ರೈತರ ಮಗನ ಮದುವೆಯಾಗುವ ಹುಡುಗಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ಘೋಷಿಸಿ : ರೈತರಿಂದ ಸಿಎಂ ಸಿದ್ದರಾಮಯ್ಯಗೆ ಕೋರಿಕೆ

ರೈತರ ಮಗನನ್ನು ವಿವಾಹವಾಗುವ ಹೆಣ್ಣು ಮಕ್ಕಳಿಗೆ ಸರಕಾರಿ ಉದ್ಯೋಗಗಳಲ್ಲಿ ಶೇ.20ರಷ್ಟು ಮೀಸಲು ಯೋಜನೆ ಜಾರಿ ಮಾಡುವಂತೆ ರೈತ ಸಂಘಟನೆಗಳು ಸರಕಾರದ ಮುಂದೆ ಬೇಡಿಕೆ ಇಟ್ಟಿವೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ವಿಧಾನಸೌಧದಲ್ಲಿ ನಡೆಸಿದ 2026 – 27ನೇ ಸಾಲಿನ ಬಜೆಟ್‌ ಪೂರ್ವಭಾವಿ ಸಭೆಯಲ್ಲಿ ರೈತ ಮುಖಂಡರು ಈ ಬೇಡಿಕೆ ಸಲ್ಲಿಸಿದ್ದಾರೆ. ರೈತ ಯುವಕರನ್ನು ಮದುವೆಯಾಗಲು ವಧು ಸಿಗದಿರುವುದು ಸದ್ಯ ಒಂದು ಸಾಮಾಜಿಕ ಪಿಡುಗಾಗಿದೆ. ಹಾಗಾಗಿ, ಯುವಜನರು ಕೃಷಿಯಿಂದ ವಿಮುಖರಾಗುವುದನ್ನು ತಪ್ಪಿಸಲು ಹಾಗೂ ರೈತರ ಮಕ್ಕಳನ್ನು ವಿವಾಹವಾಗಲು ಯುವತಿಯರು ಆಸಕ್ತಿ … Read more

ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ : ಬಿ.ಕೆ ಹರಿಪ್ರಸಾದ್‌ ವಾಗ್ದಾಳಿ

ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ ಎಂದು ಎಂಎಲ್‌ಸಿ ಬಿ.ಕೆ ಹರಿಪ್ರಸಾದ್‌ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ವಂದೇ ಮಾತರಂ ಹೇಳಿ ರಾಷ್ಟ್ರಗೀತೆಯನ್ನು ಡೀ ಪ್ರಮೋಟ್ ಮಾಡಲು ಕೇಂದ್ರ ಸರ್ಕಾರ ಪ್ರಯತ್ನ ಮಾಡುತ್ತಿದೆ. ಆರ್‌ಎಸ್‌ಎಸ್‌ನ ಗೋಳವಲ್ಕರ್ ರಾಷ್ಟ್ರಗೀತೆಯ ಬಗ್ಗೆಯೇ ಅಪಸ್ವರ ಎತ್ತಿದ್ದರು. ಒಂದೇ ಒಂದು ದಿನವೂ ರಾಷ್ಟ್ರ ಗೀತೆಯನ್ನು ಅವರ ಸಂಘದಲ್ಲಿ ಹಾಡಿದವರಲ್ಲ. ಅದೇ ಕಾರಣಕ್ಕೆ ವಂದೇ ಮಾತರಂನ್ನು ಎಲ್ಲಾ ಕಡೆ ಕಡ್ಡಾಯ ಮಾಡಿದ್ದಾರೆ … Read more

12 ವರ್ಷಗಳ ಸುಖ ಸಂಸಾರವನ್ನು ಭಗ್ನಗೊಳಿಸಿದ ಮೊಬೈಲ್-‌ ಪತಿಯಿಂದ್ಲೇ ಪತ್ನಿ ಕೊನೆಯುಸಿರು!

