ಬಾಂಗ್ಲಾದೇಶಿಗರು ಕರ್ನಾಟಕಕ್ಕೆ ಹೇಗೆ ಬರ್ತಾರೆ, ಅಮಿತ್ ಶಾ ಕಡಲೆಕಾಯಿ ತಿನ್ನುತ್ತಿದ್ದರಾ? ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬಾಂಗ್ಲಾದೇಶಿಗರು ಕರ್ನಾಟಕಕ್ಕೆ ಹೇಗೆ ಬರ್ತಾರೆ? ಕೇಂದ್ರ ಗೃಹ ಸಚಿವ ಅಮಿತ್ ಶಾ ಕಡಲೆಕಾಯಿ ತಿನ್ನುತ್ತಿದ್ದರಾ? ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು. ಕೋಗಿಲು ಬಡಾವಣೆಯಲ್ಲಿ ಬಾಂಗ್ಲಾ ಅಕ್ರಮ ನಿವಾಸಿಗಳು ಇದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರ ಮತ್ತು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದರು. ಬಾಂಗ್ಲಾದೇಶದವರು ಇಲ್ಲಿಗೆ ಹೇಗೆ ಬರುತ್ತಿದ್ದಾರೆ ಎಂಬುವುದನ್ನು ಹೇಳಿ. ದೇಶದ ಗಡಿ ಕಾಯೋದು ಪರಮೇಶ್ವರ್ ಅವರ ಕೆಲಸವೇ? ಅಮಿತ್ ಶಾ ಅವರು ಏನು ಕಡಲೆಕಾಯಿ ತಿನ್ನುತ್ತಿದ್ದಾರಾ? ಬಿಜೆಪಿ ಅಧಿಕಾರ … Read more

ಒಂದೇ ಹೊಡೆತಕ್ಕೆ ಇಡೀ ಕುಟುಂಬವೇ ನಾಶ : ರಸ್ತೆ ಅಪಘಾತಕ್ಕೆ ಅತ್ತೆ, ಐವರು ಸೊಸೆಯಂದಿರು ಹಾಗೂ ಮಗಳು ಬಲಿ

ರಾಜಸ್ಥಾನದ ಫತೇಪುರ್ ಶೇಖಾವತಿಯಲ್ಲಿ ನಡೆದ ರಸ್ತೆ ಅಪಘಾತವು ಒಂದೇ ಕುಟುಂಬದ ಏಳು ಸದಸ್ಯರನ್ನು ಒಂದೇ ಹೊಡೆತಕ್ಕೆ ಬಲಿ ತೆಗೆದುಕೊಂಡಿದೆ. ಇದು ಅತ್ಯಂತ ಆಘಾತಕಾರಿ ದುರಂತವಾಗಿದ್ದು, ಒಂದೇ ಕುಟುಂಬದ ಏಳು ಮಹಿಳೆಯರು ಏಕಕಾಲದಲ್ಲಿ ಸಾವನ್ನಪ್ಪಿದ್ದಾರೆ. ಈ ದುರಂತ ಇಡೀ ರಾಜ್ಯವನ್ನು ಶೋಕದಲ್ಲಿ ಮುಳುಗಿಸಿದೆ. ಅಪಘಾತ ಎಷ್ಟು ಭೀಕರವಾಗಿತ್ತೆಂದರೆ, ದೃಶ್ಯವನ್ನು ನೋಡಿದವರೆಲ್ಲಾ ಕಣ್ಣೀರು ಹಾಕಿದ್ದಾರೆ. ರಾಷ್ಟ್ರೀಯ ಹೆದ್ದಾರಿ 52 ರ ಹರ್ಸಾವಾ ಗ್ರಾಮದ ಬಳಿ ಈ ದುರಂತ ಅಪಘಾತ ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಕಾರು ಮೊದಲು ಪಿಕಪ್ ಟ್ರಕ್‌ಗೆ ಡಿಕ್ಕಿ … Read more

ಹೃದಯಾಘಾತದಿಂದ ಕಾಗಿನೆಲೆ ಕನಕ ಗುರುಪೀಠದ ‘ಸಿದ್ದರಾಮನಂದ ಶ್ರೀ’ ವಿಧಿವಶ.!

