಂದೇಶ..!

ಕಾಂಗ್ರೆಸ್ ಪಕ್ಷದ ಭವಿಷ್ಯ ಹಾಗೂ ಮುಂದಿನ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬದಲಾವಣೆ ಅಸಾಧ್ಯ ಎಂಬ ಸಂದೇಶವನ್ನು ಕಾಂಗ್ರೆಸ್ ಹೈಕಮಾಂಡ್ ರವಾನಿಸಿದ್ದು, ಅದನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಲುಪಿಸಿದ್ದಾರೆ. ಅಧಿಕಾರ ಹಂಚಿಕೆ ಹಾಗೂ ಸಚಿವ ಸಂಪುಟ ಪುನರ್ ರಚನೆ ಸೇರಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದಂತೆ ನಾನು ಮತ್ತು ಡಿ.ಕೆ.ಶಿವಕುಮಾರ್ ಕೇಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಡಿ.ಕೆ.ಶಿವಕುಮಾರ್ ಕೂಡ ಅದನ್ನು ಅನುಮೋದಿಸಿದ್ದರು. ಎರಡು … Read more

‘ಡಿಕೆಶಿ ಮುಂದಿನ ಸಿಎಂ’ ಘೋಷಣೆ ಕೂಗಿದ ಕಾಂಗ್ರೆಸ್ ಮುಖಂಡ ಮಿಥುನ್ ರೈಗೆ ನೋಟಿಸ್.?

ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಮಂಗಳೂರು ಭೇಟಿ ವೇಳೆ ವಿಮಾನ ನಿಲ್ದಾಣದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪರ ಮೊಳಗಿದ ಘೋಷಣೆ ಹೈಕಮಾಂಡಿನ ಕೆಂಗಣ್ಣಿಗೆ ಗುರಿಯಾಗಿದೆ. ಈ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡಿದ ಕಾಂಗ್ರೆಸ್ ಮುಖಂಡ ಮಿಥುನರಿಗೆ ನೋಟಿಸ್ ನೀಡಲಾಗಿದೆ. ಎಐಸಿಸಿ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಮಂಗಳೂರು ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದಾಗ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿಂದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಎಂಬ ಘೋಷಣೆ ಕೇಳಿ ಬಂದಿತ್ತು. ಈ ಘೋಷಣೆಯ ಕಿರಿಕಿರಿಗೆ ಸಿಟ್ಟಾದ ಕೆಸಿ ವೇಣುಗೋಪಾಲ್, ಅಲ್ಲಿಂದಲೇ ಡಿಕೆ … Read more

ನಮ್ಮ ಮೆಟ್ರೋ ಟ್ರ್ಯಾಕ್‌ಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ: ಮೃತನ ಗುರುತು ಪತ್ತೆ, ಸಂಚಾರ ಸಹಜ ಸ್ಥಿತಿಗೆ

ಬೆಂಗಳೂರಿನ ಕೆಂಗೇರಿ ನಮ್ಮ ಮೆಟ್ರೋ (Namma Metro) ಸ್ಟೇಷನ್‌ನಲ್ಲಿ ಶುಕ್ರವಾರ ಬೆಳಗ್ಗೆ ದುಃಖಕರ ಘಟನೆ ಸಂಭವಿಸಿದೆ. ಬೆಳಗ್ಗೆ ಸುಮಾರು 8.15ಕ್ಕೆ ವ್ಯಕ್ತಿಯೊಬ್ಬರು ಮೆಟ್ರೋ ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಬಳಿಕ ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರಕ್ಕೆ ತಾತ್ಕಾಲಿಕ ಅಡಚಣೆ ಉಂಟಾಗಿದೆ. ಮೈಸೂರು ರಸ್ತೆ-ಚಲ್ಲಘಟ್ಟ ನಡುವೆ ರೈಲು ಸಂಚಾರವನ್ನು ತಕ್ಷಣವೇ ಸ್ಥಗಿತಗೊಳಿಸಲಾಗಿದೆ. ಪ್ರಸ್ತುತ ಮೆಟ್ರೋ ರೈಲುಗಳು ವೈಟ್‌ಫೀಲ್ಡ್ನಿಂದ ಮೈಸೂರು ರಸ್ತೆ ಮೆಟ್ರೋ ನಿಲ್ದಾಣದವರೆಗೆ ಮಾತ್ರ ಸಂಚರಿಸುತ್ತಿವೆ. ಘಟನೆ ಸ್ಥಳಕ್ಕೆ ಮೆಟ್ರೋ ಸುರಕ್ಷತಾ ಸಿಬ್ಬಂದಿ ಹಾಗೂ ಪೊಲೀಸರು ಧಾವಿಸಿದ್ದು, … Read more