ಪ್ರೀತಿಸಿ ಮದುವೆಯಾಗಿ 12 ವರ್ಷಗಳ ಸುಖ ಸಂಸಾರ ನಡೆಸಿದ್ದ ದಂಪತಿ ನಡುವೆ ಅನುಮಾನದ ಕಿಚ್ಚು ಹೊತ್ತಿಕೊಂಡಿದ್ದು, ಪತ್ನಿಯ ಕೊಲೆಯಲ್ಲಿ ಅಂತ್ಯವಾಗಿದೆ. ಈ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬೀರೂರು ಪಟ್ಟಣದ ಚೌಡೇಶ್ವರಿಯಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಮಮತಾ (32) ಎಂದು ಗುರುತಿಸಲಾಗಿದೆ. ಇದೀಗ ಕೊಲೆ ಮಾಡಿದ ಪತಿ ರಂಗನಾಥ್ ಪೊಲೀಸರ ವಶದಲ್ಲಿದ್ದಾನೆ. ಅಜ್ಜಂಪುರ ತಾಲೂಕಿನ ಬುರುಡೆಕಟ್ಟೆ ಗ್ರಾಮದ ರಂಗನಾಥ್ ಮತ್ತು ಮಮತಾ ಪರಸ್ಪರ ಪ್ರೀತಿಸಿ 12 ವರ್ಷಗಳ ಹಿಂದೆ ಮದುವೆಯಾಗಿದ್ದರು. 7 ವರ್ಷಗಳ ಹಿಂದೆ ಇವರು ಬೀರೂರಿಗೆ ಬಂದು … Read more

‘SBI’ ನಲ್ಲಿ 2273 ಹುದ್ದೆಗಳಿಗೆ ಅರ್ಜಿ ಆಹ್ವಾನ : ಡಿಗ್ರಿ ಪಾಸಾದವರು ಅರ್ಜಿ ಸಲ್ಲಿಸಬಹುದು

ದೇಶದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (State Bank of India), ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ದೇಶಾದ್ಯಂತ ತನ್ನ ಶಾಖೆಗಳಲ್ಲಿ 2,273 ಸರ್ಕಲ್ ಬೇಸ್ಡ್ ಆಫೀಸರ್ (CBO) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಸ್ವೀಕರಿಸುತ್ತಿದೆ. ಇವುಗಳಲ್ಲಿ 2,050 ನಿಯಮಿತ ಹುದ್ದೆಗಳು ಮತ್ತು 223 ಬ್ಯಾಕ್‌ಲಾಗ್ ಹುದ್ದೆಗಳು. ಈಗಾಗಲೇ ಪ್ರಾರಂಭವಾಗಿರುವ ಅರ್ಜಿ ಪ್ರಕ್ರಿಯೆಯನ್ನು ಮತ್ತಷ್ಟು ವಿಸ್ತರಿಸುವ ಅಧಿಸೂಚನೆಯನ್ನು ಬ್ಯಾಂಕ್ ಇತ್ತೀಚೆಗೆ ಹೊರಡಿಸಿದೆ. ದಿನಾಂಕಗಳು : • ಅರ್ಜಿ … Read more

ಶೂ ಒಳಗಡೆ ಮನೆ ಬೀಗ ಇಟ್ಟು ಹೋಗುತ್ತೀರಾ? ಎಚ್ಚರವಿರಲಿ, ಮನೆ ಬಾಡಿಗೆ ಹುಡುಕಿಕೊಂಡು ಬಂದು ಕೀ ನೋಡಿ ಕಳ್ಳನಾದವನ ಕಥೆ!