ದೇವದುರ್ಗ ತಾಲೂಕಿನ ತಿಂಥಣಿ ಬ್ರಿಡ್ಜ್ ಕಾಗಿನೆಲೆ ಕನಕ ಗುರುಪೀಠದ ಸಿದ್ದರಾಮನಂದ ಶ್ರೀ(49) ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಇಂದು ಮುಂಜಾನೆ 3:40 ರ ಸುಮಾರಿಗೆ ಸ್ವಾಮೀಜಿ ವಿಧಿವಶರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಕೂಡಲೇ ಅವರನ್ನು ಲಿಂಗಸೂಗೂರು ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ತಿಂಥಣಿಯ ಕನಕ ಗುರು ಪೀಠದಲ್ಲಿಯೇ ಸ್ವಾಮೀಜಿ ಅಂತ್ಯಕ್ರಿಯೆ ನಡೆಸಲಾಗುವುದು. ಹಾಲುಮತದ ಪದ್ದತಿಯಂತೇ ಅಂತ್ಯಕ್ರಿತೆಗೆ ಸಿದ್ದತೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿದೆ. ಸಿದ್ದರಾಮಾನಂದ ಸ್ವಾಮೀಜಿ (ಮೂಲ ಹೆಸರು … Read more

ರಸ್ತೆ ಬದಿ ನಿಂತಿದ್ದ ಅಪ್ರಾಪ್ತೆಯನ್ನೂ ಬಿಡದ ಕಾಮುಕ : ಡ್ರಾಪ್ ಮಾಡುವುದಾಗಿ ಹೇಳಿ, ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ದುರುಳ

ಡ್ರಾಪ್ ನೀಡುವ ನೆಪದಲ್ಲಿ ವಿದ್ಯಾರ್ಥಿನಿಯನ್ನು ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ನಡೆಸಿರುವ ಆರೋಪ ಚಿಕ್ಕಬಳ್ಳಾಪುರದಲ್ಲಿ ಕೇಳಿಬಂದಿದೆ. ರಾತ್ರಿ ಪೂರ್ತಿ ಕೂಂಬಿಂಗ್ ನಡೆಸಿ ಘಟನೆ ಸಂಬಂಧ ಆರೋಪಿ ಗಣೇಶ್ ಎಂಬಾತನನ್ನು ಬಂಧಿಸಿರುವ ಪೊಲೀಸರು, ಅಪ್ರಾಪ್ತ ವಿದ್ಯಾರ್ಥಿನಿಯನ್ನು ರಕ್ಷಣೆ ಮಾಡಿದ್ದಾರೆ. ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ. ಬಾಗೇಪಲ್ಲಿಯ ಕಾಲೇಜೊಂದರಲ್ಲಿ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಸಂತ್ರಸ್ತೆ, ಬಾಗೇಪಲ್ಲಿಯಿಂದ ವಾಪಸ್ಸು ಚಿಕ್ಕಬಳ್ಳಾಪುರ ತಾಲೂಕಿನ ಸ್ವಗ್ರಾಮಕ್ಕೆ ತೆರಳಲು ಪೆರೇಸಂದ್ರ ಕ್ರಾಸ್ ಬಳಿಯ ಬಸ್‍ನಿಲ್ದಾಣದಲ್ಲಿ ನಿಂತಿದ್ದಳು. ಆ ವೇಳೆ ಅಲ್ಲಿಗೆ ಬಂದ … Read more

2023ರಲ್ಲೇ ಸಿದ್ದರಾಮಯ್ಯ ಬಿ ಫಾರಂ ನೀಡಿದ್ದರು, ನಾನು ಬಯಸಿದ್ದರೆ ಆಗಲೇ ಶಾಸಕನಾಗುತ್ತಿದ್ದೆ : ಝೈದ್ ಖಾನ್

ಶಾಸಕ ರಿಜ್ವಾನ್ ಆರ್ಷದ್ ಗೆ ಟಿಕೆಟ್ ಕೊಡಿಸಿದ್ದು, ಜಮೀರ್ ಅಹ್ಮದ್ ಖಾನ್ ಎಂದು ಮೈಸೂರು ನಲ್ಲಿ ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ ಹೇಳಿಕೆ ನೀಡಿದರು. ಶಿವಾಜಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿರುವ ರಿಜ್ವಾನ್ ಆರ್ಷದ್ ಗೆ ಜಮೀರ್ ಅಹ್ಮದ್ ಖಾನ್ ಟಿಕೆಟ್ ಕೊಡಿಸಿದ್ದಾರೆ ಎಂದರು. 2023ರಲ್ಲಿ ನನಗೆ ಸಿದ್ದರಾಮಯ್ಯ ಅವರು ಬಿ ಫಾರಂ ನೀಡಿದ್ದರು. ಆದರೆ ನನಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ. ಶಿವಾಜಿನಗರ ಕ್ಷೇತ್ರದ ಶಾಸಕ ಶಾಸಕ ರಿಜ್ವಾನ್ ಗೆ ಟಿಕೆಟ್ ಕೊಡಿಸಿದ್ದೆ ನಮ್ಮ ತಂದೆ. … Read more

