ನನ್ನ ಮಾತು ಸುಳ್ಳಾದರೆ, ನಾನು ಮತ್ತೆ ವೇದಿಕೆ ಹತ್ತಲ್ಲ, ಭಾಷಣ ಮಾಡಲ್ಲ -ದಾವಣಗೆರೆಯಲ್ಲಿ ಸಿದ್ದರಾಮಯ್ಯ ಸವಾಲು
ಅಭಿವೃದ್ಧಿ ವಿಚಾರದಲ್ಲಿ ಕೇಂದ್ರ ಸರ್ಕಾರ ನಮಗೆ ಮಾಡಿದ ದ್ರೋಹದ ವಿಚಾರದಲ್ಲಿ ನಾನು ಸುಳ್ಳು ಹೇಳಿದ್ದರೆ ಮತ್ತೆ ಸಾರ್ವಜನಿಕವಾಗಿ ವೇದಿಕೆ ಹತ್ತೋದಿಲ್ಲ, ಭಾಷಣ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದರು. ದಾವಣಗೆರೆ ಜಿಲ್ಲೆಯ 1350 ಕೋಟಿ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿ ಹಲವು ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು. ” ಅಭಿವೃದ್ಧಿ ವಿಚಾರದಲ್ಲಿ ನಾವು ಜಾತಿ, ಧರ್ಮ, ಪಕ್ಷ ನೋಡುವುದಿಲ್ಲ. ಎಲ್ಲಾ ಪಕ್ಷದವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು ” ಎಂದು ಸಿಎಂ ಹೇಳಿದರು. … Read more