ಮನೆಯ ಶೂ ರ್ಯಾಕ್‌ಗಳಲ್ಲಿ ಅಥವಾ ಹೂವಿನ ಪಾಟ್‌ಗಳೊಳಗೆ ಮನೆ ಬೀಗದ ಕೀಲಿಯನ್ನು ಇಟ್ಟು ಹೋಗುವ ಮನೆ ಮಾಲೀಕರೇ ಎಚ್ಚರಿಕೆ ವಹಿಸಿ. ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಇಂತಹ ಪ್ರಕರಣ ಬೆಳಕಿಗೆ ಬಂದಿದೆ. ಅಕಸ್ಮಾತ್ತಾಗಿ ಕೀ ಕೈಗೆ ಸಿಕ್ಕರೆ ಮನೆ ಕಳ್ಳತನವಾಗುವುದು ಖಚಿತ ಎನ್ನುವುದನ್ನು ಈ ಪ್ರಕರಣ ಸ್ಪಷ್ಟ ಉದಾಹರಣೆಯಾಗಿದೆ. ಬಾಡಿಗೆ ಮನೆ ಹುಡುಕಲು ಬಂದವನೇ ಕಳ್ಳ! ಬಾಡಿಗೆ ಮನೆ ಹುಡುಕಲು ಬಂದ ಫೋಟೋಗ್ರಾಫರ್‌ ಒಬ್ಬನೇ ಮನೆ ಕಳ್ಳನಾಗಿ ಬದಲಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ ಘಟನೆ ನಗರದಲ್ಲಿ … Read more

ಶಿವಮೊಗ್ಗ ರೈತನ ಸೇಡು : ಲಂಚಕ್ಕೆ ಕೈಯೊಡ್ಡಿ ಜೈಲು ಸೇರಿದ ಸರ್ಕಾರಿ ಅಧಿಕಾರಿಗೆ ಬಾಳೆಹಣ್ಣು, ಸೊಳ್ಳೆಬತ್ತಿ ಕೊಟ್ಟ ರೈತ!

ಲಂಚ ಪಡೆದು ಜೈಲು ಪಾಲಾದ ಭೂಸ್ವಾಧೀನಾಧಿಕಾರಿ ಸಿದ್ದಲಿಂಗರೆಡ್ಡಿಯನ್ನು ನೋಡಲು ರೈತ ವಿಶುಕುಮಾರ್ ಜೈಲಿಗೆ ಭೇಟಿ ನೀಡಿದ್ದಾರೆ. ತನ್ನ ಶ್ರೀಗಂಧದ ಮರಕ್ಕೆ ಕಡಿಮೆ ಬೆಲೆ ನಿಗದಿಪಡಿಸಿದ್ದ ಅಧಿಕಾರಿಗೆ ಸೊಳ್ಳೆಬತ್ತಿ, ಬ್ರೆಡ್ ನೀಡಿ, ವ್ಯಂಗ್ಯವಾಗಿ ಪ್ರತಿಭಟಿಸಿ, ಸಾರ್ವಜನಿಕವಾಗಿ ಮಾನ ಹರಾಜು ಹಾಕಿದ್ದಾರೆ. ಸಾಮಾನ್ಯವಾಗಿ ಜೈಲಿನಲ್ಲಿರುವ ಬಂಧು-ಮಿತ್ರರನ್ನು ನೋಡಲು ಹೋಗುವವರು ಹಣ್ಣು-ಹಂಪಲು ತೆಗೆದುಕೊಂಡು ಹೋಗುವುದು ಸಹಜ. ಆದರೆ, ಶಿವಮೊಗ್ಗದ ಸೋಗಾನೆ ಕೇಂದ್ರ ಕಾರಾಗೃಹದ ಮುಂದೆ ಮಂಗಳವಾರ ನಡೆದ ದೃಶ್ಯ ಮಾತ್ರ ಎಲ್ಲರ ಹುಬ್ಬೇರಿಸುವಂತಿತ್ತು. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದು ಜೈಲು … Read more

ಬಿಎಂಟಿಸಿ ನಿವೃತ್ತ ಕಂಡಕ್ಟರ್ ಗೆ ಕೋಟಿಗಟ್ಟಲೆ ಆಸ್ತಿ ತಂದ ಕುತ್ತು, ಇಂದಿರಾನಗರದಲ್ಲಿ ಮಕ್ಕಳಿಂದಲೇ ತಂದೆ ಹತ್ಯೆ!