ಚೀನಾದ ಆಡಳಿತರೂಢ ಕಮ್ಯುನಿಸ್ಟ್ ಪಕ್ಷದೊಂದಿಗೆ ನೋಂದಾಯಿಸದ ಆರ್‌ಎಸ್‌ಎಸ್‌ಗೆ ಏನು ಕೆಲಸ? : ಪ್ರಿಯಾಂಕ್ ಖರ್ಗೆ

ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್‌) ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು, ಚೀನಾದ ಆಡಳಿತರೂಢ ಕಮ್ಯುನಿಸ್ಟ್ ಪಕ್ಷದೊಂದಿಗೆ ನೋಂದಾಯಿಸದ ಆರ್‌ಎಸ್‌ಎಸ್‌ಗೆ ಏನು ಕೆಲಸ.? ಎಂದು ಪ್ರಶ್ನಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಖರ್ಗೆ,’ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾ ಪ್ರತಿನಿಧಿಗಳನ್ನು ಬಿಜೆಪಿಯ ಪೋಷಕ ಸಂಸ್ಥೆಯಾದ ಮತ್ತು ನೋಂದಾಯಿಸದ ಆರ್‌ಎಸ್‌ಎಸ್‌ ಮುಖಂಡರ ಭೇಟಿ ಯಾವ ಉದ್ದೇಶಕ್ಕಾಗಿ’ ಎಂದು ಪ್ರಶ್ನಿಸಿದ್ದಾರೆ. ಚೀನಾದ ಆಡಳಿತ ಪಕ್ಷದೊಂದಿಗೆ ಒಂದು ಎನ್‌ಜಿಒಗೆ ಏನು ಕೆಲಸ? … Read more

ಹೈಬೀಮ್‌ ಹೆಡ್‌ಲೈಟ್‌ ಅಳವಡಿಸಿದ್ದ 11,875 ವಾಹನಗಳ ವಿರುದ್ಧ ಕೇಸ್‌ ದಾಖಲು

ನಗರದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳು ಮತ್ತು ಸಂಚಾರ ಅಡಚಣೆಗಳಿಗೆ ಕಾರಣವಾಗುತ್ತಿರುವ ಪ್ರಮುಖ ಅಂಶಗಳಲ್ಲಿ ಪ್ರಕಾಶಮಾನವಾದ ಹೈ ಬೀಮ್‌ ಹೆಡ್‌ಲೈಟ್‌ಗಳ ದುರ್ಬಳಕೆ ಕೂಡ ಒಂದು ಗುರುತಿಸಲಾಗಿದೆ. ಕೆಲ ವಾಹನ ಚಾಲಕರು ಹಾಗೂ ಸವಾರರು ತಮ್ಮ ವಾಹನಗಳಲ್ಲಿ ಮಾನದಂಡ ಮೀರಿ ಹೆಚ್ಚು ಬೆಳಕು ಸೂಸುವ ಹೈಬೀಮ್‌ ಹಾಗೂ ಹೆಚ್ಚುವರಿ ಲೈಟ್‌ಗಳನ್ನು ಅಳವಡಿಸಿಕೊಂಡು ರಸ್ತೆಯಲ್ಲಿ ಸಂಚರಿಸುತ್ತಿರುವುದು ಸಾರ್ವಜನಿಕರ ಸುರಕ್ಷತೆಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಬೆಂಗಳೂರು ಟ್ರಾಫಿಕ್‌ ಪೊಲೀಸರು ತಪಾಸಣೆ ಕೈಗೊಂಡು, ಬರೋಬ್ಬರಿ 11,875 ವಾಹನ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ವಾಹನಗಳಿಗೆ … Read more

ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆ – ಮನೆಯಿಂದ ದೇವಸ್ಥಾನಕ್ಕೆ ಹೊರಟಿದ್ದ ಬಾಲಕ