ಆಸ್ತಿ ವಿವಾದಕ್ಕೆ ತಂದೆಯನ್ನೇ ಮಕ್ಕಳು ಹತ್ಯೆ ಮಾಡಿದ ಭೀಕರ ಘಟನೆ ಸಿಲಿಕಾನ್ ಸಿಟಿಯ ಇಂದಿರಾನಗರದಲ್ಲಿ ನಡೆದಿದೆ. ಇಂದಿರಾನಗರದ ದೂಪನಹಳ್ಳಿ ಪ್ರದೇಶದಲ್ಲಿ ಶನಿವಾರ ರಾತ್ರಿ ಈ ದುರ್ಘಟನೆ ಸಂಭವಿಸಿದ್ದು, ತಂದೆ ಮತ್ತು ಮಕ್ಕಳ ನಡುವೆ ಆಸ್ತಿಯ ವಿಚಾರವಾಗಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡಿದೆ. ಮೃತರನ್ನು ಮುನಿಕೃಷ್ಣಪ್ಪ (70) ಎಂದು ಗುರುತಿಸಲಾಗಿದ್ದು, ಅವರು ಬಿಎಂಟಿಸಿ ಸಂಸ್ಥೆಯ ನಿವೃತ್ತ ಕಂಡಕ್ಟರ್ ಆಗಿದ್ದರು. ಆಸ್ತಿ ವಿವಾದವೇ ಕೊಲೆಗೆ ಕಾರಣ ಮುನಿಕೃಷ್ಣಪ್ಪ ಅವರು ಕೋಟ್ಯಾಂತರ ಮೌಲ್ಯದ ಆಸ್ತಿ ಹೊಂದಿದ್ದು, ಅದರಲ್ಲಿನ ಕೆಲವು ಆಸ್ತಿಯನ್ನು ಮೊಮ್ಮಕ್ಕಳ … Read more

ಗರ್ಲ್ ಫ್ರೆಂಡ್ ಎದೆಯ ಮೇಲೆ ಹತ್ತಿ ಕುಳಿತು ಚಾಕು ಮುರಿಯುವವರೆಗೂ ಇರಿದು ಕೊಂದು, ಧೂಪ ಬೆಳಗಿ ಆಕೆಯ ಆತ್ಮ ಕರೆದ ವ್ಯಕ್ತಿ

ವ್ಯಕ್ತಿಯೊಬ್ಬ ಪ್ರೇಯಸಿಯ ಎದೆಯ ಮೇಲೆ ಹತ್ತಿ ಕುಳಿತು, ಚಾಕು ಮುರಿಯುವವರೆಗೂ ಇರಿದು, ಕೊಲೆ ಮಾಡಿ ಬಳಿಕ ಧೂಪ ಬೆಳಗಿ ಆಕೆಯ ಆತ್ಮವನ್ನು ಕರೆದಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಆಕೆಯನ್ನು ಕೊಲೆ ಮಾಡಿ ಬಳಿಕ ಯೂಟ್ಯೂಬ್ನಲ್ಲಿ ಆತ್ಮವನ್ನು ಕರೆಯುವುದು ಹೇಗೆ ಎಂದು ಸರ್ಚ್ ಮಾಡಿದ್ದಾನೆ. ಕೊಲೆ ಮಾಡಿದ್ದಕ್ಕೆ ಕ್ಷಮೆಯಾಚಿಸಿ ಆಕೆಯ ಆತ್ಮದೊಂದಿಗೆ ಮಾತನಾಡಲು ಬಯಸುವುದಾಗಿ ಕೇಳಿಕೊಂಡಿದ್ದ. ಇದು ಕಾಲ್ಪನಿಕವಲ್ಲ, ಇಂದೋರ್‌ನ ದ್ವಾರಕಾಪುರಿ ಪ್ರದೇಶದಲ್ಲಿ ಎಂಬಿಎ ವಿದ್ಯಾರ್ಥಿಯ ಕ್ರೂರ ಹತ್ಯೆಯ ಆರೋಪಿ ಪಿಯೂಷ್ ಧಮ್ನೋಟಿಯಾ ಅವರ ನಡವಳಿಕೆ ಇದು. ಈಗ … Read more

ಬ್ಯಾಂಕ್‌ ಲಾಕರಲ್ಲಿದ್ದ ಚಿನ್ನ ಎಗರಿಸಿ ಬೆಟ್ಟಿಂಗ್‌ ಆಟ! ₹4 ಕೋಟಿ ಮೌಲ್ಯದ ಆಭರಣ ಕದ್ದ ಮ್ಯಾನೇಜರ್‌!