ಕಳಿಯ ಗ್ರಾಮದ ನಾಳ ದೇವಸ್ಥಾನಕ್ಕೆ ಇಂದು ಮುಂಜಾನೆ ಧನುಪೂಜೆಗೆ ಹೊರಟಿದ್ದ ಬಾಲಕನೊಬ್ಬ ನಿಗೂಢವಾಗಿ ನಾಪತ್ತೆಯಾಗಿದ್ದು, ಬಳಿಕ ಮನೆಯ ಸಮೀಪದ ಕೆರೆಯಲ್ಲಿ ಆತನ ಮೃತದೇಹ ಪತ್ತೆಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಸಂಬೋಳ್ಯ-ಬರಮೇಲು ಪ್ರದೇಶದಲ್ಲಿ ನಡೆದಿದೆ. ಬಾಲಕನ ಅಸಹಜ ಸಾವಿನ ಬಗ್ಗೆ ಹಲವು ಅನುಮಾನಗಳು ಮೂಡಿವೆ. ಮೃತ ಬಾಲಕನನ್ನು ಕುವೆಟ್ಟು ಗ್ರಾಮದ ಸಂಬೋಳ್ಯ ಬರಮೇಲು ನಿವಾಸಿ ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ, ಗೇರುಕಟ್ಟೆ ಸರ್ಕಾರಿ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಮಂತ್ (15) ಎಂದು ಗುರುತಿಸಲಾಗಿದೆ. … Read more

ವಿಧವೆ ಸೊಸೆಗೆ ಮಾವನ ಆಸ್ತಿಯಲ್ಲಿ ಹಕ್ಕು, ಮನುಸ್ಮೃತಿ ಉಲ್ಲೇಖಿಸಿದ ಸುಪ್ರೀಂನಿಂದ ಮಹತ್ವದ ತೀರ್ಪು

ಮಂಗಳವಾರದ ಮಹತ್ವದ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ವಿಧವೆ ಸೊಸೆಗೆ ಪರಿಹಾರ ನೀಡಲು ಮನುಸ್ಮೃತಿಯನ್ನು ಉಲ್ಲೇಖಿಸಿತು. ಮನುಸ್ಮೃತಿಯು ತನ್ನ ತಾಯಿ, ತಂದೆ, ಹೆಂಡತಿ ಮತ್ತು ಮಗನನ್ನು ಎಂದಿಗೂ ತ್ಯಜಿಸಬಾರದು ಮತ್ತು ಹಾಗೆ ಮಾಡುವ ಯಾರನ್ನಾದರೂ ಶಿಕ್ಷಿಸಬೇಕು ಎಂದು ಸ್ಪಷ್ಟವಾಗಿ ಹೇಳುತ್ತದೆ ಎಂದು ನ್ಯಾಯಾಲಯ ಹೇಳಿದೆ. ಈ ತತ್ವದ ಆಧಾರದ ಮೇಲೆ, ನ್ಯಾಯಾಲಯವು ಹಿಂದೂ ದತ್ತು ಮತ್ತು ನಿರ್ವಹಣಾ ಕಾಯ್ದೆ, 1956 ರ ಅಡಿಯಲ್ಲಿ ವಿಧವೆ ಸೊಸೆಗೆ ತನ್ನ ಮಾವನ ಆಸ್ತಿಯಿಂದ ಜೀವನಾಂಶ ಪಡೆಯುವ ಹಕ್ಕು ಇದೆ ಎಂದು ತಿಳಿಸಿತು. … Read more

ರಾಜ್ಯದಲ್ಲಿ ಭೀಕರ ಅಪಘಾತ : ಸ್ವಿಫ್ಟ್ ಕಾರಿಗೆ ‘KSRTC’ ಬಸ್ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸಾವು.!

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್ ಮತ್ತು ಸ್ವಿಫ್ಟ್ ಕಾರು ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಕ್ಕಳು ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ರಿಹಾನ್ (15), ರಾಹಿಲ್ (9) ಮತ್ತು ಫಾತಿಮಾ (76) ಎಂದು ಗುರುತಿಸಲಾಗಿದೆ. ಇವರು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮೂಲದ ನಿವಾಸಿಗಳು ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಕಾರು ಚಾಲಕ ಸೇರಿದಂತೆ ಇನ್ನೂ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು … Read more