ಬೆಂಗಳೂರಿನಲ್ಲಿ, ಸರ್ಕಾರಿ ಬ್ಯಾಂಕ್‌ನ ಸಹಾಯಕ ವ್ಯವಸ್ಥಾಪಕನೊಬ್ಬ ಗ್ರಾಹಕರ ಲಾಕರ್‌ನಿಂದ ₹4.12 ಕೋಟಿ ಮೌಲ್ಯದ ಚಿನ್ನವನ್ನು ಕದ್ದಿದ್ದಾನೆ. ಈ ಚಿನ್ನವನ್ನು ಅಡವಿಟ್ಟು ಬಂದ ಹಣವನ್ನು ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ಕಳೆದುಕೊಂಡಿದ್ದು, ಸದ್ಯ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾನೆ. ಮಲಯಾಳಂ ನಟ ದುಲ್ಕರ್ ಸಲ್ಮಾನ್ ಅಭಿನಯದ ಲಕ್ಕಿ ಭಾಸ್ಕರ್ ಸಿನಿಮಾದ ಕಥೆಯನ್ನು ನೆನಪಿಸುವಂತಹ ಘಟನೆಯೊಂದು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಪ್ರತಿಷ್ಠಿತ ಸರ್ಕಾರಿ ಬ್ಯಾಂಕ್ ಒಂದರ ಶಾಖೆಯಲ್ಲಿ ಸಹಾಯಕ ವ್ಯವಸ್ಥಾಪಕನಾಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬ, ಗ್ರಾಹಕರು ಬ್ಯಾಂಕ್ ಲಾಕರ್‌ನಲ್ಲಿ ಇರಿಸಿದ್ದ ₹4.12 ಕೋಟಿ ಮೌಲ್ಯದ 2.783 ಕೆಜಿ … Read more

ಹಂಪಿಯಲ್ಲಿ ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ; ಮೂವರು ಅಪರಾಧಿಗಳಿಗೆ ಗಲ್ಲುಶಿಕ್ಷೆ

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಕಳೆದ ವರ್ಷ ನಡೆದ ವಿದೇಶಿ ಮಹಿಳೆ ಹಾಗೂ ಸ್ಥಳೀಯ ಹೋಂ ಸ್ಟೇ ನಿರ್ವಾಹಕಿ ಮೇಲೆ ಸಾಮೂಹಿಕ ಅತ್ಯಾಚಾರ, ಜೊತೆಗೆ ಒಡಿಶಾದ ಪ್ರವಾಸಿಗನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವತಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸಷನ್ಸ್ ನ್ಯಾಯಾಲಯವು ಮೂವರು ಅಪರಾಧಿಗಳಿಗೆ ಮರಣದಂಡನೆ ವಿಧಿಸಿ ಆದೇಶಿಸಿದೆ. ಈ ಪ್ರಕರಣದಲ್ಲಿ ಗಂಗಾವತಿ ಸಾಯಿನಗರದ ಮಲ್ಲೇಶ್ (ಹಂದಿಮಲ್ಲ), ಸಾಯಿ (ಚೈತನ್ಯಸಾಯಿ) ಮತ್ತು ಶರಣಪ್ಪ (ಶರಣು ಬಸವರಾಜ್) ದೋಷಿಗಳೆಂದು ನ್ಯಾಯಾಲಯ ತೀರ್ಪು ನೀಡಿದ್ದು, ಇವರಿಗೆ ಮರಣದಂಡನೆ ಶಿಕ್ಷೆ … Read more